Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾರ್ಥಿ ಜೀವನದಲ್ಲಿ ಸಂಸ್ಕಾರಯುತ ಸ್ನೇಹಮಯಿ ವಾತಾವರಣ ರೂಪಿಸಿಕೊಳ್ಳಬೇಕು ಈ ಮೂಲಕ ದ್ವೇಷ ಅಸೂಯೆ ಇದರಿಂದ ಮುಕ್ತರಾಗಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ಕೋಟ ಪಡುಕರೆ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಆರೋಹ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಕಲೆಯ ಮೂಲಕ ಹೊರಹೊಮ್ಮಿಸಬೇಕು, ಸಮಾಜದ ಸ್ವಾಸ್ಥ ಸದಾ ಕಾಪಾಡಬೇಕು,ಇದು ವಿದ್ಯಾರ್ಥಿಗಳ ಧ್ಯೇಯವಾಗಬೇಕು ಎಂದರಲ್ಲದೆ ಕಾಲೇಜು ದಿನಗಳಲ್ಲಿ ಕಲಾಸಕ್ತಿ ಉನ್ನತ ಮಟ್ಟಕ್ಕೆ ಏರಬೇಕು, ಮುಂದಿನ ಜೀವನದ ಬಗ್ಗೆ ಯೋಚಿಸಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ಕಾಲೇಜು ನಡೆದು ಬಂದ ಆರಂಭಿಕ ದಿನಗಳನ್ನು ಮೆಲುಕು ಹಾಕಿದರು. ಸಭೆಯ ಅಧ್ಯಕ್ಷತೆಯನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಇದೇ ವೇಳೆ ತೀಪುಗಾರರಾಗಿ ನಮಿತಾ, ಗಣೇಶ್ ರಾವ್, ನಿಖಿಲ್ ಶೆಟ್ಟಿ ಅವರುಗಳಿಗೆ ತೀರ್ಪಿನ ಪ್ರತಿ ಹಸ್ತಾಂತರಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಗೀತಾನಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗುಜ್ಜಾಡಿಯ ಎಂ. ಭಾಸ್ಕರ ಪೈ ಸರಕಾರಿ ಪ್ರೌಢಶಾಲೆ ಶೇ. 89.47 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸಮೀಕ್ಷಾ 586 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಆರ್. ರಂಜಿತಾ 576 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 7 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕುಂದಾಪುರ: ರಾಜ್ಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ 2025ರಲ್ಲಿ ತಾಲೂಕಿನ ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ 10ರೊಳಗಿನ 6 ರ್‍ಯಾಂಕ್‌ ಪಡೆದು ಅಮೋಘ ಸಾಧನೆಯನ್ನು ಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ಪ್ರಾವ್ಯ ಪಿ. ಶೆಟ್ಟಿ 625ಕ್ಕೆ 623 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 3ನೇ ರ್‍ಯಾಂಕ್ ಪಡೆದಿದ್ದಾಳೆ. ಸಂಸ್ಥೆಯ ವಿದ್ಯಾರ್ಥಿ ಆಯುಷ್ ಯು ಶೆಟ್ಟಿ 625ಕ್ಕೆ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 4ನೇ ರ್‍ಯಾಂಕ್ ಪಡೆದಿದ್ದಾನೆ.ಸಂಸ್ಥೆಯ ವಿದ್ಯಾರ್ಥಿನಿ ಅನುಶ್ರೀ 625ಕ್ಕೆ 620 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 6ನೇ ರ್‍ಯಾಂಕ್ ಪಡೆದಿದ್ದಾಳೆ. ಅಪೇಕ್ಷಾ ಶೆಟ್ಟಿ 625ಕ್ಕೆ 619 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 7ನೇ ರ್‍ಯಾಂಕ್ ಪಡೆದಿದ್ದಾಳೆ. ಸುಖಿ ಎಸ್. ಶೆಟ್ಟಿ 625 ಕ್ಕೆ 618 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 8ನೇ ರ್‍ಯಾಂಕ್ ಪಡೆದಿದ್ದಾಳೆ. ದರ್ಶನ್ ಕೆ.ಯು. 