Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ನಿವೃತ್ತ ಶಿಕ್ಷಕರ ಬದುಕು ಹಾಗೂ ಅವರ ಶೈಕ್ಷಣಿಕ ಜೀವನ ತಳಹದಿ ಶ್ರೇಷ್ಠವಾದದ್ದು, ಆದರೆ ಅವರ ನಿವೃತ್ತಿಯ ನಂತರ ದಿನಗಳಲ್ಲಿ ಗುರುತಿಸುವ ಕಾಯಕ ಶೈಕ್ಷಣಿಕ ಬದುಕಿನ ಸಾರ್ಥಕತೆಯ ಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ್ ನಾವಡ ಹೇಳಿದರು. ಅವರು ಭಾನುವಾರ ಡಾ. ಕೋಟ ಶಿವರಾಮ ಕಾರಂತ ಮಕ್ಕಳ ವೇದಿಕೆ, ಸಾಲಿಗ್ರಾಮ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಗೀತಾನಂದ ಫೌಂಡೇಶನ್, ಕೋಟ-ಮಣೂರು, ಕೋಟ ವಿದ್ಯಾ ಸಂಘ  ಕೋಟ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಸಾಹಿತ್ಯಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿ ಮಾತನಾಡಿದರು. ಸಂಘಟನೆ ಮೂಲಕ ನಿವೃತ್ತಿಯ ಬದುಕಿಗೆ ನೆಮ್ಮದಿ ವಾತಾವರಣ ಕಲ್ಪಿಸಲಿದೆ ಹಾಗೂ ನಿವೃತ್ತಿ ಬದುಕಿನಲ್ಲಿ ಸಮಾನ ಮನಸ್ಕರೊಂದಿಗೆ ಸತ್ಚಿಂತನೆಯ ಜೊತೆಗೆ ವಿಚಾರ ವಿನಿಮಯಕ್ಕೆ ವೇದಿಕೆ ಅಗತ್ಯ, ಅದು ನಮ್ಮ ಆರೋಗ್ಯಕರ ಬದುಕಿಗೆ ಮುನ್ನುಡಿ ಬರೆಯಲಿದೆ ಎಂದರು. ಈ ಸಂದರ್ಭದಲ್ಲಿ ಇತ್ತೀಚಿಗೆ ನಿವೃತ್ತರಾದ ಮಂಜುನಾಥ್ ಉಪಾಧ್ಯಾಯ,ಜಗದೀಶ್ ಹೊಳ್ಳ,ರಮೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು‌ ಗ್ರಾಮದ ಬಸ್ಟಾಂಡ್ ನಿಲ್ದಾಣದ ಸಮೀಪ ಬೃಹತ್ ಶಿಲಾಯುಗದ ನಿಲಿಸು‌ಗಲ್ಲು‌ ಪತ್ತೆಯಾಗಿದೆ ಎಂದು ಇತಿಹಾಸ ಸಂಶೋಧಕ ಪ್ರೋ. ಟಿ.ಮುರುಗೇಶ ಮಾಹಿತಿ ನೀಡಿದ್ದಾರೆ. ಸಾಮಾನ್ಯ ಶಕ ಪೂರ್ವ ವರ್ಷ (ಕ್ರಿ.ಪೂ)1 ಸಾಮಾನ್ಯ ಶಕ. ವರ್ಷ(ಕ್ರಿ.ಶ) ರಿಂದ. 1 ರ ಅಂದರೆ ಸರಿ‌ ಸುಮಾರು ಎರಡು‌ ಸಾವಿರ ವರ್ಷದ ಪ್ರಾಚೀನವಾದ ನಿಲಿಸು ಗಲ್ಲು ಪತ್ತೆಯಾಗಿದೆ. ಅಳತೆ: ಮಣ್ಣಿನ ಮೇಲ್ಭಾಗದ ಎತ್ತರ 4.51 ಅಡಿ ಅಂದರೆ 130cm, ಮೇಲ್ಭಾಗದ ದಪ್ಪ 20 cm ಹಾಗೂ ಮಧ್ಯಭಾಗದ ದಪ್ಪ 40 cm ಕಲ್ಲು ತ್ರಿಕೋನ ಶೈಲಿಯಲ್ಲಿ ಕಂಡು‌ ಬಂದಿದೆ. ನಿಲಿಸುಗಲ್ಲು:ಇತಿಹಾಸದಲ್ಲಿ ಸಮಾಧಿಯ ಸ್ಥಳದಲ್ಲಿ ನೆನಪಿನ ಕಲ್ಲುಗಳನ್ನು ಹಾಕಲಾಗುತ್ತಿದ್ದರು. ಬೃಹತ್ ಶಿಲಾಯುಗದ ಸಮಾಧಿ ಸ್ಥಳದಲ್ಲಿ ಸಮಾಧಿಯ ಸಂಕೇತವಾಗಿ ಈ ರೀತಿಯ ಕಲ್ಲುಗಳನ್ನು ನಿಲ್ಲಿಸುತ್ತಿದ್ದರು. ಆ ಕಲ್ಲುಗಳಿಗೆ ನಿಲಿಸುಗಲ್ಲು ಅಧವಾ ಮೆನ್ಹಿರ್ ಎಂದು ಕರೆಯುತ್ತಾರೆ. ಡಾ. ಪಿ.ಗುರುರಾಜ್ ಭಟ್ ಅವರ ಸ್ಟಡಿ ಆಫ್ ತುಳುವ ಹಿಸ್ಟರಿಯಲ್ಲಿ‌ ಬಸ್ರೂರು ಸರಕಾರಿ ಪ್ರೌಢ ಶಾಲೆಯ ಆಟದ ಮೈದಾನದಲ್ಲಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ 8ನೇ ತರಗತಿಯಲ್ಲಿ ಓದುತ್ತಿರುವ 3,50,000 ರೂ.ವರೆಗೆ ಕೌಟುಂಬಿಕ ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.30 ರೊಳಗೆ ಎನ್.ಎಂ.ಎಂ.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯ ಶಿಕ್ಷಕಿಯನ್ನು ಭೇಟಿಯಾಗುವಂತೆ ಅಥವಾ ಡಯಟ್ ನ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಅವರನ್ನು ದೂ.ಸಂ 9449449602 ಮೂಲಕ ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜು ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆದ ಹ್ಯಾಂಡ್ ಬಾಲ್‌ನಲ್ಲಿ ರೋಹಿತ್ ಎನ್. ಶೇಟ್  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಮಟ್ಟದ ಜಂಪ್ ರೋಪಿಂಗ್ ಪಂದ್ಯಾವಳಿಯು ಬಾರಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ನಡೆಯಿತು. ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ತಮ ಫಲಿತಾಂಶಗಳೊಂದಿಗೆ ಜಯಗಳಿಸಿದ್ದಾರೆ. ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿಸಿಎಂಬಿ ವಿಭಾಗದ ವೇದ ಎಂ. ಪಚ್ಚೆನ್ನವರ್ 30 ಸೆಕೆಂಡುಗಳ ವೇಗದ ಜಂಪ್ ರೋಪಿಂಗ್ ಸ್ಪರ್ಧೆಯಲ್ಲಿ ಕಂಚು, 30 ಸೆಕೆಂಡುಗಳ ಡಬಲ್ ಅಂಡರ್ ನಲ್ಲಿ ಪ್ರಥಮ ಪಿಸಿಎಂಬಿ ವಿಭಾಗದ ಶ್ರೇಷ್ಠ ಎಸ್. ಗೋಲ್ಡ್ ಮೆಡಲ್, ಉಚಿತ ಶೈಲಿಯಲ್ಲಿ ಪ್ರಥಮ ಪಿ ಸಿ ಎಂ ಬಿ ವಿಭಾಗದ ಅನುಷ್ಕಾ ಮಹಾಂತೇಶ ಮುರ್ಗೋಡ್ ಚಿನ್ನದ ಪದಕ, 3 ನಿಮಿಷಗಳ ಸಹಿಷ್ಣುತೆಯಲ್ಲಿ ಪ್ರಥಮ ಪಿ ಸಿ ಎಮ್ ಸಿ ವಿಭಾಗದ ಗುಂಡಲ ಶ್ರೀಗವಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಹುಡುಗರ ವಿಭಾಗದಲ್ಲಿ 30 ಸೆಕೆಂಡುಗಳ ವೇಗದ ಜಂಪ್ ರೋಪಿಂಗ್ ನಲ್ಲಿ ದ್ವಿತೀಯ ಪಿಸಿಎಂಬಿ ವಿಭಾಗದ ಅಭಿಷೇಕ್ ಚಿನ್ನದ ಪದಕ, 3 ನಿಮಿಷಗಳ ಸಹಿಷ್ಣುತೆ ವಿಭಾಗದಲ್ಲಿ ದ್ವಿತೀಯ ಪಿ ಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿದ್ದು, ಇವುಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿವೆ ಇವುಗಳ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ದಿನೇದಿನೇ ನಾಯಿಗಳ ಸಂಖ್ಯೆ ಹೆಚ್ಚುತ್ತಿವೆ. ರಾತ್ರಿ ಸಮಯದಲ್ಲಿ ರೈಲು ಮತ್ತು ಬಸ್ಸಿನಲ್ಲಿ ಪ್ರಯಾಣಿಸಿ ಬಂದಂತಹ ಸಾರ್ವಜನಿಕರ ಮೇಲೆ ಎರಗುತ್ತವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಯೇ ಮಾರ್ಗವಾಗಿದ್ದು ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳು ಪ್ರತಿ ವರ್ಷವೂ ಹಣಕಾಸು ಹಂಚಿಕೆ ಮಾಡಿಕೊಳ್ಳುವುದರೊಂದಿಗೆ ಅವುಗಳ ಸಂತಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು. ಎಬಿಸಿ ಕಾರ್ಯಕ್ರಮವನ್ನು ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳು ಸ್ವಚ್ಚ ಹಾಗೂ ನೈರ್ಮಲ್ಯತೆ ಇರುವ ಶಸ್ತç