ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮೆಡಿಕೋಸ್ ಸಂಸ್ಥೆಯ ಸಹಯೋಗದಲ್ಲಿ “ಹದಿಹರೆಯದ ಸಮಸ್ಯೆಗಳು ಮತ್ತು ಪರಿಹಾರಗಳು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಕೋಟೆಶ್ವರದ ಎನ್.ಆರ್.ಆಸ್ಪತ್ರೆಯ ಮನೋವೈದ್ಯರಾದ ಡಾ. ಮಹಿಮಾ ಆಚಾರ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಕುಂದಾಪುರದ ನ್ಯೂ ಮೆಡಿಕಲ್ ಆಸ್ಪತ್ರೆಯ ಕಣ್ಣು ತಜ್ಞ ಡಾ. ಶ್ರೀಕಾಂತ್ ಶೆಟ್ಟಿ, ರಾಷ್ಟ್ರೀಯ ಮೆಡಿಕೋಸ್ ಸಂಸ್ಥೆಯ ಸಂಯೋಜಕರಾದ ವಸಂತ ಉಡುಪ ಮತ್ತು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸರೋಜಾ ಎಮ್ ಸ್ವಾಗತಿಸಿದರು. ಉಪನ್ಯಾಸಕ ವಿದ್ಯಾಧರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತಂದೆ-ತಾಯಿ ನಮ್ಮ ಬದುಕಿನ ನಿಜವಾದ ಆದರ್ಶ. ತಮ್ಮ ಸಂತೋಷವನ್ನೆಲ್ಲ ತ್ಯಾಗ ಮಾಡಿ ಮಕ್ಕಳ ಭವಿಷ್ಯ ನಿರ್ಮಿಸಲು ಶ್ರಮಿಸುತ್ತಾರೆ. ಅವರ ಕಷ್ಟ ಅರಿತು, ಶಿಕ್ಷಕರ ಮಾರ್ಗದರ್ಶನವನ್ನು ಅನುಸರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಕರೆ ನೀಡಿದರು. ಅವರು ಗುರುವಾರ ಶಿವರಾಮ ಕಾರಂತ ವೇದಿಕೆಯಲ್ಲಿ ನಡೆದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾಸಂಘ, ಸಾಹಿತ್ಯ ಸಂಘ ಮತ್ತು ಮತದಾರರ ಸಾಕ್ಷರತಾ ಸಂಘಗಳ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಜೀವನದಲ್ಲಿ ಸಂತೋಷವು ಸಣ್ಣ ವಿಷಯಗಳಲ್ಲಿ ಅಡಗಿದೆ. ಆದರೆ ಆ ಸಂತೋಷವನ್ನು ಶ್ರಮ, ಶಿಸ್ತು ಮತ್ತು ಸಂಸ್ಕಾರಗಳಿಂದ ಕಂಡುಕೊಳ್ಳಿ. ಅಂಕಗಳು ನಿಮ್ಮ ಬುದ್ಧಿಮಟ್ಟ ತಿಳಿಸಿದರೆ, ಮೌಲ್ಯಗಳು ಮಾತ್ರ ನಿಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತವೆ ಎಂದರು. ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಸಂಪೂರ್ಣ ವ್ಯಕ್ತಿತ್ವ ಪಡೆಯಲು ಸಾಧ್ಯ. ಅದು ನಿಜವಾದ ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ ಪ್ರಕರಣದಲ್ಲಿ ನೀಡಿರುವ ನಿರ್ದೇಶನ ಅನ್ವಯ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ, ಕೋಚಿಂಗ್ ಕೇಂದ್ರ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಖಾತ್ರಿಪಡಿಸುವ ನೀತಿಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಮ ರಹಿತ ಶಿಕ್ಷಣ ನೀಡುವ ಕುರಿತು ಏಕರೂಪದ ಮಾನಸಿಕ ಆರೋಗ್ಯ ನೀತಿ’ ಯನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸಬೇಕಾಗಿರುತ್ತದೆ. ಈ ಹಿನ್ನಲೆ, ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಕೋಚಿಂಗ್ ಕೇಂದ್ರಗಳು The Karnataka Tutorial Institutions (Registration and Regulation) Rules, 