Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಶ್ರೀ ಬಂಡಿಕಡು ಬೊಬ್ಬರ್ಯ ದೇವಸ್ಥಾನ ಸೇವಾ ಸಮಿತಿ ರಿ. ಹಾಗೂ ಮಹಿಳಾ ಸೇವಾ ಸಂಘ  ಕಮ್ತೀಯಾರ್ ಬೆಟ್ಟು ಹೋದ್ರಾಳಿ ಬೀಜಾಡಿ ವತಿಯಿಂದ ನಡೆದ ದೇವಸ್ಥಾನದ 14ನೇ ವರ್ಷದ ವರ್ಧಂತ್ಯೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಬಂಡಿಕಡು ಬೊಬ್ಬರ್ಯ ಸೇವಾ ಸಮಿತಿ ತುಂಬಾ ವರುಷದಿಂದ ಬೇಡಿಕೆಯಾದ ದೇವಾಸ್ಥಾನಕ್ಕೆ ಸಮರ್ಪಕ ರಸ್ತೆ ಇಲ್ಲದ ಕಾರಣ ಶಾಸಕರ ಗಮನಕ್ಕೆ ತಂದು ದೇವಸ್ಥಾನಕ್ಕೆ ಸಮರ್ಪಕವಾಗಿ ರಸ್ತೆಯನ್ನು ಕಲ್ಪಿಸುವಂತೆ ವಿನಂತಿಸಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು ಮಾತನಾಡಿ, ಖಾಸಗಿ ಜಾಗವಾಗಿರುವುದರಿಂದ ಇದನ್ನು ಸಂಬಂಧಪಟ್ಟ ವಾರಿಸುದಾರರ ಜೊತೆಗೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳಬೇಕಾಗಿದ್ದು, ಸರಕಾರದ ಮೂಲಕ ಅನುದಾನವನ್ನು ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ಮಾತುಗಳನ್ನಾಡಿದರು. ಶ್ರೀ ಬಂಡಿಕಡು ಬೊಬ್ಬರ್ಯ ದೇವಸ್ಥಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಯಶಸ್ಸು ಗಳಿಸುವುದಕ್ಕಿಂತಲೂ ಪ್ರಗತಿ ಹೊಂದುವುದು ಮುಖ್ಯ, ಸೋಲು ಕಂಡ ವ್ಯಕ್ತಿ ಗೆಲ್ಲುವ ಗುಟ್ಟನ್ನು ಚೆನ್ನಾಗಿ ಕಲಿಸಬಲ್ಲನು ಎಂದು ದೈಜಿವರ್ಲ್ಡ್ ವಾಹಿನಿಯ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ವಾಲ್ಟರ್ ನಂದಳಿಕೆ ಹೇಳಿದರು. ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ’ಟ್ರೈಬ್ಲೇಜ್ ವಿದ್ಯಾರ್ಥಿ ವೇದಿಕೆವತಿಯಿಂದ ಹಮ್ಮಿಕೊಂಡ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ದೈಜಿವರ್ಲ್ಡ್ ಸಂಸ್ಥೆ ಮುಖಾಂತರ ಕಂಡುಕೊಂಡ ಉದ್ಯಮಶೀಲತೆಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉದ್ಯಮಿಗಳಾಗಲು ಆಶಯ ಹೊಂದಿರುವ ವಿದ್ಯಾರ್ಥಿಗಳು ಶಿಕ್ಷಣದ ಪ್ರಮಾಣ ಪತ್ರಗಳ ಜತೆಗೆ ಆತ್ಮವಿಶ್ವಾಸದೊಂದಿಗೆ ಸಂವಹನ ನಡೆಸುವದನ್ನೂ ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮಕ್ಕೆ ಯಾವುದೇ ಪರ್ಯಾಯ ವಿಧಾನ ಇಲ್ಲ, ಹೊಸ ವಿಷಯಗಳನ್ನು ತಿಳಿದುಕೊಂಡು ಆಯಾ ಕಾಲದ ಪ್ರವೃತ್ತಿಗಳಿಗೆ ಅನುಗುಣವಾಗಿ ನವೀಕರಿಸಿಕ್ಕೊಳ್ಳುವುದು ಯಶಸ್ವಿ ಉದ್ಯಮಕ್ಕೆ ಬಹಳ ಅಗತ್ಯ. ಅವಮಾನಗಳಿಗೆ ಹಿಂಜರಿಯದೆ ಉತ್ಸಾಹವಿರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಹಾಗೂ ಉತ್ತಮ ಜೀವನ ಶೈಲಿಗೆ ಬದಲಾವಣೆಯಾಗಲು ಆರಂಭಿಕ ಹಂತದಲ್ಲಿ ಸ್ವಲ್ಪ ಕ?