ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಸಾವಿತ್ರಿ ಪ್ರಭು ಅವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು. ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಇಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತ್ರಿಷಾ ವಂದಿಸಿ, ಯಕ್ಷಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ, ಸರ್ವೇ ಹಾಗೂ ಅರಣ್ಯ ಇಲಾಖೆ ಸಹಿತ ಇನ್ನಿತರ ಇಲಾಖೆಗಳ ಹಂತದಲ್ಲಿ ಹಲವು ಸಮಯಗಳಿಂದ ಬಾಕಿ ಇರುವ ಕಡತಗಳ ವಿಲೇವಾರಿ ಕುರಿತು ಕುಂದಾಪುರ ಉಪ ವಿಭಾಗಾಧಿಕಾರಿಗಳ ಉಪಸ್ಥಿತಿಯಲ್ಲಿ ಬೈಂದೂರು ತಾಲೂಕು ಕಚೇರಿ ಕೋರ್ಟ್ ಹಾಲ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಲಾಖೆಗಳ ವಿವಿಧ ವಿಭಾಗಗಳಲ್ಲಿ ಹಲವು ತಿಂಗಳಿಂದ ಬಾಕಿ ಇರುವ ಕಡತಗಳ ತ್ವರಿತ ವಿಲೇವಾರಿ ಮಾಡಲು ಸೂಚನೆ ನೀಡಿದರು. ಅಕ್ರಮ ಸಕ್ರಮ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಕ್ರಮ:ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 179 ಅರ್ಜಿಗಳು ಬಗರ್ ಹುಕುಂ ತಂತ್ರಾಂಶದಲ್ಲಿ ಸೇರಿಸಲು ಬಾಕಿ ಇದ್ದು ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ವಂಚಿತರಾಗುತ್ತಿರುವ ಕಾರಣ ಸದರಿ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದರು. ಪ್ಲಾಟಿಂಗ್ ಸಮಸ್ಯೆ ನಿವಾರಣೆಗೆ ಪ್ರಕ್ರಿಯೆ ಚುರುಕುಗೊಳಿಸಿ:ಜಡ್ಕಲ್ ಹಾಗೂ ಮುದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಸ್ನೇಹಕೂಟ, ಶ್ರೀರಾಮ ಭಜನಾ ಮಂಡಳಿ ಮಣೂರು, ಸ್ತೋತ್ರ ಪಠಣ ಸಂಘ ಮಣೂರು ಮತ್ತು ಮಣೂರು ಪರಿಸರದ ಮಹಿಳೆಯರಿಂದ ಅಧಿಕ ಜೇಷ್ಠ ಮಾಸ (ಪುರುಷೋತ್ತಮ ಮಾಸ)ದ ಪ್ರಯುಕ್ತ ಶ್ರೀ ಲಕ್ಷ್ಮಿ ಶೋಭಾನ ಪಠಣ ಹಾಗೂ ಹರಿನಾಮ ಸಂಕೀರ್ತನೆ ಕಾರ್ಯಕ್ರಮ ಗುರುವಾರ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಹಮ್ಮಿಕೊಂಡಿತು. ಮಹಾಲಿಂಗೇಶ್ವರ ದೇವಸ್ಥಾನದ ಹೇರಂಭ ಕಲಾ ವೇದಿಕೆಯಲ್ಲಿ ಅಧಿಕಮಾಸದ ನಾಲ್ಕು ವಾರಗಳಲ್ಲಿ ನಡೆಸಲಾದ ಈ ವಿಶೇಷ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮವನ್ನು ಮಣೂರು ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಉಪಸ್ಥಿತಿಯಲ್ಲಿ ಸಂಪನ್ನಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ನೇಹಕೂಟದ ಅಧ್ಯಕ್ಷ ಭಾರತಿ ವಿ ಮಯ್ಯ ಅವರು ಅಧಿಕ ಮಾಸದ ಬಗ್ಗೆ ಮಾಹಿತಿಯನ್ನು ನೀಡಿದರು.ಇದೇ ವೇಳೆ ದೇಗುಲದ ವತಿಯಿಂದ ಭಾಗವಹಿಸಿದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿತು. ಸಂಘದ ಮುಖ್ಯಸ್ಥೆ ಭಾರತಿ ಮಯ್ಯ ಅವರಿಗೆ ದೇವಸ್ಥಾನದ ವತಿಯಿಂದ ಸ್ಮರಣೆಕೆಯನ್ನು ನೀಡಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಅಚ್ಯುತಹಂದೆ, ಸುಫಲ ಶೆಟ್ಟಿ ಹಾಗೂ ಊರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪೂರ್ವಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಪಾಲಕ/ಪೋಷಕರಿಗಾಗಿ ಓರಿಯೆಂಟೇಶನ್ ಪ್ರೋಗ್ರಾಂ ಅನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಾಧನೆಗಳು, ಐಸಿಎಸ್‌ಇ ಪಠ್ಯಕ್ರಮದ ವೈಶಿಷ್ಟ್ಯಗಳು, ಮೌಲ್ಯಮಾಪನ ಮತ್ತು ಪರೀಕ್ಷಾ ಪದ್ಧತಿ, ವಿದ್ಯಾರ್ಥಿಗಳ ಅಭ್ಯಾಸ ಕ್ರಮ, ಶಿಸ್ತು ಮತ್ತು ವರ್ತನೆ, ಸಮವಸ್ತ್ರ, ಸಮತೋಲಿತ ಆಹಾರ ಪದ್ಧತಿ, ಶಾಲೆಯಲ್ಲಿ ಒದಗಿಸಲಾಗುವ ಇತರ ಸೌಲಭ್ಯಗಳು, ಶಾಲಾ ಡೈರಿಯ ಅಗತ್ಯತೆ ಮತ್ತು ಅನುಕೂಲತೆಯ ಕುರಿತು ಶಿಕ್ಷಕಿಯರಾದ ರೂಪಾ ಜೆ, ಸ್ವಾತಿ, ದೀಪಾ ಹಾಗೂ ರೇಷ್ಮಾ ಅವರು ಸವಿಸ್ತಾರವಾಗಿ ಮಾಹಿತಿಯನ್ನು ಪಾಲಕರೊಂದಿಗೆ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಹಲವರು ನೀಡುವ ಸಲಹೆಗಳನ್ನು ವಿವೇಚನೆಯಿಂದ ಪರಿಗಣಿಸಿ, ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಸಲಹೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಒಂದಾಗಿದ್ದು, ಇದು ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರನ್ನಾಗಿ ಮಾಡುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡುವ ಮೂಲಕ ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಮ್. ಪುರುಷೋತ್ತಮ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ತಮ್ಮ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಹಾಗೂ ಅವರುಗಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೂಡಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್” ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಿರ್ಮಿಸಿರುವ ನೂತನ ಬಾಲಕಿಯರ ಹೈಟೆಕ್ ಶೌಚಾಲಯದ ಉದ್ಘಾಟನೆ ಹಾಗೂ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನೀಡಿದ ನೂತನ ಶಾಲಾ ಬಸ್ ಇದರ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಇದರ ಜೊತೆಗೆ ಜಿಲ್ಲಾ ಪಂಚಾಯತ್ ಅನುದಾನ 2025-26 ವತಿಯಿಂದ ಶಾಲೆಯಲ್ಲಿ ನಿರ್ಮಿಸಿದ ಬಾಲವನ ಹಾಗೂ ದ್ವಿಭಾಷ (ಕನ್ನಡ /ಇಂಗ್ಲಿಷ್ ) ಮಾಧ್ಯಮ ಇದರ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ಶಾಸಕರು ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ಇವರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಶಾಸಕರು ಚಾಲನೆ ನೀಡಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಒಗ್ಗಟ್ಟು ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸಿಎಂ ವಿಜಯ ಅವರನ್ನು ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಪ್ರದಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ದೇವರ ದರ್ಶನ ಪಡೆದ ಬಳಿಕ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ವೇಳೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ದೇವಳದ ಸಮಿತಿ ಸದಸ್ಯರುಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ, ಲ್ಯಾಟರಲ್ ಎಂಟ್ರಿ ಮೂಲಕ 2 ನೇ ವರ್ಷ / 3ನೇ ಸೆಮಿಸ್ಟರ್ ಪ್ರವೇಶಾತಿಗೆ, ಐ.ಟಿ.ಐ / ದ್ವಿತೀಯ ಪಿ.ಯು.ಸಿ (ವಿಜ್ಞಾನ / ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ: 9482492778, 9480320935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ, ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದೆ. ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಈಗಾಲೇ ಎದುರಿಸುತ್ತಿದ್ದೇವೆ. ಈ ದಿಸೆಯಲ್ಲಿ ಪಂಚವರ್ಣ ಈ ಹಸಿರು ಹೆಜ್ಜೆ ಗ್ರಾಮೀಣ ಭಾಗಗಳಲ್ಲಿ ಮೇಳೈಸಿಕೊಂಡಿದೆ ಎಂದು ಕೋಡಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಕೋಡಿ ಗ್ರಾಮಪಂಚಾಯತ್ ನೇತೃತ್ವದಲ್ಲಿ ಕೋಟದ ಪಂಚವರ್ಣ ಸಂಘಟನೆ,ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ,ಸಂಜೀವಿನಿ ಒಕ್ಕೂಟ ಕೋಡಿ ಪಂಚಾಯತ್ ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರ ಸಹಯೋಗದೊಂದಿಗೆ ಮೂರನೇ ವರ್ಷದ ಹಸಿರು ಹೆಜ್ಜೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾತಾವರಣದ ವ್ಯತ್ಯಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದರ ಪರಿಣಾಮದಿಂದ ಬಿಸಿ ಗಾಳಿ,ಮಳೆಯ ಪ್ರಮಾಣ ಕಡಿತಗೊಂಡಿದೆ ಹೀಗಿರುವಾಗ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಹಸಿರು ಅಭಿಯಾನ ಕೈಗೊಂಡರೆ ಪರಿಸರ ಮತ್ತೆ ಸಮತೋಲನ ಕಾಣಲಿದೆ ಇದರಿಂದ ಮುಂದಿನ ಜನಾಂಗಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎಂದು ಕೋಡಿ ಪಂಚಾಯತ್ ಹಸಿರು ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸಿರು ಹೆಜ್ಜೆ…