ಚಿಕಿತ್ಸಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಬಾರಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಬಾರಿಕೆರೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುರೇಶ್ ಕಾಂಚನ್ ವಹಿಸಿ ಮಾತನಾಡಿ, ಸಂಘಕ್ಕೆ ಗುಣಮಟ್ಟದ ಹಾಲು ನೀಡುವಂತೆ ಸಲಹೆ ನೀಡಿದ ಅವರು ಹೈನುಗಾರು ಹೆಚ್ಚು ಸಂಘಕ್ಕೆ ಹಾಲು ಪೂರೈಸಲು ವಿನಂತಿಸಿ, ಹೈನುಗಾರಿಕೆಗೆ ಸಂಪೂರ್ಣ ಬೆಂಬಲ ಸೇರಿದಂತೆ ಸಂಘದ ಅಭಿವೃದ್ಧಿಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು. ಮುಖ್ಯ ಅತಿಥಿಯಾಗಿ ಕೆ.ಎಂ.ಎಫ್ ವಿಸ್ತರಣಾಧಿಕಾರಿ ಸರಸ್ವತಿ, ಕೋಟತಟ್ಟು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸರಸ್ವತಿ, ಸಿಎ ಬ್ಯಾಂಕ್ ನಿರ್ದೇಶಕ ರಂಜಿತ್ ಕುಮಾರ್ ಬಾರಿಕೆರೆ, ಉದ್ಯಮಿ ಸುರೇಶ್ ಗಾಣಿಗ ಶೇವದಿ, ಹಾಗೂ ಉಪಾಧ್ಯಕ್ಷ ಚಂದ್ರಹಾಸ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ದಿಗಂತ ಪೂಜಾರಿ ಬಾರಿಕೆರೆ ಪ್ರಥಮ ಬಾರಿಕೆರೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ 90% ಗಿಂತ ಹೆಚ್ಚಿಗೆ ಅಂಕಗಳಿಸಿದ ಹಾಗೂ ಪ್ರತಿಕ್ಷಾ ಬಾರಿಕೆರೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ಕುಂದಾಪುರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ  ಆಯೋಜಿಸಿರುವ  ‘ಸೇವಾ ಪಾಕ್ಷಿಕʼ ಕಾರ್ಯಕ್ರಮ ಅಂಗವಾಗಿ ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸ್ವಚ್ಛತೆ ಕಾರ್ಯಕ್ರಮಕ್ಕೆ  ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಮೋದಿ ಅವರು ದೇಶದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡಿದ್ದು ಆಡಳಿತದಲ್ಲಿ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದ್ದು ಅವರ ವಿಕಸಿತ ಭಾರತದ ಸಂಕಲ್ಪ ಈಡಿರುವ ಕಾಲ ಸನಿಹತವಾಗಿದ್ದು ಅವರ 75ನೇ ಹುಟ್ಟುಹಬ್ಬ ಕುಂದಾಪುರ ಮಂಡಲದ ವಿವಿಧ ಮೋರ್ಚಗಳು  ಸೇವಾ ಪಾಕ್ಷಿಕ ಅಭಿಯಾನದ ಮೂಲಕ ನೆರವೇರುತ್ತಿದ್ದು  ಸದ್ರಿ ಈ  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಸೇವಾ ಪಾಕ್ಷಿಕ ಅಭಿಯಾನದ ಸ್ವಚ್ಛತಾ ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್ ಇವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಗೋಪಾಡಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಶ್ರೀರಾಮ ಭಜನಾ ಮಂಡಳಿ ಅಮ್ಮನವರತೋಪ್ಲು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ವತಿಯಿಂದ 27ನೇ ವರ್ಷದ ಭಜನಾ ಕಮ್ಮಟ ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ ಸಮಾರಂಭವು ಅಮೃತವರ್ಷಿಣಿ ಸಭಾಭವನದಲ್ಲಿ ಇತ್ತೀಚಿಗೆ ಜರುಗಿತು.

