Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಬೆಳದಿಂಗಳ ಚಿಂತನ ಉಪನ್ಯಾಸ ಮಾಲಿಕೆಯಲ್ಲಿ “ಯಶಸ್ವಿ ಶಿಕ್ಷಕ” ಎಂಬ ವಿಷಯದ ಕುರಿತು ಬ್ರಹ್ಮಾವರ ಎಸ್.ಎಮ್.ಎಸ್. ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಸುಶೀಲಾ ರೈ ಉಪನ್ಯಾಸ ನೀಡಿದರು. ಶಿಕ್ಷಕ ನಿರಂತರ ಓದುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕು. ತಾವು ಕಲಿಸುವ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರಬೇಕು. ಉತ್ತಮ ಸಂವಹನ ಕೌಶಲ್ಯ ಹಾಗೂ ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯದ ಮೂಲಕ ಯಶಸ್ವಿ ಶಿಕ್ಷಕರಾಗಲು ಸಾಧ್ಯ. ಯಶಸ್ವಿ ಶಿಕ್ಷಕ ಉತ್ತಮ ಸಮಾಜದ ನಿರ್ಮಾತೃ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಮ ಶ್ರೇಷ್ಠ ವೃತ್ತಿಯನ್ನು ನಿರ್ವಹಿಸುವನು ಶಿಕ್ಷಕ. ತನ್ನ ವೃತ್ತಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿದರೆ ಸಮಾಜದಲ್ಲಿ ಗೌರವ ಮನ್ನಣೆಗಳು ದೊರಕುತ್ತದೆ ಎಂದರು. ಕಾರ್ಯಕ್ರಮ ಸಂಯೋಜಕ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ನೇತೃತ್ವದಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರ ಸಹಕಾರದಲ್ಲಿ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಣೂರು ಪಡುಕರೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಮಣೂರು ಸಮುಚ್ಚಯ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್ ಅವರು ಶಿಬಿರವನ್ನು ಉದ್ಘಾಟಿಸಿ, ಶಿಕ್ಷಕರು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಅವರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ ಎಂದು ಹೇಳಿದರು. ಶಿಕ್ಷಕರು ಹಾಗೂ ಶಿಕ್ಷಕೇತರರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ಶಿಬರಾರ್ಥಿಗಳಿಗೆ ಅಮೂಲ್ಯವಾದ ರಕ್ತಚಂದನ ಗಿಡ ಮತ್ತು ಬಟ್ಟೆ ಚೀಲಗಳನ್ನು ನೀಡಲಾಯಿತು. ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡೆನ್ನಿಸ್ ಬಾಂಜಿ, ಪ್ರೌಢ ಶಾಲಾ ಹಿರಿಯ ಶಿಕ್ಷಕರಾದ ರಾಮದಾಸ್ ನಾಯಕ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಹೊಳ್ಳ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಿಲ್ಲೆಯ ಕುಂದಾಪುರ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು, ಕನಿಷ್ಠ ಎರಡು ವರ್ಷಗಳಿಂದ ಅಸ್ಥಿತ್ವದಲ್ಲಿರುವ ಹಾಗೂ ಮೂಲಭೂತ ಸೌಕರ್ಯ ಹೊಂದಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಚೇರಿ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810, 2574811 ಅಥವಾ ಇಲಾಖಾ ವೆಬ್‌ಸೈಟ್ https://dwdsc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಕುಂದಾಪುರ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಕ್ರೀಡಾಂಗಣದಲ್ಲಿ ಸೋಮವಾರ ಯಶಸ್ವಿಯಾಗಿ ನೆರವೇರಿತು. ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ, ಸೌಖ್ಯ ಯೋಗ ಟ್ರಸ್ಟ್ ಹೆಬ್ರಿಯ ಅಧ್ಯಕ್ಷರಾಗಿರುವ ಸೀತಾನದಿ ವಿಠಲ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಇದು ಜೀವನದಲ್ಲಿ ಶಿಸ್ತು ತರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ಎಲ್ಲಕ್ಕಿಂತ ಮುಖ್ಯವಾದದ್ದು ಎಂದರು. ಥ್ರೋಬಾಲ್ ಪಂದ್ಯಾಟದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು.ಕ್ರೀಡೆಯಲ್ಲಿನ ಸೋಲು-ಗೆಲುವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಕ್ರೀಡೆಯಲ್ಲಿ ಭಾಗವಹಿಸುವುದೇ ಯಶಸ್ಸಿನ ಮೆಟ್ಟಿಲು ಹತ್ತಲು ದಾರಿ ಮಾಡಿಕೊಡುತ್ತದೆ”ಎಂದು ಮಕ್ಕಳಿಗೆ ಕಿವಿಮಾತು ನುಡಿದರು. ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮರವಂತೆಯ ಕೊಲ್ಲೂರು ನದಿಯಲ್ಲಿ ಮೋಜು ಮಸ್ತಿಗೆ ತೆರಳಿದ್ದು, ಪ್ರವಾಸಿಗರ ಬೋಟ್ ಮಗುಚಿ, ನೀರು ಪಾಲಾದ ಇಬ್ಬರನ್ನು ಎನ್.ಡಿ.ಆರ್.ಎಫ್ ತಂಡವು ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದೆ. ಜಿಲ್ಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರ ತಂಡವು ವಿವಿಧ ಸ್ಥಳಗಳನ್ನು ವೀಕ್ಷಿಸಿ, ಮರವಂತೆ ಗ್ರಾಮದ ವರಾಹಸ್ವಾಮಿ ದೇವಸ್ಥಾನದ ಮುಂಭಾಗ ಹರಿಯುವ ಕೊಲ್ಲೂರು ನದಿಯಲ್ಲಿ ದೋಣಿ ವಿಹಾರಕ್ಕೆ ಹೋದಂತಹ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸರು ದೋಣಿ ವಿಹಾರಕ್ಕೆ ನಿರ್ಬಂಧವಿರುವುದಾಗಿ ತಿಳಿಸಿದರೂ ಅದನ್ನು ಲೆಕ್ಕಿಸದೇ ಪ್ರಕ್ಷಬ್ಧ ವಾತಾವರಣವಿದ್ದರೂ ನದಿಗೆ ತೆರಳಿದಾಗ ಭಾರೀ ಗಾಳಿಗೆ ಅವರುಗಳು ಸಂಚರಿಸುತ್ತಿದ್ದ ಬೋಟ್ ಮಗುಚಿ ಅದರಲ್ಲಿದ್ದ ನಾಲ್ವರು ನೀರಿನಲ್ಲಿ ಮುಳುಗಿ, ಒಬ್ಬ ಈಜಿ ದಡ ಸೇರಿದರೆ, ಮತ್ತೊಬ್ಬ ಈಜು ಹೊಡೆದು ಸುಸ್ತಾಗಿ ಮುಳುಗುವ ಹಂತದಲ್ಲಿದ್ದಾಗ ಅಲ್ಲಿನ ಸ್ಥಳೀಯ ಜನರು ಹಗ್ಗದ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ದಡಕ್ಕೆ ತಲುಪುವಂತೆ ಮಾಡಿದರು. ಸರಿಯಾಗಿ ಈಜು ಬಾರದೆ ಮುಳುಗುವ ಹಂತದಲ್ಲಿದ್ದ ಮತ್ತೊಬ್ಬನನ್ನು ಸ್ಥಳೀಯ ನಾಗರಿಕರು ನೀರಿನಿಂದ ಎಳೆದು ತಂದು ದಡ ಸೇರಿಸಿ ರಕ್ಷಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 40 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಉಡುಪಿ ದೂ.ಸಂಖ್ಯೆ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಶಿಶು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸದಾ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿರುವ ಪಂಚವರ್ಣದ ಕಾರ್ಯ ವೈಖರಿ ಇಡೀ ಮನುಕುಲಕ್ಕೆ ಮಾದರಿಯಾಗಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಹೇಳಿದರು. ಅವರು ತೆಕ್ಕಟ್ಟೆ ಗಣಪತಿ ಶ್ರೀಯಾನ್ ಮನೆಯಂಗಳದಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ 270ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನದ ಸಮಾರೋಪದಲ್ಲಿ ಮಾತನಾಡಿದರು. ಸಂಘಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯಕ್ರಮಗಳನ್ನು ನೀಡುತ್ತವೆ ಆದರೆ ಪಂಚವರ್ಣ ಸಂಘಟನೆ ಒಂದು ಹೆಜ್ಜೆ ಮುಂದೆ ಇರಿಸಿ ನಿರಂತರ ಆರು ವರ್ಷಗಳಿಗೂ ಅಧಿಕವಾಗಿ ಪ್ರಕೃತಿಯನ್ನು