Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2ರ ವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ. ತುರ್ತು ಸೇವೆಗೆ ಶುಲ್ಕ ರಹಿತ 1077, ದೂ.ಸಂಖ್ಯೆ: 0820-2574802, ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ: 0820-2520417, ಕುಂದಾಪುರ: 08254-230357, ಕಾಪು: 0820-2551444, ಬ್ರಹ್ಮಾವರ: 0820-2560494 ಹಾಗೂ ಬೈಂದೂರು: 08254-251657 ಮತ್ತು ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2593366 ಅಥವಾ 0820-2520306 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು. ಹೆಚ್ಚುವರಿ ಕಾಲಾವಕಾಶ ಕಲ್ಪಿಸುವುದಿಲ್ಲ. ನಿವೇಶನವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ನಿವೇಶನವನ್ನು ನೀಡಿದ್ದರೂ ಸಹ ಕೈಗಾರಿಕಾ ಯೋಜನೆಗಳ ಅನುಷ್ಠಾನವನ್ನು ಕಾಲಮಿತಿಯೊಳಗೆ ಪ್ರಾರಂಭಿಸಿರುವುದಿಲ್ಲ. ಘಟಕಗಳ ಸ್ಥಾಪನೆಗೆ ಸಮರ್ಪಕ ಕಾರಣಗಳು ಕಂಡುಬರದೇ ಇದ್ದಲ್ಲಿ ಅಂತಹ ನಿವೇಶನಗಳನ್ನು ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಇತರರಿಗೆ ಮರು ಹಂಚಿಕೆ ಮಾಡಲು ಕ್ರಮವಹಿಸಬೇಕೆಂದು ಸೂಚನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ ಕಾಂಪ್ಟಿ ಮಹಾರಾಷ್ಟ್ರ ಇಲ್ಲಿ ಎರಡು ತಿಂಗಳುಗಳ ಕಾಲ ನಡೆದ ಅಸೋಸಿಯೇಟ್ ಎನ್‌ಸಿಸಿ ಆಫೀಸರ್ ಫ್ರೀ ಕಮಿಷನ್ ತರಬೇತಿಯಲ್ಲಿ ದೇಶದ 28 ರಾಜ್ಯಗಳ 19 ಡೈರೆಕ್ಟರ್‌ಗಳ ಸುಮಾರು 500ಕ್ಕೂ ಅಧಿಕ ಆಫೀಸರ್ ಟ್ರೈನಿಗಳು ಭಾಗವಹಿಸಿದ ತರಬೇತಿಯಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‌ನ 6 ಕರ್ನಾಟಕ ನೇವಲ್ ಯೂನಿಟ್ ಎನ್‌ಸಿಸಿಯನ್ನು ಪ್ರತಿನಿಧಿಸಿದ ಸುನಿಲ್ ಪೂಜಾರಿ ಪಾಂಡೇಶ್ವರ ಒಟ್ಟು ತರಬೇತಿ ಅವಧಿಯಲ್ಲಿ ದೈಹಿಕ ಸಾಮರ್ಥ್ಯ, ಶೈಕ್ಷಣಿಕ ಅಂಕ, ಸಾಮಾನ್ಯ ಜ್ಞಾನ ವಿಷಯಜ್ಞಾನ, ಡ್ರಿಲ್, ನಾಯಕತ್ವ ಗುಣ ಮತ್ತು ಸಮಗ್ರ ವರ್ತನೆ ಈ ಎಲ್ಲಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ಚಿನ್ನದ ಪದಕದೊಂದಿಗೆ ಡೈರೆಕ್ಟರ್ ಜನರಲ್ ಎನ್.ಸಿ.ಸಿ ಬ್ಯಾಟನ್ ಗೌರವವಕ್ಕೆ ಪಾತ್ರರಾಗಿದ್ದಾರೆ. ಅವರು ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ನಡೆದ ರಾಜ್ಯ ಮಟ್ಟದ ದಸರಾ ಸಿಎಂ ಕಪ್ 2025ರಲ್ಲಿ ಆಳ್ವಾಸ್ ತಂಡವು ಹಲವು ಪ್ರಶಸ್ತಿ ಮತ್ತು ಪದಕಗಳನ್ನು ಪಡೆದುಕೊಂಡಿದೆ.   ತಂಡ ವಿಭಾಗದ ಕ್ರೀಡೆಗಳಾದ ಪುರುಷರ ಕಬಡ್ಡಿಯಲ್ಲಿ ಆಳ್ವಾಸ್ ತಂಡ, ಬೆಂಗಳೂರು ಸಿಟಿಯ ವಿರುದ್ಧ 13 ಅಂಕಗಳ ಅಂತರದಿಂದ ಜಯಶಾಲಿಯಾದರೆ, ಮಹಿಳೆಯರ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ಧ 30-08, 35-20  ನೇರ ಸೆಟ್‌ಗಳಿಂದ ಸೋಲಿಸಿ ಪ್ರಥಮ ಸ್ಥಾನವನ್ನು ಪಡೆಯಿತು.   