2001 ರನ್ವಯ ಕಡ್ಡಾಯವಾಗಿ 30 ದಿನಗಳೊಳಗಾಗಿ ತಮ್ಮ ಕೋಚಿಂಗ್ ಕೇಂದ್ರಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಇವರಲ್ಲಿ ನೊಂದಣಿ ಮಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ನೊಂದಣಿ ಮಾಡಿಸದೇ ಇರುವಂತಹ ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಲು ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪದವಿ ಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾಮಿ ವಿವೇಕಾನಂದ ಚಿಂತನಶೀಲ ವಿಚಾರ ವೇದಿಕೆ ಸಾರಥ್ಯದ ವಿವೇಕ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀ ರಾಘವೇಂದ್ರ ಪ್ರಕಾಶನ ಸಹಯೋಗದಲ್ಲಿ ವಿವೇಕ ಚೇತನ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ಗುರುಶ್ರೀ ರಾಜ್ಯ ಪ್ರಶಸ್ತಿಗೆ ಬೈಂದೂರು ಶೈಕ್ಷಣಿಕ ವಲಯದ ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ರೆ ಗ್ರಾಮದ ಹರವರಿಯಲ್ಲಿ ಸರ್ವೋತ್ತಮ ಜೋಗಿ ಹಾಗೂ ಪಾರ್ವತಿ ಜೋಗಿ ಯವರ ಸುಪುತ್ರನಾಗಿ ಜನಿಸಿರುವ ವೀರೇಂದ್ರ ಜೋಗಿ ಅವರು ಪ್ರಸ್ತುತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಬೈಂದೂರು ವಲಯ ಇಲ್ಲಿ ಕಳೆದ 12 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿ.ಎ.ಸಿ.ಪಿ.ಎಡ್ ಪದವೀಧರರಾಗಿರುವ ಇವರು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುತ್ತಾರೆ. ದಿನಾಂಕ 01-09-2007 ರಂದು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗಂಡಿಬಾಗಿಲು, ಪುತ್ತೂರು ತಾಲೂಕು ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯವಲಯ ಯೋಜನೆಯಡಿ ನೋಂದಣಿಯಾದ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿದ ಹಳೆಯ ಇಂಜಿನ್‌ಗಳನ್ನು ನಿಷ್ಕ್ರೀಯಗೊಳಿಸಿ, ಹೊಸ ಇಂಜಿನ್ ಖರೀದಿಸಲು ಮತ್ತು ಹೊಸದಾಗಿ ಮೋಟರೀಕೃತ ನಾಡದೋಣಿ ನಿರ್ಮಿಸುವವರಿಗೆ ಇಂಜಿನ್ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2530444, 2954444, ಸಹಾಯವಾಣಿ ಸಂಖ್ಯೆ: 8277200300 ಅಥವಾ ಉಡುಪಿ, ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್, ಆ.30 ಮತ್ತು 31, ರಂದು ದಕ್ಷಿಣ ಭಾರತ ಕರಾಟೆ ಫೆಡರೇಶನ್ ಅವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ನಾಲ್ಕನೇ ದಕ್ಷಿಣ ಭಾರತ ವಲಯ ಕರಾಟೆ ಚಾಂಪಿಯನ್‌ಶಿಪ್ 2025ರ ಕುಮಿಟೆ 67 ಕೆಜಿ, 21 ವರ್ಷದೊಳಗಿನ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭ ಶುಭ ಹಾರೈಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, ಕರಾವಳಿಯಲ್ಲಿ ಸ್ಥಾಪಿತ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರನ್ನು ಗೌರವಿಸಲಾಯಿತು.