ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು 20ನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಉಡುಪಿ ವಲಯ ಮಟ್ಟದಲ್ಲಿ ಅಜ್ಜರಕಾಡು ಪ್ರಥಮ ದರ್ಜೆ ಕಾಲೇಜಿನ ವಿರುದ್ಧ ನೇರ ಸೆಟ್ಗಳಿಂದ ಗೆದ್ದು ಅಂತರ ವಲಯ ಮಟ್ಟಕ್ಕೆ ಆಯ್ಕೆಯಾಗಿತ್ತು. ಐಕಳದ ಪೋಂಪೈ ಕಾಲೇಜಿನಲ್ಲಿ ನಡೆದ ಅಂತಿಮ ಹಂತದ ಹಣಾಹಣಿಯಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಟುಬಿ ವಿವಿ ವಿರುದ್ಧ 25-13, 25-19 ಸೆಟ್ಗಳ ಅಂತರದಲ್ಲಿ ಸೋಲಿಸಿ ವಿಜೇತ ತಂಡವಾಗಿ ಹೊರಹೊಮ್ಮಿತು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಹಾಲಿಂಗೇಶ್ವರ ಹೇರಂಬ ಮಹಾಗಣಪತಿ ದೇಗುಲದ ವಾರ್ಷಿಕ ಜಾತ್ರೋತ್ಸವ ಎ.12 ರಂದು ಜರಗಲಿದ್ದು, ಈ ಹಿನ್ನಲ್ಲೆಯಲ್ಲಿ ದೇಗುಲದ ಒಳ ಹಾಗೂ ಹೊರ ಪ್ರಾಂಗಣ ಸ್ವಚ್ಛತಾ ಕಾರ್ಯಕ್ರಮವು ಭಾನುವಾರ ಜರಗಿತು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಅಪ್ಪು ಎಟಾಕಸ್೯ ಮಣೂರು ಇವರ ಸಹಯೋಗದೊಂದಿಗೆ 249ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಸಂಯೋಜಿಸಿಕೊಂಡಿತು. ದೇಗುಲದ ಅಧ್ಯಕ್ಷ ಸತೀಶ್ ಕುಂದರ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ದೇಗುಲದ ಆಡಳಿತ ಟ್ರಸ್ಟಿ ಕೃಷ್ಣ ದೇವಾಡಿಗ, ಚಂದ್ರ ಹರ್ತಟ್ಟು, ದಿನೇಶ್ ಆಚಾರ್, ಸ್ಥಳೀಯರಾದ ಭಾರತೀ ವಿಷ್ಣುಮೂರ್ತಿ ಮಯ್ಯ, ರಾಜೇಂದ್ರ ಉರಾಳ, ಶಿವರಾಮ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಥಮ ಮಳೆಗೆ ಕುಂದಾಪುರದ ಶಾಸ್ತ್ರೀ ವೃತ್ತದಿಂದ ಕೋಟೇಶ್ವರದ ತನಕ ಸರ್ವಿಸ್ ರಸ್ತೆಗಳು ಅಲ್ಲಲ್ಲಿ ಹೊಳೆಯಂತೆ ಆಗಿವೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಇದು ಇಂದು ನಿನ್ನೆಯ ಸಮಸ್ಯೆಯಲ್ಲಾ ಅದೆಷ್ಟೋ ವರ್ಷಗಳಿಂದ ಕುಂದಾಪುರದ ಜನತೆ ಹಾಗೂ ವಾಹನ ಸವಾರರು, ಪಾದಚಾರಿಗಳು, ಸರ್ವಿಸ್ ರಸ್ತೆಯ ಇಕ್ಕೆಲಗಳಲ್ಲಿನ ವ್ಯಾಪಾರಸ್ಥರು, ನಿವಾಸಿಗಳು ಹೇಳತೀರದ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಆದರೆ ಈ ಸಮಸ್ಯೆಯನ್ನು ಪರಿಹರಿಸುವ ಜವಾಬ್ದಾರಿಯನ್ನು ಹೊತ್ತಿರುವ ಸಂಸದರು ಹಾಗೂ ಶಾಸಕರು ಮಾತ್ರ ಗಾಡ ನಿದ್ರೆಗೆ ಜಾರಿದಂತೆ ಇದೆ. ಮಳೆಗಾಲ ಪ್ರಾರಂಭವಾದ ಮೇಲೆ ಕಾಟಾಚಾರಕ್ಕೆ ಅಲ್ಲಲ್ಲಿ ತೇಪೆ ಹಾಕುವ ಕೆಲಸ ಮಾಡುವುದಕ್ಕಿಂತ ಈಗಾಗಲೇ ಏಲ್ಲಿ ಸಮಸ್ಯೆಗಳಿದೆ ಆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುವುದು ಉತ್ತಮ. ಅಧಿವೇಶನದಲ್ಲಿ ಜನರ ಇಂತಹ ಸಮಸ್ಯೆಗಳನ್ನು ಪರಿಹಾರ ಮಾಡುವ ಬಗ್ಗೆ ಸರ್ಕಾರದ ಗಮನ ಸೆಳೆಯುವುದನ್ನು ಬಿಟ್ಟು ಕೋಳಿ ಅಂಕಕ್ಕೆ ಅನುಮತಿ ಕೊಡಿ ಎನ್ನುವ ಶಾಸಕರಗಳನ್ನು ಆಯ್ಕೆ ಮಾಡಿದರೆ, ಸುಳ್ಳಿನಲ್ಲೇ ಗೋಪುರವನ್ನು ಕಟ್ಟುವ ಸಂಸದರನ್ನು ಆಯ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್ ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಹಸಿರುಕ್ರಾಂತಿಯ ಹರಿಕಾರ, ಭಾರತದ ಉಪಪ್ರಧಾನಿಯಾದ ಡಾ. ಬಾಬು ಜಗಜೀವನ ರಾಮ್ ಜನ್ಮ ದಿಚಾರಣೆಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿನ ಪಶುಗಳ ಆರೋಗ್ಯ ಸುಧಾರಣೆಗೆ ನೇಮಕಗೊಂಡಿರುವ ಮೈತ್ರಿ ಕಾರ್ಯಕರ್ತರು ಉತ್ತಮವಾಗಿ ಸೇವೆ ನೀಡಬೇಕೆಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ.ವೆಂಕಟೇಶ್ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಪಶುಗಳು ಉತ್ತಮ ಆರೋಗ್ಯವನ್ನು ಹೊಂದಬೇಕು ಎಂಬ ಉದ್ದೇಶದಿಂದ ಅವುಗಳ ಆರೋಗ್ಯ ಸುಧಾರಣೆಗೆ ಪಶು ವೈದ್ಯರು, ಪಶು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮೈತ್ರಿ ಕಾರ್ಯಕರ್ತರನ್ನು ನೇಮಕ ಮಾಡಿದೆ. ಪಶುಗಳಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರತಿಯೊಬ್ಬರೂ ಮುಂದಾಗುವುದರೊಂದಿಗೆ ರೈತ ಸಮುದಾಯದವರೂ ಒಳಗೊಂಡಂತೆ ಜಾನುವಾರುಗಳಿಗೂ ಇದರ ಲಾಭ ದೊರಕಿಸಬೇಕೆಂದು ಕರೆ ನೀಡಿದರು. ಮೈತ್ರಿ ಕಾರ್ಯಕರ್ತರಿಗೆ ಈಗಾಗಲೇ ಮೂರು ತಿಂಗಳ ತರಬೇತಿ ನೀಡಲಾಗಿದೆ. ಇವರುಗಳು ನಗರ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜಿ ರಾಜೀವ ಶೆಟ್ಟಿ ಚಾರಿ ಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ತಾಲೂಕಿನ ಉಳ್ಳೂರಿನ ಕೊರಗ ಕಾಲೋನಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಕೊರಗ ಕುಟುಂಬಗಳಿಗೆ 14 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಎಚ್. ಆರ್. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ನಾಗರಾಜ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಎಚ್. ಆರ್. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಹಿಂದುಳಿದ ಕೊರಗ ಸಮುದಾಯಕ್ಕೆ ಉಡುಪಿ ಜಿಲ್ಲೆಯಲ್ಲಿ 100 ಮನೆಗಳನ್ನು ನಿರ್ಮಿಸುವ ಅಭಿಯಾನವನ್ನು ಪ್ರಾರಂಭಿಸಿದ್ದರು ಎಂದರು. 2 ಕೋಟಿ ಹೆಚ್ಚು ವೆಚ್ಚದಲ್ಲಿ 14 ಮನೆಗಳ ಮೊದಲನೇ ಹಂತವನ್ನು 2024 ನವಂಬರ್ ನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಜನ್ನಾಡಿ ಕೊರಗ ಕೇರಿಯ ಪ್ರದೇಶದಲ್ಲಿ ಪೂರ್ಣಗೊಳಿಸಿ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಲಕ್ಷಾಂತರ ವಿದ್ಯಾರ್ಥಿಗಳನ್ನು ಈ ಸಮಾಜಕ್ಕೆ ರೂಪಿಸಿಕೊಟ್ಟ ಹಿರಿಮೆ ಈ ಶಾಂಭವಿ ಶಾಲೆಗೆ ದೊರಕಬೇಕಿದೆ ಎಂದು ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ನುಡಿದರು. ಅವರು ಶನಿವಾರ ಕೋಟದ ಗಿಳಿಯಾರು ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆ ಕಾಲಘಟ್ಟದಲ್ಲೆ ಶೈಕ್ಷಣಿಕ ಕ್ಷೇತ್ರದ ಭಾಷ್ಯ ಬರೆದ ಈ ಶಾಲೆ ಗತವೈಭವವನ್ನು ಮರುಕಳಿಸಬೇಕಿದೆ ಅಲ್ಲದೆ ಇದರ ಉಳಿವಿಗೆ ಶಾಲಾ ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಮುಂದಡಿ ಇಡಬೇಕಿದೆ ಎಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ರಾಜಾರಾಮ್ ಐತಾಳ್ ಅವರು ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ಅರಳು ಹಸ್ತ ಪತ್ರಿಕೆ ಬಿಡುಗಡೆಗೊಳಿಸಿದರು. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಾರಕೆರೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಇದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ಬಹಳ ವಿಜೃಂಭಣೆಯಿಂದ ಮುಕ್ತಾಯಗೊಂಡಿತು. ಐಎಂಜೆ ವಿದ್ಯಾಸಂಸ್ಥೆಗಳ ಛೇರ್ಮನ್ ರಾದ ಸಿದ್ದಾರ್ಥ ಜೆ. ಶೆಟ್ಟಿ ಅವರು ಟ್ರೋಫಿ ಬಿಡುಗಡೆ ಮಾಡಿ ಚಾಲನೆ ಕೊಟ್ಟ ಈ ಸ್ಪರ್ಧಾಕೂಟದಲ್ಲಿ ರಾಜ್ಯದ ವಿವಿದ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನ ಪ್ರದರ್ಶಿಸಿ ಎಲ್ಲಾ ಪ್ರೇಕ್ಷಕರನ್ನು ರಂಜಿಸಿದರು. ಎಲ್ಲಾ ವಿಭಾಗದ ವಿಜೇತರಿಗೆ ನಗದು ಬಹುಮಾನದ ಜೊತೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಕುಂದಾಪುರದ ಬಿಬಿಹೆಗ್ಡೆ ಕಾಲೇಜ್ ಒವರ್ ಆಲ್ ಚಾಂಪಿಯನ್ ಹಾಗೂ ಶಿರ್ವದ ಸೈಂಟ್ ಮೇರೀಸ್ ಕಾಲೇಜು ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಕಾರ್ಯಕ್ರಮದ ರಂಗು ಹೆಚ್ಚಿಸಲು 30ಕ್ಕೂ ಅಧಿಕ ಕಂಪನಿಗಳ ಮಾದರಿ ಕಾರುಗಳು ಮತ್ತು 75ಕ್ಕೂ ಅಧಿಕ ವಿವಿದ ಬೈಕ್ ಗಳ ಪ್ರದರ್ಶನ ನಡೆಯಿತು. ಅಲ್ಲದೇ, ಆರ್ ಡಿ ಎಕ್ಸ್ ನ ತಜ್ಞರಿಂದ, ಬೈಕ್ ಸ್ಟಂಟ್…
