Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಕಚೇರಿಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಸಭೆ ನಡೆಯಿತು. ಈ ವೇಳೆ ಅವರು ಮಾತನಾಡಿ, ತಾಲೂಕು ಕಚೇರಿ ಹಾಗೂ ಸರ್ವೇ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಕ್ರಮ ಸಕ್ರಮ ದಡಿ ಅರ್ಜಿ ಸಲ್ಲಿಸಿರುವ ಅರ್ಹ ಕಡತಗಳನ್ನು ಮಂಜೂರು ಮಾಡಲು ಅಸಡ್ಡೆ ತೋರಿಸುತ್ತಿರುವ ಹಾಗೂ ವಿನಾಕಾರಣ ವಿಳಂಬ ಮಾಡುತ್ತಿರುವ ಸಿಬ್ಬಂದಿಗಳ ಮೇಲೆ ಕೆಂಡಾ ಮಂಡಲರಾಗಿ ಅವರನ್ನು ತರಾಟೆಗೆ ತೆಗೆದುಕೊಂಡರು ಹಾಗೂ ಇದಕ್ಕೆ ಕಾರಣರಾದವರ ವಿರುದ್ದ ನೇರ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು. ಇರುವ ಸೀಮಿತ ಅರ್ಹ ಅರ್ಜಿಗಳನ್ನು ಕಾಲ ಮಿತಿಯಲ್ಲಿ ವಿಲೇವಾರಿ ಮಾಡದೇ ತಾಂತ್ರಿಕ ಸಮಸ್ಯೆಗಳ ನೆಪವನ್ನು ಮುಂದಿಟ್ಟು ವರ್ಷಗಟ್ಟಲೆ ಅರ್ಜಿಗಳನ್ನು ಮಂಜೂರಾತಿಗೆ ಪ್ರಯತ್ನಿಸದೇ ಇರುವುದನ್ನು ಸಹಿಸಲು ಸಾಧ್ಯವಿಲ್ಲ. ಸರ್ವೇ ಇಲಾಖೆ ಹಾಗೂ ತಾಲೂಕು ಕಚೇರಿ ವಿಭಾಗಗಳು ಸಮನ್ವಯ ಕಾರ್ಯ ನಿರ್ವಹಿಸಿ ಬಾಕಿ ಉಳಿದಿರುವ ಹಕ್ಕು ಪತ್ರ ವಿತರಣೆಗೆ ಕ್ರಮವಾಗಬೇಕು ಎಂದರು. 06 ಜನ ಅರ್ಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಶಶಿಕಾಂತ್ ಶೆಟ್ಟಿ (44) ಬಂಧಿತ ಆರೋಪಿ. ಆರೋಪಿಗೆ 2015ರಲ್ಲಿ ಇಲ್ಲಿನ ಯುವತಿಯೊಂದಿಗೆ ವಿವಾಹವಾಗಿತ್ತು. 6 ತಿಂಗಳ ಬಳಿಕ ವರದಕ್ಷಿಣೆ ವಿಚಾರದಲ್ಲಿ ಈ ಮದುವೆ ಮುರಿದು ಬಿದ್ದಿತ್ತು ಎನ್ನಲಾಗಿದೆ. ಈ ಸಂಬಂಧ ಪತ್ನಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಗ್ರಾಮಾಂತರ ಠಾಣಾ ಎಎಸ್‌ ಐ ಶಂಕರ್‌ಎಸ್‌. ಹಾಗೂ ಹೆಡ್ ಕಾನ್ ಸ್ಟೆಬಲ್‌ ಅಶೋಕ್ ಶೆಟ್ಟಿ ಅವರ ತಂಡವು ಈತ ಮುರ್ಷಿ ದಾಬಾದ್ ಜಿಲ್ಲೆಯ ಬನಿನಾ ಥಪುರ ಎಂಬಲ್ಲಿರುವುದನ್ನು ಪತ್ತೆ ಹಚ್ಚಿ, ಆತನನ್ನು ಬಂಧಿಸಿದ್ದಾರೆ. ಈತ ಅಲ್ಲಿನ ಯುವತಿಯನ್ನು ಮದುವೆಯಾಗಿರುವ ವಿಚಾರ ಈ ವೇಳೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಕುಂದಾಪುರದ ಪ್ರಥಮ ಸಿವಿಲ್ ಹಾಗೂ ಜೆಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 2026 ಜನವರಿಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ರೋಹಿತ್ ಪಾರಡ್ಕರ್, ಅಮೋಘ್, ಗಣೇಶ್ ಪೈ, ಶುಭಂ ಕೋಟ್ಯಾನ್, ಸುಬ್ರಮಣ್ಯ ಎಸ್. ಬಿ. ಮತ್ತು ಭರತ್ ಹೆಗ್ಡೆ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಅವರು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳಲ್ಲಿ ಉತ್ತೀರ್ಣರಾಗಿ ಈ ಸಾಧನೆಯನ್ನು ಮಾಡಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕುರಿ ಮತ್ತು ಎಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಚಿಕ್ಕಮಗಳೂರು ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (10+1) ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಪಡೆಯಲು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ 18 ರಿಂದ 60 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಉಡುಪಿ ತಾಲೂಕು ಮೊ.