ವೆನಿಸಿದರೂ ಅಪ್ಡೇಟ್, ಅಪ್‌ಗ್ರೇಡ್ ಹಾಗೂ ಅಪ್ಲಿಫ್ಟ್ ಎನ್ನುವ ರೂಡಿಯನ್ನು ಪ್ರತಿಯೊಬ್ಬರೂ ಕಂಡುಕೊಳ್ಳಿ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ‘ಪೂರ್ಣದ್ವೈತ – 2025′ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮ್ಯಾನೇಜ್ಮೆಂಟ್, ಐಟಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗುಂಪು ನೃತ್ಯ, ಸಮೂಹ ಗೀತೆ, ಬಿಸಿನೆಸ್ ಪ್ಲಾನ್, ಫ್ಯಾಶನ್ ಶೋ, ಐಟಿ ರಸಪ್ರಶ್ನೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಬೆಸ್ಟ್ ಮ್ಯಾನೇಜರ್ ದ್ವಿತೀಯ ಸ್ಥಾನದೊಂದಿಗೆ ಸಮಗ್ರ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಈ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿ ಅವರು, ಕಾಲೇಜಿನ ಪ್ರಾಂಶುಪಾಲರದ ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಸಾಂಸ್ಕೃತಿಕ ತಂಡದ ಸಂಯೋಜಕಿಯಾದ ದೀಪಿಕಾ ಜಿ., ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ, ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೇಸಿಗೆ ಕಾಲದಲ್ಲಿ ಜಾತ್ರೆ, ರಥೋತ್ಸವ, ಊರು ಹಬ್ಬ ಸೇರಿದಂತೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳು ಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಸ್ಪೋಟಗೊಳ್ಳುವುದು ಅಥವಾ ಹರಡುವ ಸಾಧ್ಯತೆಗಳು ಇರುತ್ತವೆ. ಇವುಗಳ ಬಗ್ಗೆ ಮುಂಜಾಗ್ರತಾ ವಹಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಹಾಗೂ ಸ್ವಚ್ಛತೆಗೆ ಆದ್ಯತೆಯನ್ನು ನೀಡಬೇಕು ಎಂದರು. ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಅಡಿ ಅನುಮತಿ ಪಡೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಅಂಚೆ ಕೋಟೇಶ್ವರ ಇಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಮತ್ತು ಬದುಕು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಪೋಷಕರು ಅತ್ಯಂತ ಗರಿಷ್ಠ ಮಟ್ಟದ ಜಾಗೃತೆಯನ್ನು ವಹಿಸಿ ಕಾಲ ಮಿಂಚುವ ಮೊದಲು ಎಚ್ಚೆತ್ತುಕೊಳ್ಳಬೇಕೆಂದು ಪೋಷಕರಿಗೆ ಹಿತವಚನಗಳನ್ನಾಡಿದರು. ವಿದ್ಯಾರ್ಥಿಗಳ ವಯಸ್ಸೇ ಅವರನ್ನು ಅನುಪಯುಕ್ತ ಆಲೋಚನೆಗಳೆಡೆಗೆ ಆಕರ್ಷಿಸುವ ಈ ಕಾಲಘಟ್ಟದಲ್ಲಿ ಅವರ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರಾಗಿ ಗಮನಿಸದೇ ಇದ್ದ ಪಕ್ಷದಲ್ಲಿ ಅವನತಿಗೆ ಅದು ಮುನ್ನುಡಿ ಇಟ್ಟಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಪೋಷಕ ಪ್ರತಿನಿಧಿಗಳಾಗಿ ರಾಜೇಶ್ ಮಾರ್ಕೋಡು, ರಾಮ ಶೆಟ್ಟಿಗಾರ, ಕೃಪಾ ಹೆಬ್ಬಾರ್, ಎಸ್.ವಿ. ನಾಗರಾಜ, ಶೃಂಗಾರಿ ಎಸ್., ಶೆಟ್ಟಿ, ಮಂಜುನಾಥ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ್ಪುನೀರುನುಗ್ಗಿತೊಂದರೆಗೀಡಾಗಿರುವ ಪುರಸಭೆ ವ್ಯಾಪ್ತಿಯ ಕೋಡಿ ಪ್ರದೇಶಕ್ಕೆ ಶಾಸಕ ಕಿರಣ್‌ ಕುಮಾರ ಕೊಡ್ಗಿ ಅವರು ಇತ್ತೀಚಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೋಡಿ ನಾಗಜಟ್ಟಿಗೇಶ್ವರ, ಕೋಡಿ ಚಕ್ರೇಶ್ವರಿ ದೇವಳ ವಠಾರ ಹಾಗೂ ಸೋನ್ಸ್ ಶಾಲೆ ವಠಾರದಲ್ಲಿನ ಹತ್ತಾರು ಎಕರೆ ಭತ್ತದ ಕೃಷಿಭೂಮಿಗೆ ಉಪ್ಪು ನೀರು ನುಗ್ಗಿ ಹಾನಿಗೀಡಾಗಿರುವುದು ಹಾಗೂ ಕುಡಿಯುವ ನೀರಿನ ಬಾವಿ ಕೆಟ್ಟು ಹೋಗಿರುವುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಅವರು ಕೋಡಿ ಹಿನ್ನೀರು ವ್ಯಾಪ್ತಿಯ ನದಿದಂಡೆ ರಚನೆ ಕುರಿತಂತೆ 2024ರಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನದಿದಂಡೆಗೆ ತಡೆಗೋಡೆ ಹಾಗೂ ರಿಂಗ್‌ರೋಡ್ ಪ್ರಸ್ತಾವನೆ ಕುರಿತಂತೆ ಸಂಬಂಧಿತ ಇಲಾಖಾ ಸಚಿವರೊಂದಿಗೆ ಚರ್ಚಿಸಿದ್ದೇನೆ. ತುರ್ತಾಗಿ ಉಪ್ಪು ನೀರು ಒಳನುಗ್ಗದಂತೆ ತಡೆಯಲು ಸಂಬಂಧಿತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು. ಕೋಡಿಯ ಸಾಮಾಜಿಕ ಕಾರ್ಯ ಕರ್ತ ಅಶೋಕ ಪೂಜಾರಿ ಮನವಿ ಸಲ್ಲಿಸಿ ಕಳೆದ 2 ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದು, ಶಾಶ್ವತ ಯೋಜನೆ ರೂಪಿಸಿ ಸಮಸ್ಯೆ ಬಗೆಹರಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ಎರಡು ವಿದ್ಯಾರ್ಥಿಗಳು ರ‍್ಯಾಂಕ್‌ ಗಳಿಸಿದ್ದಾರೆ. ಮೊಳಹಳ್ಳಿಯ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ‍್ಯಾಂಕ್‌, ಯಡಮೊಗೆಯ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ‍್ಯಾಂಕ್‌ಗಳಿಸಿದ್ದಾರೆ. ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತುಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ,ಎಡ್ ಪ್ರಶಿಕ್ಷಣಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ತ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ “ಗೌರವಾನ್ವಿತ ಶಿಕ್ಷಕ ವೃತ್ತಿಯನ್ನು ತಾವು ಆಯ್ದುಕೊಂಡಿರುವುದಕ್ಕೆ ನೀವು ಅದೃಷ್ಟ್ಶಾಲಿಗಳು, ಏಕೆಂದರೆ ಶಿಕ್ಷಕರಾಗುವ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ಈ ಸುಂದರ ಕಡಲ ತೀರ ಪರಿಸರದಲ್ಲಿ ಉತ್ತಮ ಶಿಕ್ಷಣ ಪಡೆದು ನೀವು ಉತ್ತಮ ಶಿಕ್ಷಕರಾಗಿ. ನಿಮ್ಮಲ್ಲಿ ಶಿಸ್ತು ಮತ್ತು ಸಂಶೋಧನಾ ಪ್ರವೃತ್ತಿಗಳನ್ನು ಬೆಳೆಸಿಕೊಂಡು ನಮ್ಮಲ್ಲಿರುವ ಸಂಪನ್ಮೂಲ ಉಪನ್ಯಾಸಕರನ್ನು ಬಳಸಿಕೊಂಡು ದೇಶದ ಸತ್ಪ್ರಜೆಗಳಾಗಿ. ಅಂದರೆ ಶಿಲ್ಪಿಯು ಕಲ್ಲು ಬಂಡೆಯಿಂದ ಬೇಡವಾದ ಭಾಗವನ್ನು ತೆಗೆದು ಹಾಕಿ ಸುಂದರ ಮೂರ್ತಿಯನ್ನು ಕೆತ್ತುವ ಹಾಗೆ ನೀವು ನಿಮ್ಮ ಮನಸ್ಸಿನಿಂದ ಬೇಡವಾದ ಕೆಟ್ಟ ವಿಚಾರಗಳನ್ನು ತೆಗೆದುಹಾಕಿ ಸುಂದರವಾದ ಬದುಕನ್ನು ಕಟ್ಟಿಕೊಂಡು ಹೋಗಿ” ಎಂದು ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಹಾಜಿ ಕೆ. ಮೊಹಿದ್ದೀನ್ ಬ್ಯಾರಿ ಅನುದಾನಿತ ಕನ್ನಡ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ವಿನೂತನವಾದ ಕಾರ್ಯಕ್ರಮ. ಇವತ್ತಿನ ಆಹಾರ ಪದ್ದತಿ, ಜೀವನ ಶೈಲಿಗೆ ಇಂಥಹ ಕಾರ್ಯಕ್ರಮಗಳು ಅನಿವಾರ್ಯ. ಗ್ರಾಮದ ಒಂಟಿಯಾಗಿರುವ ವ್ಯಕ್ತಿಗಳ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಸದಾ ನಿಗಾ ಇಡುವ ಈ ಯೋಜನೆಗೆ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ ಸದಾ ನಿಮ್ಮ ಜೊತೆ ಇರಲಿದೆ. ವಂಡ್ಸೆಯಲ್ಲಿ ಎಸ್.ಎಲ್.ಆರ್.ಎಂ ಯೋಜನೆ ಮಾದರಿಯಾಗಿ ಮೂಡಿಬಂದಿದೆ. ಅದೇ ರೀತಿ ಕ್ಲಸ್ಟರ್ ಮಟ್ಟದ ಉಪಶಾಮಕ ಆರೈಕೆ ಯೋಜನೆಯೂ ಕೂಡಾ ಯಶಸ್ವಿಯಾಗಲಿ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು. ರಾಜ್ಯದಲ್ಲಿ ಪ್ರಥಮವಾಗಿ ವಂಡ್ಸೆ ಕ್ಲಸ್ಟರ್‌ನಲ್ಲಿ ಅನುಷ್ಟಾನ ಆಗುತ್ತಿರುವ ಸಮಗ್ರ ಆರೋಗ್ಯ ಮತ್ತು ಉಪಶಾಮಕ ಆರೈಕೆ (ಪಾಲಿಯೇಟಿವ್ ಕೇರ್ ಯೂನಿಟ್) ದೀರ್ಘಕಾಲಿನ ಕಾಯಿಲೆ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೋಗ್ಯದ ಮೇಲೆ ನಿಗಾ ವಹಿಸುವ ಸಲುವಾಗಿ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾದ ವ್ಯಕ್ತಿಗಳನ್ನು ವೈದ್ಯಕೀಯ ಪರೀಕ್ಷಿಸುವ ಪ್ರಕ್ರಿಯೆಗೆ ವಂಡ್ಸೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅವರು…

Read More