ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ. ಬೋಟ್ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತಕ್ಕೀಡಾದ ಬೋಟನ್ನು ಸದ್ಯ ಯಶಸ್ವಿಯಾಗಿ ದಡಕ್ಕೆ ತರಲಾಗಿದೆ. ಕಳೆದ ವಾರಷ್ಟೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲೂ ಕ್ಷಿಪ್ರ ಕಾರ್ಯಚರಣೆ ನಡೆಸಿ ಬೋಟ್ ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಬೋಟ್ ಅಪಘಾತಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ. ಇದನ್ನೂ ಓದಿ► ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ – https://kundapraa.com/?p=101294 .
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ ಓಡನಾಡಿ ಕೋಟತಟ್ಟು ನಿವಾಸಿ ರಾಮ ಮರಕಾಲ ಅವರು ಆಯ್ಕೆಯಾಗಿದ್ದಾರೆ. ಮಾಲಿನಿ ಮಲ್ಯ,ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಡಾ ನಾ ಮೊಗಸಾಲೆ ಹಾಗೂ ಶಾಕುಂತಲಾ ಭಟ್ ಇವರುಗಳಿಗೆ ಈ ಹಿಂದೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಗಿದೆ. ಗೆಳೆಯರ ಬಳಗ ಕಾರಂತ ಪುರಸ್ಕಾರ-2026ನ್ನು ಅಕ್ಟೋಬರ್ ತಿಂಗಳ 11ರ ಭಾನುವಾರ ಸಂಜೆ ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ನಿವಾಸಿ ದಾಕ್ಷಾಯಿಣಿ ರಾವ್ ಅವರು ಮಣೂರು ಮಹಾಲಿಂಗೇಶ್ವರ ಸನ್ನಿಧಾನದಲ್ಲಿರುವ ಶ್ರೀ ಹೇರಂಬ ಮಹಾಗಣಪತಿಯ ಸನ್ನಿಧಿಗೆ ಸುಮಾರು ₹30,000 ಮೌಲ್ಯದ ಸ್ಫಟಿಕ ರುದ್ರಾಕ್ಷಿ ಮಾಲೆಯನ್ನು ಸಮರ್ಪಿಸಿದರು. ಶ್ರೀ ದೇಗುಲದಲ್ಲಿ ಶ್ರೀ ವಿಘ್ನೇಶ್ವರನ ಸನ್ನಿಧಾನದಲ್ಲಿ ಅರ್ಚಕರ ಸಮ್ಮುಖದಲ್ಲಿ ಪವಿತ್ರ ಮಾಲೆಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ, ಮಣೂರು ದೇಗುಲದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಅವರಿಗೆ ಹಸ್ತಾಂತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ತೆಕ್ಕಟ್ಟೆ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ರಾಘವೇಂದ್ರ ಹೆಬ್ಬಾರ್ ಹಾಗೂ ಸಿಡಿಪಿಒ ಉಮೇಶ್ ಅವರು ಪೋಷಣ್ ಅಭಿಯಾನದ ಮಹತ್ವ ಮತ್ತು ಮಕ್ಕಳ ಆರೋಗ್ಯಕರ ಬೆಳವಣಿಗೆಯಲ್ಲಿ ಪೌಷ್ಟಿಕಾಂಶದ ಪಾತ್ರದ ಕುರಿತು ಮಾಹಿತಿ ನೀಡಿದರು. ಸುಮಾರು 25 ರಿಂದ 30 ಮಹಿಳೆಯರು, ಮುಖ್ಯವಾಗಿ ಮಕ್ಕಳ ತಾಯಂದಿರು, ಅಂಗನವಾಡಿ ಹಾಗೂ ಪಿಎಚ್ಸಿ ಸಿಬ್ಬಂದಿಗಳು, ರೋಟರಿ ಸದಸ್ಯರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೊನೆಯಲ್ಲಿ ರೋಟೇರಿಯನ್ ಚಂದ್ರಶೇಖರ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ: 0820-2562244, ಕಾರ್ಕಳ: 0858-230992, ಕುಂದಾಪುರ: 08254-230807 ಹಾಗೂ ಉಡುಪಿ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಆತ್ಮ ಸಾಕ್ಷಾತ್ಕಾರಕ್ಕೂ ಶರೀರ ಅಗತ್ಯ. ಧರ್ಮಾರ್ಥ ಕಾಮ ಮೋಕ್ಷಗಳು ಶರೀರದಿಂದಲೇ ಸಾಧ್ಯವಾಗುವಂತದ್ದು. ಮನುಷ್ಯ ಶರೀರ ಇರುವುದೇ ಮೋಕ್ಷ ಸಾಧನೆಗೆ. ಹಾಗಾಗಿ ಶರೀರವನ್ನು ಉಳಿಸಿಕೊಂಡು, ಮೋಕ್ಷವನ್ನು ಪಡೆಯಲು ಆಹಾರ ಅಗತ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಮಂಗಳವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಶಿವ ಪಾರ್ವತಿಯರ ಮಧ್ಯೆ ವಾದ ನಡೆದ ಸಂಧರ್ಭವನ್ನು ಉದಾಹರಿಸಿ, ಶಿವನು ಭೌತಿಕ ಜಗತ್ತು ಮಿಥ್ಯೆ, ಶರೀರ ಮಾಯೆ, ಆಹಾರ ಸುಳ್ಳು, ಶುದ್ಧ ಚೈತನ್ಯ ಮಾತ್ರ ಸತ್ಯ ಎಂಬುದಾಗಿ ಹೇಳಿದ, ಆದರಿಂದ ಕುಪಿತಳಾದ ಪಾರ್ವತಿಯು, ಕಾಶಿಯಲ್ಲಿ ಅನ್ನಪೂರ್ಣೇಶ್ವರಿಯಾಗಿ ಅವತರಿಸಿದಳು. ಆನಂತರ ಶಿವನು ಭಿಕ್ಷುಕನ ರೂಪದಲ್ಲಿ ‘ಭವತಿ ಭಿಕ್ಷಾಂ ದೇಹಿ’ ಎಂದು ಕೇಳಿದ ಎಂಬ ಕಥೆಯನ್ನು ಉಲ್ಲೇಖಿಸಿ, ಇದು ಅನ್ನದ ಮಹತ್ವವನ್ನು ಲೋಕಕ್ಕೆ ಸಾರಲು ಆದಿದಂಪತಿಗಳು ಆಡಿದ ನಾಟಕ ಎಂದು ವಿವರಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ನೆನಪಿನಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪಂದ್ಯಾಟಕ್ಕೆ ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಚಾಲನೆ ನೀಡಿ ಮಾತಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗಿರುವುದು ವರ್ತಮಾನದ ತುರ್ತು. ಕ್ರೀಡೆ ದೈಹಿಕ ಕ್ಷಮೆತೆಗೆ ಮಾತ್ರವಲ್ಲ; ಮಾನಸಿಕ ಸದೃಢತೆಗೆ ಸಹಕಾರಿ ಎಂದರು. ಈ ಸಂದರ್ಭ ಸಂಸ್ಥೆಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಂಜಿತ್ ಟಿ.