ನಂ: 9448134852, ಕಾಪು ತಾಲೂಕು ಮೊ.ನಂ: 8217389838, ಬ್ರಹ್ಮಾವರ ತಾಲೂಕು ಮೊ.ನಂ: 9448623690, ಕುಂದಾಪುರ ತಾಲೂಕು ಮೊ.ನಂ: 9448163237, ಬೈಂದೂರು ತಾಲೂಕು ಮೊ.ನಂ: 9741993045, ಕಾರ್ಕಳ ತಾಲೂಕು ಮೊ.ನಂ: 9845753062 ಹಾಗೂ ಹೆಬ್ರಿ ತಾಲೂಕು ಮೊ.ನಂ: 9986764615 ಅನ್ನು ಅಥವಾ ಜಿಲ್ಲಾ ಅನುಷ್ಠಾನಾಧಿಕಾರಿಗಳು, ಕರ್ನಾಟಕ ಕುರಿ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.  ಉಡುಪಿ: ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವಾರು ದಾರ್ಶನಿಕರುಗಳು ಸರಳ ಜೀವನ ನಡೆಸವುದರೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರುಗಳು ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದ್ದಲ್ಲಿ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ (ಕೈವಾರ ತಾತಯ್ಯ) ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಮತ್ತಿತರ ಮಹನೀಯರುಗಳು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯುವ ಸಲುವಾಗಿ ಹಾಗೂ ಮುಂದಿನ ಪೀಳಿಗೆಗೆ ಇವರುಗಳ ಜೀವನಾದರ್ಶಗಳನ್ನು ತಿಳಿಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ರೆಡ್‌ಕ್ರಾಸ್ ಸೊಸೈಟಿಯ ಕಾರ್ಯವೈಖರಿ ಹಾಗೂ ರಕ್ತದಾನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ ಇಂಟರ್‌ನ್ಯಾಷನಲ್ ಜಿಲ್ಲೆ 317Cಯ ಪ್ರಥಮ ಉಪ ಗವರ್ನರ್ MJF ಲಯನ್ ರಾಜೀವ ಕೋಟ್ಯಾನ್ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಲಯನ್ ಸದಾನಂದ ನಾವಡ ಮುಖ್ಯ ಅತಿಥಿ ನೆಲೆಯ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್, ಕುಂದಾಪುರ ಇದರ ಕಾರ್ಯದರ್ಶಿ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಹು0ತ್ರಿಕೆ ಸುಧಾಕರ್ ಶೆಟ್ಟಿ ಆಶಯ ನುಡಿಗಳನ್ನಾಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಆನಂದ ಮದ್ಯೋಡಿ ಅವರ ಬೀಳ್ಕೊಡುಗೆ ಸಮಾರಂಭ –ಆನಂದಾಭಿನಂದನಾ ಕಾರ್ಯಕ್ರಮದ ನಡುವೆ, ತಮ್ಮ ಬದುನುದ್ದಕ್ಕೂ ಸಹಕಾರಿ ನೀಡಿದವರನ್ನೆಲ್ಲಾ ಗುರುತಿಸಿ ಗೌರವಿಸುವ – ಅಭಿವಂದನೆ ಎಂಬ ಅಪರೂಪದ ಕ್ಷಣಕ್ಕೆ ಭಾನುವಾರ ರತ್ತುಬಾಯಿ ಜನತಾ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸದ ಕಾರ್ಯಕ್ರಮ ಸಾಕ್ಷಿಯಾಯಿತು. ಇದು ನಡೆದದ್ದು ಶ್ರೀ ವಿ.ವಿ.ವಿ ಮಂಡಳಿ ರಿ. ಹೆಮ್ಮಾಡಿ, ರತ್ತುಬಾಯಿ ಜನತಾ ಪ್ರೌಢಶಾಲೆ ಬೈಂದೂರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಬಂಧುಮಿತ್ರರ ವತಿಯಿಂದ ಮತ್ತು ಅಭಿವಂದನಾ ಸಮಾರಂಭದಲ್ಲಿ. ಶ್ರೀ ವಿ.ವಿ.