Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ಕಾಲೇಜಿನ 1976ರ ಬ್ಯಾಚ್ ವಿದ್ಯಾರ್ಥಿಗಳ  ಪುನರ್ಮಿಲನ “ಬಂಗಾರದ ಭೇಟಿ” ಕಾರ್ಯಕ್ರಮ ನಡೆಯಿತು. 1976ನೇ ಸಾಲಿನಲ್ಲಿ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದು ಮುಗಿಸಿದ ಈ ವಿದ್ಯಾರ್ಥಿಗಳು 50ನೇ ವರ್ಷದ ನೆನಪಿಗಾಗಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕರುಗಳಾದ ಎ.ಪಿ.ಮಿತ್ತಂತ್ತಾಯ, ಬಾಲಕೃಷ್ಣ ಭಟ್, ಮನೋಹರ ಪೈ ಮತ್ತು ಶರ್ಮಾ ಅವರು ಉದ್ಘಾಟಿಸಿದರು. ನಿವೃತ್ತ ಪ್ರಾಧ್ಯಾಪಕರಾದ ಎ.ಪಿ.ಮಿತ್ತಂತ್ತಾಯ, ಬಾಲಕೃಷ್ಣ ಭಟ್ ದಿನ ವಿದ್ಯಾರ್ಥಿಗಳು ಮತ್ತು ಗುರುಗಳ ಬಾಂಧವ್ಯವನ್ನು ಕುರಿತು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ವಹಿಸಿದ್ದರು. ಕರ್ನಾಟಕ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕ ಗಿರಿಧರ್ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. 1976ರ ಬ್ಯಾಚ್ ವಿದ್ಯಾರ್ಥಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿವೃತ್ತ ಛೇರ್ಮನ್ ಕೆ.ಆರ್. ಕಾಮತ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ 53 ವಿದ್ಯಾರ್ಥಿಗಳು ಸಮ್ಮಿಲನದಲ್ಲಿ ಮನೋರಂಜನೆ ಹಳೆಯ ನೆನಪುಗಳನ್ನು ಮೆಲುಕುವಿಕೆ ಪರಸ್ಪರರ ಪರಿಚಯ ನಡೆಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜನಸಂಖ್ಯಾ ಬಹಳವಿರುವ ನಮ್ಮ ದೇಶದಲ್ಲಿ ಯುವಶಕ್ತಿ ಹೇರಳವಾಗಿದ್ದು ಅದನ್ನು ದೇಶದ ಉತ್ಪಾದಕ ಶಕ್ತಿಯನ್ನಾಗಿ ಪರಿವರ್ತಿಸುವ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರ ತನ್ನ ಪಂಚ ಗ್ಯಾರಂಟಿ ಕಾರ್ಯಕ್ರಮಗಳಲ್ಲಿ ಯುವನಿಧಿ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ಲತಾ ನುಡಿದರು. ಅವರು ಇತ್ತೀಚಿಗೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟಪಡುಕರೆ ಮತ್ತು ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಕಾರ್ಯಾಗಾರದಲ್ಲಿ ಮಾತನಾಡಿದರು. ಈ ಯುವ ನಿಧಿ ಯೋಜನೆಯ ನೋಂದಣಿ ಮಾಡಿಕೊಂಡು ಯುವಕರಿಗೆ ಕೌಶಲ್ಯ ತರಬೇತಿ ನೀಡುವುದರೊಂದಿಗೆ, ಅವರಿಗೆ ನಿರುದ್ಯೋಗಿಗಳಾಗಿರುವ ಅವಧಿಗೆ ಯುವನಿಧಿ ಪ್ರೋತ್ಸಾಹ ಧನ ನೀಡಿ, ಮುಂದೆ ಉದ್ಯೋಗ ಪಡೆಯಲು ಸಹಕರಿಸುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಅದರ ಕುರಿತು ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಆಚಾರ್ ಅವರು ವಿದ್ಯಾರ್ಥಿಗಳಿಗೆ ಆಧುನಿಕ ಜಗತ್ತಿನ ಸ್ಪರ್ಧೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕ- ರಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಉಡುಪಿ ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಮೊಬೈಲ್ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ, ಪೋಷಕರು ಮಕ್ಕಳಲ್ಲಿ ಪರೀಕ್ಷೆಯ ಕುರಿತು ಭಯ ಹುಟ್ಟಿಸುವ ಬದಲು ಅವರಲ್ಲಿ ಓದುವ ಪ್ರೀತಿ ಹುಟ್ಟಿಸಬೇಕು. ಪೋಷಕರು ಮಕ್ಕಳಿಗೆ ಮನೆಯಲ್ಲಿ ಓದುವುದಕ್ಕೆ ಉತ್ತಮ ವಾತಾವರಣವನ್ನು ಸೃಷ್ಠಿಸಬೇಕು ಎಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಹಿರಿಯ ಪ್ರಾಥಮಿಕ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಿಜ ಜೀವನದ ದುಮ್ಮಾನಗಳನ್ನು ಬಿಂಬಿಸುವ ನಾಟಕಗಳು ಬದುಕಿನ ಅರಿವು ಮೂಡಿಸುತ್ತವೆ. ಇಂದಿನ ಮಕ್ಕಳಿಗೆ ಬಾಲ್ಯದಿಂದಲೇ ರಂಗಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ರೋಟರಿ ಜಿಲ್ಲಾ ಸಹಾಯಕ ಗವರ್ನರ ಐ. ನಾರಾಯಣ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆದ ಲಾವಣ್ಯದ ಸ್ಥಾಪಕಾಧ್ಯಕ್ಷ ದಿ. ಉಪ್ಪುಂದ ಶ್ರೀನಿವಾಸ ಪ್ರಭು ಅವರ ಸ್ಮರಣಾರ್ಥ ಲಾವಣ್ಯ ರಿ. ಬೈಂದೂರು ಇದರ 49ನೇ ವಾರ್ಷಿಕೋತ್ಸವದ ಪ್ರಯುಕ್ತ 2ನೇ ದಿನದ ರಂಗಶ್ರೀ ರಂಗಹಬ್ಬ -2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಕಲೆ ಮತ್ತು ಸಾಹಿತ್ಯಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದರು. ವಕೀಲರಾದ ಮಂಗೇಶ ಶ್ಯಾನುಭಾಗ್ ಶುಭಸಂಸನೆಗೈದರು. ಮುಖ್ಯ ಅತಿಥಿಗಳಾಗಿ ಲಾವಣ್ಯ ಸಂಸ್ಥೆಯ ಅಧ್ಯಕ್ಷ ನರಸಿಂಹ ಬಿ. ನಾಯಕ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಕೆ., ಶಿರೂರು ಡಾಟ್ ಕಾಮ್ ವ್ಯವಸ್ಥಾಪಕ ಗಿರೀಶ್ ಶಿರೂರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳುಗೋಡು ಹಳ್ಳಿಹೊಳೆಯಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಎಚ್. ಜಗದೀಶ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಜೊತೆಗೆ ಜೀವನ ಪಾಠವನ್ನು ಕಲಿಯಲು ಸಾಧ್ಯವಾಗುತ್ತದೆ ಹಾಗೂ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜೀವನದಲ್ಲಿ ಸೋಲುವುದಿಲ್ಲ, ಬದಲಾಗಿ ಇಲ್ಲಿ ಕಲಿತಿರುವ ಒಳ್ಳೆಯ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಮಂಜುನಾಥ ಶೆಟ್ಟಿ, ಶ್ರೀನಿವಾಸ ಪೂಜಾರಿ, ಉಷಾಲತಾ ಶಿವರಾಮ ಪೂಜಾರಿ, ಜಯರಾಮ್ ಪೂಜಾರಿ, ಸುಬ್ರಾಯ ಕನ್ನಂತ ಕಾಲೇಜಿನ ಆಡಳಿತಾಧಿಕಾರಿ ಮೋಹನ್ ಕೆ.ಎನ್. ಉಷಾ, ಪಲ್ಲವಿ ಉಪಸ್ಥಿತರಿದ್ದರು. ಸಹ ಶಿಬಿರಾಧಿಕಾರಿ ಮನವಿ ಕೆ.ಕೆ. ಸ್ವಾಗತಿಸಿದರು. ಎನ್.ಎಸ್.ಎಸ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಣವು ಕೇವಲ ಪುಸ್ತಕದ ಪಾಠಗಳಿಗೆ ಸೀಮಿತವಾಗಿರಬಾರದು. ಜ್ಞಾನ, ಮೌಲ್ಯ ಮತ್ತು ಕೌಶಲ್ಯಗಳ ಸಮನ್ವಯವೇ ನಿಜವಾದ ಶಿಕ್ಷಣವಾಗಿದ್ದು, ಮೌಲ್ಯವಿಲ್ಲದ ಶಿಕ್ಷಣ ಅಪೂರ್ಣವಾಗುತ್ತದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಫೆಡರೇಶನ್(ಎನ್‌ಇಸಿಎಫ್)ನ ರಾಜ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು. ಅವರು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಮಾನವಿಕ ವಿಭಾಗದ ವತಿಯಿಂದ ‘ಆರ್ಟ್ಸ್-ಎಕ್ಸುಂಯಬುರೆನ್ಸ್ 2026’ ಅಂಗವಾಗಿ ಆಯೋಜಿಸಲಾದ ‘ಕ್ಷಿತಿವನ್ಷ್’ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್‌ನ್ನು