Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ. ಡ್ರಗ್ಸ್ ಜಾಗದ ಮೂಲಕ ಭಾರತದ ಪ್ರಗತಿಯನ್ನು ಕುಂದಿಸುವ ಯತ್ನ ನಡೆಯುತ್ತಲೆ ಇದೆ. ಡ್ರಗ್ಸ್ ದಂಧೆಯ ಹಿಂದೆ ಭಯೋತ್ಪಾದಕರ ಜಾಲವಿದೆ. ದೇಶದ ಯುವಜನರು ಡ್ರಗ್ಸ್ ವಿರುದ್ಧ ಹೋರಾಟ ನಡೆಸಬೇಕು. ಸಿಐಎಸ್ಎಫ್ ಡ್ರಗ್ಸ್ ಅರಿವು ಉದ್ದೇಶದಿಂದ ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಏಕಕಾಲಕ್ಕೆ ಸೈಕಲ್ ಜಾಥಾ ಹಮ್ಮಿಕೊಂಡಿದೆ ಎಂದು ಸೆಂಟ್ರಲ್ ಇಂಡಸ್ಟ್ರಿಯಲ್ ಸ್ಪೆಷಲ್ ಫೋರ್ಸ್ ಗೋವಾ ವಿಭಾಗದ ಕಮಾಂಡರ್ ವಿಭು ಸಿಂಗ್ ಹೇಳಿದರು. ಅವರು ಇಲ್ಲಿನ ಮೊಗವೀರ ಭವನದಲ್ಲಿ ಸೇನಾಭಿಮಾನಿ ಬಳಗ ಕುಂದಾಪುರದಲ್ಲಿ ಹಮ್ಮಿಕೊಂಡ ಸಿಐಎಸ್‌ಎಫ್‌ ಸೈಕಲ್ ಜಾಥಾ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮೃದ್ಧ ಭಾರತಕ್ಕಾಗಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ದೇಶದ ಪಶ್ಚಿಮ ಕರಾವಳಿಯ ಸುರಕ್ಷತೆಗೆ ಒತ್ತು ನೀಡಬೇಕಿದೆ. 125 ಮಂದಿ ಯೋಧರ ಸೈಕಲ್ ಜಾಥಾ ಮಾರ್ಚ್ 31 ರಂದು ಕನ್ಯಾಕುಮಾರಿ ತಲುಪಲಿದೆ ಎಂದರು. ಸಿಐಎಸ್‌ಎಫ್‌ ಅಸಿಸ್ಟಂಟ್ ಕಮಾಂಡರ್ ಸಾಯಿಸಿಂಗ್ ಮಾತನಾಡಿ, ದೇಶದ ಭದ್ರತೆಯಲ್ಲಿ 5 ಬಗೆಯ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಖಾಸಗಿ ಚಿಂತನೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಯಾಗುತ್ತಿದೆ ಎಂದು ಕುಷ್ಮಾದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿಪ್ರಾಯಪಟ್ಟರು. ಅವರು ಆಳ್ವಾಸ್‌ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ  ಸಭಾಂಗಣದಲ್ಲಿ ನಡೆದ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಷ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.ರಾಜ್ಯದಲ್ಲಿ ಶೇಕಡಾ 50ರಷ್ಟು ಮಕ್ಕಳು ಖಾಸಗಿ ವ್ಯವಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸರಕಾರಿ ಸಂಸ್ಥೆಗಳಿಗೆ ಹೋಲಿಸಿದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಫಲಿತಾಂಶ ಉತ್ತಮವಾಗಿದೆ. ಕಳೆದ ಬಾರಿಯ ಬೋರ್ಡ್ ಪರೀಕ್ಷೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು 75 ಶೇಕಡಾ ಫಲಿತಾಂಶ ದಾಖಲಿಸಿದರೆ,  ಅನುದಾನಿತ ಸಂಸ್ಥೆಗಳಲ್ಲಿ 79 ಶೇಕಡಾ ಫಲಿತಾಂಶ ಲಭಿಸಿದರೆ ಹಾಗೂ  ಖಾಸಗಿ ಸಂಸ್ಥೆಗಳು 90.46 ಶೇಕಡಾ ಫಲಿತಾಂಶ ನೀಡಿವೆ. ಇವುಗಳ ಜೊತೆಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲೂ ಖಾಸಗಿ ಸಂಸ್ಥೆಗಳು ಅಗ್ರಗಣ್ಯ ಸ್ಥಾನದಲ್ಲಿ ನಿಂತಿವೆ. ಇದು ರಾಜ್ಯದ ಒಟ್ಟು ಫಲಿತಾಂಶದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾವೆಲ್ಲರೂ ತಿನ್ನುತ್ತಿರುವ ಆಹಾರದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಎಷ್ಟು, ಏನು, ಯಾವಾಗ, ಮತ್ತು ಯಾವುದನ್ನು ತಿನ್ನಬೇಕು ಎಂಬುವುದು ಬಹಳ ಮುಖ್ಯ ಹಾಗೂ ನಮ್ಮ ಆರೋಗ್ಯದ ಸೂಚ್ಯಂಕಗಳೆಂದು ಭಂಡಾರ್‌ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ. ಹೆಚ್. ಪ್ರಭಾಕರ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಿಜ್ಞಾನ ಕ್ಲಬ್ ಮತ್ತು ಇಕೋ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ʼನಾವೇನನ್ನ ತಿನ್ನುತ್ತಿದ್ದೇವೆʼ ಎಂಬ ಶಿರ್ಷಿಕೆ ಅಡಿಯಲ್ಲಿ ಆಹಾರ ಮತ್ತು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಮಾತಾನಾಡುತ್ತಾ, ಅದರ ಬಯಸುವ ಆಹಾರಕ್ಕಿಂತ ಉದರ ಬಯಸುವ ಆಹಾರವನ್ನು ಹಿತಮಿತವಾಗಿ ಸೇವಿಸಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 2ನೇ ಸ್ಥಾನ ಹಾಗೂ ಹಿತಿಕ್ಷಾ16ನೇ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಗಳನ್ನುನ್ನು ಗುರುತಿಸಲಾಗಿದೆ. ಕೆ.ಐ.ಎ.ಡಿ.ಬಿ ಅವರು ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜನರಿಗೆ ಉದ್ಯೋಗ ದೊರಕಿಸಿಸುವಂತಾಗಬೇಕೆಂದರು. ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೇಲೆ ಗೌರವ ಹಾಗೂ ನಂಬಿಕೆ ಇಲ್ಲದ ಕಾರಣ ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಮೀಸಲನ್ನು ಟೀಕಿಸುತ್ತಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡಲೇ ಇಲ್ಲಾ ಅವರ ಮಾತನ್ನು ತಿರುಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಶಾಸಕ ಕೊಡ್ಗಿ ಅವರಿಗೆ ಸಂವಿಧಾನದ ಬಗ್ಗೆ ತಿಳುವಳಿಕೆ ಇಲ್ಲದೆ ಇದ್ದರೆ ತಿಳಿದುಕೊಳ್ಳಬಹುದು. ಅಂಬೇಡ್ಕರ್ ಸಂವಿಧಾನ ರಚನೆ ಮಾಡುವಾಗ ಕಾಲ ಕಾಲಕ್ಕೆ ತಕ್ಕಂತೆ ಅವಶ್ಯಕತೆಗೆ ಅನುಗುಣವಾಗಿ ಸಂವಿಧಾನ ತಿದ್ದುಪಡಿಗೆ ಅವಕಾಶವನ್ನು ನೀಡಿದ್ದಾರೆ ಹಾಗೂ ಹಲವು ಭಾರೀ ಸಂವಿಧಾನ ತಿದ್ದುಪಡಿಯಾಗಿದೆ. ಶಾಸಕರು ಭಾಷಣದಲ್ಲಿ ತುರ್ತುಪರಿಸ್ಥಿತಿಯ ಬಗ್ಗೆ ಹೇಳಿದರು ತುರ್ತುಪರಿಸ್ಥಿತಿ ಹೆರಲು ಕಾರಣ ಜನಸಂಘ ಹಾಗೂ ಸಂಘ ಪರಿವಾರದ ಅಂದಿನ ದೇಶ ವಿರೋಧಿ ನಿಲುವುಗಳೇ ಕಾರಣ ಅದಕ್ಕಾಗಿ ಮಾಜಿ ಪ್ರಧಾನಿ ಶ್ರೀಮತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾಸ್ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಆಶಿಕ್ ಎಸ್. ವಿ. ಅಮೇರಿಕಾದ  ‘ಓಪನ್ ಎಕ್ಯೂ ಸಂಸ್ಥೆ’  ಓಪನ್ ಏರ್ ಕ್ವಾಲಿಟಿ ಕಮ್ಯುನಿಟಿ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ.  