Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ಗ್ರಾಮದ ತೆಂಕಬೆಟ್ಟುವಿನಲ್ಲಿ ವಾರಾಹಿ ನಾಲೆಯಿಂದ ಹೊಳೆಗೆ ಹರಿದು ಬರುತ್ತಿರುವ ನೀರಿಗೆ ಏತ ನೀರಾವರಿ ಮೂಲಕ ಇಂಗು ಗುಂಡಿಗೆ ಮತ್ತು ಪೈಪ್ ಲೈನ್ ಮೂಲಕ ಮನೆ ಮನೆಗೆ ಕುಡಿಯುವ ನೀರು, ಬಾವಿಗಳಿಗೆ ನೀರು ಹರಿಸುವ ಎರಡನೇ ಹಂತದ ಖಾಸಗಿ ಯೋಜನೆಗೆ ರವಿವಾರ ಚಾಲನೆ ನೀಡಲಾಯಿತು. ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದ ವ್ಯವಸ್ಥಾಪಕರಾದ ರಾಜಶೇಖರ್ ಹೆಗ್ಡೆ ಚಾಲನೆ ನೀಡಿ, ಅವರು ಮಾತನಾಡಿ, ಸಹಬಾಳ್ವೆ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ವಕ್ವಾಡಿ ತೆಂಕಬೆಟ್ಟು ಪರಿಸರದವರು ವಾರಾಹಿ ನೀರನ್ನು ಸದ್ಬಳಕೆ ಮಾಡಿಕೊಂಡು ಪ್ರತಿ ಮನೆ ಮನೆಯ ಬಾವಿಗೆ ನೀರು ಹರಿಸುವ ಮಹತ್ವಪೂರ್ಣವಾದ ಯೋಜನೆ ಇದಾಗಿದ್ದು, ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ, ಪಕ್ಷಿ, ಗಿಡಮರಗಳಿಗೂ ಪ್ರಯೋಜನಕಾರಿಯಾಗಿದ್ದು, ಇದೊಂದು ಮಹಾನ್ ಪುಣ್ಯದ ಕೆಲಸ ಎಂದು ಶುಭ ಹಾರೈಸಿದರು. ಚಂದ್ರಶೇಖರ್ ಶೆಟ್ಟಿ, ಗಣೇಶ್ ಶೆಟ್ಟಿ, ಶಂಕರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು ಆ ದಿನಗಳಿಂದ ಇಲ್ಲಿಯವರೆಗೆ ಭೂ ಭಾಗಕ್ಕೆ ಕಂಠಕವಾಗಿ ಪರಿಣಮಿಸಿದೆ. ಇದು ಮನುಕುಲದ ನಿದ್ದೆಗೆಡಿಸುತ್ತಿದೆ. ಮನುಷ್ಯನಿಂದಲೇ ಸೃಷ್ಠಿ ಮನುಕುಲಕ್ಕೆ ಆಪತ್ತು ಸೃಷ್ಠಿಸುವ ಪ್ಲಾಸ್ಟಿಕ್ ಇಂದು ಜಲಮಾತೆಯನ್ನು ಬೆಂಬಿಡದ ಭೂತದಂತೆ ನದಿ ಸಮುದ್ರ ಜಲಚರ ಜೀವಿಗಳಿಗೆ ಸಂಕಷ್ಟವನ್ನು ತಂದದೊಡ್ಡಿದೆ ಇದರ ಬಗ್ಗೆ ಜಾಗೃತರಾಗದಿದ್ದರೆ ಭವಿಷ್ಯದಲ್ಲಿ ಕ್ಲಿಷ್ಟಕರ ದಿನಗಳನ್ನುಎದುರು ನೋಡುವಂತ್ತಾಗಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಇದರ ಅಧಿಕಾರಿ ಮಲ್ತೇಶ್ ಅಳಲಗಿರಿ ಕಿವಿಮಾತು ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು. ಪಂಚವರ್ಣದಂತ ಸಂಸ್ಥೆಗಳು ಈ ವ್ಯವಸ್ಥೆಯಲ್ಲಿ ಗಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ. ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606474298

