Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್‌ 17 ರಿಂದ ಪ್ರಾರಂಭವಾಗಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಅಲ್ಲಿಯ ಒಳ್ಳೆಯ ಅಂಶಗಳನ್ನು ಭಾರತದ ಸಂವಿಧಾನದಲ್ಲಿ ಅಳವಡಿಸಿದ ಡಾ. ಬಿ. ಆರ್. ಅಂಬೇಡ್ಕರ್ ಅವರದ್ದು ಮಹಾನ್ ವ್ಯಕ್ತಿತ್ವ. ಸಮಾಜದಲ್ಲಿ ವರ್ಗಸಮತೋಲನ ಸಾಧಿಸುವ ಸಲುವಾಗಿ ಅವರು ಜಾರಿಗೆ ತಂದ ಮೀಸಲಾತಿ ಸೌಲಭ್ಯವನ್ನು ಇನ್ನೂ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಹೇಳಿದರು. ಅವರು ಕಾಲೇಜಿನಲ್ಲಿ ಹಮ್ಮಿಕೊಂಡ ಅಂಬೇಡ್ಕರ್ ಜಯಂತಿ ಆಚರಣೆಯ ಅಂಗವಾಗಿ ಮಾತನಾಡಿದರು . ಕಾರ್ಯಕ್ರಮವನ್ನು ನಿರ್ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಅವರು ಅಂಬೇಡ್ಕರ್ ಅವರ ಬದುಕಿನಲ್ಲಿದ್ದ ಕಠಿಣ ಸವಾಲುಗಳು ಮತ್ತು ಅವುಗಳನ್ನು ಅವರು ಸಮರ್ಥವಾಗಿ ನಿಭಾಯಿಸಿ ಯಶಸ್ವಿ ಮೈಲಿಗಲ್ಲುಗಳನ್ನು ಸಾಧಿಸಿದ ಬಗ್ಗೆ ವಿವರಿಸಿದರು. ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ‌  ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಛಾಯಾಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 

