Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೃಷಿಯನ್ನು ಲಾಭದಾಯಕ ಹಾಗೂ ನವೀನ ಉದ್ಯಮವಾಗಿ ರೂಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಬೇಕು. ಕೃಷಿ ಮತ್ತು ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಶೀಲತೆಗೆ ವಿಪುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಅಶೋಕ್ ದಳವಾಯಿ ಹೇಳಿದರು. ಅವರು ಮಿಜಾರ್‌ನ ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದ ಪ್ರಥಮ ವರ್ಷದ ಬಿ.ಎಸ್ಸಿ. (ಆನರ್ಸ್) ಕೃಷಿ ಹಾಗೂ ಬಿ.ಟೆಕ್. ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳ ಆಗಮನ ಕರ‍್ಯಕ್ರಮ ‘ದೀಕ್ಷಾರಂಭ 2026–27’ರಲ್ಲಿ ಮಾತನಾಡಿದರು. ವಿದ್ಯಾರ್ಥಿ ಜೀವನದ ಈ ಹಂತ ಮಹತ್ವದ್ದಾಗಿದ್ದು, ಚಂಚಲ ಮನಸ್ಸನ್ನು ನಿಯಂತ್ರಿಸಿಕೊಂಡು ಏಕಾಗ್ರತೆ, ಶಿಸ್ತು ಹಾಗೂ ಬದ್ಧತೆಯಿಂದ ಅಧ್ಯಯನ ಮಾಡಬೇಕು. ಸ್ಪಷ್ಟ ಗುರಿಗಳನ್ನು ರೂಪಿಸಿಕೊಂಡು ಅವುಗಳ ಸಾಧನೆಗೆ ನಿರಂತರ ಪರಿಶ್ರಮ ಪಡಬೇಕು ಎಂದರು. ಕೃಷಿ ವಿಜ್ಞಾನಿ ನಾರ್ಮನ್ ಬೋರ್ಲಾಗ್, ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ದಂಪತಿಗಳ ಸಹಿತ ಭೇಟಿ ನೀಡಿದರು. ಶರನ್ನವರಾತ್ರಿ ಉತ್ಸವದ ಸಡಗರದ ನಡುವೆ ಜಿಲ್ಲಾ ಪೈಕಿ ವರಿಷ್ಠಾಧಿಕಾರಿಯವರು ದೇಗುಲದಲ್ಲಿ‌ ನಡೆಯುತ್ತಿರುವ ಸಾಂಸ್ಕೃತಿಕ ವೈಭವವನ್ನು ವೀಕ್ಷಿಸಿದರು.ಅಲ್ಲದೆ ದೇಗುಲದಲ್ಲಿ ಪೂಜೆ ಸಲ್ಲಿಸಿದರು.ಈ ವೇಳೆ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೊದಿಸಿ ಪ್ರಸಾದ ವಿತರಿಸಿದರು. ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಗಣೇಶ ನೆಲ್ಲಿಬೆಟ್ಟು, ಚಂದ್ರ ಆಚಾರ್ ಸೇರಿದಂತೆ ಅನೇಕರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯದ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ 7ನೇ ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ಪವನ್ ನಾಯಕ್ ಹಾಗೂ ಸಿಬ್ಬಂದಿ ವರ್ಗದವರನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಕರ್ತವ್ಯ ನಿಷ್ಠೆ, ದಕ್ಷತೆ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಒಕ್ಕೂಟದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಸ್. ದಸ್ತಗೀರ್ ಕಂಡ್ಲೂರು, ಕಾರ್ಯದರ್ಶಿ ರಿಯಾಝ್ ಕೋಡಿ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಿಲ್ಲಾ ಉಪಾಧ್ಯಕ್ಷ ಶಾಬಾನ್ ಹಂಗಳೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಶಾದಿ, ಜಿಲ್ಲಾ ಸಮಿತಿ ಸದಸ್ಯರಾದ ಅಬು ಮುಹಮ್ಮದ್ ಕುಂದಾಪುರ, ರೆಹಾನ್ ತ್ರಾಸಿ, ಮುನಾಫ್ ಕಂಡ್ಲೂರು ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ  ಕಾಮಗಾರಿಯ ಅಪೂರ್ಣತೆಯಿಂದಾಗಿ ಸಾರ್ವಜನಿಕರಿಗೆ ಅನವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಹೇಳಿದರು. ಅವರು ಮಂಗಳವಾರ ಕುಂದಾಪುರ ಪುರಸಭೆಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಪುರಸಭೆ ಕುಂದಾಪುರ ಇವರ ಸಹಭಾಗೀತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 56.54 ಕೋಟಿ ರು ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಅನುಮೋದನೆ ದೊರಕಿದ್ದು, ಸುಮಾರು 11 ವರ್ಷಗಳು ಕಳೆದರೂ ಅನುದಾನದ ಕೊರತೆ, ಭೂಸ್ವಾಧೀನ ಸೇರಿದಂತೆ ಮತ್ತಿತರ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಸಹಾಯಕ ಕಮಿಷನರ್ ಅವರು ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರುಗಳೊಂದಿಗೆ ಸ್ಥಳ ಭೇಟಿ ಮಾಡಿ, ಕಾಮಗಾರಿ ವಿಳಂಬಕ್ಕೆ ಕಾರಣರಾದವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಸೇವೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ಧೇಶದಿಂದ ‘ಯೂತ್ ಫಾರ್ ಕೋಸ್ಟ್ (Youth for Coast – Waves of Change) ಸಂಸ್ಥೆಗೆ ಕಟ್ಟಬೇಲ್ತೂರು ಶಿವಶಕ್ತಿ ಭಜನಾ ಮಂದಿರದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.  ಈ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಮುಖಂಡರು, ಯುವಕರು, ಸಮುದಾಯದ ಪ್ರಮುಖರು ಹಾಗೂ ಬೆಂಬಲಿಗರು ಭಾಗವಹಿಸಿ, ಕರಾವಳಿ ಪ್ರದೇಶದ ಸಾಮಾಜಿಕ, ಪರಿಸರ ಮತ್ತು ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಯುವಶಕ್ತಿಯನ್ನು ಸಂಘಟಿಸುವ ಸಂಕಲ್ಪ ಮಾಡಿದರು.  “ವೇವ್ಸ್ ಆಫ್ ಚೇಂಜ್” (ಬದಲಾವಣೆಯ ಅಲೆಗಳು) ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸಲಿರುವ ‘ಯೂತ್ ಫಾರ್ ಕೋಸ್ಟ್’ ಸಂಸ್ಥೆಯು, ಕರಾವಳಿ ಭಾಗದಲ್ಲಿ ನಿರಂತರ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ ಮತ್ತು ಯುವ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ. ​ಕಾರ್ಯಕ್ರಮದ ವೇಳೆ ಸಂಸ್ಥೆಯ ಪೋಸ್ಟರ್ ಹಾಗೂ ಬ್ಯಾನರ್ ಅನಾವರಣಗೊಳಿಸಲಾಯಿತು. ಜೊತೆಗೆ ಕಾರ್ಯಕ್ರಮದಲ್ಲಿ “ಕಾರ್ ಡಸ್ಟ್ ಬಿನ್” ವಿತರಿಸಿ, ಕಾರಿನಲ್ಲಿ ಓಡಾಡುವಾಗ ಉತ್ಪತ್ತಿಯಾಗುವ ಟಿಕೆಟ್, ಚಾಕಲೇಟ್ ಕವರ್, ಐಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ಸಾಹಿತ್ಯದ ಎಲ್ಲಾ ಬಗೆಯ ಸಾಹಿತ್ಯದಲ್ಲಿ ಕೃತಿ ರಚಿಸಿರುವ ಕಾರಂತರ ಪ್ರವಾಸ ಕಥನಗಳು ವಿಶಿಷ್ಟ ಅಭಿವ್ಯಕ್ತಿ. ಅವರು ಪ್ರವಾಸದ ಕಥನಗಳು ನಾಡಿನ ವಾಸ್ತವ ಅನುಭವವನ್ನು ನಾವು ಅನುಭವಿಸುವಂತೆ ಚಿತ್ರಿಸುತ್ತಾರೆ. ಓದುಗರ ಸಾಂಸ್ಕೃತಿಕ ಮತ್ತು ಕಲಾನ್ಮಕ ಜ್ಞಾನವನ್ನು ಅವು ಹೆಚ್ಚಿಸುತ್ತದೆ ಎಂದು ಪತ್ರಕರ್ತ ಉಪನ್ಯಾಸಕ ಡಾ.ಗಣೇಶ್ ಪ್ರಸಾದ್ ನಾಯಕ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು ಇಲ್ಲಿ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-18 ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತರ ಪ್ರವಾಸ ಕಥನಗಳ ಸ್ವಾರಸ್ಯಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ ಕಾರಂತರ ಕೃತಿಗಳು ವಿದ್ಯಾರ್ಥಿಗಳ ಬೌದ್ದಿಕ ವಿಕಾಸಕ್ಕೆ ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಕಾರಂತರ ಕೃತಿಗಳು ಯುವ ಜನರಲ್ಲಿ ಬಹುಶಿಸ್ತೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: 2026ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 5ನೇ ರಾಷ್ಟ್ರೀಯ ಮಾಸ್ಟರ್ ಗೇಮ್ಸ್‌ನ 400 ಮೀಟರ್ ಹರ್ಡಲ್ಸ್ (ಅಡೆತಡೆ ಓಟ) ಸ್ಪರ್ಧೆಯಲ್ಲಿ ತಾಲೂಕಿನ ಗೋಲಿಬೇರು ಗ್ರಾಮದವರಾದ ಗೋಕುಲ್ ಪೂಜಾರಿ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ ಸೃಜನಶೀಲತೆಯೇ ಸಾಹಿತ್ಯ. ಬದುಕಿನ ಕಥೆಯನ್ನು ಹೇಳಿ ಮಾನವೀಯ ಮೌಲ್ಯಗಳ ಪುನರುತ್ಥಾನದೊಂದಿಗೆ ಸುಸಂಸ್ಕೃತ ಸಮಾಜ ರಚನೆಯ ಹಂಬಲ ಸಾಹಿತಿಯದ್ದಾಗಿದೆ. ಕಾರಂತರು ಈ ನಿಟ್ಟಿನಲ್ಲಿ ಸಾಹಿತ್ಯ ಕೃಷಿ ಮಾಡಿದ್ದು ಆ ಕಾಲದ ವಿಶಿಷ್ಟತೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕದ ಕನ್ನಡ ಉಪನ್ಯಾಸಕಿ ಶಾಲಿನಿ ಯು.ಬಿ. ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಕಾರಂತ ಟ್ರಸ್ಟ್ ಉಡುಪಿ, ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ – 17ರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಟ್ರಸ್ಟ್‌ನ ಉದ್ದೇಶ ಮತ್ತು ನಿಲುವುಗಳನ್ನು ಹೇಳಿ ಓದಿನಿಂದ ಭೌದ್ಧಿಕ ವಿಕಸನ ಸಾಧ್ಯವಾಗಿ ಆತ್ಮವಿಶ್ವಾಸ ಇಮ್ಮಡಿಯಾಗುತ್ತದೆ ಎಂದರು. ಕಾಲೇಜಿನ ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ,ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ – ಶಿಕ್ಷಕರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಿಕ್ಷಣವು ಅನೇಕ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅವಕಾಶಗಳಿಗೆ ದಾರಿಯಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣದ ಹಂತದಿಂದಲೇ ಸ್ಪಷ್ಟ ಗುರಿಯನ್ನು ರೂಪಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು  ಇದು  ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಮತ್ತು ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಮತ್ತಷ್ಟು ಉತ್ತಮಪಡಿಸುವುದು, ಅವರಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಭವಿಷ್ಯದ ಶೈಕ್ಷಣಿಕ ಗುರಿಗಳನ್ನು ರೂಪಿಸುವಲ್ಲಿ ಕಾಲೇಜು ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದರು. ಕ್ರಿಯೇಟಿವ್ ನ…

Read More