ಉದ್ಘಾಟಿಸಿ ಮಾತನಾಡಿದರು. ದೈನಂದಿನ ಜೀವನದಲ್ಲಿ ಕೃತಜ್ಞತೆಯ ಭಾವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ. ಸಮಾಜವು ಕನ್ನಡಿಯಂತಿದ್ದು, ನಾವು ಹೇಗೆ ವರ್ತಿಸುತ್ತೇವೋ ಅದೇ ರೀತಿಯಲ್ಲಿ ಸಮಾಜ ಪ್ರತಿಬಿಂಬಿಸುತ್ತದೆ. ಆದ್ದರಿಂದ ಸಮಾಜವನ್ನು ದೂಷಿಸುವುದಕ್ಕಿಂತ ನಮ್ಮ ನಡವಳಿಕೆಯನ್ನು ಸರಿಪಡಿಸಿಕೊಳ್ಳುವುದು ಅಗತ್ಯ. ಭೂಮಿ ಕೇವಲ ಮಾನವರಿಗೆ ಮಾತ್ರವಲ್ಲ. ಎಲ್ಲಾ ಜೀವಿಗಳಿಗೆ ಸೇರಿದೆ. “ತನ್ನಂತೆ ಪರರನ್ನು ಬಗೆದೊಡೆ ಬಿನ್ನಾಣುವಕ್ಕೂ ಇಲ್ಲವಯ್ಯ” ಎಂಬ ಸರ್ವಜ್ಞನ ನುಡಿಯಂತೆ, ಇತರರನ್ನು ನಮ್ಮಂತೆಯೇ ಕಾಣುವ ಮೌಲ್ಯ ಬಹಳ ಮುಖ್ಯ. ಇಂತಹ ಮೌಲ್ಯಗಳು ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಕೃತಿಯ ಪ್ರತಿಯೊಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಸಕರ ಕಛೇರಿಯಲ್ಲಿ ಅಕ್ರಮ ಸಕ್ರಮದ ಕೋಟ ಹೋಬಳಿಯ  ಫಲಾನುಭವಿಗಳಿಗೆ  ಮಂಜೂರಾತಿ ದಾಖಲೆ ಪತ್ರಗಳನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಗುರುವಾರ ಅರ್ಹ ಫಲಾನುಭವಿಗಳಿಗೆ  ಹಕ್ಕುಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ  ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ ಉಪಸ್ಥಿತರಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಠಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ರ ಏಪ್ರಿಲ್ 15 ರಿಂದ ಮೇ 4ರ ವರೆಗೆ ಕಾಲಾವಕಾಶ ಕಲ್ಪಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ತಾಲೂಕು ವಾರು ನೀಡಿರುವ ವರದಿ ಆನ್ವಯ ಮುಂದಿನ ಮೇ.15ರ ವರೆಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ, ಆದರೂ ಸಹ ಈಗಿನಿಂದಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ನೀರನ್ನು ಸರಬರಾಜಿಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಿದರು. ಮುಂಬರುವ ದಿನಗಳಲ್ಲಿ ಕಾರ್ಕಳದ 14,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಸೂಚನೆ ನೀಡಿದರು. ಅವರು ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಯಾವುದೇ ಸಮಸ್ಯೆ ಎದುರಾಗದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು. ಗ್ರಾಮೀಣ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಿಡಿಒಗಳು ನೋಡಿಕೊಳ್ಳಬೇಕು ಎಂದು ಹೇಳಿದರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಹಳ್ಳಿ ಜನರು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ ಎಂದರು. ವೇದಿಕೆಯಲ್ಲಿ ಮೂರು ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಣಧಿಕಾರಿಯವರು, ತಾಲೂಕ್ ಪಂಚಾಯತಿನ ಅಧಿಕಾರಿಗಳು , ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಕರಣಿಕರು, ಹಾಗೂ ಪಂಚಾಯತ್ ಕುಡಿಯುವ ನೀರಿನ ಯೋಜನೆಯ ಸಂಬಂಧಪಟ್ಟ ಅಧಿಕಾರಿಗಳು, ಟಾಸ್ಕ್ ಫೋರ್ಸ್…

Read More