Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವು ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ನಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಬೇಕು ಎಂದು ಕರಾವಳಿ ಪೊಲೀಸ್ ಪಡೆಯ ನಿರೀಕ್ಷಕ ಪ್ರಮೋದ್‌ ಕುಮಾರ್‌ ಹೇಳಿದರು. ಅವರು ಇಲ್ಲಿನ ಪಡುಕೇರಿಯ ಒಂಬತ್ತುದಂಡಿಗೆ ಚಿಕ್ಕಮ್ಮ ದೇವಸ್ಥಾನದಲ್ಲಿ ನಡೆದ ಯುವ ಮಿತ್ರವೃಂದದ 30ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಮಾತನಾಡುತ್ತಾ, ಅಧಿಕಾರ, ಅಂತಸ್ತು ಏರಿಕೆಯಾದಾಗ ನಮ್ಮ ಬೆಳವಣಿಗೆಯ ಹಿಂದಿನ ಹೆಜ್ಜೆಗಳನ್ನು ಮರೆಯಬಾರದು. ಆಧುನಿಕತೆಯ ಉಪಯೋಗವನ್ನು ಮಾತ್ರ ಪಡೆದುಕೊಂಡು ಅಪಾಯದಿಂದ ದೂರವಿರಬೇಕು. ಒಗ್ಗಟ್ಟು ಹಾಗೂ ಸಂಘಟನಾ ಆಸಕ್ತಿಗಳು ಸಮೃದ್ಧವಾಗಿದ್ದಾಗ ಸಂಘಟನೆಗಳು ಶಕ್ತಿಯುತವಾಗಿ ಬೆಳೆಯುತ್ತದೆ ಎಂದರು. ಯುವ ಮಿತ್ರ ವೃಂದ ಅಧ್ಯಕ್ಷ ಅಮರ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2024-25ನೇ ಸಾಲಿನಲ್ಲಿ ಕಾರ್ತಿಕ ದೀಪೋತ್ಸವ, ಧಾರ್ಮಿಕ, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ, ಸಾಮಾಜಿಕ, ಕ್ರೀಡೆ ಸೇರಿದಂತೆ ಮಾನವೀಯ ಮೌಲ್ಯದ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಮಹತ್ವಾಕಾಂಕ್ಷೆಯ “ ತುರ್ತು ನಿಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ಪೂರ್ವದಲ್ಲಿಯೇ ಬ್ರಿಟಿಷ್ ನಿವೃತ್ತ ಅಧಿಕಾರಿ ಪೋವೆಲ್ ರಿಂದ ಸ್ಥಾಪಿತವಾದ ಸ್ಕೌಟ್ಸ್ ಅಂಡ್ ಗೈಡ್ಸ್ ಆಂದೋಲನ ಇಂದು ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ದೈಹಿಕವಾಗಿ ಬೌದ್ಧಿಕವಾಗಿ ಸದೃಢವಾಗಿಸಿ ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಇಂದು ಭಾರತದ ಬಹುಪಾಲು ರಾಜ್ಯಗಳಲ್ಲಿ ತರಬೇತಿ ನಡೆಯುತ್ತಿದ್ದು ಬಹುಪಾಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಉತ್ತಮ ಶಿಸ್ತು ನಡತೆಗಳನ್ನು ಕಲಿತು ಪಠ್ಯ ಮತ್ತು ಪಠ್ಯೇತರ ವಿಭಾಗದಲ್ಲೂ ಉತ್ತಮ ಸಾಧನೆ ತೋರಿಸುತ್ತಿದ್ದಾರೆ. ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಸ್ಕೌಟ್ಸ್ ಅಂಡ್ ಗೈಡ್ಸ್ ಪರಿಚಯ ಮಾಡುವುದರಿಂದ ಉತ್ತಮ ಶಿಸ್ತು, ಗುಣ ನಡತೆಗಳನ್ನು ಜೀವನದುದ್ದಕ್ಕೂ ರೂಡಿಸಿಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರ್ಕಾರ ಹೊರಡಿಸುವ ಸುತ್ತೋಲೆ, ಆದೇಶಗಳು ಪಂಚಾಯತ್ ರಾಜ್ ವ್ಯವಸ್ಥೆಯ ಒಂದೊಂದೇ ಕಲ್ಲುಗಳನ್ನು ಬೀಳಿಸುತ್ತಿದೆ. ಇದನ್ನು ತಡೆದು ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಳ್ಳಬೇಕಾದರೆ, ಸ್ಥಳೀಯವಾಗಿ ಗ್ರಾಮ ಸರ್ಕಾರಗಳು ಬಲವಾಗಬೇಕು. ಚುನಾಯಿತ ಪ್ರತಿನಿಧಿಗಳಾದ ನೀವೆಲ್ಲಾ ಒಟ್ಟಾಗಿ ಧ್ವನಿ ಎತ್ತಬೇಕು. ಈ ಹೋರಾಟಕ್ಕೆ ನನ್ನ ವ್ಯಾಪ್ತಿಯಲ್ಲಿ ಆಗುವ ಎಲ್ಲಾ ಸಹಕಾರಗಳನ್ನು ನೀಡುವುದಾಗಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ಅವರು ಮಂಗಳವಾರದಂದು  ಉಡುಪಿ ಜಿಲ್ಲಾಡಳಿತ ಭವನ, ರಜತಾದ್ರಿ ಮಣಿಪಾಲ ಅಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ನಡೆಸಿದ ಸ್ಥಳೀಯ ಸರ್ಕಾರದ ಉಳಿವಿಗಾಗಿ ಒಕ್ಕೊರಲ ಪ್ರತಿಭಟನೆಯ ಸಮಯದಲ್ಲಿ ಪಂಚಾಯತ್ ಪ್ರತಿನಿಧಿಗಳು ಮಾಡಿದ ಹಕ್ಕೊತ್ತಾಯಗಳಿಗೆ ಪ್ರತಿಕ್ರಿಯಿಸಿದರು. ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅವರು ಮಾತನಾಡುತ್ತಾ, ಸ್ಥಳೀಯ ಸ್ವಯಂ ಸರ್ಕಾರವನ್ನು ಉಳಿಸಲು ಮತ್ತು ಬಲಪಡಿಸಲು ನಾವೆಲ್ಲಾ ಒಗ್ಗಟ್ಟಾಗಿ ಕಾರ್ಯಪ್ರವತ್ತರಾಗಬೇಕು. ಹಿಂದಿನಿಂದಲೂ ಹಲವಾರು ರೀತಿಯಲ್ಲಿ ವಿವಿಧ ಹಂತದ ಸರ್ಕಾರಗಳಿಂದ ನಿರಂತರವಾಗಿ ಗ್ರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ನೈರ್ಮಲ್ಯ, ಬ್ಯಾಂಕಿಂಗ್ ಇತ್ಯಾದಿ ಎಲ್ಲಾ ರಂಗಗಳಲ್ಲಿ ಅತ್ಯಂತ ಮುಂಚೂಣಿಯಲ್ಲಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವತ್ತು ಹಿನ್ನಡೆಯನ್ನು ಕಾಣಲು ಇಲ್ಲಿನ ಬಿಜೆಪಿ ಜನಪ್ರತಿನಿದಿನಗಳು ಕೊಡುಗೆ ದೊಡ್ಡದು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಚುನಾವಣೆಯ ಗೆಲುವಿಗಾಗಿ ಭಾವನಾತ್ಮಕ ವಿಚಾರಗಳನ್ನು ಮುಂದೆ ಇಟ್ಟು ಧರ್ಮ ಧರ್ಮದ ನಡುವೆ, ಜಾತಿ ಜಾತಿಯ ನಡುವೆ ವಿಷ ಬೀಜ ಬಿತ್ತಿ ಕೋಮು ಸೌಹಾರ್ದತೆ ಹಾಳಾದ ಕಾರಣ ಪ್ರವಾಸೋದ್ಯಮ, ಇನ್ನಿತರ ಹೂಡಿಕೆಗೆ ಜನ ಹಿಂಜರಿಯುತ್ತಿರುವ ಕಾರಣ ಕರಾವಳಿ ಜಿಲ್ಲೆಗಳು ಉದ್ಯಮ, ಉದ್ದಿಮೆಗಳಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಇವತ್ತು ಪ್ರವಾಸೋದ್ಯಮದಲ್ಲಿ ಕರ್ನಾಟಕ ಕರಾವಳಿಗಿಂತ ಗೋವಾ ಮತ್ತು ಕೇರಳ ಅಭಿವೃದ್ಧಿಯನ್ನು ಹೊಂದಿವೆ. ಆದರೆ ಕೇರಳ ಮತ್ತು ಗೋವಾದಷ್ಟೇ ಪ್ರವಾಸೋದ್ಯಮಕ್ಕೆ ವಿಪಲ ಅವಕಾಶ ಕರ್ನಾಟಕ ಕರಾವಳಿಯಲ್ಲಿ ಇದೆ, ಆದರೆ ಇಲ್ಲಿನ ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯಿಂದ ನಾವು ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಇತ್ಯಾದಿಗಳ ಪ್ರಗತಿಯಲ್ಲಿ ಹಿನ್ನಡೆಯನ್ನು ಕಾಣುತ್ತಿದ್ದೇವೆ. ಇವತ್ತು ರಾಜ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶ್ರೀ ಶಂಕರ ಪಂಚಮಿಯ ವಿಶಿಷ್ಠ ಕಾರ್ಯಕ್ರಮದ ಸಂಕಲ್ಪದೊಂದಿಗೆ ಶ್ರೀ ಶಂಕರ ಭಗವತ್ಪಾದರ ಪಾದುಕೆಯನ್ನು ಹೊತ್ತ ಅದ್ವೈತ ರಥವು ಶ್ರೀ ಕ್ಷೇತ್ರ ಗೋಕರ್ಣದ ಅಶೋಕೆಯಲ್ಲಿ ಶ್ರೀ ಸಂಸ್ಥಾನದವರಿಂದ ಚಾಲನೆಗೊಂಡ ಅದ್ವೈತ ರಥವು ಬೈಂದೂರು ತಾಲೂಕು ಉಪ್ಪುಂದ ಮಠದ ಗಡಿಗೆ ತಲುಪಿದ್ದು ಮಠದ ಶಿಷ್ಯರು ರಥವನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡರು, ಪಾದುಕೆಗೆ ವಿಶೇಷ ಪೂಜೆ ನಡೆಸಲಾಯಿತು ಹಾಗೂ ಶಂಕರರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೆಡೆಯಿತು, ಅದ್ವೈತ ರಥವು ಕರ್ನಾಟಕ ರಾಜ್ಯ ಸೇರಿದಂತೆ ಕೇರಳ, ತಮಿಳುನಾಡು ರಾಜ್ಯದ ಕೆಲವು ಭಾಗಗಳಲ್ಲಿ ಸಂಚರಿಸಲಿರುವುದು. ವೇದಮೂರ್ತಿ ಶಂಕರ ನಾರಾಯಣ ಭಟ್ ಪೂಜಾ ಕಾರ್ಯ ನಡೆಸಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ವಲಯದ ಅಧ್ಯಕ್ಷರಾದ ಪ್ರೋ. ನಾರಾಯಣ ಸ್ವಾಮೀ, ಕಾರ್ಯದರ್ಶಿ ನಾಗರಾಜ ಭಟ್, ಗುರುದತ್ ರಾವ್, ಸತ್ಯನಾರಾಯಣ ಪುರಾಣಿಕ, ಸುಭಾಶ್ಚಂದ್ರ ಪುರಾಣಿಕ, ಯು. ಸಂದೇಶ ಭಟ್, ದಿವಾಕರ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೋಲಾರ್ ವಿದ್ಯುತ್ ಶಕ್ತಿ ಉತ್ಪಾದನಾ ಘಟಕವನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಉದ್ಘಾಟಿಸಿದರು. ಸೋಲಾರ್ ವಿದ್ಯುತ್ ಶಕ್ತಿ ಘಟಕವನ್ನು ವಿನ್ಯಾಸಗೊಳಿಸಿದ ಪ್ರಸಿದ್ಧಿ ಸೋಲಾರ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಕುಂದಾಪುರ ಘಟಕದ ಪ್ರೋಜೆಕ್ಟ್ ವ್ಯವಸ್ಥಾಪಕರಾದ ಸಂತೋಷ್ ಪೂಜಾರಿ ಅವರು ಕಾಲೇಜಿನಲ್ಲಿ ಸ್ಥಾಪಿಸಲ್ಪಟ್ಟ ಈ ಸೋಲಾರ್ ವಿದ್ಯುತ್ ಶಕ್ತಿ ಮೇಲ್ಚಾವಣಿ ಘಟಕವು  163 ಕಿಲೋ ವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ.  