“ಮಲ್ನಾಡ್ ಐಕಾನ್” ಎಂದೇ ಗುರುತಿಸಿಕೊಂಡಿರುವ ಅಶ್ವತ್ ಎಸ್.ಎಲ್. ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆ ಇಂದು ಕೇವಲ ಕರ್ನಾಟಕದಲ್ಲೇ ಅಲ್ಲ, ದೇಶದ ಅನೇಕ ಭಾಗಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸಿ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನೈತಿಕ ಮೌಲ್ಯಗಳು ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಅವರ ಪಾತ್ರ ಅಪಾರ. ಗ್ರಾಮೀಣ ಪ್ರದೇಶದಲ್ಲಿದ್ದರೂ ಅಂತರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಒದಗಿಸುವ ದೃಷ್ಟಿಕೋನ ಅವರನ್ನು ಇತರರಿಂದ ವಿಭಿನ್ನರನ್ನಾಗಿಸಿದೆ. ಈ ಶ್ರೇಷ್ಠ ಸೇವೆಯನ್ನೇ ಶ್ಲಾಘಿಸಿ ಒಕ್ಕಲಿಗ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಲಾಯಿತುಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ಸಾಧನೆಗೆ ಮಲೆನಾಡಿನ ಪರಿಸರ ಮತ್ತು ಜನರ ಪ್ರೇರಣೆಯೇ ಕಾರಣ. ಮುಂದಿನ ದಿನಗಳಲ್ಲಿ ಈ ಭಾಗದಲ್ಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 1.05 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2.14 ಲಕ್ಷ ಸೇರಿದಂತೆ ಒಟ್ಟು ಸುಮಾರು 3.19 ಲಕ್ಷ ಕುಟುಂಬಗಳಿದ್ದು, ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿಕೊಂಡ ಗಣೇಶೋತ್ಸವ ಈ ದೇಶದ ಐಕ್ಯತೆ ಸಂಕೇತವಾಗಿ ಧಾರ್ಮಿಕ ಪರಂಪರೆಯೊಂದಿಗೆ ವಿಶ್ವಪ್ರಸಿದ್ಧಿಯಾಗಿದೆ ಎಂದು ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಹೇಳಿದರು. ಅವರು ಕೋಟದ ಅಮೃತೇಶ್ವರೀ ದೇಗುಲದಲ್ಲಿ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯರು ಕಟ್ಟಿಕೊಟ್ಟು ಈ ಹಬ್ಬ ಹರಿದಿನಗಳು ನಮ್ಮನ್ನು ಶ್ರೀಮಂತಗೊಳಿಸಿದೆ, ನಮ್ಮಲ್ಲಿರುವ ಸಾಂಸ್ಕೃತಿಕ ಪರಂಪರೆ, ಭಗವದ್ಗೀತೆಯಂತಹ ಕೃತಿಗಳು ವಿಶ್ವಸಂದೇಶಕ್ಕೆ ಸಾಕ್ಷಿಯಾಗಿದೆ. ಭಾರತವನ್ನು ಬಗ್ಗು ಬಡಿಯುವ ತಂತ್ರ ಹುನ್ನಾರ ಎಸೆಗಿದ ಅಮೇರಿಕಾದಂತ ದೈತ್ಯ ದೇಶಗಳಿಗೆ ಗುದ್ದು ನೀಡುವ ಮಟ್ಟಕ್ಕೆ ಈ ಭಾರತ ಎದ್ದು ನಿಂತಿದೆ ಎಂದರು. ಸಭೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಐವತ್ತು ಜನ ಸ್ಥಳೀಯ ಸಾಧಕರಿಗೆ ಸುವರ್ಣ ಸಂಭ್ರಮದ ಸನ್ಮಾನ ನೀಡಿ ಗೌರವಿಸಲಾಯಿತು. ಕೋಟ ದೊಡ್ಡ ಗಣೇಶನಿಗೆ ಬೆಳ್ಳಿ, ಚಿನ್ನದ ಆಭರಣಗಳ ಪರಿಕರ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಸುವರ್ಣ ಸಂಭ್ರಮದ ಸಾರ್ಥಕ ಶ್ರಮಜೀವಿಗಳಿಗೆ ಅಭಿನಂದಿಸಲಾಯಿತು. ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
