Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಿ.ಯು.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿ.ಇ.ಟಿ ಪರೀಕ್ಷೆಯನ್ನು ಏಪ್ರಿಲ್ 16 & 17 ರಂದು ನಡೆಸಿದ್ದು, ಶಿವಮೊಗ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯು ಕೈಗೆ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಮೈಮೇಲೆ ಧರಿಸಿದ್ದ ಜನಿವಾರ, ವಿದ್ಯಾರ್ಥಿಗಳ ಕೊರಳಲ್ಲಿ ಇದ್ದ ಶಿವದಾರ ಹಾಗೂ ರುದ್ರಾಕ್ಷಿಸರವನ್ನು ಭದ್ರತಾ ಸಿಬ್ಬಂದಿ ತೆಗೆಸಿದ್ದಾರೆ ಎಂದು ಪೋಷಕರುಗಳು ಆರೋಪಿಸಿದ್ದಾರೆ ಇದನ್ನು ನಾನು ಖಂಡಿಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಹಿಂದೂಗಳ ಧಾರ್ಮಿಕ ಭಾವನೆಗೆ ತೀವ್ರತರವಾದ ಧಕ್ಕೆ ಉಂಟಾಗಿರುತ್ತದೆ.  ಇದು ವಿದ್ಯಾರ್ಥಿಗಳ ಪರೀಕ್ಷೆಯ ಕಾರ್ಯಕ್ಷಮತೆಯ ಮೇಲೆ ತೀವ್ರತರವಾದ ಪರಿಣಾಮ ಬೀರಿದೆ.  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ನೇಮಕಾತಿ ಪರೀಕ್ಷೆ, ಸ್ಪಧಾತ್ಮಕ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗೆ ವಸ್ತ್ರ ಸಂಹಿತೆ ಬಗ್ಗೆ ಸ್ಪಷ್ಟವಾದ ಸೂಚನೆಯನ್ನು ನೀಡಿದ್ದಾಗ್ಯೂ ಕೂಡ ಅದನ್ನು ಉಲ್ಲಂಘಸಿ ಸಿ.ಇ.ಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಧರಿಸಿದ್ದ ಶಿವದಾರ, ಜನಿವಾರ, ರುದ್ರಾಕ್ಷಿ ಸರಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ. ದೊಟ್ಟಯ್ಯ ಪೂಜಾರಿ ಅವರು ನೇಮಕಗೊಂಡಿದ್ದಾರೆ.   ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಬಿ. ದೊಟ್ಟಯ್ಯ ಪೂಜಾರಿ ಅವರು ಸೌತ್‌ ಕೆನರಾ ಪೋಟೋಗ್ರಾಫರ್ಸ ಅಸೋಸಿಯೇಶನ್‌ ಕುಂದಾಪುರ- ಬೈಂದೂರು ವಲಯದ ನಿಕಟಪೂರ್ವ ಅಧ್ಯಕ್ಷರಾಗಿದ್ದಾರೆ. ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರʼವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ಅವರು ಅನಾವರಣಗೊಳಿಸಿ, ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹರೀಶ್ ಕಾಂಚನ್ ನಿರೂಪಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಸ್ವಾಗತಿಸಿ, ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಾಗ್ರಾಮ್ ಮೂಲಕ ಕಂಪನಿಯೊಂದರ ಷೇರು ಮಾರುಕಟ್ಟೆಯ  ಸ್ಟಾಕ್‌ ಅಡ್ವೈಸ್‌ ಮಾಡುತ್ತೇನೆ ಎಂದು ನಂಬಿಸಿ ವಂಚನೆ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕುಂದಾಪುರದ ನಿವಾಸಿ ವಿಘ್ನೇಶ್‌ (28) ಇವರಿಗೆ ಸೈರಾನ್‌ ಟೆಕ್ನಾಲಜೀಸ್ ಕಂಪನಿಯ ಮಾರುಕಟ್ಟೆ ಸ್ಟೋಕ್ ಅಡ್ವೈಸ್‌ ಮಾಡುತ್ತೇವೆಂದು ಇನ್ಸ್ಟಾಗ್ರಾಮ್‌ನಲ್ಲಿ ಮಾಹಿತಿ ನೀಡಿದ್ದು, ಅದರಂತೆ ಅವರು ಕಂಪನಿಯು ನೀಡಿದ ದೂರವಾಣಿ ನಂಬ್ರಕ್ಕೆ ಕರೆ ಮಾಡಿದಾಗ 6 ತಿಂಗಳವರೆಗೆ ಷೇರು ಮಾರುಕಟ್ಟೆಯಲ್ಲಿ ಸ್ಟೋಕ್ ಅಡ್ವೈಸ್‌ ಮಾಡುವ ಬಗ್ಗೆ 74,300 ರೂ. ಮುಂಗಡವಾಗಿ ಹಣ ಕೊಡಬೇಕು ಎಂದು ತಿಳಿಸಿದ್ದರು. ಅದರಂತೆ ತನ್ನ ಬ್ಯಾಂಕ್ ಖಾತೆಯಿಂದ  ಕಂಪನಿಯ ಮಹೇಂದ್ರ ಬ್ಯಾಂಕ್ ಖಾತೆಗೆ 38,900ರೂ. ಹಾಗೂ ಎಕ್ಸಿಸ್ ಬ್ಯಾಂಕ್ ಖಾತೆಗೆ 35,400ರೂ, ಹಣವನ್ನು ಪೋನ್ ಪೇಯಿಂದ ವರ್ಗಾವಣೆ ಮಾಡಿದ್ದರು. ನಂತರ ಷೇರು ಮಾರುಕಟ್ಟೆಯಲ್ಲಿ ಸ್ಟೋಕ್ ಅಡ್ವೈಸ್‌ ಮಾಡದೇ ವಂಚನೆ ಎಸಗಿದ್ದಾರೆ. ನಂತರ ವಿಘ್ನೇಶ್‌ ಸೈಬ‌ರ್ ಕ್ರೈಮ್‌ಗೆ ದೂರು ಸಲ್ಲಿಸಿದ್ದು, ದೂರಿನಂತೆ ಆಪಾದಿತರ ಬ್ಯಾಂಕ್ ಖಾತೆಯನ್ನು ಪ್ರೀಝ್ ಮಾಡಲಾಗಿದೆ. ಈ ಬಗ್ಗೆ ಕುಂದಾಪುರ ಪೋಲೀಸ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 2024-25ನೇ ಸಾಲಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗದ ರ್ಯಾಂಕ್‌ ಪಟ್ಟಿ ಬಿಡುಗಡೆಗೊಂಡಿದೆ. ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಡಾ. ಜ್ಯೋತಿ ಕೆ. ವಿ. ಕ್ಲಿನಿಕಲ್ ನಾಚುರೋಪತಿ ವಿಭಾಗದಲ್ಲಿ ದ್ವಿತೀಯ ರ್ಯಾಂಕ್‌, ಡಾ. ಅನಘಶ್ರೀ ಎಸ್. ಕ್ಲಿನಿಕಲ್ ಯೋಗ ವಿಭಾಗದಲ್ಲಿ ತೃತೀಯ ರ್ಯಾಂಕ್‌, ಡಾ. ಲೆಂಜಿಕ್ಲೂ ಗಾನ್‌ಮೈ ಕ್ಲಿನಿಕಲ್ ಯೋಗ ವಿಭಾಗದಲ್ಲಿ ಆರನೆಯ ರ್ಯಾಂಕ್‌, ಡಾ. ಮೇಘನಾ ಎಂ. ಕ್ಲಿನಿಕಲ್ ನ್ಯಾಚುರೋಪತಿ ವಿಭಾಗದಲ್ಲಿ ಒಂಬತ್ತನೆಯ ರ್ಯಾಂಕ್‌ ಗಳಿಸಿದ್ದಾರೆ. ರ್ಯಾಂಕ್‌ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕೈಗಾರಿಕಾ ಪರಿವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಚಂದು ಮಸಾಲ ಇಂಡಸ್ಟ್ರಿ ಮತ್ತು ರಾಜಾರಾಮ್ ಪಾಲಿಮರ್ ಕೋಟೇಶ್ವರ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭ ಕಾಲೇಜಿನ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಂಯೋಜಕರಾದ ರಾಜೇಶ್ ಶೆಟ್ಟಿ ವಕ್ವಾಡಿ, ಕಿಶೋರ್ ಕೃಷ್ಣ ಮರಕಾಲ ಹಾಗೂ ಚಂದು ಮಸಾಲ ಇಂಡಸ್ಟ್ರಿ ಮಾಲೀಕರಾದ ಮಂಜುನಾಥ್ ಕಾಮತ್ ಹಾಗೂ ರಾಜಾರಾಮ್ ಪಾಲಿಮರ್ ಮಾಲೀಕರಾದ ಸುರೇಶ್ ಕಾಮತ್ ಮತ್ತು ಜಗದೀಶ್ ಕಾಮತ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ – 2025 ಆಚರಿಸಲಾಯಿತು. ವಿ.ಟಿ.ಯು ಎಕ್ಸ್ ಟೆಂಷನ್ ಸೆಂಟರ್ ಮಂಗಳೂರು ಇಲ್ಲಿನ ವಿಶೇಷ ಅಧಿಕಾರಿಗಳಾದ ಡಾ. ಎನ್. ದಾಮೋದರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಉದ್ಯೋಗವಕಾಶಗಳನ್ನು ಪಡೆಯುವ ವಿವಿಧ ಹಾದಿಗಳ ಬಗ್ಗೆ ತಿಳಿಸಿದರು. ಐ. ಎಂ. ಜೆ ಇನ್ಸ್ಟಿಟ್ಯೂಷನ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ ಮಾತನಾಡಿ, ಆರ್ಟಿಫಿಷಿಯಲ್ ಇಂಟಲಿಜಸನ್ ಉಪಯೋಗ ಹೆಚ್ಚುತಿರುವುದರಿಂದ ವಿದ್ಯಾರ್ಥಿಗಳು ಆ ಕಡೆಗೂ ಗಮನಹರಿಸಬೇಕು ಎಂದರು. ಎಂ. ಐ.ಟಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ ಅವರು ವರದಿ ವಾಚನಗೈದರು. ಕಾಲೇಜಿನ ಉಪಾಪ್ರಾಂಶುಪಾಲಾರದ ಡಾ. ಮೆಲ್ವಿನ್. ಡಿ ಸೋಜ ಅವರು ಕಲಿಕೆಯಲ್ಲಿ ಉತ್ತಮ ಸಾಧನೆಗೈದವರ ಪಟ್ಟಿಯನ್ನು ಓದಿದರು. ಕಾರ್ಯಕ್ರಮದ ಸಂಚಾಲಕರಾದ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಸ್ವಾಗತಿಸಿದರು. ಎಂ.