Read More

 ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಟಿ ಎಸೋಸಿಯೇಷನ್ ನ ಜಂಟಿ ಆಶ್ರಯದಲ್ಲಿ ಸೈಬರ್ ಸೆಕ್ಯೂರಿಟಿಯಲ್ಲಿ ಎಐ ಬಳಕೆ ಕುರಿತು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಲಾಯಿತು.  ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಮಣಿಪಾಲ ಎಂಐಟಿಯ ಎಲೆಕ್ಟ್ರಾನಿಕ್ ಹಾಗೂ ಕಮ್ಯುನಿಕೇಷನ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಯಶವಂತ್ ಎನ್. ಅವರು ಮಾತನಾಡಿ, ವರ್ತಮಾನ ಕಾಲಘಟ್ಟದಲ್ಲಿ ಸಮಾಜದಲ್ಲಿ ನಡೆಯುವ ಅದೆಷ್ಟೋ ವಂಚನೆಗಳನ್ನು ಭವಿಷ್ಯದಲ್ಲಿ ಎಐ ಮೂಲಕ ಸಮರ್ಥವಾಗಿ ಕಂಡುಹಿಡಿದು ಸಾಮಾಜಿಕ ಭದ್ರತೆ ಕಾಪಾಡಬಹುದು ಎಂದರು.  ಕಾಲೇಜಿನ ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಜೊತೆ ಸೈಬರ್ ಸೆಕ್ಯೂರಿಟಿ ಮತ್ತು ಎಐ ಬೋಧಿಸಲಾಗುತ್ತಿದೆ. ಜೊತೆಗೆ ನಿರಂತರವಾಗಿ ಇಂತಹ ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು  ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ   ಅನು?ನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಶಿಸ್ತೀಯ ಅಧ್ಯಯನ ಹೊಂದಿದ ಕಾಲೇಜುಗಳಿಗೆ ಸರ್ಕಾರ ಸ್ವಾಯತ್ತ ಸ್ಥಾನಮಾನ ನೀಡುತ್ತಿದೆ. ’ಸ್ವಾಯತ್ತ’ ಎಂದರೆ ಕೇವಲ ಆಡಳಿತ ವ್ಯವಸ್ಥೆಯಲ್ಲಿ ಮಾತ್ರ ಬದಲಾವಣೆ ಅಲ್ಲ, ಅದು ಪಠ್ಯಕ್ರಮ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಎಂದರು. ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ಶೈಕ್ಷಣಿಕ ಪಠ್ಯಕ್ರಮ ಆಧರಿತ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪದವಿ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ನೇರವಾಗಿ ಸಿದ್ಧರಾಗುತ್ತಾರೆ. ವಿದ್ಯಾರ್ಥಿಗಳ ಸೈದ್ಧಾಂತಿಕ (ಥಿಯರಿ) ಕಲಿಕೆ ಜೊತೆ ಪ್ರಾಯೋಗಿಕ ಕಲಿಕೆ ಹೆಚ್ಚಾಗಿದೆ. ಅಂತರಶಿಸ್ತೀಯ ಅಧ್ಯಯನದ ಮೂಲಕ ಆನ್ವಯಿಕವಾಗಿ ಕಲಿಯುವ ಕಾರಣ ಮಾರುಕಟ್ಟೆಯಲ್ಲಿ ಔದ್ಯಮಿಕ ಹಾಗೂ ಔದ್ಯೋಗಿಕ ಅವಕಾಶ ಹೆಚ್ಚಲಿದೆ ಎಂದರು. ಶೈಕ್ಷಣಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ಗ್ರಾಮದ ತೆಂಕಬೆಟ್ಟುವಿನಲ್ಲಿ ವಾರಾಹಿ ನಾಲೆಯಿಂದ ಹೊಳೆಗೆ ಹರಿದು ಬರುತ್ತಿರುವ ನೀರಿಗೆ ಏತ ನೀರಾವರಿ ಮೂಲಕ ಇಂಗು ಗುಂಡಿಗೆ ಮತ್ತು ಪೈಪ್ ಲೈನ್ ಮೂಲಕ ಮನೆ ಮನೆಗೆ ಕುಡಿಯುವ ನೀರು, ಬಾವಿಗಳಿಗೆ ನೀರು ಹರಿಸುವ ಎರಡನೇ ಹಂತದ ಖಾಸಗಿ ಯೋಜನೆಗೆ ರವಿವಾರ ಚಾಲನೆ ನೀಡಲಾಯಿತು. ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದ ವ್ಯವಸ್ಥಾಪಕರಾದ ರಾಜಶೇಖರ್ ಹೆಗ್ಡೆ ಚಾಲನೆ ನೀಡಿ, ಅವರು ಮಾತನಾಡಿ, ಸಹಬಾಳ್ವೆ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ವಕ್ವಾಡಿ ತೆಂಕಬೆಟ್ಟು ಪರಿಸರದವರು ವಾರಾಹಿ ನೀರನ್ನು ಸದ್ಬಳಕೆ ಮಾಡಿಕೊಂಡು ಪ್ರತಿ ಮನೆ ಮನೆಯ ಬಾವಿಗೆ ನೀರು ಹರಿಸುವ ಮಹತ್ವಪೂರ್ಣವಾದ ಯೋಜನೆ ಇದಾಗಿದ್ದು, ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ, ಪಕ್ಷಿ, ಗಿಡಮರಗಳಿಗೂ ಪ್ರಯೋಜನಕಾರಿಯಾಗಿದ್ದು, ಇದೊಂದು ಮಹಾನ್ ಪುಣ್ಯದ ಕೆಲಸ ಎಂದು ಶುಭ ಹಾರೈಸಿದರು. ಚಂದ್ರಶೇಖರ್ ಶೆಟ್ಟಿ, ಗಣೇಶ್ ಶೆಟ್ಟಿ, ಶಂಕರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು ಆ ದಿನಗಳಿಂದ ಇಲ್ಲಿಯವರೆಗೆ ಭೂ ಭಾಗಕ್ಕೆ ಕಂಠಕವಾಗಿ ಪರಿಣಮಿಸಿದೆ. ಇದು ಮನುಕುಲದ ನಿದ್ದೆಗೆಡಿಸುತ್ತಿದೆ. ಮನುಷ್ಯನಿಂದಲೇ ಸೃಷ್ಠಿ ಮನುಕುಲಕ್ಕೆ ಆಪತ್ತು ಸೃಷ್ಠಿಸುವ ಪ್ಲಾಸ್ಟಿಕ್ ಇಂದು ಜಲಮಾತೆಯನ್ನು ಬೆಂಬಿಡದ ಭೂತದಂತೆ ನದಿ ಸಮುದ್ರ ಜಲಚರ ಜೀವಿಗಳಿಗೆ ಸಂಕಷ್ಟವನ್ನು ತಂದದೊಡ್ಡಿದೆ ಇದರ ಬಗ್ಗೆ ಜಾಗೃತರಾಗದಿದ್ದರೆ ಭವಿಷ್ಯದಲ್ಲಿ ಕ್ಲಿಷ್ಟಕರ ದಿನಗಳನ್ನುಎದುರು ನೋಡುವಂತ್ತಾಗಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಇದರ ಅಧಿಕಾರಿ ಮಲ್ತೇಶ್ ಅಳಲಗಿರಿ ಕಿವಿಮಾತು ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು. ಪಂಚವರ್ಣದಂತ ಸಂಸ್ಥೆಗಳು ಈ ವ್ಯವಸ್ಥೆಯಲ್ಲಿ ಗಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ. ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606474298