ಅವರು ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾದ, ಪ್ರಸ್ತುತ ಬೆಂಗಳೂರಿನ ಪಂಜುರ್ಲಿ ಲ್ಯಾಬ್ನಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಯುಗುಣಮಟ್ಟ ಸುಧಾರಣೆ ಮಾಡುವ ನಿಟ್ಟಿನಲ್ಲಿ ಯುವಕರಿಗೆ ನಾಯಕತ್ವ ತರಬೇತಿ ನೀಡಲಾಗುತ್ತದೆ. ವಾಯು ಗುಣಮಟ್ಟದ ದತ್ತಾಂಶವನ್ನು ಬಳಸಿಕೊಂಡು ಶುದ್ಧಹವೆ ಮತ್ತು ವಾಯು ಅಸಮತೋಲನದ ವಿರುದ್ದ ಹೋರಾಟ ನಡೆಸಲು ಮತ್ತು ಸಬಲೀಕರಣಗೊಳಿಸಲು ಸಂಶೋಧನೆಗಳಿಗಾಗಿ ಓಪನ್ ಎಕ್ಯೂ ಒಂದು ವರ್ಷದ ತರಬೇತಿ ನೀಡಲಿದೆ. ಆಶಿಕ್ ಎಸ್. ವಿ. ಈ ಹಿಂದೆ ಪ್ರಜಾವಾಣಿ ಸಾಧಕರ ಪ್ರಶಸ್ತಿಗೆ ಭಾಜನರಾಗಿರುವುದನ್ನು ಸ್ಮರಿಸಬಹುದು. ಅವರಿಗೆ ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ದಿನೇ ದಿನೇ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ ನೋಡಿಕೊಳ್ಳಬೇಕು  ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆಯ ಪ್ರಸ್ತುತ ಮಾರ್ಚ್ ತಿಂಗಳಿನಲ್ಲಿಯೇ 39ಡಿಗ್ರಿ ಸೆಲ್ಸಿಯಶ್ ನಷ್ಟು ಉಷ್ಣಾಂಶವಿದೆ. ಮುಂಬರುವ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಉಷ್ಣಾಂಶವು ಮತ್ತಷ್ಟು ಹೆಚ್ಚುವ ಸಾಧ್ಯತೆಗಳು ಇವೆ. ಇದರಿಂದಾಗಿ ಹೀಟ್ ವೇವ್ ಸ್ಟೋಕ್‌ನಿಂದ ಮನುಷ್ಯನ ದೇಹದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಹೆಚ್ಚು ಹೆಚ್ಚು ನೀರು ಸೇವನೆ, ವಿಶ್ರಾಂತಿ ಸೇರಿದಂತೆ ಚಟುವಟಿಕೆಗಳ ಅವಧಿ ಬದಲಾವಣೆ ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು. ಪ್ರಸ್ತುತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಸಾಬೀತುಪಡಿಸಿದೆ. ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೇ ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ ಖಂಡನೀಯ ಎಂದು  ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಹೇಳಿಕೆಯ ವಿರುದ್ಧ ಆಯೋಜಿಸಲಾದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿಕೆ ಶಿವಕುಮಾರ್ ಮಾತನ್ನು ಖಂಡಿಸಿದರು.…

Read More