Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 2ನೇ ಸ್ಥಾನ ಹಾಗೂ ಹಿತಿಕ್ಷಾ16ನೇ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಗಳನ್ನುನ್ನು ಗುರುತಿಸಲಾಗಿದೆ. ಕೆ.ಐ.ಎ.ಡಿ.ಬಿ ಅವರು ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜನರಿಗೆ ಉದ್ಯೋಗ ದೊರಕಿಸಿಸುವಂತಾಗಬೇಕೆಂದರು. ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೇಲೆ ಗೌರವ ಹಾಗೂ ನಂಬಿಕೆ ಇಲ್ಲದ ಕಾರಣ ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಮೀಸಲನ್ನು ಟೀಕಿಸುತ್ತಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡಲೇ ಇಲ್ಲಾ ಅವರ ಮಾತನ್ನು ತಿರುಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಶಾಸಕ ಕೊಡ್ಗಿ ಅವರಿಗೆ ಸಂವಿಧಾನದ ಬಗ್ಗೆ ತಿಳುವಳಿಕೆ ಇಲ್ಲದೆ ಇದ್ದರೆ ತಿಳಿದುಕೊಳ್ಳಬಹುದು. ಅಂಬೇಡ್ಕರ್ ಸಂವಿಧಾನ ರಚನೆ ಮಾಡುವಾಗ ಕಾಲ ಕಾಲಕ್ಕೆ ತಕ್ಕಂತೆ ಅವಶ್ಯಕತೆಗೆ ಅನುಗುಣವಾಗಿ ಸಂವಿಧಾನ ತಿದ್ದುಪಡಿಗೆ ಅವಕಾಶವನ್ನು ನೀಡಿದ್ದಾರೆ ಹಾಗೂ ಹಲವು ಭಾರೀ ಸಂವಿಧಾನ ತಿದ್ದುಪಡಿಯಾಗಿದೆ. ಶಾಸಕರು ಭಾಷಣದಲ್ಲಿ ತುರ್ತುಪರಿಸ್ಥಿತಿಯ ಬಗ್ಗೆ ಹೇಳಿದರು ತುರ್ತುಪರಿಸ್ಥಿತಿ ಹೆರಲು ಕಾರಣ ಜನಸಂಘ ಹಾಗೂ ಸಂಘ ಪರಿವಾರದ ಅಂದಿನ ದೇಶ ವಿರೋಧಿ ನಿಲುವುಗಳೇ ಕಾರಣ ಅದಕ್ಕಾಗಿ ಮಾಜಿ ಪ್ರಧಾನಿ ಶ್ರೀಮತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾಸ್ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಆಶಿಕ್ ಎಸ್. ವಿ. ಅಮೇರಿಕಾದ  ‘ಓಪನ್ ಎಕ್ಯೂ ಸಂಸ್ಥೆ’  ಓಪನ್ ಏರ್ ಕ್ವಾಲಿಟಿ ಕಮ್ಯುನಿಟಿ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ.  ಅವರು ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾದ, ಪ್ರಸ್ತುತ ಬೆಂಗಳೂರಿನ ಪಂಜುರ್ಲಿ ಲ್ಯಾಬ್ನಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಯುಗುಣಮಟ್ಟ ಸುಧಾರಣೆ ಮಾಡುವ ನಿಟ್ಟಿನಲ್ಲಿ ಯುವಕರಿಗೆ ನಾಯಕತ್ವ ತರಬೇತಿ ನೀಡಲಾಗುತ್ತದೆ. ವಾಯು ಗುಣಮಟ್ಟದ ದತ್ತಾಂಶವನ್ನು ಬಳಸಿಕೊಂಡು ಶುದ್ಧಹವೆ ಮತ್ತು ವಾಯು ಅಸಮತೋಲನದ ವಿರುದ್ದ ಹೋರಾಟ ನಡೆಸಲು ಮತ್ತು ಸಬಲೀಕರಣಗೊಳಿಸಲು ಸಂಶೋಧನೆಗಳಿಗಾಗಿ ಓಪನ್ ಎಕ್ಯೂ ಒಂದು ವರ್ಷದ ತರಬೇತಿ ನೀಡಲಿದೆ. ಆಶಿಕ್ ಎಸ್. ವಿ. ಈ ಹಿಂದೆ ಪ್ರಜಾವಾಣಿ ಸಾಧಕರ ಪ್ರಶಸ್ತಿಗೆ ಭಾಜನರಾಗಿರುವುದನ್ನು ಸ್ಮರಿಸಬಹುದು. ಅವರಿಗೆ ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ದಿನೇ ದಿನೇ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ ನೋಡಿಕೊಳ್ಳಬೇಕು  ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆಯ ಪ್ರಸ್ತುತ ಮಾರ್ಚ್ ತಿಂಗಳಿನಲ್ಲಿಯೇ 39ಡಿಗ್ರಿ ಸೆಲ್ಸಿಯಶ್ ನಷ್ಟು ಉಷ್ಣಾಂಶವಿದೆ. ಮುಂಬರುವ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಉಷ್ಣಾಂಶವು ಮತ್ತಷ್ಟು ಹೆಚ್ಚುವ ಸಾಧ್ಯತೆಗಳು ಇವೆ. ಇದರಿಂದಾಗಿ ಹೀಟ್ ವೇವ್ ಸ್ಟೋಕ್‌ನಿಂದ ಮನುಷ್ಯನ ದೇಹದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಹೆಚ್ಚು ಹೆಚ್ಚು ನೀರು ಸೇವನೆ, ವಿಶ್ರಾಂತಿ ಸೇರಿದಂತೆ ಚಟುವಟಿಕೆಗಳ ಅವಧಿ ಬದಲಾವಣೆ ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು. ಪ್ರಸ್ತುತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಸಾಬೀತುಪಡಿಸಿದೆ. ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೇ ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ ಖಂಡನೀಯ ಎಂದು  ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಹೇಳಿಕೆಯ ವಿರುದ್ಧ ಆಯೋಜಿಸಲಾದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿಕೆ ಶಿವಕುಮಾರ್ ಮಾತನ್ನು ಖಂಡಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೈಲು ಹಳಿಯ ಬದಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.24ರಂದು ಸಂಜೆ ವೇಳೆ ಗಂಗೊಳ್ಳಿಯ ಕುಂದಬಾರಂದಾಡಿ ಗ್ರಾಮದ ಹೂವಿನ ಕಂಬಳಗದ್ದೆ ಎಂಬಲ್ಲಿ ನಡೆದಿದೆ. ತ್ರಾಸಿ ಗ್ರಾಮದ ಹೆರಿಯ(70) ಮೃತ ದುರ್ದೈವಿ. ಕೂಲಿ ಕೆಲಸವನ್ನು ಮುಗಿಸಿಕೊಂಡು ಮನೆಗೆ ವಾಪಾಸ್ಸು ರೈಲ್ವೇ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೆರಿಯ ಅವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ರೈಲು ಢಿಕ್ಕಿ ಹೊಡೆದು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಗೋಳ್ಳಿ ಅಂಬ್ಯುಲೆನ್ಸ್‌ ಚಾಲಕ ಮೊಹಮ್ಮದ್‌ ಇಬ್ರಾಹಿಂ ಅವರ ತಂಡ, ಪಿಎಸ್‌ಐ ಬಸವ ಕನಶೆಟ್ಟಿ ಹಾಗೂ ಸ್ಥಳೀಯರು ಸುಮಾರು ಒಂದೂವರೆ ಕಿ.