ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು. ಸಾಮಾನ್ಯ ಭತ್ತಕ್ಕೆ 2369 ಹಾಗೂ ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗಧಿಪಡಿಸಲಾಗಿದ್ದು, ಉಡುಪಿ ಹಾಗೂ ಕಾರ್ಕಳದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು. ರೈತರು ಬೆಳೆದಿರುವ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.23: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಯಿಂದ ಆರಂಭಗೊಂಡ ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಅಂದಿನ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾಗಿದ್ದ ದೀಪಕ್ ಕುಮಾರ್ ಶೆಟ್ಟಿ ಅವರ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಇಂದು ಉಡುಪಿಯಲ್ಲಿ ದಿಶಾ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಎದುರೆ ಪರಸ್ಪರ ಮಾತಿನ ಚಕಮಕಿ – ತಳ್ಳಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಪಕ್ಷದಲ್ಲಿ ಬಣ ರಾಜಕೀಯ ಇಲ್ಲ ಎನ್ನುತ್ತಲೇ ಪರಸ್ಪರ ಬಣಗಳಾಗಿ ಮುಂದುವರಿಯುತ್ತಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಬೈಂದೂರು ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ನಡುವಿನ ಮಾತಿನ ಚಕಮಕಿ ಜೋರಾಗಿಯೇ ನಡೆದಿದೆ. ತೆರೆಮರೆಯಲ್ಲಿ ನಡೆಯುತ್ತಿದ್ದ ಪರಸ್ಪರರ ಕಸರತ್ತು ಇಂದು ಸಂಸದರು, ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಕುಂದಾಪುರ ಕ್ಷೇತ್ರದ ಶಾಸಕರ ಎದುರೇ ಬಟಾಬಯಲಾಗಿದೆ. ದಿಶಾ ಸಭೆಯಲ್ಲಿ ಭಾಗವಹಿಸುವ ಮುನ್ನ ಉಡುಪಿಯ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಾ ಕುಳಿತಿದ್ದ ವೇಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.23: ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 19ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಸಮಾಧಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಈ ಬಗ್ಗೆ ವರದಿ ನೀಡಬೇಕೆಂದು ಅಭಿಯಂತರರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಜನರಿಗೆ ಶುದ್ಧ ನೀರು ಕುಡಿಯಬೇಕೆಂಬ ಆಶಯದೊಂದಿಗೆ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 687 ಕೋಟಿ ರೂ. ಮೊತ್ತದಲ್ಲಿ 525 ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳಲ್ಲಿ 487 ಪೂರ್ಣಗೊಂಡಿದ್ದು, 38 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೇ.93 ರಷ್ಟು ಸಾಧನೆಯಾಗಿದೆ. ಆದರೆ ಉಡುಪಿ ತಾಲೂಕಿನ 19 ಗ್ರಾಮ ಪಂಚಾಯತ್ಗಳಲ್ಲಿ ಕಾಮಗಾರಿಗಳು ಸರಿಯಾಗಿ ಆಗಿಲ್ಲವೆಂದು ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ದೇವಿಯ ದರ್ಶನ ಪಡೆದು ಚಂಡಿಕಾ ಯಾಗದಲ್ಲಿ ಭಾಗಿಯಾದರು. ಅರ್ಚಕ ಸುಬ್ರಹ್ಮಣ್ಯ ಅಡಿಗ ಅವರ ಮಾರ್ಗದರ್ಶನದಲ್ಲಿ ಪೂಜೆ ಸಲ್ಲಿಸಿದರು. