ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾ ಕಾರ್ಯಕ್ರಮದಲ್ಲಿ ಒಎನ್‌ಜಿಸಿ ಮುಂಬೈ ಇದರ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಸಮಾಜ ಸೇವಕ ಬನ್ನಾಡಿ ನಾರಾಯಣ ಆಚಾರ್ ವಿಶೇಷ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ. ಸುಬ್ರಾಯ ಆಚಾರ್, ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ಮತ್ತಿತರರು ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆ.23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ 29 ಮಂದಿ ಕ್ರೀಡಾಪಟುಗಳು ಭಾಗವಹಿಸಲು ಆಯ್ಕೆಯಾಗಿದ್ದರೆ. ಒಂದೇ ಸಂಸ್ಥೆಯಿAದ 29 ಕ್ರೀಡಾಪಟುಗಳು ಸ್ಪರ್ಧೆಗೆ ಅವಕಾಶ ಪಡೆದಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ. ಇವರಲ್ಲಿ 10 ಮಂದಿ ಬಾಲಕಿಯರು ಹಾಗೂ 19 ಮಂದಿ ಬಾಲಕರು ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ಬಾಲಕಿಯರ ವಿಭಾಗ:ಐಶ್ವರ್ಯ (ಚಕ್ರ ಎಸೆತ, ಗುಂಡು ಎಸೆತ), ಗೀತಾ (400 ಮೀ., 4*400 ರಿಲೇ), ನಾಗಿನಿ (1000 ಮೀ.), ಚರಿಶ್ಮಾ (1000 ಮೀ.), ವೈಷ್ಣವಿ (ಉದ್ದ ಜಿಗಿತ), ಭಾಗೀರಥಿ (3 ಕಿ.ಮೀ ನಡಿಗೆ), ನಂದಾ (ಜಾವಲಿನ್ ಎಸೆತ), ಪ್ರೇಕ್ಷಿತಾ (ಜಾವಲಿನ್ ಎಸೆತ), ಮೇಘಾ (ತ್ರ‍್ರಯಥ್ಲಾನ್ ಸಿ), ಸುಜಾತ ವೈ (ತ್ರಯಥ್ಲಾನ್ ಸಿ). ಬಾಲಕರ ವಿಭಾಗ:ನೋಯಿಲ್ (ಉದ್ದ ಜಿಗಿತ), ಮಹಮ್ಮದ್ ತಬ್ಶೀರ್ (ತ್ರಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhuservices.karnataka.gov.in/ ಮೂಲಕ ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 25 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಆರ್ಥಿಕ ವ್ಯವಸ್ಥೆ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ತರ ಪಾತ್ರ ವಹಿಸುತ್ತವೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಅವರುಗಳಲ್ಲಿ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಉದ್ಯಮವನ್ನು ವಿಸ್ತರಿಸಲು ಅರಿವು ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆ.ಸಿ.ಟಿ.ಯು), ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್) ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರ್ಯಾಂಪ್ ಯೋಜನೆಯಡಿ ಟ್ರೇಡ್ಸ್ ಯೋಜನೆ ಕುರಿತ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಗಾರಿಕೆಗಳ ಹೊಸ ಘಟಕ ಸ್ಥಾಪನೆಗೆ ಹಾಗೂ ಕೈಗಾರಿಕೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಇದರ ವಾರ್ಷಿಕ ಸರ್ವ ಸದಸ್ಯರ ಸಭೆಯು ಇಲ್ಲಿನ ರೋಟರಿ ಕ್ಲಬ್‌ನಲ್ಲಿ ಬುಧವಾರ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಆಶಾ, ನಿರ್ದೇಶಕರಾದ ಸರಳಾ ಶೆಟ್ಟಿ,, ಗೀತಾ ಎಸ್., ಸಾವಿತ್ರಿ, ಗಿರಿಜಾ, ನೇತ್ರಾವತಿ, ಪ್ರೇಮಾ, ಲಕ್ಷ್ಮೀ ಬೈಂದೂರು, ಅಂಬಿಕಾ, ಅಲಿಯಾನಾಜ್, ಶ್ಯಾಮಲಾ, ಮಾಲತಿ, ಸಿಬ್ಬಂದಿ ಪೂರ್ಣಿಮಾ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ವಾರ್ಷಿಕ ವರದಿ ಹಾಗೂ ಆಡಿಟ್ ವರದಿ ಮಂಡಿಸಿದರು. ಕಛೇರಿ ಸಿಬ್ಬಂದಿ ನಾಗರಾಜ್ ಸ್ವಾಗತಿಸಿದರು. ಪತ್ರಕರ್ತ ಅಂದುಕಾ ಎ. ಎಸ್. ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ) ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಯುವನಿಧಿ ಫಲಾನುಭವಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆ.ಜಿ.ಟಿ.ಟಿ.ಐ, ಕಾರ್ಕಳ ದೂ.ಸಂ: 08258-200451 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆಜಿಟಿಟಿಐ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿಶ್ವಕರ್ಮ ಸಮುದಾಯ ಎಲ್ಲಾ ಸಮುದಾಯಗಳಿಂದ ಅತಿ ಸಣ್ಣ ಸಮುದಾಯ ಆದರೆ ಆ ಸಮುದಾಯ ಎಲ್ಲರಿಗೂ ಮಾದರಿಯಾಗಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅವರ ಕಾರ್ಯ ವೈಕರಿ, ವಿದ್ವತ್ ಬಹು ಎತ್ತರಕ್ಕಿದೆ, ಇಂದು ಜಾತಿ ಆಧಾರಿತ ವೃತ್ತಿ ಕುಸಿಯುತ್ತಿದೆ. ಆಧುನಿಕತೆಯ ಮೂಲಕ ಬೇರೆ ಬೇರೆ ಕ್ಷೇತ್ರಗಳನ್ನು ಸಮುದಾಯದ ಆಕರ್ಷಿಸುತ್ತಿದೆ, ಈ ಹಿನ್ನಲ್ಲೆಯಲ್ಲಿ ಕೇಂದ್ರ ಸರಕಾರ ಮೂಲ ವೃತ್ತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶ್ವಕರ್ಮ ಯೋಜನೆಗಯನ್ನು ಜಾರಿಗೊಳಿಸಿ ಸಾಕಷ್ಟು ವೃತ್ತಿನಿರತರಿಗೆ ಅನುಕೂಲಕ ವಾತಾವರ ಸೃಷ್ಠಿಸಿದ್ದಾರೆ ಎಂದರಲ್ಲದೆ ವಿಶ್ವಕರ್ಮ ಯಜ್ಞ ಮಹೋತ್ಸವ ಧಾರ್ಮಿಕ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು. ಸಭೆಯಲ್ಲಿ ಒಎನ್ ಜಿಸಿ ಮುಂಬೈ ಇದರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ತಾಲೂಕಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಇವರ ಆಶ್ರಯದಲ್ಲಿ ಮಹಿಳಾ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಉದ್ಯಮ ಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ದೆಹಲಿ ಗ್ರಾಮೀಣಾಭಿವೃದ್ಧಿ ಹಣಕಾಸು ಸಚಿವಾಲಯ ನಿರ್ದೇಶಕರಾದ ಶೈಲೇಶ್ ಕುಮಾರ್ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತರಬೇತಿಯು ನಮ್ಮನ್ನು ಸದೃಢರನ್ನಾಗಿಸಲು ಸಹಕಾರಿಯಾಗಿದೆ. ಮಹಿಳೆಯರು ಜೀವನೋಪಾಯಕ್ಕಾಗಿ ಸ್ವ ಉದ್ಯೋಗವನ್ನು ಕೈಗೊಂಡು ಸ್ವಾವಲಂಬನೆಯ ಜೀವನವನ್ನು ನಡೆಸಲು ಇಂತಹ ತರಬೇತಿಗಳನ್ನು ಸದ್ಬಳಕೆ ಮಾಡಿಕೊಂಡಲ್ಲಿ ಸಾಧ್ಯ. ಮನೆಯ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಿರೋ ಅದೇ ರೀತಿ ಸ್ವಂತ ಉದ್ಯಮವನ್ನು ಕೈಗೊಂಡು ಸ್ವಾವಲಂಬನೆಯ ಬದುಕು ಸಾಗಿಸುವುದು ಮಹಿಳೆಯರಿಗೆ ಕಷ್ಟವೇನಲ್ಲ. ನಾವು ಸ್ವತಂತ್ರರಾದಷ್ಟು, ಮಕ್ಕಳಿಗೂ ಶಿಸ್ತುಬದ್ಧ ಜೀವನ ನಡೆಸುವಂತೆ ತಿಳಿಸಲು ಸಾಧ್ಯವಾಗುತ್ತದೆ. ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ, ಸರಕಾರದಿಂದ ಮತ್ತು ಬ್ಯಾಂಕುಗಳಿಂದ ಸಿಗುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಸಮಾಜದಲ್ಲಿ ಒಬ್ಬ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಪ್ರಮಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಮಹಾ ನಗರ ಪಾಲಿಕೆ, ಮೈ ಭಾರತ ದಕ್ಷಿಣ ಕನ್ನಡ ಜಿಲ್ಲಾ ಯುವ ಜನ ಒಕ್ಕೂಟ ರಿ. ಹಾಗೂ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸನ್ವಿತ್ ಜಿ. ಖಾರ್ವಿ ಕಂಚಿನ ಪದಕ ಪಡೆದು ಸಾಧನೆ ಮೆರೆದಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.
