ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಂಟರ ಸಂಘ ರಿ. ಹೈದರಾಬಾದ್ ವತಿಯಿಂದ ಸಂಘದ ಆಡಳಿತ ಕಚೇರಿಯಲ್ಲಿ ಯುವ ಸಂಘಟಕ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಹೈದರಾಬಾದ್ ಬಂಟರ ಸಂಘದ ಅಧ್ಯಕ್ಷರಾದ ಶಂಕರ ಶೆಟ್ಟಿ ಅವರು ಸನ್ಮಾನಿಸಿದರು. ಈ ಸಂದರ್ಭ ಹೈದರಾಬಾದ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ರತ್ನಾಕರ ರೈ, ಕೋಶಾಧಿಕಾರಿ ರವಿರಾಜ್ ಶೆಟ್ಟಿ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ, ಉದಯ್ ಕುಮಾರ್ ಶೆಟ್ಟಿ ಹಕ್ಲಾಡಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ನಡೆದ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪರಿಶ್ರಮ ಮತ್ತು ಬದ್ಧತೆಯನ್ನು ಹಾಕಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್ ಅಧ್ಯಕ್ಷತೆ ವಹಿಸಿದ್ದರು. ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಶುಭ ಹಾರೈಸಿದರು. ವಿವಿಧ ವಿಷಯಗಳ ಶಿಕ್ಷಕರು ಸಂಬಂಧಪಟ್ಟ ಪಠ್ಯಗಳನ್ನು ಪರಿಚಯಿಸಿದರು. ಶಿಕ್ಷಕಿ ಸುಮಲತಾ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ದೈನಂದಿನ ವಸ್ತುಗಳು ಸೇರಿದಂತೆ ಮತ್ತಿತರ ಸೇವೆಯನ್ನು ಪಡೆಯುವಾಗ ವಸ್ತುಗಳ ಗುಣಮಟ್ಟ ಪರೀಕ್ಷಿಸಿ, ಎಚ್ಚರಿಕೆಯಿಂದ ಖರೀದಿಸಬೇಕು. ಒಂದೊಮ್ಮೆ ಮೋಸವಾದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ರಿ., ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಮಾರುಕಟ್ಟೆಗಳು ಜಾಹೀರಾತು ಹಾಗೂ ಇತರೆ ಮಾಧ್ಯಮಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯಲ್ಲಿ ಬೀದರ್ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಗೀತ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಅವರಿಗೆ ಪ್ರದಾನ ಮಾಡಲಾಯಿತು. ಡಾ. ಗಣೇಶ್ ಗಂಗೊಳ್ಳಿ ಅವರು ಕಳೆದ 32 ವರ್ಷದ ಜಾನಪದ ಸಂಗೀತ ಕ್ಷೇತ್ರದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಳ್ಳಿ ಶಿವಪ್ರಕಾಶ್, ಅಕಾಡಮಿಯ ಸದಸ್ಯರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ – ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಎನ್. ಗಣೇಶ್ ಗಂಗೊಳ್ಳಿ ಆಯ್ಕೆ – https://kundapraa.com/?p=83002
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮರವಂತೆಯ ಸವಿತಾ ಕೆ. ಅವರು “ದಿ ರೋಲ್ ಆಫ್ ಜಾಬ್ ಸಾಟಿಸ್ಫ್ಯಾಕ್ಷನ್ ಇನ್ ಲಿಂಕಿಂಗ್ ಪ್ರೊಫೆಷನಲ್ ಐಡೆಂಟಿಟಿ ಅಂಡ್ ಬರ್ನ್ ಔಟ್: ಡೆವಲಪ್ಮೆಂಟ್ ಅಂಡ್ ವಾಲಿಡೇಷನ್ ಆಫ್ ಅ ಪ್ರೊಫೆಷನಲ್ ಐಡೆಂಟಿಟಿ ಸ್ಕೇಲ್ ಫಾರ್ ಹೈಯರ್ ಸೆಕೆಂಡರಿ ಟೀಚರ್ಸ್” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕಾಗಿ ಪೆರಿಯಾರ್ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ. ಅವರು ಪೆರಿಯಾರ್ ವಿಶ್ವವಿದ್ಯಾಲಯದ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಜೆ. ವೆಂಕಟಾಚಲಂ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಚಂದ್ರಕಾಂತ ಕೆ. ಹಾಗೂ ಸರಸ್ವತಿ ದಂಪತಿಯ ಪುತ್ರಿಯಾಗಿರುವ ಸವಿತಾ ಕೆ ಅವರು ಅಂಕೋಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕಿಶನ್ ಅವರ ಪತ್ನಿ ಆಗಿದ್ದಾರೆ. ಸವಿತಾ ಈ ಹಿಂದೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀಕ್ಷಾ ಅವರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಶಾಸಕರ ನಿಧಿಯಿಂದ ಶ್ರವಣ ಸಾಧನವನ್ನು ಶನಿವಾರದಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಗುಣಮಟ್ಟದ ಶ್ರವಣ ಸಾಧನವನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುವರ್ಣ ಯೋಜನಾ ಸಹಾಯಕರು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾಧಿಕಾರಿ ಶಿವಾಜಿ, ಮಾತು ಮತ್ತು ಶ್ರವಣ ತಜ್ಞರು ನೆಲೆಶ ಫಲಾನುಭವಿಗಳಾದ ಪ್ರತಿಕ್ಷ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಕೋಡಿಂಗ್ ಮತ್ತು ರೊಬೊಟಿಕ್ಸ್ ತತ್ವದ ಆಧಾರದಲ್ಲಿ ತಯಾರಿಸಿದ ಎಲೆಕ್ಟ್ರಾನಿಕ್ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಐದನೇ ತರಗತಿಯಿಂದ ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಒಟ್ಟು 40 ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವವನ್ನು ಪ್ರಶಂಸಿಸಿದರು. ಶಿಕ್ಷಕ ಹಾಗೂ ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲ ನಿತಿನ್ ಡಿ’ಆಲ್ಮೇಡಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಡಿಂಗ್ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಕಲಿಕೆ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಿದೆ ಎಂದು ತಿಳಿಸಿದರು. ವಿಜ್ಞಾನ ಮಾದರಿ ಪ್ರದರ್ಶನವನ್ನು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೆರೆದಿಡಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿ, ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಟಿಂಕರ್ ಸ್ಪೇಸ್ ಸಂಸ್ಥೆಯ ತರಭೇತುದಾರರಾದ ಪ್ರಣಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ನಾಟ್ಯ ರಂಗ ರಿ. ಹೈದರಾಬಾದ್ ಇದರ ವತಿಯಿಂದ ಇತ್ತೀಚಿಗೆ ಹೈದರಾಬಾದ್ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ನಾಟ್ಯ ರಂಗ ರಿ. ಇದರ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ರತ್ನಾಕರ ರೈ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು, ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ ಮತ್ತು ನಾಟ್ಯರಂಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ.15 ರಿಂದ 24 ರವರೆಗೆ ನಡೆಯಲಿರುವ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಶನಿವಾರ ಬೆಳಿಗ್ಗೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ದೇಗುಲದ ಸಮಿತಿ ಸದಸ್ಯರಾದ ಧನಾಕ್ಷಿ, ಸುರೇಂದ್ರ ಶೆಟ್ಟಿ, ಯು. ರಾಜೇಶ್ ಕಾರಂತ್, ಮಹಾಲಿಂಗ ನಾಯ್ಕ್, ಸುಧಾ ಕೆ., ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಮಾರ್ಚ್ 15ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮ ಮಾರ್ಚ್ 24ರ ತನಕ ಜರುಗಲಿದೆ. ಮಾರ್ಚ್ 22ರ ಬೆಳಿಗ್ಗೆ ರಥಾರೋಹಣ ಸಂಜೆ ಮನ್ಮಹಾರಥೋತ್ಸವ ಜರುಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಖಾರ್ವಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಹಾಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ದೈವ ದೇವರುಗಳ ಪುನರ್ ಪ್ರತಿಷ್ಠೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಬುಧವಾರ ಪ್ರಾರ್ಥನೆಯೊಂದಿಗೆ ಬ್ರಹ್ಮಕಲಶೋತ್ಸವ ಹಾಗೂ ಪುನರ್ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಗುರುವಾರ ಪ್ರತಿಷ್ಠಾ ಹೋಮ, ಕಲಾ ಹೋಮ, ಶಿಖರ ಪ್ರತಿಷ್ಠೆ, ಬಿಂಬಗಳ ಪ್ರತಿಷ್ಠೆ, ಪ್ರಸನ್ನ ಪೂಜೆ, ಮಧ್ಯಾಹ್ನ ಹಾಗುಳಿ ದರ್ಶನ, ಕೊರಗಜ್ಜ ದರ್ಶನ, ಸಂಜೆ ಸುದರ್ಶನ ಹೋಮ, 108 ಬ್ರಹ್ಮಕಲಶ ಮಂಡಲ ಪೂಜೆ ಮೊದಲಾದ ಕಾರ್ಯಕ್ರಮಗಳು ಜರಗಿದವು. ಶುಕ್ರವಾರ ಬೆಳಿಗ್ಗೆ ಬ್ರಹ್ಮಕಲಶಾಭಿಷೇಕ, ವೃಷಭ ಲಗ್ನ ಸುಮೂಹೂರ್ತದಲ್ಲಿ ಸಪರಿವಾರ ಹಾಗುಳಿ ದೈವಕ್ಕೆ ಬ್ರಹ್ಮ ಕಲಶ ಅಭಿಷೇಕ, ಪಲ್ಲ ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಬಿ. ಶ್ರೀಧರ ಭಟ್ ತಂತ್ರಿಗಳು ನೇತೃತ್ವದಲ್ಲಿ ಪುರೋಹಿತರು ಹಾಗೂ ಅರ್ಚಕರಿಂದ ಸಂಪನ್ನಗೊಂಡಿತು. ದೈವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷ ಅಚ್ಯುತ ಕೆ., ಗೌರವಾಧ್ಯಕ್ಷ ರಾಜೀವ ಕೆ., ಪ್ರಧಾನ ಕಾರ್ಯದರ್ಶಿ…