ಅಂತೆಯೇ ಮಹಿಳಾ ಕಬಡ್ಡಿ, ಪುರುಷರ ಖೋ-ಖೋ, ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಅಥ್ಲೇಟಿಕ್ಸ್ನಲ್ಲಿ ಆಳ್ವಾಸ್‌ನ ನಾಗ್ರೇಂದ್ರ ಡಿಸ್ಕಸ್ ಥ್ರೋನಲ್ಲಿನೂತನ ಕೂಟ ದಾಖಲೆ ನಿರ್ಮಿಸಿದರೆ, 800 ಮೀ ಓಟದಲ್ಲಿ ಆಳ್ವಾಸ್‌ನ ರೇಖಾ ಬಸಪ್ಪ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದ ಒಟ್ಟು ಕ್ರೀಡಾಕೂಟದಲ್ಲಿ 6 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕವನ್ನು, ವೇಯ್ಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಮೆರವಣಿಗೆಯ ಮೂಲಕ ಶ್ರೀ ಶಾರದಾ ದೇವಿಯ ವಿಗ್ರಹವನ್ನು ವಾದ್ಯಘೋಷದೊಂದಿಗೆ ತಂದು ಪ್ರತಿಷ್ಠಾಪಿಸಲಾಯಿತು. ದೇವರಿಗೆ ಪೂಜೆ ನೇರೆವೇರಿಸಿದ ಬಳಿಕ ದುರ್ಗಾ ಹೋಮವನ್ನು ನಡೆಸಲಾಯಿತು.  ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಈ ವೇಳೆ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಗೌರವ ಅಧ್ಯಕ್ಷ ರವೀಂದ್ರ ಸೋಡಿತಾರ್‌, ಅಧ್ಯಕ್ಷ ರಾಜಶೇಖರ ರೊಕ್ಕನ್, ಪ್ರಧಾನ ಕಾರ್ಯದರ್ಶಿ ಅಶೋಕ ಜಿ. ಹಾಗೂ  ಕಾರ್ಯದರ್ಶಿ ಕೌಶಿಕ್‌ ಜಿ.ಕೆ. ಸೇರಿದಂತೆ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಸೆ.29ರ ಸೋಮವಾರ ಮಧ್ಯಾಹ್ನ 2.30ರಿಂದ ಭಕ್ತಿ ಗೀತೆ, ರಂಗೋಲಿ ಸ್ಪರ್ಧೆ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 6.00ಕ್ಕೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.1ರಂದು ರಾಮಕ್ಷತ್ರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಉದ್ಘಾಟನಾ ಸಮಾರಂಭವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಭಾನುವಾರ ನೆರವೇರಿತು. ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಸುಮನ ಪಡಿಯಾರ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ಸೇವೆಗಾಗಿ ಸಂಘಟಿತ ಪ್ರಯತ್ನವನ್ನು ಮಾಡುವುದು ಯಶಸ್ಸನ್ನು ಕೊಡುತ್ತದೆ. ಉತ್ತಮ ಕಾರ್ಯಗಳಿಗೆ ಬೆಂಬಲವನ್ನು ನೀಡುವುದು ಮತ್ತು ಆ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಬೆಂಗಳೂರಿನ ಹರಪನಹಳ್ಳಿ ಆನೇಕಲ್ ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಭಾಷಾ ಶಿಕ್ಷಕ ಮತ್ತು ಲೇಖಕ ಸಂದೇಶ್ ಹೆಚ್ ನಾಯ್ಕ್ ಹಕ್ಲಾಡಿ ಮತ್ತು ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಪ್ರಮೋದ್ ಗಾಣಿಗ ಗಂಗೊಳ್ಳಿ ಶುಭ ಹಾರೈಸಿದರು. ಶ್ರೀ ನಾರಾಯಣ ಗುರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಉಪ್ಪುಂದ ಶಾಖೆಯಿಂದ ನಬಾರ್ಡ್ ಸಹಯೋಗದೊಂದಿಗೆ ಉಪ್ಪುಂದದ ನಾಡದೋಣಿ ಸಭಾಭವನಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ – ಸಹಕಾರಿ ಸಾಕ್ಷರತಾ ಶಿಬಿರ ಸೋಮವಾರ ಆಯೋಜಿಸಲಾಗಿತ್ತು. ನಬಾರ್ಡ್ ಮಂಗಳೂರಿನ ಡಿಸ್ಟಿಕ್ಟ್ ಡೆಪ್ಯೂಟಿ ಮ್ಯಾನೇಜರ್ ಸಂಗೀತಾ ಕರ್ತಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಿನಿಯರ್ ಬ್ರಾಂಚ್ ಇನ್ಸಪೆಕ್ಟರ್ ರವೀಂದ್ರ ಭಟ್, ಕೇಂದ್ರ ಕಛೇರಿ ಪಿಸಿಬಿ ವಿಭಾಗದ ಸಿ. ಶಂಭುಲಿಂಗ್, ಸಿ. ಸಂದೀಪ್, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ‌ಮಣಿಪಾಲ ಆಸ್ಪತ್ರೆಯ ಡಿಪಾರ್ಟ್ಮೆಂಟ್ ಆಫ್‌ ನ್ಯೂಟ್ರಿಷನ್ ಅಂಡ್ ಡಯಟಿಕ್ಸ್ ವಿಭಾಗದ ಡಾ. ಅನುಷಾ, ಕೆನರಾ ಬ್ಯಾಂಕ್ ಫೈನಾನ್ಸಿಯಲ್ ಲಿಟರೆಸಿ ಕೌನ್ಸಿಲರ್ ಆಶಾಲತಾ, ಎನರ್ಜಿ ಸೋಲಾರ್‌ನ ಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು. ಆರ್ಥಿಕ ಸಾಕ್ಷರತೆ ಬಗ್ಗೆ ಆಶಾಲತಾ ಮಾಹಿತಿ ನೀಡಿದರು. ಆರೋಗ್ಯಪೂರ್ಣ ಆಹಾರ ಕ್ರಮದ ಬಗ್ಗೆ ಡಾ. ಅನುಷಾ ಮತ್ತು ವಿದ್ಯಾರ್ಥಿಗಳು ಮಾಹಿತಿ ನೀಡಿದರು. ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿ ಎಕ್ಕಾರು, ಡಾ. ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು. ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು. ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕಾರಂತರ ನೇರ ನಡೆ- ನುಡಿ ಹಾಗೂ ಅವರು ಬದುಕಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಿ. ಎ. ಮತ್ತು ಸಿ. ಎಸ್. ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಶಿಕ್ಷಾಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಇದರ ಸಹ ಸಂಸ್ಥಾಪಕರಾದ ಪ್ರತಾಪ ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸಿ. ಎ. ಸ್ವಸ್ಥಿಕ್, ಸಿ. ಎ. ವೖಷ್ಣವಿ ಮತ್ತು ಸಿ. ಎ. ಭರತೇಶ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಿ. ಎ. ಸ್ವಸ್ತಿಕ್  ಮತ್ತು ಸಿ. ಎ. ವೖಷ್ಣವಿ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗ ಮುಖ್ಯಸ್ಥರಾದ ಅರುಣ್ ಎ. ಎಸ್., ವಾಣಿಜ್ಯ ಸಂಘದ ಸಂಯೋಜಕರಾದ ಮಮತಾ, ಕಾರ್ಯಕ್ರಮದ ಉಪನ್ಯಾಸಕ ಸಂಯೋಜಕರಾದ ಸುಮಾ ಮತ್ತು ರಿತಿನ್. ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಭೂಮಿಕಾ ಕಾರ್ಯಕ್ರಮ ನಿರೂಪಿಸಿ, ದ್ರುವ ಸ್ವಾಗತಿಸಿ, ಸುಜನ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.

Read More