Read More

ಅಶ್ವಯುಜ ಮಾಸದ ಪ್ರಾರಂಭದಲ್ಲಿ ಹತ್ತು ದಿನಗಳ ಕಾಲ ಆಚರಿಸುವ ಹಬ್ಬವೇ ನವರಾತ್ರಿ. ಚಾಂದ್ರಮಾನ ಪಂಚಾಂಗರೀತ್ಯ ಶಾರದ ಋತುವಿನ ಮೊದಲ 9 ದಿನಗಳಲ್ಲಿ ಈ ಹಬ್ಬವನ್ನು ಆಚರಿಸುವುದರಿಂದ ಇದನ್ನು ಶರನ್ನವರಾತ್ರಿ ಎಂದೂ ಕರೆಯುತ್ತಾರೆ. ನವರಾತ್ರಿಯ ಈ ಒಂಭತ್ತು ದಿನಗಳು ದೇವಿಯ ಒಂಭತ್ತು ಸ್ವರೂಪಗಳ ಆರಾಧನೆಯಾಗಿರುತ್ತದೆ. ದೇವಿಯ ಪ್ರತಿಯೊಂದು ಸ್ವರೂಪದ ಆರಾಧನೆಯಿಂದ ವಿಶಿಷ್ಟ ಫಲಗಳನ್ನು ಪಡೆಯಬಹುದಾಗಿದೆ. ದೇವಿಯ ಸ್ವರೂಪಗಳನ್ನು ಅತ್ಯಂತ ಶ್ರದ್ಧೆಯಿಂದ ಆರಾಧಿಸಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಶೈಲಪುತ್ರಿ:ನವರಾತ್ರಿಯ ಮೊದಲನೇ ದಿನ ಘಟಸ್ಥಾಪನೆಯ ಜೊತೆಗೆ ಶೈಲಪುತ್ರಿ ಸ್ವರೂಪವನ್ನು ಪೂಜಿಸಲಾಗುತ್ತದೆ. ಹಿಮಾಲಯ ರಾಜನ ಪುತ್ರಿಯಾದ ಕಾರಣ ಈ ದೇವಿಯನ್ನು ಶೈಲಪುತ್ರಿ ಎಂದು ಕರೆಯಲಾಗುತ್ತದೆ. ಶೈಲಪುತ್ರಿಯು ವೃಷಭವನ್ನೇರಿ ಬರುತ್ತಾಳೆ ಮತ್ತು ಎಡಗೈಯಲ್ಲಿ ಕಮಲ, ಬಲಗೈಯಲ್ಲಿ ತ್ರಿಶೂಲವನ್ನು ಹಿಡಿದಿರುತ್ತಾಳೆ. ನವರಾತ್ರಿಯ ಮೊದಲ ದಿನ ದೇವಿಯ ಆರಾಧಕರ ಮನಸ್ಸು ಮೂಲಾಧಾರ ಚಕ್ರದಲ್ಲಿ ಸ್ಥಿತವಾಗಿರುತ್ತದೆ. ಬ್ರಹ್ಮಚಾರಿಣಿ:ನವರಾತ್ರಿಯ ಎರಡನೇ ದಿನ ದೇವಿ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. ತಪಸ್ಸನ್ನು ಕಟ್ಟುನಿಟ್ಟಾಗಿ ಆಚರಿಸಿರುವ ಕಾರಣದಿಂದ ಬ್ರಹ್ಮಚಾರಿಣಿ ಎಂದು ಕರೆಯಲಾಗುತ್ತದೆ. ತೇಜೋಮಯ ಸ್ವರೂಪವುಳ್ಳ ದೇವಿಯು…

Read More