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿ?ಗಳ ಅಂತರದಿಂದ  ಗೆದ್ದು  ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಅಂಗಣದಲ್ಲಿ ಆಡಿದ 9 ಜನ ಆಟಗಾರರಲ್ಲಿ ಎಲ್ಲಾ ಆಟಗಾರರು ಆಳ್ವಾಸ್ ವಿದ್ಯಾರ್ಥಿಗಳಾಗಿದ್ದರು ಎಂಬುದು ಗಮನಾರ್ಹ ಅಂಶ. ಮೊದಲಿಗೆ ನಡೆದ ಲೀಗ್ ಪಂದ್ಯಾಟದಲ್ಲಿ ದೆಹಲಿ ವಿಶ್ವವಿದ್ಯಾನಿಲಯ, ಹೇಮಚಂದ್ ವಿಶ್ವವಿದ್ಯಾನಿಲಯ ಹಾಗೂ ಸಾವಿತ್ರಿ ಬಾಯಿ ಪುಲೇ ವಿಶ್ವವಿದ್ಯಾನಿಲಯದೊಂದಿಗೆ ಜಯಗಳಿಸಿ ಕ್ವಾಟರ್ ಫೈನಲ್ ಹಂತಕ್ಕೆ ಅರ್ಹತೆಯನ್ನುಗಳಿಸಿತ್ತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ವಿಶ್ವವಿದ್ಯಾನಿಲಯದ ವಿರುದ್ಧ ಜಯಗಳಿಸಿ ಸೆಮಿಫೈನಲ್ ಪಂದ್ಯಕ್ಕೆ ಅರ್ಹತೆಯನ್ನು ಪಡೆಯಿತು. ನಂದೆಡ್‌ನ ಎಸ್‌ಆರ್‌ಟಿಎಂಯುನ ತಂಡವನ್ನು ಮಣಿಸಿ ಫೈನಲ್ ಪಂದ್ಯಕ್ಕೆ…

Read More

 ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಏಪ್ರಿಲ್ 11ರಂದು ಗೋವಾದಲ್ಲಿ ನಡೆದ  ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರಿಗೆರಿಗೆ ಪ್ರದಾನ ಮಾಡಲಾಯಿತು. ಅವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶಿವಪ್ರತಾಪ್ ಶುಕ್ಲ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಖ್ಯಾತ ಸಿನಿಮಾ ನಟಿ ಹಾಗೂ  ಲೋಕಸಭಾ ಸದಸ್ಯೆ ಹೇಮಾಮಾಲಿನಿ ಹಾಗೂ ಹಲವಾರು ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ ಮಹಿಳೆ) ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಯುವಜನಾ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೋರ್ವ ಮೃತಪಟ್ಟ ಘಟನೆ ರಾ.ಹೆ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ (62) ಎಂದು ಗುರುತಿಸಲಾಗಿದೆ. ಸಾಲಿಗ್ರಾಮದಿಂದ ತೆಕ್ಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕೊಂದು ಸವಾರ ನಿಯಂತ್ರಣ ತಪ್ಪಿ ಕೋಟ ಪೆಟ್ರೋಲ್ ಬಂಕ್ ಸಮೀಪ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಶೇಖರ್ ಶೆಟ್ಟಿಗೆ ನೇರ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಂದ್ರಶೇಖರ ಶೆಟ್ಟಿ ಗಂಭೀರ ಗಾಯಗೊಂಡಿರುತ್ತಾರೆ. ಅಲ್ಲದೆ ಬೈಕ್ ಸವಾರರಾದ ಸಾಲಿಗ್ರಾಮದ ಪೃಥ್ವಿಶ್ ದೇವಾಡಿಗ, ಶಶಾಂಕ್ ದೇವಾಡಿಗ ಅವರು ಕೂಡ ಅಪಘಾತದಲ್ಲಿ ಗಾಯ ಗೊಂಡಿರುತ್ತಾರೆ. ಗಾಯಗೊಂಡವರನ್ನು ತಕ್ಷಣ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೆ ಚಂದ್ರಶೇಖರ ಶೆಟ್ಟಿ ಮೃತಪಟ್ಟಿರುತ್ತಾರೆ. ಕೋಟ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಪರಿಶೀಲಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2025 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು  ಏಪ್ರಿಲ್ 16 ಮತ್ತು 17 ರಂದು ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಪರೀಕ್ಷೆ ಸಂದರ್ಭದಲ್ಲಿ ದೋಷರಹಿತವಾಗಿ ನಡೆಸಲು, ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಯಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಒಂದು ಕಡೆಯಲ್ಲಿ ಬೆಳೆದ ಕೃಷಿಗೆ ಬೆಲೆಯಿಲ್ಲಾ, ಸೂಕ್ತ ಮಾರುಕಟ್ಟೆಯಿಲ್ಲಾ, ಮಧ್ಯವರ್ತಿಗಳ ಹಾವಳಿ, ಕಾಡುಪ್ರಾಣಿಗಳ ಹಾವಳಿ, ಆಗಾಗ ಕೈಕೊಡುವ ಮಳೆಗಾಲ, ವಿಪರೀತ ಬೇಸಗೆ, ಕೃಷಿ ಕೂಲಿ ಕಾರ್ಮಿಕರ ಕೊರತೆ, ಕೃಷಿ ಯಂತ್ರೋಪಕರಣಗಳ ಗಗನಕ್ಕೆರಿದ ಬಾಡಿಗೆ ಇತ್ಯಾದಿಗಳಿಂದ ಕಂಗೆಟ್ಟು ಹೋಗಿರುವ ರೈತರಿಗೆ ಇದೆಲ್ಲವುದರ ಜೊತೆ ಅತೀವ ತೊಂದರೆ ಕೊಡುತ್ತಿರುವ ಇನ್ನೊಂದು ಅಂದರೆ ಮಂಗಗಳ ಹಾವಳಿ. ಇವತ್ತು ಮಂಗಗಳು ಕಾಡಿನಲ್ಲಿ ವಾಸಿಸುವುದನ್ನೇ ಮರೆತು ಮನುಷ್ಯನ ಜೊತೆ ಅವುಗಳ ಚೇಷ್ಟೆಯೊಂದಿಗೆ ವಾಸ ಮಾಡುತ್ತಿರುವುದು ರೈತರ ನಿದ್ದೆಯನ್ನು ಕೆಡಿಸಿಬಿಟ್ಟಿದೆ ಎಂದು ಕುಂದಾಪುರದ ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಆಳುವ ಸರ್ಕಾರಗಳು ಮಂಕಿ ಪಾರ್ಕ್ ಮಾಡುತ್ತೇವೆ, ಮಂಗಗಳ ತೊಂದರೆ ಹತೋಟಿಗೆ ತರಲು ಈಶಾನ್ಯ ರಾಜ್ಯಗಳ ಕೈಗೊಂಡಿರುವ ಕ್ರಮಕೈಗೊಳ್ಳುತ್ತೇವೆ ಅನ್ನುತ್ತಿವೆ ಬಿಟ್ಟರೆ ತೆಗೆದುಕೊಂಡ ಕ್ರಮಗಳು ಮಾತ್ರ ಶೂನ್ಯ. ಅದರ ಜೊತೆ ಮಾನವರು ತಮ್ಮ ಸ್ವಾರ್ಥಕ್ಕೆ ಕಾಡನ್ನು ನಾಶ ಮಾಡಿ ಕಾಡುಪ್ರಾಣಿಗಳ ಆಹಾರ ನೀಡುತ್ತಿದ್ದ ಮರಗಳನ್ನು ನಾಶ ಮಾಡಿರುವುದು ಈ ಸಮಸ್ಯೆಗಳಿಗೆ ದೊಡ್ಡ ಕಾರಣ.…

Read More