ಬಿ.ಎ ವಿದ್ಯಾರ್ಥಿನಿ ಸಹರಾ ಕಾರ್ಯಕ್ರಮ ನಿರ್ವಹಿಸಿದರು. ಎಂ.ಬಿ.ಎ ವಿದ್ಯಾರ್ಥಿನಿ ಶಾಂಭವಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಛೇರಿ ಸೇವಕ ಹುದ್ದೆಗೆ ಎಸ್.ಎಸ್.ಎಲ್‌ಸಿ ವಿದ್ಯಾರ್ಹತೆ ಹಾಗೂ ಲೆದರ್ ವರ್ಕರ್ ಹುದ್ದೆಗೆ ಸರ್ಟಿಫಿಕೇಟ್ ಇನ್ ಲೆದರ್ ವರ್ಕಿಂಗ್ ಇನ್ ಶೂ ಮೇಕಿಂಗ್ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 7 ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0820-2533372, ಮೊ.ನಂ: 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಹಂದಟ್ಟು ಪರಿಸರದ ಚಿತ್ರಕಲಾವಿದ ಪುನಿತ್ ಪೂಜಾರಿ  ಅಶ್ವಥ ಎಲ್ಲೆಯ ಮೂಲಕ ಬಿಡಿಸಿದ ವೀರಚಂದ್ರಹಾಸ ಯಕ್ಷಚಿತ್ರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇದೇ ಬರುವ ಎ. 18 ರಂದು ತೆರೆಕಾಣಲಿರುವ ಹಾಗೂ ಕನ್ನಡ ಚಿತ್ರರಂಗದಲ್ಲೆ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಪರಿಚಯಿಸುಲು ಮಂದಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ನಿರ್ದೇಶನದ ಈ ಯಕ್ಷ ಚಿತ್ರ ವೀರಚಂದ್ರಹಾಸ ಕಲಾವಿದ ಪುನಿತ್ ಅಶ್ವಥ ಮರದ ಎಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ಬಿಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡಿದೆ ಅಲ್ಲದೆ ರವಿ ಬಸ್ರೂರ್ ಇವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರಾವಳಿಯ ಜಾನಪದದ ಸೊಗಡಿಗೆ ಸರಿಸಾಟಿಯೇ ಇಲ, ಇಲ್ಲಿನ ಜಾನಪದ ಬದುಕಿನ ಪರಿಭಾಷೆ ವಿಶಿಷ್ಟವಾದದ್ದು ಎಂದು ಉದ್ಯಮಿ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಬುಧವಾರ ಕೋಟದ ಪಡುಕರೆ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ಜಾನಪದ ಹಬ್ಬ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಲ್ಲಿನ ಜಾನಪದಲ್ಲಿ ವಿವಿಧ ತರಹದ ಬದುಕಿನ ಚಹರೆಗಳಿವೆ ಇವುಗಳನ್ನು ಮುಂದಿನ ತಲೆಮಾರಿಗೆ ಕೊಂಡ್ಯೋಯಬೇಕಿದೆ ಎಂದರಲ್ಲದೆ ಗತವೈಭವ ಮತ್ತೆ ಮರುಕಳಿಸಬೇಕಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ .ರಾಜೇಂದ್ರ ಎಸ್. ನಾಯಕ ವಹಿಸಿದ್ದರು. ಇದೇ ವೇಳೆ ಜಾನಪದ ಕ್ಷೇತ್ರದಲ್ಲಿ ಗುರುತಿಸಿಕೊಂಡ ಕೋಟತಟ್ಟು ಶಾಂತಾ ಐತಾಳ್ ಅವರನ್ನು ಗುರುತಿಸಿ ಗೌರವಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಉಪನ್ಯಾಸಕರಾದ ರಮೇಶ್ ಆಚಾರ್, ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ಶಂಕರ್ ನಾಯ್ಕ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಭೂಮಿಕ ನಿರೂಪಿಸಿ, ವಂದಿಸಿದರು. ಜಾನಪದ ಸೊಗಡಿಗೆ ವಿಶಿಷ್ಟ ಆಯೋಜನೆಜಾನಪದ ಹಬ್ಬದ ಅಂಗವಾಗಿ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಆಯೋಜಿಸಿದ್ದು ಗಣ್ಯರಿಗೆ ಕಾಲು ತೊಳೆಯಲು…

Read More