ವಿ ಮಂಡಳಿ ರಿ. ಹೆಮ್ಮಾಡಿ ಅಧ್ಯಕ್ಷರು, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಆನಂದ ಮದ್ಯೋಡಿ ದಂಪತಿಗಳನ್ನು ಶಾಲೆಯ ವತಿಯಿಂದ ಸಮ್ಮಾನಿಸಿ ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದೆ. ನಮ್ಮ ಉತ್ತಮ ನಡವಳಿಕೆ ಜನರ ಮನಸ್ಸಿನಲ್ಲಿ ಸದಾ ಉಳಿಯುತ್ತದೆ. ಸಾರ್ಥಕ ಸೇವೆ ನಿವೃತ್ತಿ ಬಳಿಕವೂ ಸಂತೃಪ್ತಿ ನೀಡುತ್ತದೆ. ಆನಂದ ಮದ್ದೋಡಿಯವರು ಸೇವೆಯಲ್ಲಿರುವಷ್ಟೂ ಕಾಲ ಯಾವುದೇ ನ್ಯೂನತೆಗಳಿಲ್ಲದೇ ಆಡಳಿತ ಮಂಡಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ 6ನೇ ಬ್ಯಾಚ್‌ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚಿಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲಾರಾದ ಡಾ. ಅನಿತಾ ಸಿ. ರಾವ್, ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಜಸ್, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ರೂಪಶ್ರೀ ಕೆ. ಎಸ್. ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಆಧುನಿಕ ನರ್ಸಿಂಗ್‌ಗೆ ಫ್ಲಾರೆನ್ಸ್ ನೈಟಿಂಗೇಲ್ ನೀಡಿದ ಗಮನಾರ್ಹ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣವಚನ ಸ್ವೀಕಾರ ಸಮಾರಂಭವು ಕಾರ್ಯಕ್ರಮದ ಅತ್ಯಂತ ಮಹತ್ವದ ಭಾಗವಾಗಿತ್ತು. ನರ್ಸಿಂಗ್ ವೃತ್ತಿಯ ನೈತಿಕ ಮಾನದಂಡಗಳು, ಮೌಲ್ಯಗಳು ಮತ್ತು ಜವಾಬ್ದಾರಿಗಳನ್ನು ಎತ್ತಿಹಿಡಿಯಲು ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದ ವ್ಯಕ್ತಿ ಚೇತರಿಸಿಕೊಂಡು ಮನೆಗೆ ಬಂದವರು ಮತ್ತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಲ್ಲಿನ ಉಪ್ಪುಂದ ಗ್ರಾಮದಲ್ಲಿ ಸಂಭವಿಸಿದೆ. ಉಪ್ಪುಂದ ಗ್ರಾಮದ ಜನತಾ ಕಾಲೋನಿ ಪುಟ್ಟಮನೆ ಸೀತಾರಾಮ ಖಾರ್ವಿ (52) ಮೃತಪಟ್ಟ ವ್ಯಕ್ತಿ. ಮಾ.2ರಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದಿದ್ದು ಅವರು ಮನೆಯವರಲ್ಲಿ ವಾಕಿಂಗ್ ಮಾಡುವಾಗ ದಾರಿ ಮಧ್ಯೆ ಕುಸಿದು ಬಿದ್ದು ಸುಧಾರಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದರು. ಮನೆಯವರ ಬಳಿ ಮಾತನಾಡಿದ ಸ್ವಲ್ಪ ಸಮಯದ ಬಳಿಕ ಮತ್ತೆ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಬೈಂದೂರು ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಈಗಾಗಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಟಿವಿ ಟೆಕ್ನಿಷಿಯನ್ ಹಾಗೂ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೋಡ್ರಿಗಸ್ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತ್ವರಿತ ಯಶಸ್ಸಿನತ್ತ ಹೆಚ್ಚು ಆತುರಪಡಬಾರದು ಎಂದು ಸಲಹೆ ನೀಡಿದರು. ಕೊರೋನಾ ಸಂದರ್ಭದಲ್ಲಿ ಸಹಬಾಳ್ವೆ ಹಾಗೂ ಜೀವನ ಮೌಲ್ಯಗಳ ಮಹತ್ವವನ್ನು ನಾವು ಕಲಿತಿದ್ದೇವೆ. ಎಷ್ಟೇ ಸಾಧನೆ ಮಾಡಿದರೂ ವ್ಯಕ್ತಿತ್ವವೇ ನಮ್ಮನ್ನು ಗುರುತಿಸುವುದಾಗಿ, ಆದ್ದರಿಂದ ಹಣಕ್ಕಿಂತ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಮತ್ತು ದೃಢಸಂಕಲ್ಪ ಮುಖ್ಯವೆಂದು ಹೇಳಿದರು. “ಆರೋಗ್ಯಕರ ಬದಲಾವಣೆಗಳಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಆ ಉತ್ತಮ ಬದಲಾವಣೆ ನಿಮ್ಮಿಂದಲೇ ಆರಂಭವಾಗಲಿ,” ಎಂದು ಕರೆ ನೀಡಿದ ಅವರು ಕೃಷಿ ಹಾಗೂ ಟಿವಿ ಟೆಕ್ನಿಷಿಯನ್ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಬ್ರಹ್ಮಾವರ ಎ.ಎಸ್.ಐ …

Read More