ಪ್ರತಿ ತಿಂಗಳು ಸರಿಸುಮಾರು ಇಪ್ಪತ್ತು ಸಾವಿರ ಯುನಿಟ್ಸ್ ವಿದ್ಯುತ್  ಉತ್ಪಾದನೆ ಆಗುತ್ತದೆ. ಅಲ್ಲದೆ ಪ್ರತಿ ತಿಂಗಳು 1,75,000 ರೂಪಾಯಿಗಳು ಉಳಿತಾಯ ಮಾಡಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಕಾಲೇಜಿನ ಅಧೀಕ್ಷಕರಾದ ಗೋಪಾಲ್ ನಾಯ್ಕ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರಿ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಾರ್ಷಿಕ ವಿಶೇಷ ಶಿಬಿರವು ಸೌಕೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಆಗಮಿಸಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭುಜಂಗ ಶೆಟ್ಟಿ ಅವರು ಶ್ರಮ ವಿದ್ಯೆ ಬುದ್ಧಿ ಜ್ಞಾನ ಕೌಶಲ್ಯ ಇತ್ಯಾದಿಗಳನ್ನು  ಸಮಾಜದ ದೇಶದ ಒಳಿತಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೆ  ಮನೋಭಾವದಿಂದ ನೀಡುವ  ಸಹಾಯವೇ ಸೇವೆ. ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳನ್ನು, ಮಾನವೀಯ ಸಂಬಂಧಗಳನ್ನು, ಸಮಯ, ಪಾಲನೆ, ಶಿಸ್ತುಗಳನ್ನು ಕಲಿಸುತ್ತದೆ. ಸೇವೆ ಮತ್ತು ಸಹಬಾಳ್ವೆಯ ಪಾಠವನ್ನು ವಿದ್ಯಾರ್ಥಿಗಳು ಈ ಶಿಬಿರದಿಂದ ಕಲಿಯುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಅವರು ಎನ್.ಎಸ್.ಎಸ್. ನ ಧ್ಯೇಯ ಧೋರಣೆಗಳು ಬದುಕಿನಲ್ಲಿ ಧನಾತ್ಮಕ ಬದಲಾವಣೆಗೆ ಪೂರಕವಾದ ಅಂಶಗಳು ಎಂದರು. ಬದುಕನ್ನು ಅರ್ಥಪೂರ್ಣಗೊಳಿಸಲು ಶಿಬಿರದಲ್ಲಿ ಕಲಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿಜಯಲಕ್ಷ್ಮೀ ಟ್ರೇಡರರ್ಸ್‌ ಮಾಲಕಿ, ಗುರುಪ್ರಸಾದ ಮಹಿಳಾ ಮಂಡಳಿ ಅಧ್ಯಕ್ಷೆ, ಹಿರಿಯ ಕಲಾವಿದೆ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ್ (76) ಅವರು ಇತ್ತೀಚಿಗೆ ನಿಧನರಾದರು. ತಮ್ಮ ವ್ಯವಹಾರ ಜ್ಞಾನ, ಕ್ರಿಯಾಶೀಲತೆ, ಸಂಘಟನಾ ಶಕ್ತಿ, ಕಲೆ, ಸಾಹಿತ್ಯ, ಸಂಗೀತ, ಜನಪದ ಸಂಸ್ಕೃತಿ ಬಗ್ಗೆ ಆಸಕ್ತಿಯಿಂದ ಸದಾ ಕ್ರಿಯಾಶೀಲರಾಗಿರುತ್ತಿದ್ದ ಹಾಲಾಡಿ ಲಕ್ಷ್ಮೀದೇವಿ ಕಾಮತ್ ತಮ್ಮ ಕೃತಿಗಳಾದ ಜೀವನ ಚಕ್ರ, ವೇದ ಸಾರ, ಜೋ… ಜೋ…., ಜಾನಪದ ಜೋಗುಳ ಗೀತೆ, ಕೃತಿಗಳಿಂದಲೂ ಜನಪ್ರಿಯರಾದವರು. ಕೊಂಕಣಿ, ಶಿಶುಗೀತೆಗಳ ಧ್ವನಿ ಪೆಟ್ಟಿಗೆ ಪ್ರಣಾಳಿಕೆ ತಂದವರು. ತಾಲೂಕಿನ ಅನೇಕ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷತೆಯೂ ಸೇರಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದವರು. ʼಕೊಂಕಣಿ ಕಲಾ ಸಮಾಜದ’ದ ಅಧ್ಯಕ್ಷರಾಗಿ ಹಲವು ಸಮ್ಮೇಳನ ನಡೆಸಿದವರು. ಕೊಂಕಣಿ ಮಕ್ಕಳ ಸಂಘದ ಮೂಲಕ ಮಕ್ಕಳಿಗೆ ರಂಗ ಕಲೆ, ಯಕ್ಷಗಾನ, ಸಂಗೀತ ತರಬೇತಿ ವ್ಯವಸ್ಥೆ ಮಾಡುತ್ತಿದ್ದರು. ಮಂಗಳೂರಿನ ಚೆಂಬರ್ ಆಫ್ ಕಾಮರ್ಸ್, ಕೆ. ಎಸ್. ಎಸ್. ಐ. ಸಿ. ಸದಸ್ಯರಾಗಿದ್ದ ಅವರು ಜಿಂಗಲ್ ಬೆಲ್ಸ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅನುಷ್ಠಾನಕ್ಕಾಗಿ ಬೈಂದೂರು ತಾಲೂಕಿನಲ್ಲಿ ಇದುವರೆಗೆ ಸುಮಾರು  158.50 ಕೋಟಿ ರೂ. ವೆಚ್ಚಮಾಡಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಉಪ್ಪುಂದ ಹೇಳಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಿಂದ 27,556 ಫಲಾನುಭವಿಗಳ ಖಾತೆಗೆ ರೂ. 80.21 ಕೋಟಿ ಜಮಾ ಆಗಿದೆ. ತಾಂತ್ರಿಕ ಕಾರಣದಿಂದಾಗಿ 479 ಫಲಾನುಭವಿಗಳಿಗೆ ಬಾಕಿಯಿದೆ. ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,748 ಕುಟುಂಬಗಳಿಗೆ 31.19 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1935 ಕುಟುಂಬಗಳಿಗೆ 1.98 ಕೋಟಿ ರೂ. ಸೇರಿದಂತೆ ಸುಮಾರು 33.18 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೀವನದಲ್ಲಿ ಪಡೆದ ಅನುಭವವನ್ನೇ ಸ್ವಾರಸ್ಯಕರ ಶೈಲಿಯಲ್ಲಿ ಬರೆಯುವುದರಿಂದ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ ಬರವಣಿಗೆ ಇಷ್ಟವಾಗುತ್ತದೆ . ಹಾಗಾಗಿ ಅವರ ನೆನಪಿನಾಳದಲ್ಲಿ, 20 ಕಥೆಗಳು, ಜಯಂತಣ್ಣನಿಗಾಗಿ ಕಾದಂಬರಿ ಓದುಗರನ್ನು ತಲುಪಿತು. ಹೊಸತನದ ಕಥೆಯೊಂದಿಗೆ ಹೀಗೂ ಕಾದಂಬರಿ ಬರೆಯಬಹುದು ಎಂದು ಜಾಲಿ ಮತ್ತು ಅಪ್ಪು ಕೃತಿಯಿಂದ ತೋರಿಸಿ ಕೊಟ್ಟಿದ್ದಾರೆ ಎಂದು ಖ್ಯಾತ ಪ್ರಸೂತಿ ತಜ್ಞ ಮಣಿಪಾಲದ ಸೋನಿಯಾ ಆಸ್ಪತ್ರೆಯ ಡಾ. ಗಿರಿಜಾ ರಾವ್ ಹೇಳಿದರು. ಅವರು ಭಂಡಾರ್‌ಕಾರ್ಸ್‌ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಂವಹನದ ಕೊರತೆ ಮತ್ತು ಪರಸ್ಪರ ಅಪನಂಬಿಕೆ ಡಾಕ್ಟರು ಮತ್ತು ರೋಗಿಗಳ ಸಂಬಂಧ ಕೆಡಲು ಕಾರಣ. ಜನರು ವೈದ್ಯರ ಮೇಲೆ ವಿಶ್ವಾಸವಿಡಬೇಕು. ಗೌರವದ ನಡವಳಿಕೆ ಇರಬೇಕು. ವೈದ್ಯರ ಸೇವೆಯ ವಿಷಯದಲ್ಲಿ ಎಂದೂ ಅಪ್ರಾಮಾಣಿಕರಾಗಿರಬಾರದು. ವೈದ್ಯಕೀಯ ಸೇವೆಯ ಒತ್ತಡದಲ್ಲಿ ರೋಗಿಗಳ ಪೋಷಕರಿಂದ ಬೆಂಬಲವನ್ನು ಪ್ರಾಮಾಣಿಕ ವೈದ್ಯರು…

Read More