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿ?ಗಳ ಅಂತರದಿಂದ  ಗೆದ್ದು  ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಅಂಗಣದಲ್ಲಿ ಆಡಿದ 9 ಜನ ಆಟಗಾರರಲ್ಲಿ ಎಲ್ಲಾ ಆಟಗಾರರು ಆಳ್ವಾಸ್ ವಿದ್ಯಾರ್ಥಿಗಳಾಗಿದ್ದರು ಎಂಬುದು ಗಮನಾರ್ಹ ಅಂಶ. ಮೊದಲಿಗೆ ನಡೆದ ಲೀಗ್ ಪಂದ್ಯಾಟದಲ್ಲಿ ದೆಹಲಿ ವಿಶ್ವವಿದ್ಯಾನಿಲಯ, ಹೇಮಚಂದ್ ವಿಶ್ವವಿದ್ಯಾನಿಲಯ ಹಾಗೂ ಸಾವಿತ್ರಿ ಬಾಯಿ ಪುಲೇ ವಿಶ್ವವಿದ್ಯಾನಿಲಯದೊಂದಿಗೆ ಜಯಗಳಿಸಿ ಕ್ವಾಟರ್ ಫೈನಲ್ ಹಂತಕ್ಕೆ ಅರ್ಹತೆಯನ್ನುಗಳಿಸಿತ್ತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ವಿಶ್ವವಿದ್ಯಾನಿಲಯದ ವಿರುದ್ಧ ಜಯಗಳಿಸಿ ಸೆಮಿಫೈನಲ್ ಪಂದ್ಯಕ್ಕೆ ಅರ್ಹತೆಯನ್ನು ಪಡೆಯಿತು. ನಂದೆಡ್‌ನ ಎಸ್‌ಆರ್‌ಟಿಎಂಯುನ ತಂಡವನ್ನು ಮಣಿಸಿ ಫೈನಲ್ ಪಂದ್ಯಕ್ಕೆ…

Read More

 ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಏಪ್ರಿಲ್ 11ರಂದು ಗೋವಾದಲ್ಲಿ ನಡೆದ  ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರಿಗೆರಿಗೆ ಪ್ರದಾನ ಮಾಡಲಾಯಿತು. ಅವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶಿವಪ್ರತಾಪ್ ಶುಕ್ಲ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಖ್ಯಾತ ಸಿನಿಮಾ ನಟಿ ಹಾಗೂ  ಲೋಕಸಭಾ ಸದಸ್ಯೆ ಹೇಮಾಮಾಲಿನಿ ಹಾಗೂ ಹಲವಾರು ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ ಮಹಿಳೆ) ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಯುವಜನಾ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More