ಮೀ ತನಕ ಕಾಲುದಾರಿಯಲ್ಲೇ ನಡೆದು ಅಂಬ್ಯುಲೆನ್ಸ್‌ ತನಕ ಮೃತದೇಹವನ್ನು ಸಾಗಿಸಿ ಅಲ್ಲಿಂದ ಕುಂದಾಪುರ ಶವಾಗಾರಕ್ಕೆ ಕೊಂಡೊಯ್ಯಲಾಯಿತು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಜ್ಞಾನವು ತಂತ್ರಜ್ಞಾನ ಅಭಿವೃದ್ಧಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ತಂತ್ರಜ್ಞಾನ ಪ್ರಗತಿಯ ಹಿಂದೆ ವಿಜ್ಞಾನಿಗಳ ಪರಿಶ್ರಮ ಮತ್ತು ನಾವೀನ್ಯತೆ ಅಡಕವಾಗಿದೆ. ಭವಿಷ್ಯದಲ್ಲಿ ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ ತಂತ್ರಜ್ಞಾನ ಮುಂತಾದ ಕ್ಷೇತ್ರಗಳು ನವ್ಯತೆಯ ಹೊಸ ಮಾರ್ಗಗಳನ್ನು ತೆರೆಯಲಿವೆ ಎಂದು ಮಣಿಪಾಲ್ ಇನ್‌ಸ್ಟಿಟ್ಯುಟ್ ಆಫ್ ಟೆಕ್ನಾಲಜಿ (ಎಂ.ಐ.ಟಿ.) ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗುರುಮೂರ್ತಿ ಎಸ್. ಸಿ. ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದ ಆವಿಷ್ಕಾರರಾಗಬೇಕೆಂದು ಪ್ರೇರೇಪಿಸಿದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ವಿಜ್ಞಾನ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಭಾವಿ ಸಂವಹನವೇ ಇಂದಿನ ಸವಾಲು ಮತ್ತು ಅವಶ್ಯಕತೆ. ಭಾರತವು ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಿಮ್ಮ ಕಲಿಕೆಯೇ ಅದರ ವೇಗವರ್ಧಕವಾಗಿದೆ. ಪರೀಕ್ಷೆಯೇ ಕಲಿಕೆಯ ಅಂತ್ಯವಲ್ಲ. ಬದುಕಿನಲ್ಲಿ ಪ್ರತಿನಿತ್ಯ ಕಲಿಕೆ ಅನಿವಾರ್ಯ ಎಂದು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವಾಸುದೇವ ಕಾಮತ್ ಹೇಳಿದರು. ಅವರು ಇಲ್ಲಿನ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕೃತಕಬುದ್ಧಿಮತ್ತೆ (ಎಐ) ಎಂಬುದು ಮಿಥ್ಯೆ ಅಲ್ಲ. ಔದ್ಯೋಗಿಕ ಬದುಕಿನ ಅನಿವಾರ್ಯತೆ. ನೀವು ಉದ್ಯಮಶೀಲತೆಯನ್ನು ಮೈಗೂಡಿಸಿಕೊಂಡು ಯಶಸ್ವಿ ಆಗಬಹುದು. ಕೋಟ್ಯಧಿಪತಿಗಳಾದ ಕರಾವಳಿ ಸಾಧಕರು ಇದ್ದಾರೆ. ನಿಮ್ಮ ಅಂತರಂಗವನ್ನು ಆಲಿಸಿ. ಹೃದಯದ ಮಾತು ಕೇಳಿ, ನಿಮಗೆ ಅತ್ಯುತ್ತಮ ಅವಕಾಶವನ್ನು ’ಆಳ್ವಾಸ್’ನೀಡಿದೆ. ನೀವು ಇತರರಿಗೂ ತಿಳಿಸಿ, ಇತರರ ಏಳ್ಗೆಗೆ ನೆರವಾಗಿ. ಮರಕಲ್ಲಿನ ಬೆಟ್ಟವನ್ನು ಮನಸ್ಸು ಕಟ್ಟುವ ಶೈಕ್ಷಣಿಕ ನೆಲೆಯಾಗಿ ಪರಿವರ್ತಿಸಿದ ಡಾ| ಮೋಹನ ಆಳ್ವ ಅವರ ಸಾಧನೆ…

Read More