625 ಕ್ಕೆ 616 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 10ನೇ ರ್‍ಯಾಂಕ್ ಪಡೆದಿದ್ದಾನೆ. ವಿದ್ಯಾರ್ಥಿಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವರ ವಾರ್ಷಿಕ ಜಾತ್ರೆ ಹಾಗೂ ಶ್ರೀ ಮನ್ಮಹಾರಥೋತ್ಸವವು ವೈಶಾಖ ಶುದ್ಧ ಪಂಚಮಿ ದಿನವಾದ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಐತಿಹ್ಯವುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು.  ದೇವಳದ ತಂತ್ರಿ ಕೃಷ್ಣ ಸೋಮಯಾಜಿ ಆಚಾರ್ಯತ್ವದಲ್ಲಿ ಎ.26ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡು ಧಾರ್ಮಿಕ ಕೈಕಂರ್ಯಗಳು ಹಾಗೂ ವಿವಿಧ ಕಟ್ಟೆ ಉತ್ಸವಗಳು ನಡೆಯಿತು. ಶುಕ್ರವಾರ ಬೆಳಿಗ್ಗೆಯಿಂದಲೇ ವೈದಿಕರಿಂದ ಧಾರ್ಮಿಕ ವಿಧಿವಿಧಾನಗಳು ನಡೆದವು. ಉತ್ಸವ ಮೂರ್ತಿಯನ್ನು ಸರ್ವಾಲಂಕಾರಗೊಳಿಸಿ, ಮಂಗಳವಾದ್ಯ, ಕೊಂಬು ಕಹಳೆ ಹಾಗೂ ಚಂಡೆ ನಾದದೊಂದಿಗೆ ಮಧ್ಯಾಹ್ನ ರಥಾರೋಹಣಗೈಯಲಾಯಿತು. ಮಧ್ಯಾಹ್ನ ಮಹಾಅನ್ನಸಂತರ್ಪಣೆ ನಡೆಯಿತು. ಸಂಜೆ ಮಂಗಳ ಮುಹೂರ್ತದಲ್ಲಿ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ರಥವನ್ನು ಎಳೆದು ಕೃತಾರ್ಥರಾದರು. ಅನಂತರ ಅಷ್ಟಾವಧಾನ ಸೇವೆ ಸೇರಿದಂತೆ ವಿವಿಧ ಸೇವೆಗಳು ಶ್ರೀ ಸೇನೇಶ್ವರನಿಗೆ ಸಮರ್ಪಿಸಲಾಯಿತು. ಶನಿವಾರದಂದು ಅವಭೃಥೋತ್ಸವ ಹಾಗೂ ಭಾನುವಾರದಂದು ನಗರೋತ್ಸವ ಜರುಗಲಿದೆ. ರಥೋತ್ಸವದ ಚಾಲನೆ ನೀಡುವ ಪೂರ್ವದಲ್ಲಿ ಮಸೀದಿಗೆ ತೆರಳಿ ಮುಸ್ಲಿಂ ಬಾಂಧವರನ್ನು ಮತ್ತು ಸ್ಥಳೀಯ ಪೊಲೀಸ್ ಠಾಣಾಧಿಕಾರಿಯನ್ನು ದೇವಸ್ಥಾನಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ಪಿ.ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದಾಳೆ. ಉತ್ತಮ ಅಂಕ ಗಳಿಕೆಯಿಂದ ಸಂತಸಗೊಂಡಿರುವ ಪ್ರಾವ್ಯ ಪಿ. ಶೆಟ್ಟಿ ಮಾತನಾಡುತ್ತಾ “ತನ್ನ ಈ ಉತ್ಕೃಷ್ಟವಾದ ಫಲಿತಾಂಶವನ್ನು ನಾನು ಮೊದಲೇ ನಿರೀಕ್ಷಿಸಿದ್ದೆ. ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಅತ್ಯುತ್ತಮವಾದ ಬೋಧನೆ, ನಿರಂತರವಾಗಿ ನಡೆಸುತ್ತಿದ್ದ ಪೂರ್ವ ತಯಾರಿ ಪರೀಕ್ಷೆಗಳು, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಗಾರಗಳು, ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು. ನಾನು ಹಾಸ್ಟೆಲ್ ನ ವಿದ್ಯಾರ್ಥಿನಿಯಾಗಿದ್ದು ಹಾಸ್ಟೆಲ್ ನ ಸ್ಟಡಿ ಅವರ್ಸ್, ಹಾಸ್ಟೆಲ್ ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು. ವಿಶೇಷವಾಗಿ ನಮ್ಮ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಬೋಧಿಸುತ್ತಿರುವ ಐಐಟಿ/ನೀಟ್ ಫೌಂಡೇಶನ್ ಕೋರ್ಸ್ ನ ಮಾಸಿಕ ಪರೀಕ್ಷೆಗಳು ಜಟಿಲವಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‍ನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಶಾಲೆಯ ಎಲ್ಲಾ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. 36 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 16 ಮಂದಿನ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ. ಪ್ರಣತಿ ಎಸ್ ಶೆಟ್ಟಿ 613 (98.08%) ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಅಭಿಜ್ಞಾ ಜೆ.