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ದಂಪತಿಗಳನ್ನು ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪ್ರಸಾದ ಗೌರವಿಸಿದರು. ಕಾಂತಾರ ಚಾಪ್ಟರ್ – 1 ಟ್ರೇಲರ್ ಬಿಡುಗಡೆಯ ಮರುದಿನವೇ ನವರಾತ್ರಿ ಅಂಗವಾಗಿ ರಿಷಬ್ ದಂಪತಿಗಳು ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕೆರಾಡಿಯವರಾದ ರಿಷಬ್ ಅವರು ನಿರ್ದೇಶಿಸಿ ನಟಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ – 1 ಸಿನಿಮಾ ಅಕ್ಟೋಬರ್ 02ರಂದು ಬಿಡುಗಡೆಗೊಳ್ಳಲಿದ್ದು, ಚಿತ್ರತಂಡ ಅದರ ತಯಾರಿಯಲ್ಲಿಯೇ ಇದೆ. ಈ ನಡುವೆ ಪತ್ನಿಯ ಹರಕೆ ತೀರಿಸಲು ರಿಷಬ್ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವದ ಹಿನ್ನಲೆಯಲ್ಲಿ ವಿವಿಧ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಇತ್ತೀಚಿಗೆ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ನಮ್ಮ ಸ್ನೇಹ ನೆರವು, ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಸ್ನೇಹಕೂಟ ಸಂಚಾಲಕಿ ಭಾರತಿ ವಿ. ಮಯ್ಯ ದೀಪ ಬೆಳಗಿಸಿ, ಉದ್ಘಾಟಿಸಿದರು. ಹೊಸಬದುಕು ಆಶ್ರಮದ ನಿವಾಸಿಗಳಿಗೆ ವಿವಿಧ ಪರಿಕರಗಳನ್ನು ಸ್ನೇಹಕೂಟದ ನಿರ್ದೇಶಕ ವಿಷ್ಣಮೂರ್ತಿ ಮಯ್ಯರು, ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಅವರಿಗೆ ಹಸ್ತಾಂತರಿಸಿದರು. ಆಶ್ರಮದ ನಿವಾಸಿಗಳಿಗೆ ಹಾಗೂ ಉಪಹಾರದ ವ್ಯವಸ್ಥೆ ಕಲ್ಪಿಸಿದರು. ಮುಖ್ಯ ಅತಿಥಿಯಾಗಿ ಆಟ್೯ ಆಫ್ ಲಿವಿಂಗ್ನ ದಕ್ಷಿಣ ದಿವ್ಯ ಸಾಲಿಗ್ರಾಮ, ಪತ್ರಕರ್ತ ರವೀಂದ್ರ ಕೋಟ, ಆಶ್ರಮದ ನಿರ್ದೇಶಕಿ ರಾಜಶ್ರೀ ವಿನಯಚಂದ್ರ ಉಪಸ್ಥಿತರಿದ್ದರು. ಸ್ನೇಹಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜತೆಗೆ ಕ್ರೀಡೆ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜಾತ ಬಾಯರಿ ಸ್ವಾಗತಿಸಿ, ಕಾರ್ಯಕ್ರನವನ್ನು ಸ್ನೇಹಕೂದ ಶ್ರೀದೇವಿ ಹಂದೆ ನಿರೂಪಿಸಿ, ಭಾರತಿ ಮಯ್ಯ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೇಬಿಸ್ ರೋಗವು ಪ್ರಾಣಕ್ಕೆ ಮಾರಕವಾಗಿರುವ ಕಾಯಿಲೆಯಾಗಿರುವುದರಿಂದ ಆ ಬಗೆಗೆ ಪ್ರತಿಯೊಬ್ಬರಲ್ಲೂ ಕೂಡ ಸಂಪೂರ್ಣ ಅರಿವು ಇರಬೇಕಾದದ್ದು ಅತಿ ಅವಶ್ಯಕ ಎಂದು ಗುಜ್ಜಾಡಿ ಪಶು ಚಿಕಿತ್ಸಾಲಯದ ಆರೋಗ್ಯ ಅಧಿಕಾರಿ ಡಾ. ಅರುಣ್ ಕೆಪಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಎಸ್ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ನಡೆದ ಹುಚ್ಚು ನಾಯಿ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನೆಯಲ್ಲಿನ ಸಾಕುಪ್ರಾಣಿಗಳಿಗೂ ಕೂಡ ಸಮಯಕ್ಕೆ ಸರಿಯಾಗಿ ವ್ಯಾಕ್ಸಿನೇಷನ್ ಮಾಡಿಸಬೇಕು. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಅಜಾಗರುಕತೆಯಿಂದ ವರ್ತಿಸಬಾರದು ಎಂದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಮಾನ್ಯ ಖಾರ್ವಿ , ಎಸ್ವಿ ಕಾಮರ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ತ್ರಾಸಿ ಗ್ರಾಮ ಪಂಚಾಯತ್, ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಗಂಗೊಳ್ಳಿ ಹಾಗೂ ಸಿಬ್ಬಂದಿ ವರ್ಗ, ಸ್ವಚ್ಛ ಕರಾವಳಿ ಮಿಷನ್ ಸದಸ್ಯರು, ಎಸ್.