ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್‌ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರು?ರ ಖೋ-ಖೋ ತಂಡ 28-5 ಅಂಕಗಳ ಅಂತರದಿಂದ ಪುತ್ತೂರಿನ ವಿವೇಕಾನಂದ ಕಾಲೇಜು ವಿರುದ್ಧ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್‌ನ ತಂಡ ಏಕಪಕ್ಷೀಯವಾಗಿ 18-0 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜು ವಿರುದ್ಧ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ ”ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್‌ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಗೆ ಆಳ್ವಾಸ್ ಕಾಲೇಜಿನ ನಿಖಿಲ್ ಮತ್ತು”ಬೆಸ್ಟ್ ಡಿಫೆಂಡರ್ ಪ್ರಶಸ್ತಿ”ಗೆ ಪ್ರಮೋದ್ ಡಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಹವ್ಯಕ ಸಭಾ ರಿ. ಇದರ ವಾರ್ಷಿಕೋತ್ಸವ ಎಪ್ರಿಲ್ 6 ರಂದು ಉಪ್ಪುಂದ ಪಟೇಲರ ಮನೆಯಲ್ಲಿ ನಡೆಯಲಿದ್ದು ಪ್ರತಿಭಾ ಪುರಸ್ಕಾರವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಂದಾಪುರ-ಬೈಂದೂರು ತಾಲೂಕಿನಲ್ಲಿ ವ್ಯಾಸಂಗ ಮಾಡುತ್ತಿರುವ ಹವ್ಯಕ ಸಮಾಜದ ವಿದ್ಯಾರ್ಥಿಗಳಿಗೆ 2022-23 ಮತ್ತು 2023-24 ರಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೇಯಲ್ಲಿ ಶೇಕಡಾ 90% ಗಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಅಂಕಪಟ್ಟಿ ಪ್ರತಿಯೊಂದಿಗೆ ಕೈ ಬರಹದ ಅರ್ಜಿಯನ್ನು ಯು. ಸಂದೇಶ್ ಭಟ್ ಪ್ರಧಾನ ಕಾರ್ಯದರ್ಶಿ ಪಟೇಲರ ಮನೆ ಉಪ್ಪುಂದ ಅಂಚೆ, ಬೈಂದೂರು ತಾಲೂಕು – 576232 (ಮೊಬೈಲ್ ನಂ : 9449616434) ಈ ವಿಳಾಸಕ್ಕೆ ಎಪ್ರಿಲ್ 1 ರ ಒಳಗೆ ಕಳುಹಿಸಬೇಕಾಗಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆ ಅಧ್ಯಕ್ಷರ ಮನೆಯ ಮಹಡಿ ನಿರ್ಮಾಣಕ್ಕೆ ಪುರಸಭೆ ನೀಡಿದ ಪರವಾನಗೆಯ ಕಡತ ಕಾಣೆಯಾಗಿದೆಯಾ ಇಲ್ಲಾ ಅಕ್ರಮವಾಗಿ ಮಹಡಿ ನಿರ್ಮಾಣ ಮಾಡಿ ಈಗ ಹೊಸದಾಗಿ ಅಕ್ರಮವಾಗಿ ಪರವಾನಗೆಯ ಕಡತ ರಚನೆ ಮಾಡುವ ಹುನ್ನಾರ ನಡೆಯುತ್ತಿದೆಯಾ ಎನ್ನುವುದನ್ನು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ. ಪುರಸಭೆಯ ಕಡತ ಕಾಣೆಯಾಗುವುದು ಒಂದು ಗಂಭೀರ ಪ್ರಕರಣ. ಇದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು. ಆದರೆ ಪುರಸಭೆಯ ಮುಖ್ಯಾಧಿಕಾರಿಗಳು ಮಾಹಿತಿ ಹಕ್ಕಿನಲ್ಲಿ ನೀಡಿದ ಉತ್ತರದಲ್ಲಿ ಅಧ್ಯಕ್ಷರ ಮಹಡಿ ನಿರ್ಮಾಣದ ದಾಖಲೆಗಳು ಇಲ್ಲಾ ಎನ್ನುವ ಮಾಹಿತಿ ನೀಡಿದ್ದು ಈಗ ಕಡತ ಕಾಣೆಯಾಗಿದೆ ಎನ್ನುವ ಹೊಸ ಉತ್ತರ ಹಲವು ಅನುಮಾನಗಳಿಗೆ ಏಡೆ ಮಾಡಿದೆ. ಪುರಸಭೆ ಅಕ್ರಮ ನಿರ್ಮಾಣದ ಬಗ್ಗೆ ಸಾರ್ವಜನಿಕರಿಗೆ ಅನುಸರಿಸುವ ಕಾನೂನಿನ ಅಡಿಯಲ್ಲಿ ಅಧ್ಯಕ್ಷರು