ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜು ವಿದ್ಯಾಭ್ಯಾಸವನ್ನು ಮುಗಿಸಿ ವೃತ್ತಿ ಜೀವನಕ್ಕೆ ಕಾಲಿಡುವ ಪ್ರತಿ ವಿದ್ಯಾರ್ಥಿಯೂ ಸಂದರ್ಶನವನ್ನು ಎದುರಿಸುವ ಕಲೆಯನ್ನು ಕರಗತ ಪಡಿಸಿಕೊಂಡಿರಬೇಕು. ಪ್ರತಿ ನಿರ್ಧಾರವನ್ನು ಜಾಗರೂಕತೆಯಿಂದ ತೆಗೆದುಕೊಳ್ಳುವ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸುಲಭ ಸಾಧ್ಯ ಎಂದು ಬನ್ನಡ್ಕ ಎಸ್ ಕೆಎಫ್ ಎಲಿಕ್ಸರ್ ಪ್ರೈವೇಟ್ ಲಿಮಿಟೆಡ್ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ವಿವೇಕ್ ವಲ್ಲಭ್ ನುಡಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ “ಸಮಾಜಕಾರ್ಯ ಫೋರಮ್ನ’ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವೃತ್ತಿ ಬದುಕಿಗೆ ಕಾಲಿಡುವಾಗ ವೃತ್ತಿಪರತೆಯನ್ನು ರೂಡಿಸಿಕೊಳ್ಳುವುದರೊಂದಿಗೆ ಹೊಸ ಉದ್ಯಮಕ್ಕಿಂತ ಸ್ಥಾಪಿತ ಕಂಪನಿಗೆ ಸೇರುವುದು ಉತ್ತಮ. ಪ್ರತಿ ಹಂತದಲ್ಲೂ ಅಲ್ಲಿ ಸಿಗುವ ವೃತ್ತಿಯ ಅನುಭವ ಮತ್ತಷ್ಟು ವೈಯಕ್ತಿಕ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸಮಾಜಕಾರ್ಯ ಎನ್ನುವುದು ಎಂದಿಗೂ ಸಮುದಾಯವನ್ನು ಕಟ್ಟುವ ಮತ್ತು ಅಭಿವೃದ್ಧಿ ಪೋಷಿಸುವ ಕಾರ್ಯದಲ್ಲಿ ತನ್ನೊಂದಿಗೆ ತನ್ನವರನ್ನು ಬೆಳೆಸುವ ಕ್ಷೇತ್ರ. ಹಾಗಾಗಿ ಎಂತಹ ಪರಿಸ್ಥಿಯಲ್ಲಿಯೂ ಮನುಷತ್ವವನ್ನು ಮರೆತು ವರ್ತಿಸದಿರಿ. ನಿಮ್ಮ ಸುತ್ತಮುತ್ತಲಿನ ಸಮುದಾಯದ ಒಳಿತಿಗೆ ಸದಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಫಾರ್ಮಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಎನ್.ವಿಶ್ವನಾಥ ನಾಯಕ್ ಅವರನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಬೀಳ್ಕೊಡಲಾಯಿತು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅಮಿತಾ ಅವರು ವಿಶ್ವನಾಥ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಆಸ್ಪತ್ರೆಯ ಸಿಎಚ್ಒ ಗಳಾದ ನಯನಾ ತಾಂಡೇಲ, ರಕ್ಷಿತಾ, ಹರಿಣಾಕ್ಷಿ ಮತ್ತು ನಯನಾ, ಶುಶ್ರೂಷಕಿಯರಾದ ಶೋಭಾ ಕೆ., ಸುಜಾತಾ ಎನ್., ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಅರ್ಜಿ ನಮೂನೆ 94 ಸಿ ಮತ್ತು 94 ಸಿ ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಸಾವಿರಾರು ಅರ್ಜಿಗಳು ತಿರಸ್ಕಾರವಾಗಲು ಶಾಸಕರ ವೈಫಲ್ಯ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಕುಂದಾಪುರದ ಶಾಸಕರು ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ನಮೂನೆ 94 ಸಿ ಮತ್ತು 94 ಸಿ ಸಿ ಅಡಿ ಕೆಲವೊಂದು ಅರ್ಜಿದಾರರಿಗೆ ಹಕ್ಕುಪತ್ರ ನೀಡಿ ಅದನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ನೀಡುತ್ತಿದ್ದು, ಅಧಿಕೃತ ಮಾಹಿತಿಯಂತೆ ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಂದಾಪುರ ತಾಲ್ಲೂಕಿನಲ್ಲಿ 7128 ಅರ್ಜಿ, ಬ್ರಹ್ಮಾವರ ತಾಲ್ಲೂಕಿನಲ್ಲಿ 4365 ಅರ್ಜಿ ಹಾಗೂ ಹೆಬ್ರಿ ತಾಲ್ಲೂಕಿನಲ್ಲಿ 2257 ಅರ್ಜಿ ತಿರಸ್ಕಾರಗೊಂಡಿವೆ. ಈ ತಿರಸ್ಕಾರ ಅಧಿಕಾರಿಗಳ ಬೇಜವಾಬ್ದಾರಿ ತನ ಹಾಗೂ ಭೂ ರಹಿತರ ಬಗೆಗಿನ ತಾತ್ಸಾರ ಹಾಗೂ ಲಂಚದ ಬೇಡಿಕೆಗೆ ಆರ್ಥಿಕವಾಗಿ ಸಮರ್ಥನಲ್ಲದ ಅರ್ಜಿದಾರ ಸ್ಪಂದಿಸದ ಕಾರಣ ಅರ್ಜಿಗಳನ್ನು ತಿರಸ್ಕಾರ ಮಾಡಲಾಗಿದೆ. ಅರ್ಜಿದಾರರ ಪರವಾಗಿ ನಿಂತು ಅಧಿಕಾರಿಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಕೋಟ ಗ್ರಾ.ಪಂ ವ್ಯಾಪ್ತಿಯ ಮಣೂರು ಪಡುಕರೆ ಕಡಲ ಕಿನಾರ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಸಮಸ್ಯೆ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸುವ ಕುರಿತು ಕೋಟ ಗ್ರಾಮಪಂಚಾಯತ್ ಪ್ರತಿನಿಧಿಗಳೊಂದಿಗೆ ಹಾಗೂ ಸ್ಥಳೀಯ ಉದ್ಯಮಿ ಆನಂದ್ ಸಿ. ಕುಂದರ್ ರವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಮೀನುಗಾರಿಕಾ ಇಲಾಖೆ ಪ್ರವಾಸೋದ್ಯಮ ಇಲಾಖಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.ಕಳೆದ ಸಾಕಷ್ಟು ವರ್ಷಗಳಿಂದ ಈ ಭಾಗ ಪ್ರವಾಸಿಗರ ಕೇಂದ್ರವಾಗಿ ರೂಪುಗೊಳ್ಳುತ್ತಿದ್ದು ಇದನ್ನು ಅಭಿವೃದ್ಧಿ ಪಡಿಸುವ ಕುರಿತಂತೆ ಆನಂದ್ ಸಿಕುಂದರ್ ಸಂಸದರ ಬಳಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಅಜಿತ್ ದೇವಾಡಿಗ, ಚಂದ್ರ ಪೂಜಾರಿ, ಸಂಸದ ಆಪ್ತಸಹಾಯಕರಾದ ಹರೀಷ್ ಕುಮಾರ್ ಶೆಟ್ಟಿ, ಸಂಬಂಧಿಸಿದ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಕಾಡಿಯಲ್ಲಿ ಗುರುವಾರ ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣದ ಆರೋಪಿ ಮಗ ಮೆಲ್ವಿನ್ ಮೊಂತೇರೊ(38)ನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಆರೋಪಿ ತನ್ನ ತಾಯಿಯನ್ನು ಕೊಲೆ ಮಾಡಿದ ಬಳಿಕ ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದನು. ಈ ಕುರಿತ ಮಾಹಿತಿ ಪೊಲೀಸರಿಗೆ ದೊರೆತಿದ್ದು ನಂತರ ಆತ ಬಸ್ ಮೂಲಕ ಉಡುಪಿ-ಕುಂದಾಪುರ ಮಾರ್ಗವಾಗಿ ಕೊಲ್ಲೂರಿನತ್ತ ಸಾಗುತ್ತಿರುವುದು ತಾಂತ್ರಿಕ ಮಾಹಿತಿಗಳಿಂದ ಲಭಿಸಿತ್ತು. ಅಂತೆಯೇ ಕಾಸರ ಗೋಡು ಪೊಲೀಸರು ಉಡುಪಿ ಎಸ್ಪಿ ಹರಿರಾಂ ಶಂಕರ್ ಅವರಿಗೆ ಮಾಹಿತಿ ನೀಡಿದ್ದರು. ಮಂಜೇಶ್ವರ ಪೊಲೀಸರ ಒಂದು