ವಿ. ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಖಾರ್ವಿ ಆನ್ಲೈನ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಭಾಗವಾಗಿ ತ್ರಾಸಿ ಬೀಚ್ನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ತ್ರಾಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಎಸ್. ಹಾಗೂ ಸಿಬ್ಬಂದಿ ವರ್ಗ, ಎನ್.ಎಸ್. ಎಸ್. ಯೋಜನಾಧಿಕಾರಿ ರಾಜೇಶ್ ವಕ್ವಾಡಿ ಮತ್ತು ಪೂಜಾ ಕುಂದರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಬೈಂದೂರಿನ ಸುರಭಿಯ ಹಿರಿಯ ಹಾಗೂ ಕಿರಿಯ ಕಲಾವಿದ ಕೂಡುವಿಕೆಯಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ವೈಭವ ನಡೆಯಲಿದೆ. ಸೆ.24 ಬುಧವಾರ ಸಂಜೆ 7.30ಕ್ಕೆ ಮೈಸೂರು ರಮಾ ಗೋವಿಂದ ರಂಗಮಂದಿರದಲ್ಲಿ ಸುರಭಿ ಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷಗಾನವನ್ನು ಸಂಸ್ಥೆಯ ಯಕ್ಷಗುರು ಪ್ರಶಾಂತ ಮಯ್ಯ ದಾರಿಮಕ್ಕಿ ಅವರು ನಿರ್ದೇಶನ ಮಾಡಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ 12ನೇ ವಾರ್ಷಿಕ ಮಹಾಸಭೆಯು ಕೋಡಿ ಕನ್ಯಾಣದ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಸಂಸ್ಥೆಯ ಅಧ್ಯಕ್ಷ ಶಂಭು ಪೂಜಾರಿ ಮಹಾಸಭೆಗೆ ಸ್ವಾಗತಿಸಿ ಮಾತನಾಡಿ, ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಒಟ್ಟು 100 ಕೋಟಿಗೂ ಅಧಿಕ ವ್ಯವಹಾರ ನಡೆಸಿ, ಸುಮಾರು 16 ಲಕ್ಷಕ್ಕೂ ಅಧಿಕ ಲಾಭಗಳಿಸಿ, ಸದಸ್ಯರಿಗೆ ಶೇಕಡಾ 15 ರಷ್ಟು ಡಿವಿಡೆಂಡ್ ವಿತರಿಸಿರುವುದಕ್ಕೆ ಬಹಳಷ್ಟು ಹರ್ಷ ವ್ಯಕ್ತಪಡಿಸಿದರು. ನಂತರ ವಾರ್ಷಿಕ ಮಹಾಸಭೆಯ ಆಡಳಿತ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕಿ ಪ್ರತಿಮಾ ವಾಚಿಸಿದರು. ಲೆಕ್ಕಪಾರಿಶೋಧನ ವರದಿಯನ್ನು ವ್ಯವಸ್ಥಾಪಕರಾದ ಸಂದೀಪ್ ಕರ್ಕೇರ ವಾಚಿಸಿದರು. ಸಂಸ್ಥೆಯ ಮುಂದಿನ ಕಾರ್ಯ ಯೋಜನೆಯ ಬಗ್ಗೆ ವಿವರವಾಗಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕರ್ಕೇರ ಮಂಡಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ ಬಿ. ಎಸ್ ಸಂಸ್ಥೆಯ ಗೌರವ ಸನ್ಮಾನವನ್ನು ಸ್ವೀಕರಿಸಿ, ಸಂಸ್ಥೆಯ ಬೆಳವಣಿಗೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ-ಸಹಾಯಧನ ಯೋಜನೆಯಡಿ ವೆಬ್ಸೈಟ್ www.ksbdb.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಸು ಸಾಕಾಣಿಕೆ, ಗುಡಿ ಹಾಗೂ ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ನಡೆಸಲು ಶೇ.4 ರ ವಾರ್ಷಿಕ ಬಡ್ಡಿ ದರದಲ್ಲಿ 1 ಲಕ್ಷದವರೆಗಿನ ಘಟಕ ವೆಚ್ಚ ಹೊಂದಿರುವ ವ್ಯಾಪಾರಕ್ಕೆ 20,000 ರೂ ಸಹಾಯಧನ ಮತ್ತು 80,000 ರೂ ಉಳಿಕೆ ಸಾಲದ ಮೊತ್ತ ಹಾಗೂ 2 ಲಕ್ಷದವರೆಗಿನ ಘಟಕ ವೆಚ್ಚ ಹೊಂದಿರುವ ವ್ಯಾಪಾರಕ್ಕೆ 40,000 ರೂ ಸಹಾಯಧನ ಮತ್ತು 1,60,000 ರೂ ಉಳಿಕೆ ಸಾಲದ ಮೊತ್ತದೊಂದಿಗೆ ಆರ್ಥಿಕ ನೆರವು ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಅಥವಾ 8029605888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ…