ಬರುವುದಿಲ್ಲವಾ? ಅಥವಾ ಅಧ್ಯಕ್ಷರಿಗೆ ವಿಶೇಷ ಕಾನೂನು ಇದೆಯಾ ಎನ್ನುವುದನ್ನು ಸಾರ್ವಜನಿಕವಾಗಿ ತಿಳಿಸಬೇಕು. ಅಧ್ಯಕ್ಷರು ಸಾರ್ವಜನಿಕ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ವ್ಯವಹಾರದ ಅರಿವು ಮಾಡಿಸಿಕೊಂಡರೆ ಭವಿಷ್ಯದ ದಿನಗಳಲ್ಲಿ ಶ್ರೇಷ್ಠ ಉದ್ಯಮಶೀಲರಾಗಬಹುದು. ಇದಕ್ಕೆ ಕಠಿಣ ಪರಿಶ್ರಮದ ಅಗತ್ಯವಿದೆಯೆಂದು ಎಂದು ಮಹಿಳಾ ಉದ್ಯಮಿ ಹುಣ್ಸೆಮಕ್ಕಿ ವಸಂತಿ ಎಮ್. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ “ವೀ-ಗ್ರೋ ಬ್ಯುಸಿನೆಸ್ ಡೇ” ಇದರ ಎರಡನೇ ಹಂತವಾದ ವ್ಯವಹಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಅಂತಿಮ ಲೆಕ್ಕ ಪರಿಶೋಧಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಾಕ್ತನ ವಿದ್ಯಾರ್ಥಿಯಾದ ಶ್ರವಣ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ತೀರ್ಪುಗಾರರಾದ ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಣಾಧಿಕಾರಿ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತç ಉಪನ್ಯಾಸಕರಾದ ದಿನಕರ್ ಶೆಟ್ಟಿ ಉಪಸ್ಥಿತರಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಮಾಲತಿ ಕುಂದರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬಹುಮಾನಕ್ಕಾಗಿ ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್ 29 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಾಮ್ ಜಿ.ಎನ್.ಪೂಜಾರಿ ಅವರನ್ನು ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಮ್ ಜಿ.ಎನ್.ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಿದ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಶಾಮ್ ಸಾಧನೆಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಶಾಲೆಯ ಶಿಕ್ಷಕರು, ಶಿಕ್ಷಕೇತರರು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಕೊರಗ ಕುಟುಂಬಗಳಿಗೆ ಹಲವಾರು ವರ್ಷಗಳ ಹಿಂದೆ ಸರ್ಕಾರದ ಸಹಾಯಧನದಿಂದ ನಿರ್ಮಿಸಲಾದ ಮನೆಗಳು ಶಿಥಿಲಗೊಂಡಿದ್ದು ಅಂತಹ ಮನೆಗಳನ್ನು ದುರಸ್ತಿ ಪಡಿಸಲು ಸರಕಾರ ಅಗತ್ಯ ಕ್ರಮ ವಹಿಸುವಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸ ಗುರುರಾಜ್ ಗಂಟಿಹೊಳೆ ಅವರು ಸರ್ಕಾರವನ್ನು ಆಗ್ರಹಿಸಿದರು. ಮುಖ್ಯಮಂತ್ರಿ ವಸತಿ ರಹಿತ ಕೊರಗ ಸಮುದಾಯದ ಅರ್ಹ ಫಲಾನುಭವಿಗಳಿಗೆ ಘಟಕ ವೆಚ್ಚ ರೂ. 4.50 ಲಕ್ಷ ಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರದ ಸಹಾಯಧನದಿಂದ ನಿರ್ಮಿಸಿರುವ ಮನೆಗಳನ್ನು ಅನುದಾನದ ಲಭ್ಯತೆಗನುಸಾರವಾಗಿ ಪರಿಶೀಲಿಸಿ ದುರಸ್ಥಿ ಪಡಿಸಲು ಕ್ರಮವಹಿಸಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಉತ್ತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, 2024ನೇ ಸಾಲಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಆಳ್ವಾಸ್‌ನ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ರ್ಯಾಕ್‌ಗಳಿಸಿದ್ದಾರೆ. ಪದವಿ ರ್ಯಾಂಕ್‌ಗಳು:ಬಿಎಚ್‌ಎ ವಿಭಾಗದ ಪ್ರತೀಕ್ಷಾ ದ್ವಿತೀಯ ರ್ಯಾಂಕ್, ಸಾಕ್ಷಿ ಸಿಎಸ್ ತೃತೀಯ ರ್ಯಾಂಕ್, ಸ್ನೇಹಾ 5ನೇ ರ್ಯಾಂಕ್, ವರ್ಷಿಣಿ ಎ 9ನೇ ರ್ಯಾಂಕ್, ಸೌರಕ್ಷಾ ಶೆಟ್ಟಿ 10ನೇ ರ್ಯಾಂಕ್ ಪಡೆದರೆ, ಬಿಎಸ್ಸಿ ಎಂಎಲ್‌ಟಿ ವಿಭಾಗದ ಸುಪ್ರೀತಾ ಜೈನ್ 6ನೇ ರ್ಯಾಂಕ್ ಗಳಿಸಿ ಪದವಿ ವಿಭಾಗದಲ್ಲಿ ಒಟ್ಟು 6 ರ್ಯಾಂಕ್‌ಗಳು ಕಾಲೇಜಿಗೆ ಲಭಿಸಿದೆ. ಸ್ನಾತಕೋತ್ತರ ರ್ಯಾಂಕ್‌ಗಳು:ಎಂಎಚ್‌ಎ ವಿಭಾಗದಲ್ಲಿ ಪ್ರಜ್ಞಾ 5ನೇ ರ್ಯಾಂಕ್ ಹಾಗೂ ರಮ್ಯಾ ಕೆ. ಎನ್. 8ನೇ ರ್ಯಾಂಕ್ ಪಡೆದರೆ, ಎಂಎಸ್ಸಿ ಕ್ಲಿನಿಕಲ್ ಸೈಕಾಲಜಿಯ ಫಾತಿಮಾ ಫಾಹಿಮಾ 9ನೇ ರ್ಯಾಂಕ್ ಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ಡಾ. ವಿನಯ್ ಆಳ್ವ, ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.19: ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಕಡ್ಡಾಯವಾಗಿ ಟರ್ಪಾಲ್‌ನಿಂದ ಮುಚ್ಚಿ ಸಾಗಾಟ ಮಾಡುವಂತೆ ಸಂಬಂಧಪಟ್ಟ ಎಲ್ಲಾ ವಾಹನ ಚಾಲಕರು ಹಾಗೂ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಟರ್ಪಾಲ್‌ನಿಂದ ಮುಚ್ಚದೇ ಸಾಗಾಟ ಮಾಡುತ್ತಿರುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿದ್ದ 3 ಬೋಟುಗಳಿಗೆ ದಂಡ ವಿಧಿಸಿ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕಾರ್ಯಾಚರಣೆ ನಡೆಸಿದ್ದು 3 ಬೋಟುಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರಿಗೆ ತಿಳಿಸಲಾಗಿತ್ತು. ವಿಚಾರಣೆ ನಡೆಸಿದ ಅವರು ಬೋಟುಗಳ ಮಾಲಕರಿಗೆ ಒಟ್ಟು 16 ಸಾವಿರ ರೂ. ದಂಡ ವಿಧಿಸಿದ್ದಾರೆ. ಮತ್ತೊಂದು ಬೋಟ್‌ನಲ್ಲಿ ಬೆಳಕು ಮೀನುಗಾರಿಕೆ ನಡೆಸಲು ಜನರೇಟರ್ ಅಳವಡಿಸಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ. ಅವರಿಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಬೋಟ್ ಅನ್ನು ಬಿಡುಗಡೆಗೊಳಿಸುವ ಮುನ್ನ ಬೋಟುಗಳಲ್ಲಿ ಅಳವಡಿಸಿದ ಜನರೇಟರ್ ಹಾಗೂ ಬೆಳಕು ಮೀನುಗಾರಿಕೆಗೆ ಸಂಬಂಧಿಸಿದ ಲೈಟಿಂಗ್ ಉಪಕರಣಗಳನ್ನು ತೆರವುಗೊಳಿಸಲಾಗಿದೆ. ನಿಷೇಧಿತ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್‌ಗಳನ್ನು ತಡೆಯಲು ಮೀನುಗಾರಿಕಾ ಇಲಾಖೆ ಹಾಗೂ ಕರಾವಳಿ ಕಾವಲು ಪೊಲೀಸ್ ವತಿಯಿಂದ ಜಂಟಿಯಾಗಿ ಫೈಯಿಂಗ್ ಸ್ಕ್ಯಾಡ್ ರಚಿಸಲಾಗಿದೆ. ಈ ತಂಡವು ಮಲ್ಪೆ ಹಾಗೂ ಗಂಗೊಳ್ಳಿ…