ತಂಡ – ಮೋಪಿಯನ್ನು ಬೆನ್ನತ್ತಿ ಬಂದಿತ್ತು. ಕುಂದಾಪುರಕ್ಕೆ ಬಂದಿಳಿದಿದ್ದ ಆರೋಪಿ ಅಲ್ಲಿಂದ ಕೊಲ್ಲೂರಿಗೆ ತೆರಳುವ ಖಾಸಗಿ ಬಸ್ ಏರಿದ್ದನು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತು. ಆ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸರು ಅಲರ್ಟ್ ಆಗಿದ್ದರು. ಆತ ದಾರಿ ಮಧ್ಯೆ ಇಳಿದು ಬೈಂದೂರಿನತ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದರೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ಲಭಿಸುವಂತೆ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯವಿರುವ ಮಾಹಿತಿಗಳನ್ನೊಳಗೊಂಡಂತೆ ಎಲ್ಲಾ ರೀತಿಯ ಮೂಲ ಸೌಕರ್ಯಗಳುಳ್ಳ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ನೀಡಿದ್ದಲ್ಲಿ ಹೆಚ್ಚು ಕೈಗಾರಿಕೆಗಳು ಆರಂಭಗೊಂಡು ಜಿಲ್ಲೆಯ ಜನತೆಗೆ ಉದ್ಯೋಗಾವಕಾಶಗಳು ಲಭಿಸುತ್ತವೆ. ಇದಕ್ಕೆ ಒತ್ತು ನೀಡಬೇಕೆಂದರು. ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರವು ಇತ್ತೀಚಿಗೆ ನಡೆಯಿತು. ಅಂತಾರಾಷ್ಟ್ರೀಯ ಮಟ್ಟದ ತರಬೇತುದಾರರಾದ ಮೈಸೂರಿನ ಸತೀಶ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ಮಾರ್ಗಗಳು ಮತ್ತು ಜೀವನ ಕೌಶಲ್ಯಗಳ ಕುರಿತಾದ ವಿಚಾರಗಳ ಬಗ್ಗೆ ಉಪಯುಕ್ತ ತರಬೇತಿ ನೀಡಿದರು. ಶಾಲೆಯ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ತರಬೇತುದಾರರಾದ ಸತೀಶ್ ಅವರ ಕೊಡುಗೆ ಬಹುಮೂಲ್ಯವಾದುದು. ವರ್ಷಪೂರ್ತಿ ಅಧ್ಯಯನದಲ್ಲಿ ತೊಡಗುವಂತೆ ಮಾಡಲು, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಮಾರ್ಗದರ್ಶನದಲ್ಲಿ ಶಾಲಾರಂಭದಲ್ಲಿಯೇ ಈ ಕಾರ್ಯಾಗಾರವನ್ನು ನಡೆಸಲಾಯಿತು. ಅಧ್ಯಯನದ ತಂತ್ರಗಳು, ಏಕಾಗ್ರತೆಯನ್ನು ಹೊಂದುವ ಮಾರ್ಗಗಳು, ಓದುವಿಕೆಯ ವೇಗವನ್ನು ಹೆಚ್ಚಿಸಿಕೊಳ್ಳುವ ಕೌಶಲ್ಯಗಳು, ಅತ್ಯುತ್ತಮ ಆಹಾರ ಪದ್ಧತಿಗಳು, ಜೀವನ ಕೌಶಲ್ಯಗಳು, ಸ್ವಪ್ರೇರಣೆಯ ತಂತ್ರಗಳು, ಸ್ಮರಣಶಕ್ತಿಯನ್ನು ಹೆಚ್ಚಿಸುವ ತಂತ್ರೋಪಾಯಗಳು, ಸುಲಭ ಲೆಕ್ಕಾಚಾರದ ಮಾರ್ಗೋಪಾಯಗಳು ಇತ್ಯಾದಿ ವಿಚಾರಗಳ ಕುರಿತಂತೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು. ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್.,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ಕ್ನಲ್ಲಿ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಆಯೋಜಿಸಿದರು. ಸಹಶಿಕ್ಷಕಿ ಆಶಾಲತಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಉದ್ದೇಶದ ಬಗ್ಗೆ ತಿಳಿ ಹೇಳುತ್ತಾ, ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯಯುತ ಜೀವನವನ್ನು ತಮ್ಮದಾಗಿಸಿಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಹಾಗೂ ಕಂಬದಕೋಣೆ ಶಾಖೆಗೆ ಒಡಿಸ್ಸಾ ಅಂಗುಲ್ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ 22 ಮಂದಿ ಸಿಇಓ ಹಾಗೂ ಅಧ್ಯಕ್ಷ – ನಿರ್ದೇಶಕರುಗಳ ಅಧ್ಯಯನ ತಂಡ ಬುಧವಾರ ಭೇಟಿ ನೀಡಿತು. ಸಂಘದ ವ್ಯವಹಾರ ಚಟುವಟಿಕೆಗಳ ವೈವಿದ್ಯೀಕರಣ, ಕ್ರೆಡಿಟ್ ಮಾನಿಟರಿಂಗ್, ಕೃಷಿ ಸಾಲ, ಬಡ್ಡಿದರ, ವಹಿವಾಟು, ಸದಸ್ಯರ ಒಳಗೊಳ್ಳುವಿಕೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸೊಸೈಟಿಯ ಕಾರ್ಯವೈಖರಿಯನ್ನು ಶ್ಲಾಘಿಸಿ ಮುಂದಿನ ಯೋಜನೆಗಳ ಮಾಹಿತಿ ಪಡೆದುಕೊಂಡರು. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಒಂದು ಸಾವಿರ ಕೋಟಿ ವಹಿವಾಟು ಇರುವ ನಮ್ಮ ಸಂಘವು ನಾಲ್ಕು ಗ್ರಾಮಗಳ ಸದಸ್ಯರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಾ ಬಂದಿದೆ. ಆರ್ಥಿಕ ವಹಿವಾಟಿನ ಜೊತೆಗೆ ರೈತರಿಗೆ ಬಲ ತುಂಬುವ ನಿಟ್ಟಿನಲ್ಲಿ ಮಾಹಿತಿ ಕಾರ್ಯಗಾರ, ಪ್ರಾತ್ಯಕ್ಷಿಕೆ, ಕೃಷಿ ಪೂರಕ ಉತ್ಪನ್ನಗಳು ಹಾಗೂ ಸಲಕರಣೆಗಳ ಒದಗಿಸುವಿಕೆಗೆ ಆದ್ಯತೆ ನೀಡಲಾಗುತ್ತಿದೆ. ಸಂಘದ ಮಹಾತ್ವಕಾಂಕ್ಷಿಯ ಯೋಜನೆಯಾದ ರೈತ ಸಿರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು : ಉಪ್ಪುಂದ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ, ಸೋಲಾರ್ ಸಿಸ್ಟಮ್ ಸಂಪೂರ್ಣ ಹವಾ ನಿಯಂತ್ರಣ ಹಾಗೂ ಗಣಕೀಕೃತ ಸೌಲೌಭ್ಯದೊಂದಿಗೆ ಸಿದ್ಧಾಪುರ ಶಾಖೆ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ತ್ರಿಶಕ್ತಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಎಸ್. ಸಚ್ಚಿದಾನಂದ ಅವರು ಚಾತ್ರ ಸಿದ್ದಾಪುರ ಶಾಖೆ ಉದ್ಘಾಟಿಸಿ ಮಾತನಾಡಿ, ಶ್ರಮಹಿಸಿ ದುಡಿದಾಗ ಜೀವನದಲ್ಲಿ ಯಶಸ್ಸು ಸಿಗುತ್ತದೆ ಎನ್ನುವುದಕ್ಕೆ ಗೋವಿಂದ ಬಾಬು ಪೂಜಾರಿ ಸಾಕ್ಷಿಯಾಗಿದ್ದಾರೆ. ಅವರು ಅನೇಕ ಉದ್ಯಮದಲ್ಲಿ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕೂಡ ಒಂದಾಗಿದೆ. ಗೋವಿಂದ ಬಾಬು ಪೂಜಾರಿ ಅವರು ಅನೇಕ ದಾನ ಧರ್ಮಗಳನ್ನು ಮಾಡಿದ್ದಾರೆ. ಅವರ ಇನ್ನಷ್ಟು ದಾನ ಧರ್ಮಗಳು ಸಮಾಜದ ಒಳ್ಳೆಯವರಿಗೆ ಸಿಗುವಂತಾಗಲಿ ಎಂದು ಹೇಳಿದರು. ಈ ವೇಳೆ ತ್ರಿಶಕ್ತಿ ಕಟ್ಟಡದ ಮಾಲೀಕ ನಾರಾಯಣ ಶೆಟ್ಟಿ ಅವರನ್ನು ಸನ್ಮಾಸಿ, ಗೌರವಿಸಲಾಯಿತು. ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋವಿಂದ ಬಾಬು…
