Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವೈಯಕ್ತಿಕ ವಿಚಾರಗಳನ್ನು ಮೀರಿದ ಸಂಬಂಧವೇರ್ಪಡಿಸಿ ನಮ್ಮನ್ನು ಒಂದುಗೂಡಿಸುವ ಶಕ್ತಿ ಕಲೆ ಮತ್ತು ಸಾಹಿತ್ಯಕ್ಕಿದೆ. ತಾಯಿಯಂತಹ ಕರುಣೆ ಮತ್ತು ಮಗುವಿನಂತಹ ನಿಷ್ಕಪಟ ದೃಷ್ಠಿಯಿಂದ ನೋಡಿದರೆ ನಮಗೆ ಜಗತ್ತು ಸುಂದರ ಹಾಗೂ ಸನಿಹವಾಗುತ್ತದೆ. ಜಾತಿ, ಮತ, ಅಂತಸ್ತುಗಳ ನರಕದಿಂದ ಮೇಲೆತ್ತುವ ಸಾಮರ್ಥ್ಯ ಕೂಡ ಕಲೆಗಿದೆ ಎಂದು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು. ಅವರುಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಟರಾಜ ಡಾನ್ಸ್ ಕಂಪೆನಿಯ ಮೂರನೇ ವರ್ಷದ ಸಮ್ಮರ್ ಕ್ಯಾಂಪ್‌ನ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಸಿಟಿ ಅಧ್ಯಕ್ಷ ರಾಜು ಮೊಗವೀರ ಮಾತನಾಡಿ, ಎಲ್ಲರೂ ಒಟ್ಟಾಗಿ ಕಲೆತು ಭಾಗವಹಿಸುವ ಇಂತಹ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಏಕತಾ ಭಾವನೆ ಮೂಡಿಸುತ್ತದೆ. ಬದುಕಿನಲ್ಲಿ ದೊರೆತ ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಕ್ರೀಯಾತ್ಮಕ ಚಿಂತನೆಗಳಿಂದ ಹೊಸತನ ಕಾಣಲು ಸಾಧ್ಯವಿದೆ. ಕಲೆ, ಶಿಕ್ಷಣ ಎಲ್ಲದರ ಮೂಲ ಉದ್ದೇಶ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಪ್ರಗತಿಯ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ ಕೋಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಮೋಕ್ತೇಸರರಾದ ಸುಭಾಷ್ ಚಂದ್ರ ಶೆಟ್ಟಿ, ಸೇವಾಕರ್ತರಾದ ರತ್ನಾಕರ್ ಶೆಟ್ಟಿ, ಚಂದ್ರ ಪಾಣಾ, ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕಿ ರೇಷ್ಮಾ ಶೆಟ್ಟಿ, ಪ್ರವೀಣ ಪೂಜಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುಎಚ್‌ವಿ ಕಾರ್ಯಕ್ರಮದ ಭಾಗವಾಗಿ, ಇಲ್ಲಿನ ಎಂಐಟಿ ಎರಡನೇ  ವರ್ಷದ  ಸಿಎಸ್ಇ ಡೇಟಾ ಸೈನ್ಸ್ ವಿದ್ಯಾರ್ಥಿಗಳು ಡಿವೈನ್ ಪಾರ್ಕ್ ಮತ್ತು ಸ್ಪಂದನ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ್ದರು. ಡಿವೈನ್ ಪಾರ್ಕ್‌ನ ಭೇಟಿ ವಿದ್ಯಾರ್ಥಿಗಳಿಗೆ ಒಂದು ಜ್ಞಾನೋದಯದ ಅನುಭವವಾಗಿತ್ತು. ಯೋಗದ ಮಹತ್ವ ಮತ್ತು ಉದ್ಯಾನವನವು ನೀಡುವ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು. ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸ್ವಯಂ ಸಾಕ್ಷಾತ್ಕಾರದ ಮೇಲೆ ಕೇಂದ್ರೀಕರಿಸಿದ ವಿವಿಧ ಕಾರ್ಯಕ್ರಮಗಳ ಮೂಲಕ ಡಿವೈನ್ ಪಾರ್ಕ್ “ಮಾನವ ನಿರ್ಮಾಣ ಮತ್ತು ರಾಷ್ಟ್ರ ನಿರ್ಮಾಣ” ವನ್ನು ಒತ್ತಿಹೇಳುತ್ತದೆ. ಉದ್ಯಾನವನದ ಮೂಲ ಸಂದೇಶ “ದೇವರು ಒಬ್ಬನೇ; ಹೆಸರುಗಳು ಮತ್ತು ರೂಪಗಳು ಹಲವು”, ಇದು ವೈವಿಧ್ಯತೆಯಲ್ಲಿ ಏಕತೆಯನ್ನು ಎತ್ತಿ ತೋರಿಸುತ್ತದೆ. ಇದರ ನಂತರ, ವಿದ್ಯಾರ್ಥಿಗಳು ಬ್ರಹ್ಮಾವರದ ಉಪ್ಪೂರಿನಲ್ಲಿರುವ ಸ್ಪಂದನ ಪುನರ್ವಸತಿ ಕೇಂದ್ರಕ್ಕೆ ಭೇಟಿದರು. ಇದು ನಿಜವಾಗಿಯೂ ಹೃದಯಸ್ಪರ್ಶಿ ಅನುಭವವಾಗಿತ್ತು, ಅಲ್ಲಿಯ ಮುಗ್ಧ ಮತ್ತು ಸುಂದರ ಆತ್ಮಗಳನ್ನು ಭೇಟಿಯಾದದ್ದು ವಿದ್ಯಾರ್ಥಿಗಳಿಗೆ ಅವಿಸ್ಮರಣೀಯ ಅನುಭವ. ಮಾನಸಿಕ ಸವಾಲುಗಳ ಹೊರತಾಗಿಯೂ, ಅವರ ಸೃಜನಶೀಲತೆ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಉಪ್ಪುಂದ ಪರಿಚಯ ಹೋಟೆಲ್‌ನ ಕೊಠಡಿಯಲ್ಲಿ ಇತ್ತೀಚಿಗೆ ಕಳವು ನಡೆದಿದೆ. ಬಿಜೂರು ನಿವಾಸಿ ಮಾಲತಿ ಎಂಬವರು ಹೋಟೆಲ್‌ನ ರೂಮ್‌ನಲ್ಲಿ ವಾಸ್ತವ್ಯ ಮಾಡಿ ಕೊಂಡಿದ್ದು, ಮೇ. 8ರಂದು ತಾಯಿ ಮನೆಗೆ ಬಿಜೂರಿಗೆ ಹೋಗಿದ್ದರು. ವಾಪಸ್ ಬಂದು ನೋಡುವಾಗ ಕೊಠಡಿಯ ಕಪಾಟಿನಲ್ಲಿರಿಸಿದ್ದ 10 ತೊಲೆ(100 ಗ್ರಾಂ) ಚಿನ್ನದ ಕರಿಮಣಿ ಸರ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಸಿಸಿಟಿವಿ ಪರಿಶೀಲಿಸಿದಾಗ ಹೋಟೆಲ್‌ನ 2ನೇ ಮಹಡಿಯ ಕೊಠಡಿಯಲ್ಲಿದ್ದ ವ್ಯಕ್ತಿಯೊಬ್ಬ ಮಧ್ಯಾಹ್ನ 2.20ರ ಹೊತ್ತಿಗೆ ಮಾಲತಿ ಅವರ ಕೊಠಡಿಯಲ್ಲಿ ಹೋಗಿ ಬಂದ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಬೈಂದೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಜಿಎಸ್‌ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಮೇ.20ರಿಂದ 26ರ ವರೆಗೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಪಂಚದಿನಾತ್ಮಕ ವಾಸ್ತವ್ಯವಿರಲಿದ್ದು, ದೇವಳದಲ್ಲಿ ನೂತನ ನಿರ್ಮಾಣದ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳನ್ನು ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಯು. ರಾಜೇಶ ಪೈ ಹೇಳಿದರು. ಮೇ.20ರಂದು ಸಂಜೆ ದೇವಳದ ಪರ್ಯಾಯ ಅರ್ಚಕ ಯು. ಚಂದ್ರಶೇಖರ ಭಟ್ ಮತ್ತು ವೈದಿಕ ತಂಡದವರಿಂದ ರಾಕ್ಷೋಘ್ನಹೋಮ, ಶುದ್ದಿಹೋಮ, ನವಗ್ರಹಯುಕ್ತ ವಾಸ್ತುಹವನ ನಡೆಯಲಿದೆ. ಮೇ.21ರಂದು ಸಂಜೆ ಶ್ರೀ ಗುರುಗಳ ಆಗಮನ, ಪೂರ್ಣಕುಂಭ ಸ್ವಾಗತ, ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳ ಉದ್ಘಾಟನೆ, ಪಾದಪೂಜೆ ನಂತರ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ಮೇ.22ರಂದು ಬೆಳಿಗ್ಗೆ ಶ್ರೀ ದೇವರಿಗೆ ಹತಕಲಶಾಭಿಶೇಕ, ಮಹಾಪೂಜೆ, ಸಂಜೆ ಶ್ರೀ ರಾಮನಾಮ ಜಪ, ಭಜನೆ, ರಾತ್ರಿಪೂಜೆ. ನಂತರ ಶ್ರೀ ಹನುಮಗಿರಿ ಮೇಳದವರಿಂದ ಯಕ್ಷಗಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ’ರಜತ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ನಿರ್ಮಿಸಲಾಗಿರುವ ನೂತನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಮತ್ತು ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಗೌರವಿಸಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಬಳ್ಳಾರಿಯ ಉದ್ಯಮಿ ಪದ್ಮನಾಭ ಕೊತ್ವಾಲ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಪತ್ರಕರ್ತ ಬಿ. ರಾಘವೇಂದ್ರ ಪೈ, ಶಾಲೆಯ ಹಳೆ ವಿದ್ಯಾರ್ಥಿಗಳಾದ ಡಾ. ಸುಬ್ಬುಲಕ್ಷ್ಮೀ ಎನ್. ಕಾರಂತ್, ವಿದ್ಯಾಲಕ್ಷ್ಮೀ ಶರತ್ ಕೊಠಾರಿ, ರಾಷ್ಟ್ರೀಯ ಈಜು ಪಟು ನಾಗರಾಜ ಖಾರ್ವಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ., ಶಾಲೆಯ ಮುಖ್ಯೋಪಾಧ್ಯಾಯ ಗಂಗಾಧರ ಬಂಟ್, ದಾನಿ ಅಬ್ದುಲ್ ಸಲಾಂ, ಸಂಘದ ಕಾರ್ಯದರ್ಶಿ ರಾಘವೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ವತಿಯಿಂದ ಸದಸ್ಯರ ಹುಟ್ಟುಹಬ್ಬಕ್ಕೆ  ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಈ ಹಿನ್ನಲ್ಲೆಯಲ್ಲಿ ಸಂಸ್ಥೆಯ ಸದಸ್ಯರಾದ ಪ್ರಶಾಂತ್ ಪಡುಕರೆ, ಗೌರವ ಸಲಹೆಗಾರ ಶಿವಮೂರ್ತಿ ಉಪಾಧ್ಯಾ ಇವರ ಹುಟ್ಟು ಹಬ್ಬದ ಅಂಗವಾಗಿ ಹೊಸಬದುಕು ಆಶ್ರಮಕ್ಕೆ 20 ಕೆ.ಜಿ.