ಎಸ್ 611 (97.76%) ಅಂಕ ಗಳಿಸಿ ದ್ವಿತೀಯ ಸ್ಥಾನ, ದಿಗಂತ ಕೆ.ಎಸ್ 609 (97.44%) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಮುಖ್ಯೋಪಾಧ್ಯಾಯಿನಿ ಮಮತಾ ತಿಳಿಸಿರುತ್ತಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ವರ್ಗ, ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂದಾಪುರ ಎಜ್ಯುಕೇಶನ್‍ ಸೊಸೈಟಿ ರಿ. ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಬಾರಿ ಎಸ್. ಎಸ್. ಎಲ್‍. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ. ವಿದ್ಯಾರ್ಥಿಗಳಾದ ಸಾಯಿಸ್ಪರ್ಶ ಕೆ. 623 (99.68%), ಬಿ.ವಿ. ಜಯಸೂರ್ಯ 622 (99.52%), ಪ್ರಿಯಾ 622 (99.52%), ಭಕ್ತಿ ಶೆಟ್ಟಿ 621 (99.36%), ನಿರೀಕ್ಷಾ ಎನ್‌. ಶೆಟ್ಟಿಗಾರ್‌ 621 (99.36%), ಸನ್ವಿತ್‌ ಶೆಟ್ಟಿ 619 (99.04%), ವಿನ್ಯಾಸ್‌ ಅಡಿಗ (619 (99.04%), ಸಮನ್ವಿ ಎಸ್‌ 616 (98.56%) ಅನ್ವಿತ್‌ ಕೆ. 615 (98.405) ಸಿಂಚನಾ ಎಸ್‌. ಶೆಟ್ಟಿ 614( 98.24%) ನಿಹಾಲ್‌ ಅಮಿನ್‌ 610 ( 97.60%) ರವಿನಾ ಬಿ. 610 ( 97.60%) ಅದ್ವೈತ್‌ ಟಿ 609…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2024-2025ನೇ ಸಾಲಿನ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಉನ್ನತ ರ‍್ಯಾಂಕ್ ಗಳಿಸಿದ್ದಾರೆ. ಈ ವರ್ಷದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಹೋಲಿಸಿದರೆ 8% ಹೆಚ್ಚಳವಾಗಿದೆ. 2025 ಮಾರ್ಚ್​ 21ರಿಂದ ಏಪ್ರಿಲ್​ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ನಾಗರಾಜ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಬ್ಲಾಕ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್‌ ಬೈಂದೂರು, ಕಿಸಾನ್‌ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಂಡೀಗಢದಲ್ಲಿ ನಡೆಯುತ್ತಿರುವ ಇಂಡಿಯನ್ ಓಪನ್ ಅಥ್ಲೆಟಿಕ್ಸ್ ಕೂಟದ 2ನೇ ಆವೃತ್ತಿಯಲ್ಲಿ ಬೈಂದೂರಿನ ಮಣಿಕಂಠ ಒಳಗೊಂಡ ರಿಲಯನ್ಸ್ ಪುರುಷರ ತಂಡ 4X100  ರಿಲೇ ತಂಡ ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ಪುರುಷರ ರಿಲೇ ಫೈನಲ್‌ನಲ್ಲಿ ಕರ್ನಾಟಕದ ಮಣಿಕಂಠ ಹೋಬಳಿದಾರ್ ಹಾಗೂ ವಿವಿಧ ರಾಜ್ಯಗಳ ಗುರುವೀಂದರ್‌ ಸಿಂಗ್, ಅನಿಮೇಶ್ ಕುಜುರ್ ಹಾಗೂ ಅರ್ಮನ್ ಬೋರ್ಗೋಹೈನ್ ಒಳಗೊಂಡ ತಂಡ 38.69 ಸೆಕೆಂಡ್ ಗಳಲ್ಲಿ ಗುರಿ ತಲುಪಿ ನೂತನ ದಾಖಲೆ ರಚಿಸಿತು. 2010ರಲ್ಲಿ 38.89 ಸೆಕೆಂಡ್‌ಗಳಲ್ಲಿ ಸ್ಪರ್ಧೆ ಮುಗಿಸಿದ್ದು, ಹಿಂದಿನ ದಾಖಲೆ ಆಗಿದೆ. 2023ರಲ್ಲಿ ನಡೆದ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ ಮಣಿಕಂಠ ಹೋಬಳಿದಾರ್ ಅವರು, 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಬೈಂದೂರು ಪಡುವರಿಯ ಮಂಜುನಾಥ ಹೋಬಳಿದಾರ್ ಹಾಗೂ ದಿ. ಸುಂದರಿ ಅವರ ಪುತ್ರರಾದ ಮಣಿಕಂಠ ಅವರು 2020ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಥ್ಲೆಟಿಕ್ಸ್ನಲ್ಲಿ…

Read More