Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಬಾಂಡ್ಯಾ ಎಜುಕೇಶನಲ್ ಟ್ರಸ್, ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜಿನ 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 46 ವಿದ್ಯಾರ್ಥಿಗಳು ಉತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 15 ಮಂದಿ ವಿಶಿಷ್ಟ ಶ್ರೇಣಿ ಮತ್ತು 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆಂದು ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಅವರು ತಿಳಿಸಿದ್ದಾರೆ.  ಕಾಲೇಜಿನ ವಿಜ್ಞಾನ ವಿಭಾಗದ  ಆಪ್ತ ಎಚ್ ಆರ್ (584), ಹಿಮಾನಿ ಡಿ.ಎಮ್(575), ಕೆ.ಅಮೂಲ್ಯ ಶೇಟ್(546) ವಾಣಿಜ್ಯ ವಿಭಾಗದ  ಸಿಯಾ ಎಸ್ ಶೆಟ್ಟಿ (579), ಕಾವ್ಯ (572), ವೈಭವ್ ಜಿ (546) ಅಂಕ ಗಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಎ.08: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನವನ್ನು ದಕ್ಷಿಣ ಕನ್ನಡ (93.57%), ಕೊನೆ ಸ್ಥಾನವನ್ನು ಯಾದಗಿರಿ (73.45%)  ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಅಮೂಲ್ಯ ಕಾಮತ್‌ 599 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಜಿಲ್ಲಾವಾರು ಫಲಿತಾಂಶ:ಉಡುಪಿ ಜಿಲ್ಲೆ ಶೇ. 93.90 ದಕ್ಷಿಣ ಕನ್ನಡ ಜಿಲ್ಲೆ ಶೇ. 93.57 ಬೆಂಗಳೂರು ದಕ್ಷಿಣ ಶೇ. 85.36, ಕೊಡಗು ಜಿಲ್ಲೆ ಶೇ. 83.84 ಬೆಂಗಳೂರು ಉತ್ತರ ಶೇ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಲ್ಲಿ ಮೂಡುವ ಆಲೋಚನೆಗಳು, ಚಿಂತನೆಗಳನ್ನು ಸರಿಯಾಗಿ ಬಳಸಿಕೊಂಡು ಅವುಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಅಟಲ್ ಟಿಂಕರಿಂಗ್ ಲ್ಯಾಬ್ ಒಂದು ವೇದಿಕೆಯಾಗಲಿದೆ ಎಂದು ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಹೇಳಿದರು. ಅವರು ಇಲ್ಲಿನ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಸಹಕಾರದೊಂದಿಗೆ ಎಸ್.ವಿ. ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಆಯೋಜಿಸಲಾಗಿರುವ ಐದು ದಿನಗಳ ಅಟಲ್ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಹೊಸ ಹೊಸ ಅನ್ವೇಷಣೆ ನಡೆಸಲು ವಿದ್ಯಾರ್ಥಿಗಳಿಗೆ ಅಟಲ್ ಟಿಂಕರಿಂಗ್ ಲ್ಯಾಬ್ ಸಹಕಾರಿಯಾಗುತ್ತಿದ್ದು, ಇದರ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಬಹುದು. ಅಟಲ್ ಬೇಸಿಗೆ ಶಿಬಿರದ ಸದುಪಯೋಗವನ್ನು ಮಕ್ಕಳು ಪಡೆದುಕೊಂಡು ಜೀವನದಲ್ಲಿ ಉತ್ತಮ ಸಾಧನೆ ಮಾಡುವಂತಾಗಬೇಕು ಎಂದರು. ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಜಯಶ್ರೀ ನಾಯಕ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಹಿನ್ನೆಲೆಯ ವೀರ ಚಂದ್ರಹಾಸ ಚಿತ್ರ ತಂಡದಿಂದ ಕುಂಭಾಶಿ ಆನೆಗುಡ್ಡೆಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಯಕ್ಷಗಾನ ಕಲಾವಿದರು, ಚಿತ್ರದಲ್ಲಿ ನಟಿಸಿದ ಕಲಾವಿದರು, ಭಾಗವತರಿಗೆ ಸಮ್ಮಾನ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಯಕ್ಷಗಾನ ಕಲಾವಿದರಾದ ನರಾಡಿ ಭೋಜರಾಜ ಶೆಟ್ಟಿ, ಉಳ್ಳೂರು ನಾರಾಯಣ ನಾಯ್ಕ, ಸುಧಾಕರ ಕೊಠಾರಿ, ವಿಶ್ವನಾಥ್ ಆಚಾರ್ಯ ತಾರಿಕೊಡ್ಲು, ಪ್ರವೀಣ್ ಗಾಣಿಗ ಕೆಮ್ಮಣ್ಣು, ಕೃಷ್ಣ ಗಾಣಿಗ ಹೊಸಂಗಡಿ, ಸದಾಶಿವ ಅಮೀನ್‌ ಕೊಕ್ಕರ್ಣೆ, ಆಜ್ರಿ ಗೋಪಾಲ ಗಾಣಿಗ, ಸದಾಶಿವ ಶೆಟ್ಟಿ ಯರುಕೋಣೆ ಹಾಗೂ ಹಿರಿಯ ಭಾಗವತ ಸುರೇಶ್‌ ಶೆಟ್ಟಿ ಶಖಮರನಾರಾಐಣ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಚಿತ್ರದಲ್ಲಿ ಅಭಿನಯಿಸಿದ ಕಲಾವಿದರಾದ ಶಿಥಿಲ್ ಶೆಟ್ಟಿ ಐರೆಬೈಲ್, ಪ್ರಸನ್ನ ಶೆಟ್ಟಿಗಾರ್, ರವೀಂದ್ರ ದೇವಾಡಿಗ ಕಮಲಶಿಲೆ, ನವೀನ್ ಶೆಟ್ಟಿ ಐರೆಬೈಲ್, ಶ್ವೇತಾ ಅರೆಹೊಳೆ , ಗೋವಿಂದ ಸಾಲಿಮಕ್ಕಿ, ಶೇಖರ್ ಶೆಟ್ಟಿ ಯಳಬೇರು, ಉದಯ ಹೆಗಡೆ ಕಡಬಾಳ್, ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ, ಪ್ರಸಾದ್ ಮೊಗೆಬೆಟ್ಟು, ಮದ್ದಲೆ ವಾದಕ ವಿಶ್ವಂಭರ ಅಲ್ಲೆ ಐರೋಡಿ, ಸುನೀಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿಯಾಗಿ ಸಹ ಸವಾರ ಸಾವನ್ನಪ್ಪಿದ ಘಟನೆ ತ್ರಾಸಿ -ಗಂಗೊಳ್ಳಿ ಮುಖ್ಯ ರಸ್ತೆಯ ಕೊಡಪಾಡಿಯ ಮಾರಿಕಾಂಬಾ ದೇವಸ್ಥಾನದ ಬಳಿ ನಡೆದಿದೆ. ಸಹ ಸವಾರ ಮೊಹಮ್ಮದ್ ಕೈಸ್‌ ಕಿದಿಯೂರು (17) ಸಾವನ್ನಪ್ಪಿದವರು. ಅವರು ಆಸಾಸ್ ಅವರ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ‌ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದ್ದ ಪರಿಣಾಮ ಸಹ ಸವಾರ ಮೊಹಮ್ಮದ್ ‌ ಕೈಸ್‌ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಬೈಕ್ ಸವಾರ ಆನಾಸ್ ಸಹ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೋಳಂಬಳ್ಳಿಯ ಶ್ರೀ ಪದ್ಮಾವತಿ ದೇವಿ ಕ್ಷೇತ್ರದಲ್ಲಿ ಹುಂಬುಜ ಮಠದ ಪೀಠಾಧಿಪತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ 27 ಅಡಿ ಎತ್ತರದ ಏಕಶಿಲಾ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಹಾಗೂ 21 ಅಡಿ ಎತ್ತರದ ಭಗವಾನ್ ಶ್ರೀ ರಾಮಚಂದ್ರ ದೇವರ ಪ್ರತಿಮೆ ಪ್ರತಿಷ್ಠಾಪಿಸಲಾಯಿತು. ಈ ಪುಣ್ಯ ಕಾರ್ಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಮತ್ತು ವನಿತಾ ಧರ್ಮರಾಜ್ ದಂಪತಿಗಳು ಅಲಂಕಾರಿಕ ಆರತಿ ಬೆಳಗುವ ಮೂಲಕ ಮುನ್ನುಡಿ ಹಾಕಿದರು. ಈ ವೇಳೆ ಗ್ರಾ.ಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಡಾ. ಆಕಾಶ್‌ರಾಜ್, ಮೂಡುಬಿದಿರೆಯ 18 ಬಸದಿಗಳ ಆಡಳಿತ ಮೊಕೇಸರ ಆದರ್ಶ್ ಎಂ., ಸಮುದಾಯದ ಪ್ರಮುಖರಾದ ಸುಭಾಶ್ ಜೈನ್ ಕುಂದಾಪುರ, ಪದ್ಮಪ್ರಸಾದ್ ಜೈನ್ ನಾಗರಾಜ್, ಡಾ. ಅಕ್ಷತಾ ಆದರ್ಶ್, ಎಂ.ಎನ್. ವಿಜಯೇಂದ್ರ ಮಳೂರು, ಪಾವನ ರಾಜ್, ಪಾರೀಷ್ ಮತ್ತು ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಶ್ರೀ ಬಾಹುಬಲಿ ವಿಗ್ರಹವು ಉಡುಪಿ ಜಿಲ್ಲೆಯಲ್ಲಿನ ಎರಡನೇ ಬಾಹುಬಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು.  ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪದವಿ ವ್ಯಾಸಂಗದ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ನಿರಂತರ ತರಬೇತಿಯನ್ನು ಪಡೆದುಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಎಂತಹ ಸಾಧನೆಯನ್ನು ಬೇಕಾದರೂ ಮಾಡಬಹುದು ಎಂದರು.  ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬಿ.ಕಾಂ. ಪದವಿಯ ಜೊತೆ ಪ್ರತಿ ಸೆಮಿಸ್ಟರ್ನಲ್ಲಿ ವಿದ್ಯಾರ್ಥಿಗಳಿಗೆ ಸಿಬ್ಬಂದಿ ಆಯ್ಕೆ ಆಯೋಗದ ಕುರಿತು ಬೋಧನೆ ನಡೆಸಲಾಗುವುದು. ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಎಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ 2025ನೇ ನಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ -16 ಮತ್ತು17 ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ ತಲಾ  6 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ವೇಗದ ಬದುಕಿನ ಭರಾಟೆಯಲ್ಲಿ ತಲ-ತಲಾಂತರಗಳಿಂದ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧಗಳನ್ನು ಹೊಂದಿ ಜೀವನವನ್ನು ಶ್ರೀಮಂತಗೊಳಿಸಿದ ಮೌಖಿಕ ಪರಂಪರೆಯಾದ ಅಮೂಲ್ಯ ಜಾನಪದ ಸಂಸ್ಕೃತಿಯನ್ನು ಇಂದಿನ ಯುವ ಪೀಳಿಗೆ ರಕ್ಷಿಸಬೇಕಾದ ತುರ್ತು ಅಗತ್ಯವಿದೆ ಎಂದು ಕಲಾ ಚಿಗುರು ಕಲಾ ತಂಡದ ಚೇತನ್ ನೈಲಾಡಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಜಾನಪದ ಉತ್ಸವ 2025, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಾನಪದ ಎಂಬುದು ಒಂದು ಸಂಪ್ರದಾಯ, ಪರಂಪರೆಗಳ ವಿಜ್ಞಾನ ಎಂದು ಪರಿಭಾವಿಸಬೇಕಾದ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ವಿದ್ಯೆ ಕಲಿಕೆಯೊಂದಿಗೆ ಸನಾತನ ಸಂಸ್ಕೃತಿಯ ಜೀವನದ ಶೈಲಿಯನ್ನು ರೂಢಿಸಿಕೊಂಡು ಮುಂದಿನ ತಲೆಮಾರಿಗೆ ಅದನ್ನು ವರ್ಗಾಯಿಸುವ ಗುರುತರ ಹೊಣೆಗಾರಿಕೆಯನ್ನು ಹೊಂದಬೇಕಾಗಿದೆ ಎಂದರು. ಪ್ರಾಂಶುಪಾಲರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Read More