ಆರಾಧಿಸುವ ಉಳಿಸುವ ಕಾಯಕ ನಿಜಕ್ಕೂ ಶ್ಲಾಘನೀಯ ಇಂತಹ ಸಂಘಟನೆ ಗ್ರಾಮ ಗ್ರಾಮದಲ್ಲಿ ಹುಟ್ಟಿಕೊಳ್ಳಲಿ ಎಂದು ಹಾರೈಸಿದರು. ಇದೇ ವೇಳೆ ಸಹಾಯಕ ಆಯುಕ್ತೆ ರಶ್ಮಿ ಗಿಡವನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದರು. ಪೂರ್ವಾಹ್ನ ಏಳು ರಿಂದ ಹಲವು ಮನೆಗಳಿಗೆ ತೆರಳಿ ಗಿಡ ನೆಟ್ಟು ಅದರ ಮಹತ್ವ ತಿಳಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ‘ಕ್ರಿಯೇಟಿವ್ ಗುರುದೇವೋಭವ’ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಅವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ‘ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಇನ್ನಷ್ಟು ಮಹತ್ತರವಾಗಿದೆ. ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಸಂಸ್ಕಾರ, ಶಿಸ್ತು ಹಾಗೂ ಮಾನವೀಯತೆ ಬೆಳೆಸುವುದು ಶಿಕ್ಷಕರ ಮಹತ್ತರ ಜವಾಬ್ದಾರಿ’ ಎಂದು ನುಡಿದರು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಲಾಯಿ ಬಾಕ್ಯಾರು, ತೆಳ್ಳಾರುವಿನ ಶಿಕ್ಷಕ ಕೆ. ಯೋಗೀಶ್ ಕಿಣಿ ಅವರು ಮಾತನಾಡಿ ‘ಇಂದಿನ ಪೀಳಿಗೆಗೆ ಶಿಕ್ಷಕರು ಕೇವಲ ಪಾಠ ಬೋಧಕರು ಮಾತ್ರವಲ್ಲ, ಬಾಳಿನ ದಾರಿ ತೋರಿಸುವ ದೀಪಸ್ತಂಭರೂ ಆಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅನನ್ಯ’ ಎಂದು ಹೇಳಿದರು. ‘ಅಮ್ಮನ ನೆರವು ‘ ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಕಳ ಇಲ್ಲಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರನಾರಾಯಣ ಬಿಲ್ಲವ (ಸಿ.ಎನ್‌. ಬಿಲ್ಲವ) ಶಿರೂರು ಅವರು ಕರ್ನಾಟಕ ರಾಜ್ಯ ಸರಕಾರವು ಡಾ. ಸರ್ವೆಪಲ್ಲಿ ರಾಧಕೃಷ್ಣನ್‌ ಅವರ ಹೆಸರಿನಲ್ಲಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 20 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದ್ದು, ಸಿ.ಎನ್‌. ಬಿಲ್ಲವ ಅವರು ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಶಿಕ್ಷಕರಾಗಿದ್ದಾರೆ. ಸಿ.ಎನ್‌. ಬಿಲ್ಲವ ಅವರು 60ಕ್ಕೂ ಹೆಚ್ಚು ಇಲಾಖಾ ತರಬೇತಿ ಪಡೆದಿದ್ದು ಜಿಲ್ಲಾ, ರಾಜ್ಯ ಮಟ್ಟದ ತರಬೇತಿಯ ಜೊತೆಗೆ ಸ್ಕಟ್, ಮಾಹಿತಿ ಸಿಂಧು, ಯೋಗ ಮುಂತಾದ ತರಬೇತಿಯನ್ನು ಪಡೆದಿದ್ದಾರೆ. ಶಿಕ್ಷಕ ವೃತ್ತಿಯೊಂದಿಗೆ ಚಿತ್ರಕಲೆ, ಕೇ ಆರ್ಟ್ಸ್, ಕ್ರಾಫ್ಟ್, ಮರಳು ಶಿಲ್ಪ,ಕಲಿಕಾ ಮಾದರಿ ತಯಾರಿ, ಕಥೆ, ಕವನ, ನಾಟಕ ರಚನೆ, ಪತ್ರಿಕೆ ಸಂಪಾದಕತ್ವ, ಸಿಮೆಂಟ್ ಕಲಾಕೃತಿ ತಯಾರಿ, ಗಾರ್ಡನ್/ತೋಟಗಾರಿಕೆ ಜೊತೆಗೆ ಯೋಗ, ನಾಟಕ ಮತ್ತು ಯಕ್ಷಗಾನದ ಗೀಳು, ಶಿಕ್ಷಕ ವೃತ್ತಿಯೊಂದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ  ಕುಂದಾಪುರದ ಗಾಂಧಿ ಮೈದಾನದಲ್ಲಿ  ನಡೆದ  ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿನಿಯರಾದ ರಿಷಾ, ಸಂಜನಾ, ಪ್ರೀತಿ, ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ದೈಹಿಕ ಶಿಕ್ಷಕ ಉಪನ್ಯಾಸಕರಾದ ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿ ಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More