ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು-11 ಇಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಒಟ್ಟು 40 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ಕಿರಿಯರ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಆರಾಧ್ಯ ಪ್ರಥಮ ಸ್ಥಾನ, ಅರೇಬಿಕ್ ಧಾರ್ಮಿಕ ಪಠಣದಲ್ಲಿ ಫರಾಜ್ ದ್ವಿತೀಯ ಸ್ಥಾನ ಹಾಗೂ ಛದ್ಮವೇಷದಲ್ಲಿ ಶಿವನ್ಯ ತೃತೀಯ ಸ್ಥಾನ ಪಡೆದುಕೊಂಡರು. ಹಿರಿಯರ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಿರೂಪಾ ಪ್ರಥಮ ಸ್ಥಾನ, ಪ್ರಬಂಧ ರಚನೆಯಲ್ಲಿ ಖುಷಿ ಎಂ. ಪ್ರಥಮ ಸ್ಥಾನ ,ಅರೇಬಿಕ್ ಧಾರ್ಮಿಕ ಪಠಣದಲ್ಲಿ ಎಂ. ಮಹಾರೂಫ್ ಪ್ರಥಮ ಸ್ಥಾನ , ಮಿಮಿಕ್ರಿ ಸ್ಪರ್ಧೆಯಲ್ಲಿ ಅದ್ವಿಕ್ ಪ್ರಥಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಿಂದ ತ್ರಾಸಿ ಕಡೆಗೆ ತೆರಳುತ್ತಿದ್ದ ಮಿನಿ ಬಸ್ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಆನೆಗುಡ್ಡೆ ದೇಗುಲದ ಗೋಪುರದ ಎದುರು ಈ ಘಟನೆ ನಡೆದಿದೆ. ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ತ್ರಾಸಿಯಿಂದ ಪ್ರವಾಸಿ ಬಸ್ಸಿನಲ್ಲಿ ಸುಮಾರು 30 ಮಂದಿ ತೆರಳಿದ್ದರು. ಸಮಾವೇಶ ಮುಗಿದ ಬಳಿಕ ಹಿಂದಿರುಗುವಾಗ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಊಟ ಮುಗಿಸಿದ್ದರು. ಅಲ್ಲಿಂದ ತ್ರಾಸಿ ತೆರಳಲು ದೇವಸ್ಥಾನದ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಬಂದು, ಕುಂದಾಪುರದ ಕಡೆಗೆ ತೆರಳಲು ಚಾಲಕ ಬಸ್ಸನ್ನು ತಿರುಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕುಂದಾಪುರದತ್ತ ಬುಲೆಟ್ ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಬಸ್ಸಿನ ಬಲಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಎಂ.ಜಿ.ಎಂ. ಕ್ರೀಡಾಂಗಣದಲ್ಲಿ ಡಿ.28, 29 ಮತ್ತು 30ರಂದು ನಡೆಯಲಿರುವ ‘ಶ್ರೀ ಶಂಕರ ವಿಜಯೋತ್ಸವ 2026, ಪ್ರಯುಕ್ತ ಕುಂದಾಪುರ ತಾಲೂಕು ವಲಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ನಮ್ಮ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಸನಾತನ ಧರ್ಮವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸದುದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಶಂಕರಾಚಾರ್ಯ ಮಹಾಸ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ ಶೃಂಗೇರಿ. ಪ್ರಸ್ತುತ 36ನೇ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ಕೃಪಾಶೀರ್ವಾದದೊಂದಿಗೆ, ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ಆನೆಗುಡ್ಡೆಯ ವತಿಯಿಂದ ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಕುಂಭಕಾಶಿಯ ಶ್ರೀ ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಈ ಸ್ಪರ್ಧೆಗಳು ಜರುಗಲಿವೆ. ವಿಭಾಗವಾರು ಸ್ಪರ್ಧೆಗಳ ವಿವರ: * ಹಿರಿಯ ಪ್ರಾಥಮಿಕ ಶಾಲಾ ವಿಭಾಗ (5, 6, 7ನೇ ತರಗತಿ): * ಸ್ತೋತ್ರ ಗಾಯನ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಅಜ್ಜರಕಾಡಿನಲ್ಲಿ ನಡೆದ 9ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್-2026ರ ಹಟ್ಟಿಹಂಗಡಿಯ ಶ್ರೀ ಸಿದ್ಧಿವಿನಾಯಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಅಝಾನ್ ಎರಡು ಪ್ರಥಮ ಸ್ಥಾನಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. 