ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಹಾಡಹಗಲೇ ದೋಚಿ ಪರಾರಿಯಾದ ಘಟನೆ ತಾಲೂಕಿನ ಪಡುವರಿ ಗ್ರಾಮದಲ್ಲಿ ಗುರುವಾರ ಬೆಳಗಿನ ಸಮಯದಲ್ಲಿ ನಡೆದಿದೆ. ಪಡುವರಿಯ ಪರಮೇಶ್ವರ ಪಟವಾಲ್ ಅವರ ಮನೆಗೆ ನುಗ್ಗಿದ ಕಳ್ಳರು ಗೊಡ್ರೇಜ್ನಲ್ಲಿ ಇರಿಸಿದ ಒಟ್ಟು ಸುಮಾರು 63 ಗ್ರಾಂ ತೂಕದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಚೈನ್ ರಿಂಗ್ ಕೀ ಒಲೆ ಬ್ರಾಸ್ ಲೈಟ್ ಪೆಂಡೆಂಟ್ ಮತ್ತು ನಗದು ರೂ.20,000 ಕದ್ದು ಪರಾರಿಯಾಗಿದ್ದಾರೆ. ಪರಮೇಶ್ವರ ಪಟವಾಲ್ ಅವರ ಮನೆಯವರು ಕಾರ್ಯಕ್ರಮಕ್ಕೆ ತೆರಳಿದ್ದು, ಯಾರೂ ಇಲ್ಲದ್ದನ್ನು ಗಮನಿಸಿ ಮನೆಯ ಹಿಂಬದಿಯ ಮೂಲಕ ಒಳನುಗ್ಗಿ ಬಾಗಿಲು ಹಾಗೂ ಕಪಾಟು ಮುರಿದು ಕವಾಟಿನಲ್ಲಿದ್ದ ಚಿನ್ನಾಭರಣ – ನಗದು ಕದ್ದು ಪರಾರಿಯಾಗಿದ್ದಾರೆ ಎಂದು ಅಂದಾಜಿಸಲಗಿದೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೀದಮ ಪರಿಶೀಲನೆ ಮುಂದುವರಿದಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲ್, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಹಾಗೂ ಆಚಾರ್ಯ ಅಕಾಡೆಮಿ ಸಿದ್ದಾಪುರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ – 2026 ಗುರುವಾರದಂದು ವಿದ್ಯಾದಾಯಿನಿ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿವಿಧ ಹಂತಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅಸಾಮಾನ್ಯ ಗಣಿತ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಯ ಬಳಿಕ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ತರಬೇತಿ ವಿದ್ಯಾರ್ಥಿಗಳಲ್ಲಿ ವೇಗವಾದ ಚಿಂತನೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಇಂತಹ ಸ್ಪರ್ಧೆಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಮಹತ್ತರ ವೇದಿಕೆಯಾಗಿವೆ ಎಂದು ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀಮೂಕಾಂಬಿಕಾ ದೇವಸ್ಥಾನದ ಮನ್ಮಹಾರಥೋತ್ಸವದ ಅಂಗವಾಗಿ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ಬೆಳಗ್ಗೆ 7.30ಕ್ಕೆ ಗಣಪತಿ ಪ್ರಾರ್ಥನೆ, ಅಂಕುರಾವಾಸ, ಸಿಂಹಯಾಗ ಧಾರ್ಮಿಕ ವಿಧಿಯ ಬಳಿಕ ವೃಷಭಲಗ್ನ ಸುಮೂಹರ್ತದಲ್ಲಿ ಧ್ವಜಾರೋಹಣ ನೆರವೇರಿಸಿ ಮನ್ಮಹಾರಥೋತ್ಸವದ ಉತ್ಸವಾದಿಗಳಿಗೆ ಚಾಲನೆ ನೀಡಲಾಯಿತು. ದೇವಳದ ತಂತ್ರಿ, ವ್ಯವಸ್ಥಾಪನಾ ಸಮಿತಿ ಸದಸ್ಯ ನಿತ್ಯಾನಂದ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಸದಸ್ಯರಾದ ಧನಾಕ್ಷಿ, ಸುರೇಂದ್ರ ಶೆಟ್ಟಿ ಉಪ್ಪಿನಕುದ್ರು ರಾಜೇಶ್ ಕಾರಂತ, ಮಹಾಲಿಂಗ ನಾಯ್, ಸುಧಾ ಕೆ., ಅಭಿಲಾಷ್, ರಘು ರಾಮ ದೇವಾಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಮಾ.12ರಂದು ಮನ್ಮಹಾರಥೋತ್ಸವ:ಮಾ.6ರಿಂದ ಮಾ.14ರ ತನಕ ಪ್ರತಿದಿನ ಸಂಜೆ ನಾನಾ ಉತ್ಸಾವಾದಿಗಳು ನಡೆಯಲಿದ್ದು ಮಾ.12ರಂದು ಮನ್ಮಹಾರಥೋತ್ಸವ ಜರುಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ವಿವಿಧ ಸ್ವ ಉದ್ಯೋಗ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳು ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ ಎಂದರು. ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಟೈಲರಿಂಗ್ ಮೆಷಿನ್ ವಿತರಣೆ :ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕ್ಷೇತ್ರದ ಸುಮಾರು 21 ಮಂದಿ ಮಹಿಳಾ ಫಲಾನುಭವಿಗಳಿಗೆ ಟೈಲರಿಂಗ್ ಮೆಷಿನ್ ನ್ನು ಶಾಸಕರು ವಿತರಿಸಿದರು. ಅಂಬೇಡ್ಕರ್ ನಿಗಮದಿಂದ ಸ್ವಯಂ ಉದ್ಯೋಗ ಮಂಜೂರಾತಿ ಪತ್ರ ವಿತರಣೆ :ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತೆ ಯೋಜನೆಯಡಿಯಲ್ಲಿ ಆಯ್ಕೆಯಾದ 3 ಜನ ಫಲಾನುಭವಿಗಳಿಗೆ ರೂ.5 ಲಕ್ಷ ಮೊತ್ತದ ಸಾಲ ಸಹಾಯಧನ ಹಾಗೂ 07…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅನೇಕ ಬದಲಾವಣೆಗಳಿಗೆ ಒಗ್ಗಿಕೊಂಡು ಅಭಿನಯ, ನಾಟಕದ ಆಯ್ಕೆ ಜತೆಗೆ ಹೊಸ ಪ್ರಸ್ತುತಿಗಳನ್ನು ರಂಗಭೂಮಿಗೆ ನೀಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ ಎಂದು ನೃಪತುಂಗ ಹೋಟೆಲ್ಸ್ ಪ್ರೈ.ಲಿ. ರಾಯಚೂರು ಮಾಲಕರಾದ ಯು. ರಾಮಚಂದ್ರ ಪ್ರಭು ಹೇಳಿದರು. ಅವರು ಬುಧವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆದ ಲಾವಣ್ಯದ ಸ್ಥಾಪಕಾಧ್ಯಕ್ಷ ದಿ ಉಪ್ಪುಂದ ಶ್ರೀನಿವಾಸ ಪ್ರಭು ಅವರ ಸ್ಮರಣಾರ್ಥ ಲಾವಣ್ಯ ರಿ. ಬೈಂದೂರು ಇದರ 49ನೇ ವಾರ್ಷಿಕೋತ್ಸವದ ಪ್ರಯುಕ್ತ ರಂಗಶ್ರೀ -ರಂಗಹಬ್ಬ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಾವಣ್ಯ ಸಂಸ್ಥೆ ಬೈಂದೂರಿನ ಸಾಂಸ್ಕೃತಿಕ ಹಿರಿಮೆಯನ್ನು ಜಗದಗಲ ಪಸರಿಸಿದ ಸಾಧನ ಹೊಂದಿದೆ ಹಾಗೂ ಬೈಂದೂರಿನಂತಹ ಗ್ರಾಮೀಣ ಭಾಗದಲ್ಲಿ ಲಾವಣ್ಯ ಸಂಸ್ಥೆ ಕಲಾಭೂಮಿಯನ್ನು ಬೆಳೆಸಿದ ಹಿರಿಮೆ ಬೈಂದೂರಿನ ಹೆಮ್ಮೆಯಾಗಿದೆ ಎಂದು ನೃಪತುಂಗ ಹೋಟೆಲ್ಸ್ ಪ್ರೈ ಲಿ ರಾಯಚೂರು ಮಾಲಕರಾದ ಯು ರಾಮಚಂದ್ರ ಪ್ರಭು ಹೇಳಿದರು. ಲಾವಣ್ಯ ಸಂಸ್ಥೆಯ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯ ಹಿಂದಿನ ಆಡಳಿತ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಕುಂದಾಪುರ ಪೇಟೆಯಲ್ಲಿ ವಾಹನ ನಿಲುಗಡೆ ಮಾಡುವವರಿಗೆ ಪಾರ್ಕಿಂಗ್ ಶುಲ್ಕ ನಿಗದಿ ಮಾಡಿದ್ದನ್ನು ಈಗ ಆಡಳಿತ ಮಂಡಳಿಯ ಅಧಿಕಾರ ಮುಗಿದ ಮೇಲೆ ಹಿಂದಿನ ನಿರ್ಣಯವನ್ನು ಇಟ್ಟುಕೊಂಡು ಪುರಸಭಾ ಮುಖ್ಯಾಧಿಕಾರಿಗಳು ಪಾರ್ಕಿಂಗ್ ಶುಲ್ಕ ವಸೂಲಿಗೆ ಟೆಂಡರ್ ಕರೆದಿರುವುದು ಜನವಿರೋಧಿ ಕ್ರಮವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕುಂದಾಪುರ ಪುರಸಭೆ ಕಟ್ಟಡ ನಿರ್ಮಾಣದ ಪರವಾನಿಗೆ ನೀಡುವಾಗ ಪ್ರತಿಯೊಂದಕ್ಕೂ ತೆರಿಗೆ ಪಡೆದುಕೊಂಡು ಈಗ ಹೊಸದಾಗಿ ವಾಹನ ನಿಲುಗಡೆಗೆ ಶುಲ್ಕ ವಿಧಿಸಲು ಹೊರಟಿರುವುದು ಕಾನೂನು ವಿರೋಧಿ ಕ್ರಮವಾಗಿದೆ. ಇದರಿಂದ ವ್ಯಾಪಾರಸ್ಥರು, ಶುಲ್ಕ ವಸೂಲಿ ಟೆಂಡರ್ ಪಡೆದವರು ಮತ್ತು ವಾಹನ ಮಾಲಕರುಗಳ ನಡುವೆ ಅನಗತ್ಯ ವಾಗ್ವಾದಕ್ಕೆ ಎಡೆಮಾಡಿಕೊಡುತ್ತದೆ. ಪುರಸಭೆ ಪುರಸಭೆ ವ್ಯಾಪ್ತಿಯಲ್ಲಿ ಬಹುಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣ ಮಾಡಿ ಪಾರ್ಕಿಂಗ್ ಸಮಸ್ಯೆ ಪರಿಹಾರ ಮಾಡಬೇಕು ಹಾಗೂ ಈಗಾಗಲೇ ವಾಹನ ಪಾರ್ಕಿಂಗ್ ಶುಲ್ಕ ವಸೂಲಿಗೆ ಕರೆದಿರುವ ಟೆಂಡರ್ ಪ್ರಕ್ರಿಯೆಗಳನ್ನು ಕೂಡಲೇ ನಿಲ್ಲಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಇದೇ ಬರುವ ಮಾ.9ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕೋಟದ ಪಂಚವರ್ಣ ಕಛೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರಕ್ಕೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತೆ ಸಾಸ್ತಾನ ಪಾಂಡೇಶ್ವರದ ಲೀಲಾವತಿ ಗಂಗಾಧರ್ ಆಯ್ಕೆಗೊಳಿಸಿದ್ದು ಗಣ್ಯರ ಸಮ್ಮುಖದಲ್ಲಿ ಈ ಪುರಸ್ಕಾರ ಪ್ರದಾನ ನಡೆಯಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸ್ನೇಹಕೂಟದ ಭಾರತಿ ವಿ. ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ. ಪಠ್ಯಪುಸ್ತಕದ ಜ್ಞಾನದ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳನ್ನು ಉದ್ದೀಪನಗೊಳಿಸುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ನುಡಿದರು. ಅವರು ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗ ಕುವೆಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸೋಲು-ಗೆಲುವುಗಳು ಸ್ಪರ್ಧೆಯ ಭಾಗ. ಗೆಲುವು ನಮ್ಮನ್ನು ಹುರಿದಂಬಿಸಿದರೆ, ಸೋಲು ನಮಗೆ ಪಾಠ ಕಲಿಸುತ್ತದೆ. ಎರಡನ್ನೂ ಸಮಭಾವದಿಂದ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಹಾಭಾರತವನ್ನು ಉಲ್ಲೇಖಿಸಿದ ಅವರು, ಯುದ್ಧಭೂಮಿಯಲ್ಲಿ ಜಯ ಅರ್ಜುನನ ಪಾಲಾದರೂ, ಜನರ ಹೃದಯಗಳಲ್ಲಿ ಕರ್ಣನ ವ್ಯಕ್ತಿತ್ವವೇ ಅಜರಾಮರವಾಗಿ ಉಳಿಯಿತು. ವ್ಯಕ್ತಿಯ ಸದ್ಗುಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಜಾಗೃತಿ ಕಾರ್ಯಕ್ರಮ ಭಾಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರು ಬಿದ್ಕಲ್ಕಟ್ಟೆ ಮತ್ತು ಸ್ಥಳೀಯ ಭಾಗದಲ್ಲಿ ಪರಿಸರ ಕಾಳಜಿಯ ಬೀದಿನಾಟಕ ಪ್ರದರ್ಶಿಸಿದರು. ಈ ಸಂದರ್ಭ ಎನ್.ಎಸ್.ಎಸ್. ಶಿಬಿರಾಧಿಕಾರಿಗಳು, ಸ್ವಯಂಸೇವಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್ನ ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಇತ್ತೀಚಿಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುಜಾತಾ ವೆಂಕಟೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಅಮಿಷ, ಕೋಶಾಧಿಕಾರಿ ಮಮತಾ, ಉಪಾಧ್ಯಕ್ಷರಾಗಿ ಲವೀನಾ, ಜೊತೆ ಕಾರ್ಯದರ್ಶಿಯಾಗಿ ರತ್ನ ಅವರು ಆಯ್ಕೆಯಾದರು. ಆಯ್ಕೆ ಪ್ರಕ್ರಿಯೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದನಾ, ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಎಂಬಿಕೆ, ಎಲ್ಸಿಆರ್ಪಿ ವಿವಿಧ ಘಟಕಗಳ ಸಖಿ, ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿ ಸಭೆಯಲ್ಲಿ ಉಪಸ್ಥಿತರಿದ್ದರು. ಎಂಬಿಕೆ ಉಷಾ ಗಣೇಶ್ ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಎಲ್ಸಿಆರ್ಪಿ ಸುಜಾತಾ ವಂದಿಸಿದರು.
