ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಅಂದರ್-ಬಹರ್ ಇಸ್ಪೀಟ್ ಜುಗಾರಿ ನಿರತ 6 ಮಂದಿಯನ್ನು ಬೈಂದೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ತಿಮ್ಮೇಶ್ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಆರೋಪಿಗಳಾದ ಶೇಖರ್ ಪಡುವರಿ, ಹರೀಶ್ ನಾಯ್ಕ ಭಟ್ಕಳ, ದೇವೇಂದ್ರ ಜಟ್ಟಪ್ಪ ನಾಯ್ಕ ಭಟ್ಕಳ, ಅಶೋಕ ವೆಂಕಟೇಶ್ ನಾಯ್ಕ ಭಟ್ಕಳ, ನಾಗಪ್ಪ ಗೋವಿಂದ ನಾಯ್ಕ ಭಟ್ಕಳ, ದಿವಾಕರ ಶಿರೂರು ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳಿಂದ ನಗದು 24,010, 3 ಬೈಕ್, 1 ಸ್ಕೂಟರ್, ಇಸ್ಪೀಟ್ ಎಲೆ ಸ್ವಾಧಿ ನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಡಿಯ ಹಳೆ ಅಳಿವೆ ಬೀಚ್ ರಸ್ತೆ ಬದಿಯಲ್ಲಿ ಸಂಭವಿಸಿದೆ. ಕೋಡಿ ನಿವಾಸಿ ರಮೇಶ್ ಪೂಜಾರಿ (63) ಮೃತಪಟ್ಟವರು. ಅವರು ನ.16ರ ರಾತ್ರಿ 11.15ರಿಂದ ನ. 17ರ ಬೆಳಗ್ಗೆ 8 ಗಂಟೆಯ ಮಧ್ಯದ ಅವಧಿಯಲ್ಲಿ ಹಳೆ ಅಳಿವೆ ಕಡೆಯಿಂದ ಬೀಜಾಡಿ ಕಡೆಗೆ ಬೀಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯಾವುದೋ ವಾಹನ ಬಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಉಪಚರಿಸಿ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ನ. 17ರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮೃತರ ಅಳಿಯ ದಿನಕರ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದ ಅವರು, ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟವು ಹೆಮ್ಮಾಡಿಯಲ್ಲಿ ನಡೆಯಿತು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿ ರೆಹಮತುಲ್ಲ 17 ರ ವಯೋಮಾನದ ಬಾಲಕರ 100ಮೀಟರ್ ಓಟ ಹಾಗೂ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾನೆ. ವಿಜೇತ ವಿದ್ಯಾರ್ಥಿಯ ಸಾಧನೆಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ಪ್ರಶಂಶಿಸಿದ್ದಾರೆ. ಹಾಗೆಯೇ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ ತುಮಕೂರು ಜಿಲ್ಲೆಯಲ್ಲಿ ನಡೆದ U17 ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಆರಾಧ್ಯ ಎಸ್. ಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಸ್ಸಾಂನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚೆಸ್ ಆಟಗಾರ್ತಿಯಾಗಿ ಪ್ರತಿನಿಧಿಸಲಿರುವ ಆರಾಧ್ಯಗೆ ಪ್ರಕೃತಿ ಫೌಂಡೇಶನ್ ರಿ. ಬೆಂಗಳೂರು ಮತ್ತು ಕಶ್ವಿ ಚೆಸ್ ಸ್ಕೂಲ್ ರಿ. ಕುಂದಾಪುರ ಸಂಸ್ಥೆಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೇಖಕಿ ಸಾರಿಕಾ ಅಶೋಕ್ ಅವರ ಕವನ ಸಂಕಲನ “ಲಹರಿ” ಬಿಡುಗಡೆ ಸಮಾರಂಭವು ಬಸ್ರೂರಿನ ನಿವೇದಿತಾ ಪ್ರೌಢ ಶಾಲೆಯ ವಿಶಾಲಾಕ್ಷಿ ಪೂಂಜಾ ಸಭಾಭವನದಲ್ಲಿ ಇತ್ತೀಜಿಗೆ ಜರುಗಿತು. ಕರ್ನಾಟಕ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ, ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾರಿಕಾ ಅಶೋಕ್ ಅವರ ಕವನಗಳ ಆಶಯ ಜೀವನ ಜಂಜಡಗಳ ಸಾಮಾಜಿಕ ಕಾಳಜಿಗಳು ಅಪೂರ್ವದದ್ದು ಎಂದರು. ಕುಂದಪ್ರಭ ಪತ್ರಿಕೆಯ ಸಂಪಾದಕರಾಗಿರುವ ಯುಎಸ್ ಶೆಣೈ ಅವರು ಪುಸ್ತಕ ಬಿಡುಗಡೆಗೊಳಿಸಿ, ಕವಯಿತ್ರಿ ಕವನ ರಚನೆಯಲ್ಲಿ ತನ್ನದೇ ಆದ ಛಾಪು ಮೂಡಿಸಬಲ್ಲರು. ಸಾರಿಕಾ ಅಶೋಕ್ ಅವರ ಕುಂದದ ಪ್ರತಿಭೆ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುಕುಲ ಪಬ್ಲಿಕ್ ಸ್ಕೂಲ್‌ನ ಜಂಟಿ ಆಡಳಿತ ನಿರ್ದೇಶಕರಾದ ಅನುಪಮಾ ಎಸ್. ಶೆಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿ, ವಾಸ್ತು ತಜ್ಞರಾದ ಬಸವರಾಜ್ ಶೆಟ್ಟಿಗಾರ್, ಯಕ್ಷಗಾನ ಪ್ರಸಂಗ ಕರ್ತರಾದ ಮಹಾಬಲ ಹೇರಿಕುದ್ರು, ಬಸ್ರೂರು ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಕೋಡಿನಲ್ಲಿ ನಡೆಯಿತು. ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ಕೊಂಡಿರುತ್ತಾರೆ. ಕಿರಿಯರ ವಿಭಾಗ : ( 1-4 )ಚಿತ್ರಕಲೆ – ರಶ್ಮಿತಾ ಪ್ರಥಮಧಾರ್ಮಿಕ ಪಠಣ – ಅರೇಬಿಕ್ – ನೂಯೀಮ್ ಪ್ರಥಮಆಶುಭಾಷಣ – ಸನ್ವಿಕಾ ದ್ವಿತೀಯ ಹಿರಿಯರ ವಿಭಾಗ: ( 5 – 7 )ಭಕ್ತಿ ಗೀತೆ – ರಾಘವಿ ದ್ವಿತೀಯದೇಶಭಕ್ತಿ ಗೀತೆ – ಖುಷಿ ಪ್ರಥಮಪ್ರಬಂಧ ರಚನೆ- ಸಾರಿಕಾ ಡಿ ಪ್ರಥಮಆಶುಭಾಷಣ – ನಮ್ಯ ದ್ವಿತೀಯಧಾರ್ಮಿಕ ಪಠಣ ಅರೇಬಿಕ್ – ಎಂ. ಮಹಾರೂಫ್ ದ್ವಿತೀಯಕವನ ಪದ್ಯ ವಾಚನ – ಉತ್ಸವಿ ದ್ವಿತೀಯ ಮಿಮಿಕ್ರಿ – ಅದ್ವಿಕ್ ಪ್ರಥಮಧಾರ್ಮಿಕ ಪಠಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಈ ನಾಡಿನಲ್ಲಿರುವ ಸಮಾಜಗಾತುಕ ಶಕ್ತಿಗಳ ಸಂಹಾರಕ್ಕೆ ಇನ್ನಷ್ಟು ವಿಜಯಲಕ್ಷ್ಮಿಯರು ಹುಟ್ಟಿ ಬರಲಿದ್ದಾರೆ. ಇದು ಎಚ್ಚರಿಕೆಯ ಕರೆಗಂಟೆ ಎಂದು ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು. ಅವರು ಭಾನುವಾರ ಕೋಟದ ಗಾಂಧಿಮೈದಾನದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ನೈತಿಕತೆ, ಸತ್ಯದ ಪರವಾಗಿ ಹೋರಾಟ ಮಾಡುವ ಪತ್ರಕರ್ತರು ಈ ನಾಡಿನಲ್ಲಿ ಕಾರ್ಯಾಚರಿಸಲು ಸಿದ್ಧರಾಗಿದ್ದಾರೆ,. ಪ್ರಸ್ತುತ ಪತ್ರಕರ್ತರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ಆದರೆ ನೀವು ವೀಕ್ಷಕರಾಗಿ ಓದುಗರಾಗಿ ನಿಮ್ಮ ಪಾತ್ರ ಏನೆಂಬುವುದನ್ನು ಮನಗಾಣಬೇಕಿದೆ. ಅನ್ಯಾಯ ಆದಾಗ ಸೆಟೆದು ನಿಲ್ಲಬೇಕು, ಸ್ವಾರ್ಥ ಹೆಡಿತನ ಬಿಡಿ, ಭ್ರಷ್ಟರ ದುಷ್ಟರ ಆರ್ಭಟಕ್ಕೆ ಕಡಿವಾಣ ನೀವು ಸಾರ್ವಜನಿಕರು ನಿಷ್ಕಲ್ಮಶ ಹೋರಾಟ ಮಾಡಿ ಎಂದರಲ್ಲದೆ ಮೌನ ಸಲ್ಲ ಪ್ರಶ್ನಿಸುವ ಮನಸ್ಥಿತಿ ಸೃಷ್ಠಿಸಿ, ನನ್ನ ಮೇಲೆ ನೂರಾರು ಕೇಸ್ ಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ “ಆದ್ಯಂತ ಐಟಿ ಫೆಸ್ಟ್ -2025″ನ್ನು ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮಣಿಪಾಲ ಎಮ್.ಐ.ಟಿ ಸಹಪ್ರಾಧ್ಯಾಪಕರಾದ ಡಾ. ರವಿರಾಜ್ ಹೊಳ್ಳ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂತಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರೀಯಾವಾಗಿ ತೊಡಗಿಸಿಕೊಳ್ಳುವ ಅವಶ್ಯಕತೆಯ ಬಗ್ಗೆ ವಿವರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಕಂಪ್ಯೂಟರ್ ಸೈನ್ಸ್ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿಗಳಿಗೆ ವಿಫುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು ಕಲಿಕೆಯ ಜೊತೆಗೆ ಇಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ವಿಶ್ವಾಸ ಬೆಳೆಸಿಕೊಳ್ಳುವಲ್ಲಿ ಸಹಾಯಕವಾಗುವುದೆಂದು, ಈ ಹಿನ್ನೆಲೆಯಲ್ಲಿ ಆಯೋಜಿಸಿರುವ ಐಟಿ ಫೆಸ್ಟ್ ನ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ ಗೊಂಡ, ಕಾಲೇಜಿನ ಹಳೆ ವಿದ್ಯಾರ್ಥಿ ಶಶಿಧರ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 113ನೇ ತಿಂಗಳ ಕಾರ್ಯಕ್ರಮ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ತಲ್ಲೂರು ಶ್ರೀ ವಿಟ್ಠಲ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಟಿ. ಎನ್.ಪ್ರಭು, ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ, ವಸಂತಿ ಪಂಡಿತ್ ಕುಂದಾಪುರ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಬಹುಮುಖ ಪ್ರತಿಭೆ, ಕರ್ನಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಜನಾರ್ದನ ಹಂದೆ, ಮಂಗಳೂರು ಇವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಇದೇ ವೇದಿಕೆಯಿಂದ ಹೊರಹೊಮ್ಮಿದ ಯುವ ಪ್ರತಿಭೆ ಇತ್ತೀಚೆಗೆ ರಾಜ್ಯ ಮಟ್ಟದಲ್ಲಿ ಕೊಳಲು ವಾದನದಲ್ಲಿ ಪ್ರಶಸ್ತಿ ಪಡೆದ ಶ್ಯಾಮ್ ಜಿ. ಎನ್. ಪೂಜಾರಿ, ಗಂಗೊಳ್ಳಿ ಅವರನ್ನೂ ಕೂಡ ಶಾಲು ಹೊದಿಸಿ ಗೌರವಿಸಲಾಯಿತು. ತದನಂತರ ಜನಾರ್ದನ ಹಂದೆಯವರಿಂದ ಗಾನಧಾರ – ಕಥಾಸಾರ ವಿನೂತನ ಕಾರ್ಯಕ್ರಮ ನೆರೆದ…