ಉಪ್ಪಿನಕಾಯಿಯನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭದಲ್ಲಿ ಪಂಚವರ್ಣಭಜನಾ ಮಂಡಳಿ ಕೋಟ ಇವರಿಂದ ಭಜನಾ ಗುರು ಪ್ರಶಾಂತ್ ಪಡುಕರೆ ಇವರಿಗೆ ಗುರವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ ಗಣೇಶ್, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ, ಪಂಚವರ್ಣಭಜನಾ ಮಂಡಳಿ ಕೋಟ ಸಂಚಾಲಕಿ ಗೀತಾ ಶಿವರಾಮ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್ ನಿರೂಪಿಸಿ, ಪಂಚವರ್ಣ ಮಹಿಳಾ ಮಂಡಲದ ನಿಕಟಪೂರ್ವ ಅಧ್ಯಕ್ಷೆ ಲಲಿತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕುಟುಂಬದವರಿದ್ದು, 2600 ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರುಗಳು ಈ ಹಿಂದೆ ಇತರೆ ಪ್ರದೇಶಗಳಿಂದ ಜಿಲ್ಲೆಗೆ ಬಂದವರಾಗಿದ್ದು ಜೋಗಿ, ಗೊಲ್ಲ, ದೊಂಬಿದಾಸ ಹಾಗೂ ದರ್ವೇಶ್ ಜಾತಿಗೆ ಸೇರಿದವರಾಗಿದ್ದಾರೆ. ಇವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳನ್ನು ಮಾಡಬೇಕಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಈ ಸಮುದಾಯದವರು ಶಿಕ್ಷಣವಂತರಾಗುತ್ತಿದ್ದಾರೆ. ಒಂದೆಡೆ ನೆಲೆಸಿ, ಕೃಷಿ ಚಟುವಟಿಕೆ, ಸ್ವಯಂ ಉದ್ಯೋಗ ಮತ್ತಿತರ ಕಾರ್ಯಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಗೀತ ಕ್ಷೇತ್ರದಲ್ಲಿ ಛಾಯಾ ತರಂಗಿಣಿ ಸಾಕಷ್ಟು ಶಿಷ್ಯ ವೃಂದ ಹೊಂದಿದ್ದು ತನ್ನದೆ ಆದ ಅಸ್ತಿತ್ವ ಹೊಂದಿ ಹಲವಾರು ಕಡೆಗಳಲ್ಲಿ ಶಿಷ್ಯ ವೃಂದವನ್ನು ಸೃಷ್ಟಿಸಿ ಕೊಂಡಿದ್ದಾರೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು. ಇತ್ತೀಚಿಗೆ ಕಾರಂತ ಥೀಂ ಪಾರ್ಕನಲ್ಲಿ ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಗೀತದ ಮೂಲಕ ಹೊರಜಗತ್ತಿಗೆ ನಮ್ಮನ್ನು ಪರಿಚಯಿಸುವುದರ ಜತೆಗೆ ಪ್ರಸಿದ್ಧಿ ಪಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಇಲ್ಲಿನ ಸಂಗೀತ ಗುರುಗಳು ಹಾಗೂ ಆ ಸಂಸ್ಥೆ ಮತ್ತಷ್ಟು ಶಿಷ್ಯವೃಂದವನ್ನು ಪಸರಿಸಿಕೊಳ್ಳಲಿ ಎಂದು ಹಾರೈಸಿದರು. ಗುರುವಂದನಾ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಗುರವಂದನಾ ಗೌರವ ಸಲ್ಲಿಸಲಾಯಿತು. 2023-24ನೇ ಸಾಲಿನ ಕರ್ನಾಟ ಶಾಸ್ತ್ರೀಯ ಸಂಗೀತದ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ತನ್ಮಯ್ ಬಿಜೂರು ಇವರನ್ನು ಗುರುತಿಸಲಾಯಿತು. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ವಹಿಸಿ…

Read More