7 ವರ್ಷದೊಳಗಿನ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿದ ಅಝಾನ್, ಕುಮಿಟೆ (Kumite) ಹಾಗೂ ಕಟಾ (Kata) ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ದ್ವಿಗುಣ ಯಶಸ್ಸು ಸಾಧಿಸಿದ್ದಾರೆ ಎಸ್.ಎಸ್. ಹನೀಫ್ ಗುಲ್ವಾಡಿ ಅವರ ಪುತ್ರನಾಗಿರುವ ಮೊಹಮ್ಮದ್ ಅಝಾನ್ ಅವರ ಈ ಸಾಧನೆಗೆ ಪೋಷಕರು ಹಾಗೂ ಶಾಲೆಯ ಅಧ್ಯಾಪಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು, ಅಲ್ಲಿಯವರೆಗೆ ಗ್ರಾಮಸ್ಥರ ಹಿತದೃಷ್ಟಿಯಿಂದ ಚರಂಡಿ ಸ್ವಚ್ಛತೆ, ಬೀದಿ ದೀಪ ನಿರ್ವಹಣೆ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ ವೇತನ ಹಾಗೂ ಇಂಧನದ ನಿರ್ವಹಣೆಗೆ ಉಡುಪಿ ಜಿಲ್ಲಾ ಪಂಚಾಯತ್‌ನ ವಿಶೇಷ ತುರ್ತು ಪರಿಹಾರ ನಿಧಿಯಿಂದ ತಕ್ಷಣವೇ ಅನುದಾನ ಒದಗಿಸಬೇಕೆಂದು ಆಗ್ರಹಿಸಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಪಂ ಸದಸ್ಯರು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತು ಕುಂದಾಪುರ ತಾಪಂ ಇಒ ಮಹೇಶ ಕೆ.ಜಿ. ಅವರನ್ನು ಅವರ ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಾದ 15ನೇ ಹಣಕಾಸಿನ ಬಾಕಿ ಹಣ ಹಾಗೂ 16ನೇ ಹಣಕಾಸಿನ ಹೊಸ ಅನುದಾನಗಳು ಕಳೆದ ಎರಡು ವ?ಗಳಿಂದ ಪಂಚಾಯತ್ ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಡಲತೀರದ ಭಾರ್ಗವ, ಜ್ಞಾನಪೀಠ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಹೆಸರಿನಲ್ಲಿ ನೀಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರʼಕ್ಕೆ ಬಿಜೂರಿನ ಉದಯೋನ್ಮುಖ ಪ್ರತಿಭೆ ನಿಹಾರಿಕಾ ಆರ್. ದೇವಾಡಿಗ ಆಯ್ಕೆಯಾಗಿದ್ದಾಳೆ. ಈಕೆ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರವಿಕಲಾ ದೇವಾಡಿಗ ಹಾಗೂ ಬೈಂದೂರು ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ದೇವಾಡಿಗ ದಂಪತಿಯ ಸುಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಜನರು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ, ಮೂಡುಬಿದಿರೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾದ ‘ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನ’ದ ಅಂಗವಾಗಿ ನಡೆದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾದಕ ದ್ರವ್ಯ ವ್ಯಸನವು ಇಂದಿನ ಸಮಾಜ ಎದುರಿಸುತ್ತಿರುವ ಗಂಭೀರ ಸವಾಲಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಯುವಜನರು ಕುತೂಹಲ, ಸ್ನೇಹಿತರ ಒತ್ತಡ ಅಥವಾ ಕ್ಷಣಿಕ ಆಕರ್ಷಣೆಗೆ ಒಳಗಾಗಿ ಮಾದಕ ವಸ್ತುಗಳ ಸೇವನೆಗೆ ಮುಂದಾಗಬಾರದು. ವ್ಯಸನಕ್ಕೆ ಒಳಗಾದ ಬಳಿಕ ಅದರಿಂದ ಹೊರಬರುವುದು ಕಷ್ಟವಾಗಬಹುದು. ಆದ್ದರಿಂದ ವ್ಯಸನಕ್ಕೆ ತುತ್ತಾಗುವುದಕ್ಕಿಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿ ರಸ್ತೆಯ 5 ಕೋಟಿ ರೂ. ವೆಚ್ಚದಲ್ಲಿ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆಯ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಕರೆ ನೀಡಿದರು. ಅವರು ಮಂಗಳವಾರ ಉಡುಪಿ ತಾಲೂಕಿನ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ (ಶಿಲಾನ್ಯಾಸ) ನೆರವೇರಿಸಿ ಮಾತನಾಡಿದರು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 9 ಸೇತುವೆಗಳ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಈಗಾಗಲೇ ಟೆಂಡರ್ ಅನ್ನು ಕರೆಯಲಾಗಿದ್ದು, ಅದರಲ್ಲಿ ಪೆರ್ಡೂರು-ಬೈರಂಪಳ್ಳಿ-ಅಣ್ಣಾಲು ಸಂಪರ್ಕ ಸೇತುವೆಯು ಒಂದಾಗಿದೆ. ಇಂದಿನಿಂದಲೇ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಿ, ತ್ವರಿತವಾಗಿ ಗುಣಮಟ್ಟದೊಂದಿಗೆ ಕೈಗೊಂಡು ಪೂರ್ಣಗೊಳಿಸಲು ಮುಂದಾಗಬೇಕು ಎಂದರು. ಗ್ರಾಮೀಣ ಪ್ರದೇಶಗಳ ರಸ್ತೆ ಸೇರಿದಂತೆ ಮತ್ತಿತರ ಮೂಲ ಸೌಲಭ್ಯಗಳನ್ನು ಒದಗಿಸಲು ಮಾನ್ಯ ಮುಖ್ಯಮಂತ್ರಿಗಳು ವಿಶೇಷ ಅನುದಾನವನ್ನು ನೀಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಟೂರ್ನಮೆಂಟ್ ’ವಿಂಗ್ಸ್ ಟು ವಿನ್’ ಹೆಸರಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಹಾಗೂ ಎಐಸಿಎಸ್‌ನ ಉಡುಪಿ ಜಿಲ್ಲೆಯ ಕ್ರೀಡಾ ಕಾರ್ಯದರ್ಶಿಗಳಾದ ರೋಲ್ವಿನ್ ಜೊಯ್ ಅರಾನ್ ಅವರು ಮಾತನಾಡಿ, ಆಟವು ಮಕ್ಕಳನ್ನು ಲವಲವಿಕೆಯಿಂದಿರುವಂತೆ ಮಾಡುತ್ತದೆ. ಆಟದಲ್ಲಿ ಗೆಲ್ಲಲು ಎಲ್ಲರೂ ಶ್ರಮಿಸಬೇಕು. ಬೇರೆಯವರು ಗೆದ್ದರೆ ನೋವು ಪಡಬಾರದು. ಬೇರೆ ಬೇರೆ ಶಾಲೆಗಳಾದರೂ ನಾವೆಲ್ಲ ಎಐಸಿಎಸ್‌ನ ವಿದ್ಯಾರ್ಥಿಗಳು. ನಮ್ಮವರ ಸಾಧನೆ ನೋಡಿ ಹೆಮ್ಮೆ ಪಡಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸತತ ಪರಿಶ್ರಮದಿಂದಷ್ಟೇ ಸ್ಪರ್ಧೆಯಲ್ಲಿ ಗೆಲುವು ಸಾಧ್ಯ. ಸ್ವಾಭಿಮಾನದ ಬೆಳವಣಿಗೆಗೆ ಇದು ಪೂರಕ. ಸೋಲು ಕೂಡ ಜೀವನದ ಪಾಠವನ್ನು ನೀಡುತ್ತದೆ. ವಿದ್ಯಾರ್ಥಿಗಳು ಆ ದಿಸೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳು ಸರಕಾರದ ವಿನೂತನ ಕಾರ್ಯಕ್ರಮವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಜನಸಾಮಾನ್ಯರ ಸಮಸ್ಯೆಗಳನ್ನು ಅವರುಗಳ ಮನೆ ಬಾಗಿಲಿನಲ್ಲಿಯೇ ಹೋಗಿ ಆಲಿಸಿ, ನಿಗದಿತ ಸಮಯದಲ್ಲಿ ತ್ವರಿತಗತಿಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಆಶಯವಾಗಿದೆ ಎಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಮಂಗಳವಾರ ಕಾರ್ಕಳದ ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ, ಅವರುಗಳು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಿ, ಆ ಮೂಲಕ ಅವರುಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವ್ಯವಸ್ಥೆಯನ್ನು ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸರಕಾರ ಮಾಡುತ್ತಿದೆ ಎಂದರು. ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅಹವಾಲುಗಳನ್ನು ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.…
