ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಸರೋಜ ಎಮ್. ಅವರು ಆಯ್ಕೆಗೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ ಆಡಳಿತ ಮಂಡಳಿ ಭೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ತಿಳಿಸಿದ್ದಾರೆ. ಡಾ. ಸರೋಜ ಎಮ್. ಅವರು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 20 ವರ್ಷಗಳಿಂದ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಮತ್ತು ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನ ಹೊಂದಿರುವ ಕೊಡುಗೈ ದಾನಿಯೋರ್ವರ ನೆರವಿನಿಂದ ನೀಡಲಾದ 1.50 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಉಚಿತ ನೋಟ್ಸ್ ಪುಸ್ತಕಗಳನ್ನು1ನೇ ತರಗತಿಯಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಜಿ.ಎಸ್.ವಿ.ಎಸ್.ಅಸೋಸಿಯೇಷನ್ ನ ಅಧ್ಯಕ್ಷರಾದ ಡಾ.ಕಾಶಿನಾಥ್.ಪಿ.ಪೈ , ಸಂಚಾಲಕರಾದ ಎನ್. ಸದಾಶಿವ ನಾಯಕ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಸ್ವಾಗತಿಸಿ, ಶಿಕ್ಷಕಿ ಮಾಲಾಶ್ರೀ ಖಾರ್ವಿ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಸಾಸ್ತಾನದ ಪಾಂಡೇಶ್ವರ ಕಳಿಬೈಲ್ನಲ್ಲಿ ಕೊರಗ ಜಾನಂಗದಲ್ಲಿ ಸಂಪ್ರದಾಯಕ ಡೋಲುವಾದಿಸುವ ಸ್ವಾಮಿ ತನಿಯ ಸಾಸ್ತಾನ ಬಳಗಕ್ಕೆ ಉತ್ತಮ ಗುಣಮಟ್ಟದ ಸಮವಸ್ತ್ರ ವಿತರಿಸಲಾಯಿತು. ಸಮವಸ್ತ್ರವನ್ನು ವರಾಹ ಕೇಟರಿಂಗ್ ಪಾಂಡೇಶ್ವರದಿಂದ ದಿನೇಶ್ ಬಾಂಧವ್ಯ ಪ್ರಾಯೋಜಕತ್ವದಲ್ಲಿ ವಿತರಿಸಲಾಯಿತ್ತಲ್ಲದೆ ರಕ್ತದಾನ ಜಾಗ್ರತೆ ಸಂದೇಶವಿರುವುದು ವಿಶೇಷವಾಗಿದೆ. ಈ ಸಂದರ್ಭದಲ್ಲಿ ಶ್ರೀಶ ಉಪಾಧ್ಯ ಹಂಗಾರಕಟ್ಟೆ, ಕೌಶಿಕ್ ಕುಮಾರ್ ಡಿ.ಎಸ್ ಮೈಸೂರ್, ಕಳಿಬೈಲ್ನ ಧರ್ಮದರ್ಶಿ ಅಭಿಜಿತ್, ನವೀನ್ ಪಾತ್ರಿ ಕುಂಜಿಬೆಟ್ಟು, ,ಎಂ ಸಿ ಚಂದ್ರಶೇಖರ್, ಸುದರ್ಶನ್ ಪೂಜಾರಿ, ದಿನೇಶ್ ಪಾಂಡೇಶ್ವರ ಮತ್ತಿತ್ತರು ಉಪಸ್ಥಿತರಿದ್ದರು.. ಸಮವಸ್ತ್ರವನ್ನು ಸ್ವಾಮಿ ತನಿಯ ಬಳಗದ ಮುಖ್ಯಸ್ಥ ಶೇಖರ್ ಸಾಸ್ತಾನ ಮತ್ತು ಕೃಷ್ಣ ನಿರಾಡಿಜೆಡ್ದುರವರು ಸಮವಸ್ತ್ರವನ್ನು ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟರ್ಸ್ ಪ್ರೈಲಿಮಿಟೆಡ್ ಇಲ್ಲಿ ಜೂನ್ 6ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ, ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪುನರ್ಜನ್ಮ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ಜುಲೈ 4ರಿಂದ 13ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಮಹಿಳಾ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಮಾಲೋಚನಾ ಸಭೆ ಮೂಡುಬಿದಿರೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇತ್ತೀಚಿನ ದಿನಗಳಲ್ಲಿ ಮದ್ಯ, ಮಾದಕ ವಸ್ತುಗಳು ಹಾಗೂ ಇತರ ವ್ಯಸನಗಳ ಬಲೆಗೆ ಮಹಿಳೆಯರೂ ಸಿಲುಕುತ್ತಿರುವುದು ಆತಂಕಕಾರಿ ಬೆಳವಣಿಗೆ. ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಹಿಳೆ ದಾರಿ ತಪ್ಪಿದರೆ ಇಡೀ ಕುಟುಂಬವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ, ವ್ಯಸನಮುಕ್ತ ಬದುಕಿನತ್ತ ಕೊಂಡೊಯ್ಯುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ: 9482492778, 9480320935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಎಂ. ಅವರು ವರ್ಗಾವಣೆಗೊಂಡು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂಲತಃ ಬೈಂದೂರು ಬಾಡದವರಾದ ರಾಘವೇಂದ್ರ ಎಂ. ಅವರು ಕಾವೂರು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುವ ಅವಧಿಯಲ್ಲಿ ವಿವಿಧ ಪ್ರಕರಣಗಳ ತನಿಖೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು. ಇಲಾಖೆಯ ವರ್ಗಾವಣೆ ಆದೇಶದಂತೆ ಅವರು ಪಾಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಸೋಮವಾರ ನೂತನ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಕುರಿತು ವಿಶೇಷ ಆಧ್ಯಾತ್ಮಿಕ ಜಾಗೃತಿಯ ಒಳ ಚಿಂತನ ಶಿಬಿರವು ಕುಂದಾಪುರದ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಜೂನ್ 7ರಂದು ಭಾನುವಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾನವ ಜೀವನದ ನಿಜವಾದ ಅರ್ಥ, “ನಾನು ಯಾರು?” ಎಂಬ ಮೂಲಭೂತ ಪ್ರಶ್ನೆಗೆ ಉತ್ತರ, ಆತ್ಮಸಾಕ್ಷಾತ್ಕಾರ, ಪರಮಾತ್ಮನೊಂದಿಗೆ ಆತ್ಮದ ಸಂಬಂಧ, ಮನಶಾಂತಿ, ಧ್ಯಾನದ ಮಹತ್ವ ಹಾಗೂ ಆತ್ಮಜ್ಞಾನದ ಮಾರ್ಗದ ಕುರಿತು ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಆಳವಾದ ಉಪನ್ಯಾಸ ನೀಡಲಿದ್ದಾರೆ. ಇಂದಿನ ಒತ್ತಡಭರಿತ ಜೀವನದಲ್ಲಿ ಶಾಂತಿ, ಸತ್ಯ ಮತ್ತು ಧರ್ಮದ ಮಾರ್ಗದಲ್ಲಿ ನಡೆಯಲು ಅಗತ್ಯವಾದ ಆಧ್ಯಾತ್ಮಿಕ ಮಾರ್ಗದರ್ಶನವನ್ನು ಈ ಕಾರ್ಯಕ್ರಮದ ಮೂಲಕ ಪಡೆಯಬಹುದು. ಆಧ್ಯಾತ್ಮಿಕ ಜ್ಞಾನವನ್ನು ಅರಸುವವರು, ಯುವಜನತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7619115623, 7026293111
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು ರಿ., ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10 ರ ತನಕ ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಜೂನ್ 10 ಬುಧವಾರದಂದು ಸಂಜೆ ಗಂಟೆ 5.00 ಕ್ಕೆ ನಡೆಯಲಿದ್ದು ಗಡಿನಾಡು ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಯಶಸ್ವಿಯಾಗಿ ಪೂರೈಸಿರುವುದಕ್ಕಾಗಿ, ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಕರ್ನಾಟಕ ಗಡಿನಾಡು ಸಂಘಟನಾಗಾರರಾಗಿ 35 ವರ್ಷದ ಸೇವೆಗಾಗಿ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ನೀಡಿ…
