ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬ್ಯಾಂಕಿಂಗ್ ಮತ್ತು ಸೈಬರ್ ಕ್ರೈಮ್ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ಬ್ಯಾಂಕ್ನ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ನ ಕ್ಲಸ್ಟರ್ ಮುಖ್ಯಸ್ಥರಾದ ವಿಷ್ಣುಮೂರ್ತಿ ಉಪಾಧ್ಯಾಯ ಭಾಗವಹಿಸಿ, ಈ ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಅತ್ಯಂತ ಜಾಗೃತರಾಗಬೇಕು. ಇಲ್ಲದಿದ್ದಲ್ಲಿ ಗ್ರಾಹಕರು ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಒಂದಿಷ್ಟು ಜಾಗೃತೆ ವಹಿಸಿದಲ್ಲಿ ಆನ್ಲೈನ್ನಿಂದಾಗುವ ಮೋಸಗಳಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಮಾತಾನಾಡುತ್ತಾ, ಡಿಜಿಟಲ್ ಕ್ರಾಂತಿಗೊಂಡ ಈ ಯುಗದಲ್ಲಿ ಎಚ್ಚರವಿಲ್ಲದ ಒಂದು ಹೆಜ್ಜೆ ಆರ್ಥಿಕ ನಷ್ಟಕ್ಕೆ ದಾರಿಯಾಗುವುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಮಾಸೆಬೈಲು: ಹೆತ್ತವರ ಮನೆಯಲ್ಲಿಯ ಪರಿಶ್ರಮ ಹಾಗೂ ಶಿಕ್ಷಕರ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಉನ್ನತ ಸ್ಥಾನಕ್ಕೆ ಏರಿಸುತ್ತದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆತ್ತವರು ಭಾಗವಹಿಸಿ ಸಂಭ್ರಮಿಸಬೇಕು ಎಂದು ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಹೇಳಿದರು. ಅವರು ಇಲ್ಲಿನ ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲಿನಲ್ಲಿ ಕಿಂಡರ್ ಗಾರ್ಟನ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದ ಪದಪ್ರದಾನ ಅಧಿಕಾರಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ವಡ್ಡರ್ಸೆ ಪ್ರಕಾಶ್ ಆಚಾರ್ಯ ವಹಿಸಿ, ಮಕ್ಕಳ ಸಂತಸ ಪೋಷಕರಿಗೆ ಆನಂದ ಅದನ್ನು ಮಕ್ಕಳೊಂದಿಗೆ ಸಂಭ್ರಮಿಸಬೇಕು ಎಂದರು. ವೇದಿಕೆಯಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಶ್ರೀಕಾಂತ್ ಶೆಟ್ಟಿ ಜಡ್ಡಿನಗದ್ದೆ, ಜ್ಯೋತಿ ಪೂಜಾರಿ, ನಿಲ್ಸಕಲ್ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗಾಯತ್ರಿ ಅಡಿಗ ಕಾರ್ಯದರ್ಶಿ ಸುನೀತಾ ಕಾಮತ್, ಶಾಲಾ ಸಂಚಾಲಕರಾದ ಶಶಿಧರ್ ದೇವಾಡಿಗ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಧಿಕಾ ರಾವ್ ಮೇಡಂ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಅಮಿತಾ ಮೇಡಂ ಉಪಸ್ಥಿತರಿದ್ದರು. ಕಿಂಡರ್ ಗಾರ್ಟನ್ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶನಿವಾರ ನಡೆಯಿತು. ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ವಾಣಿಶ್ರೀ ಐತಾಳ್, ಬಿ.ಎ.ಎಮ್.ಎಸ್, ಎಂಡಿ. (ಆರ್ಯುವೇದ) ಅವರು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲೇ ಉತ್ತಮ ಸಂಸ್ಕಾರವನ್ನು ಕಲಿಸುವುದರೊಂದಿಗೆ, ಮಕ್ಕಳ ಆಹಾರದ ಬಗ್ಗೆ ಪೋಷಕರಿಗೆ ಉತ್ತಮ ಮಾಹಿತಿಯನ್ನು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಕೃಷ್ಣ ಕಾಮತ್ ಅವರು, ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು, ಪಿಯುಸಿ ಪ್ರಾಂಶುಪಾಲಯರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜ ಅವರು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿ’ಸೋಜರವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗ ಅವರು ಧನ್ಯವಾದ ಸಮರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಲೇಖನ.ಹಿಂದೂಗಳಿಗೆ ಯುಗಾದಿ ಎಂದರೆ ಹೊಸ ವರ್ಷದ ಆರಂಭ. ಕರ್ನಾಟಕದ ಬಹುಭಾಗದ ಜನರು ಮತ್ತು ಆಂಧ್ರ ಪ್ರದೇಶದವರು ಚಾಂದ್ರಮಾನ ಯುಗಾದಿಯನ್ನು ಆಚರಿಸುತ್ತಾರೆ. ಈ ವರ್ಷ ಯುಗಾದಿ ಹಬ್ಬ ಮಾ. 30ರಂದು ಆಚರಿಸಲಾಗುತ್ತದೆ. ಈ ಹಬ್ಬದಂದು ಏನು ಮಾಡಿದರೆ ಒಳ್ಳೆಯದು ಎಂದು ನಮ್ಮ ಹಿರಿಯರು ವಿವರಿಸುತ್ತಾರೆ ಓದಿ ಯುಗಾದಿಯಂದು ಮಾಡಬೇಕಾದ ಶುಭ ಕೆಲಸಗಳು:* ಯುಗಾದಿಯನ್ನು ಶುಭ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಹಿಂದಿನ ದಿನ ಮನೆಯನ್ನು ಸ್ವಚ್ಛಗೊಳಿಸಬೇಕು.* ಯುಗಾದಿಯಂದು ಬ್ರಾಹ್ಮಿ ಮುಹೂರ್ತದಲ್ಲಿ ಏಳಬೇಕು.* ಮನೆಯನ್ನು ಸ್ವಚ್ಛಗೊಳಿಸಿ ಮತ್ತು ದೈನಂದಿನ ಕೆಲಸಗಳನ್ನು ಪೂರ್ಣಗೊಳಿಸಿ. ನಿಮ್ಮ ಮನೆಯನ್ನು ಹೂವಿನಿಂದ ಜೊತೆಗೆ ಮಾವಿನ ಎಲೆಯ ತೋರಣದಿಂದ ಅಲಂಕರಿಸಿ.* ನೀವು ನಿಮ್ಮ ಕೂದಲಿಗೆ ಎಳ್ಳೆಣ್ಣೆಯನ್ನು ಹಚ್ಚಿ ನಂತರ ಸ್ನಾನದ ನೀರಿಗೆ ಒಂದು ಚಿಟಿಕೆ ಅರಿಶಿನವನ್ನು ಸೇರಿಸಿ ಸ್ನಾನ ಮಾಡಿ.* ಹೊಸ ಬಟ್ಟೆಗಳನ್ನು ಧರಿಸಬೇಕು. ನಿಮ್ಮ ಹಣೆಯ ಮೇಲೆ ಕುಂಕುಮ ಇರಲಿ.* ಶುದ್ಧ ಮನಸ್ಸಿನಿಂದ ದೇವರನ್ನು ಪೂಜಿಸಿ. ಯುಗಾದಿಯಂದು ಮಾಡಬಾರದ ಕೆಲಸಗಳಿವು:ಜಗಳವಾಡುವುದು, ಹಣಕಾಸಿನ ವ್ಯವಹಾರಗಳು, ಮಾಂಸಾಹಾರ ಮತ್ತು ಮದ್ಯಪಾನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಬಳ್ಕೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ. ಎಚ್. ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಹಾಗೂ ಹೈವೇ ಪಟ್ರೋಲ್ ಸಿಬ್ಬಂದಿ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಪೊಲೀಸ್ ನಿರೀಕ್ಷಕ ನಂಜಪ್ಪ ಗ್ರಾಮಾಂತರ ಠಾಣೆ ಪಿಎಸ್ಐ ನೂತನ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ರಂಗ ಚಟುವಟಿಕೆಯೇ ನನ್ನ ಬದುಕಿನ ಯಶಸ್ಸಿನ ಸೂತ್ರ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಅವರು ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ’ವಿಶ್ವರಂಗಭೂಮಿ ದಿನಾಚರಣೆ’ಅಂಗವಾಗಿ ಶುಕ್ರವಾರ ಹಮ್ಮಿಕೊಂಡ ’ರಂಗಗೀತೆ- ಉಪನ್ಯಾಸ- ಸನ್ಮಾನ- ನಾಟಕ’ ಕಾರ್ಯಕ್ರಮದಲ್ಲಿ ಮಾತನಾಡಿದರು. ʼಸಮಾಜ ಮತ್ತು ಬದುಕಿಗೆ ರಂಗಭೂಮಿ ಕೊಡುಗೆ ಅಪಾರ. ಪಠ್ಯಕ್ಕಿಂತ ರಂಗ ಚಟುವಟಿಕೆಗಳ ನೆನಪು ನನಗೆ ಇಂದಿಗೂ ಚಿರಸ್ಥಾಯಿಯಾಗಿದೆ.’’ಭೋಜ ಶೆಟ್ಟಿ ನಮ್ಮ ಸಮಕಾಲೀನರು. ರಂಗದಲ್ಲಿ ಅವರ ಒಡನಾಟವೇ ಸುಂದರ’ ಎಂದು ಶ್ಲಾಘಿಸಿದರು. ಲಂಕೇಶ್ ಬರೆದ ’ಪೋಲಿಸರಿದ್ದಾರೆ ಎಚ್ಚರಿಕೆ’ ನಾಟಕದ ’ರುದ್ರಮೂರ್ತಿ’ ಪಾತ್ರ ಸೇರಿದಂತೆ ತಾವು ನಿರ್ವಹಿಸಿದ ’ಗುಂಡ, ’ತುಘಲಕ್, ’ಬಯ್ಯಮಲ್ಲಿಗೆ’ ನಾಟಕದಲ್ಲಿ ತಾವು ನಿರ್ವಹಿಸಿದ ’ವಿದೂಷಕ’ ಪಾತ್ರ ಸೇರಿದಂತೆ ಎಲ್ಲ ಪಾತ್ರಗಳನ್ನು ತೃಪ್ತ ಭಾವದಿಂದ ಮೆಲುಕು ಹಾಕಿದರು. ವಿಠಲ್ ಮಾಸ್ಟರ್ ಮೂಲಕ ಭರತ ನಾಟ್ಯ ಕಲಿತು ದೇಶ- ವಿದೇಶಗಳಲ್ಲಿ ಪ್ರದರ್ಶನ ನೀಡಿರುವುದನ್ನು ನೆನಪಿಸಿಕೊಂಡರು. ’ಮೂಕಾನಭಿಯ, ಮ್ಯಾಜಿಕ್ ಕಲಿತ-…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟೊಯೊಟ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ಪ್ರಾಯೋಜಿತ 2025ರ ಸಾಲಿನ ರಾಜ್ಯ ಮಟ್ಟದ ಸುರಕ್ಷಾ ಮಾಸಾಚರಣೆ ಸ್ಪರ್ಧೆಯಲ್ಲಿ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆ ತಿಪಟೂರು ಪ್ರಥಮ ಸ್ಥಾನವನ್ನು ಹಾಗೂ ಬಿದ್ಕಲ್ಕಟ್ಟೆ ಐಟಿಐ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಬಿದ್ಕಲ್ಕಟ್ಟೆ ಕಾರ್ಯಕ್ರಮವನ್ನು ಕೋಟ ಆರಕ್ಷಕ ಠಾಣೆಯ ಸಹಭಾಗಿತ್ವದೊಂದಿಗೆ ಆಯೋಜಿಸಲಾಗಿತ್ತು. ತೃತೀಯ ಸ್ಥಾನವನ್ನು ಪೀಣ್ಯ ಐಟಿಐ ಪಡೆದಿದೆ. ರಾಜ್ಯದಾದ್ಯಂತ 60 ಐಟಿಐ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಆಚರಿಸಲ್ಪಡುವ ಡಾ. ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಆಚರಿಸಲ್ಪಡುವ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕುರಿತ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಚರಿಸಲಾಗುವುದು. ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಏಪ್ರೀಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಮಂಗಳೂರು ವಿ. ವಿ. ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಸಾಫ್ಟ್ ಬಾಲ್ ಪಂದ್ಯಾಟ ಸಂಪನ್ನಗೊಂಡಿತು. ಪುರುಷರ ವಿಭಾಗದಲ್ಲಿ ಸತತ ಮೂರು ವರ್ಷಗಳಿಂದ ಚಾಂಪಿಯನ್ನಾಗಿ ಮೂಡಿಬರುವ ಮೂಲಕ ಅತಿಥೇಯ ಡಾ| ಬಿ.ಬಿ. ಹೆಗ್ಡೆ ಕಾಲೇಜು ಹ್ಯಾಟ್ರಿಕ್ ಸಾಧನೆ ಮಾಡಿ, ಬಿ.ಎಂ.ಎಸ್. ಪರ್ಯಾಯ ರಜತ ಪಾರಿತೋಷಕವನ್ನು ಪಡೆಯಿತು. ಮೂಡುಬಿದರೆ ಶ್ರೀ ಮಹಾವೀರ ಕಾಲೇಜು ರನ್ನರ್ ಅಪ್ ಪ್ರಶಸ್ತಿ, ವಿ.ವಿ. ಕ್ಯಾಂಪಸ್ ತೃತೀಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಚತುರ್ಥ ಸ್ಥಾನ ಪಡೆಯಿತು. ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಡೇವಿಡ್ ಬೆಸ್ಟ್ ಪಿಚ್ಚರ್, ಮಹಾವೀರ ಕಾಲೇಜಿನ ಪ್ರಣೇಶ್ ಬೆಸ್ಟ್ ಪ್ಲೇಯರ್ ವೈಯಕ್ತಿಕ ಪ್ರಶಸ್ತಿ ಪಡೆದರು. ಮಹಿಳೆಯರ ವಿಭಾಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಪ್ರಥಮ, ಎಸ್.ಡಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ರಕ್ತದೊತ್ತಡ ಹಾಗೂ ದೇಹದಲ್ಲಿರುವ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಇತರ ರಕ್ತದಾನದ ಮಹತ್ವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕಾಧ್ಯಕ್ಷರಾದ ಎಸ್. ಜಯಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಯುವ ರೆಡ್ ಕ್ರಾಸ್ ಘಟಕದಿಂದ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರದಲ್ಲಿ ತಮ್ಮ ಆಶಯ ನುಡಿಯನ್ನು ವ್ಯಕ್ತಪಡಿಸಿದರು. ಶಿಬಿರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಮಾತನಾಡಿ, ಇಂದಿನ ಯುವ ಜನತೆ ರಕ್ತದಾನಗಳಂತಹ ಶ್ರೇಷ್ಠ ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿರುವುದು ತುಂಬಾ ಆಶಾದಾಯಕ ವಿಚಾರ ಹೀಗೆ ಬೇರೆ ಬೇರೆ ಚಟುವಟಿಕೆಗಳಲ್ಲಿ ಯುವಕರು ತಮ್ಮನ್ನು ತೊಡಗಿಸಿಕೊಳ್ಳವುದರಿಂದ ಉತ್ತಮ ಸಮಾಜ ನಿರ್ಮಾಣದಲ್ಲಿ ಖಂಡಿತವಾಗಿಯು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಭಾರತೀಯ ರೆಡ್ಕ್ರಾಸ್ ಕಾರ್ಯದರ್ಶಿ ಪುರಾಣಿಕ್, ಕುಂದಾಪುರ ಭಾರತೀಯ ರೆಡ್ಕ್ರಾಸ್…