ಎನ್, ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್., ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು, ವಿಲ್ಮಾ ಶೆರಲ್ ಕಾರ್ನೆಲಿಯೊ, ಶ್ರೀಜೇಶ್ ಜಿ. ನಾಯ್ಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ, ಜೊತೆ ಕಾರ್ಯದರ್ಶಿ ಕೀರ್ತೇಶ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ವಿಕಾಸ್ ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿರೀಕ್ಷಾ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಇಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಸಿ ಎಸ್ ಆರ್ ನಿಧಿಯಿಂದ ಶಾಲಾ ಸಭಾಂಗಣದ ಇಂಟರ್ಲಾಕ್ ಅಳವಡಿಕೆಗೆ ಭೂಮಿ ಪೂಜೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಸ್ಮಾರ್ಟ್ ಕ್ಲಾಸ್ ಇಂಟರ್ ಆಕ್ಟಿವ್ ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಗುರುರಾಜ್ ಗಂಟಿಹೊಳೆ ಮಾನ್ಯ ಶಾಸಕರು ಬೈಂದೂರು ಇವರು ಶಾಲಾ ಅಭಿವೃದ್ಧಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು ತೊಡಗಿಸಿಕೊಂಡರೆ ಮಾತ್ರ ಉತ್ತಮ ಶಾಲಾ ಪರಿಸರ ಮತ್ತು ಶಾಲಾ ಶೈಕ್ಷಣಿಕ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಾಂತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ ವತಿಯಿಂದ ಶಾಲಾ ಸುರಕ್ಷತಾ ದೃಷ್ಟಿಯಿಂದ ಬೆಂಕಿ ಶಮನ ಚೆಂಡು ಇದರ ಪ್ರಾತ್ಯಕ್ಷಿತೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸಿಎಸ್ಆರ್ ಅನುದಾನ ತರಲು ಸಹಕರಿಸಿದ ಚರಣ್ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಹುಡುಗ ಹುಡುಗಿಯರ ತಂಡವು ಭಾಗವಹಿಸಿ ತಾಲೂಕು ಮಟ್ಟದಲ್ಲಿ ರನ್ನರ್ ಅಪ್ ಆಗಿ ನಾಲ್ಕು ಹುಡುಗರು ಮತ್ತು ನಾಲ್ಕು ಹುಡುಗಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಕ್ರೀಡಾ ಸಂಚಾಲಕಿಯಾದ ಪೂರ್ಣಿಮಾ ಪಿ. ನಾಯಕ್ ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಕಾರ್ಯವೈಖರಿ ಹಾಗೂ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಘಟಕಕ್ಕೆ ಭೇಟಿಯನ್ನು ಆಯೋಜಿಸಲಾಗಿತ್ತು. ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಉಪನ್ಯಾಸಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು “ನವದುರ್ಗ ಆಹಾರ ಉತ್ಪನ್ನಗಳ ಖಾಸಗಿ ನಿಯಮಿತ ಸಂಸ್ಥೆ “ಪಡುಬಿದ್ರಿ, ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆಯಲ್ಲಿ ನಡೆಯುವ ವಿವಿಧ ಹಂತಗಳ ಉತ್ಪಾದನಾ ಪ್ರಕ್ರಿಯೆ, ಯಂತ್ರೋಪಕರಣಗಳ ಬಳಕೆ, ಕಾರ್ಮಿಕರ ಕಾರ್ಯವಿಧಾನ, ಸುರಕ್ಷತಾ ಕ್ರಮಗಳು ಹಾಗೂ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಯ ಕುರಿತು ಅಧಿಕಾರಿಗಳು ವಿವರಿಸಿದರು. ವಿದ್ಯಾರ್ಥಿಗಳು ವಿವಿಧ ಯಂತ್ರೋಪಕರಣಗಳ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ, ತಮ್ಮಲ್ಲಿದ್ದ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಈ ಭೇಟಿಯು ವಿದ್ಯಾರ್ಥಿಗಳಿಗೆ ಪಠ್ಯ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವವನ್ನು ನೀಡಿತು. ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿಶ್ವವಿನಾಯಕ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು.