ಕುಂದಾಪ್ರ ಡಾಟ್ ಕಾಂ ಲೇಖನ.ಬೆಳಗ್ಗೆ ಹೊಟ್ಟೆ ತುಂಬಾ ತಿಂದ್ರೂ ಕೆಲವೊಬ್ಬರಿಗೆ ಕಾಲೇಜು, ಆಫೀಸಿಗೆ ಹೋದ ನಂತರ ಮತ್ತೆ ಹಸಿವಾಗುತ್ತೆ. ಆದ್ರೆ ಸಮಯದ ಅಭಾವದಿಂದ ಆಗ ತಿನ್ನಲಾಗದೆ ಹಸಿವಿನಿಂದಲೇ ಇರಬೇಕಾಗಬಹುದು. ಇಂಥಹ ಸಂದರ್ಭದಿಂದ ತಪ್ಪಿಸಿಕೊಳ್ಳಲು ಈ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಅತಿಯಾದ ಹಸಿವನ್ನು ನಿಯಂತ್ರಿಸಬಹುದು ಎನ್ನುತ್ತಾರೆ ಆಹಾರ ತಜ್ಞರು. ಅವುಗಳೆಂದರೆ… ಶುಂಠಿ: ಶುಂಠಿ ಹಸಿವನ್ನು ನಿಯಂತ್ರಿಸುತ್ತದೆ ಹಾಗೂ ಜಂಕ್ಫುಡ್ ತಿನ್ನಬೇಕೆಂಬ ಕಡುಬಯಕೆಗಳನ್ನು ಕಡಿಮೆ ಮಾಡಲು ನಮ್ಮ ಹಸಿವನ್ನು ಪೂರೈಸಲು ಸಹಾಯ ಮಾಡುತ್ತದೆ. ಶುಂಠಿ ಹೆಚ್ಚಿನ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿ ಕೊಲೆಸ್ಟ್ರಾಲ್ ಮತ್ತು ಗ್ಯಾಸ್ಟ್ರಿಕ್ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ. ಓಟ್ಸ್: ಓಟ್ಸ್ ಒಂದು ವಿಶಿಷ್ಟ ರೀತಿಯ ಕರಗುವ ಫೈಬರ್, ಬೀಟಾ-ಗ್ಲುಕಾನ್ಸ್ ಅನ್ನು ಹೊಂದಿರುತ್ತದೆ. ಓಟ್ಸ್ ಹೊಟ್ಟು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ನಾರಿನಂಶವನ್ನು ಹೊಂದಿರುತ್ತದೆ. ಇದು ನೀರನ್ನು ಹೀರಿಕೊಳ್ಳುತ್ತದೆ ಮತ್ತು ಜೀರ್ಣಕ್ರಿಯೆಯ ಸಮಯದಲ್ಲಿ ಪರಿಮಾಣವನ್ನು ಹೆಚ್ಚಿಸುತ್ತದೆ, ಹೀಗಾಗಿ ನಿಮಗೆ ಪೂರ್ಣತೆಯ ಭಾವನೆಯನ್ನು ನೀಡುತ್ತದೆ. ಇದು ಕರುಳಿನಿಂದ ಕ್ಯಾಲೊರಿಗಳನ್ನು ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ, ಇದು ರಕ್ತದಲ್ಲಿನ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.05: ತಾಲೂಕಿನ ಮುಳ್ಳಿಕಟ್ಟೆ ಜಂಕ್ಷನ್ನಲ್ಲಿ ರಿಕ್ಷಾ – ಕಾರು ಢಿಕ್ಕಿಯಾಗಿ ರಿಕ್ಷಾ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಇಂದು ಬೆಳಿಗ್ಗೆ ನಡೆದಿದೆ. ರಿಕ್ಷಾ ಚಾಲಕ ಗೋಪಾಲ ಅವರ ತಲೆ, ಮುಖ, ಎದೆ ಹಾಗೂ ಕಾಲಿಗೆ ಬಲವಾದ ಏಟು ಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ. ಮುಳ್ಳಿಕಟ್ಟೆ ಜಂಕ್ಷನ್ನಲ್ಲಿ ಗುರುವಾರ ಸಂಜೆ 7 ಗಂಟೆಯ ಸುಮಾರಿಗೆ ನಡೆದಿದ್ದು, ರಿಕ್ಷಾ ಚಾಲಕ ಗೋಪಾಲ ಹಾಗೂ ಕಾರಿನಲ್ಲಿದ್ದ ಚಂದ್ರ ಎಂಬ ಇಬ್ಬರು ಗಾಯಗೊಂಡಿದ್ದರು. ಗೋಪಾಲ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
