ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಮಂಗಳವಾರ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಹಿತಿ, ವಾಗ್ಮಿ, ವಿಮರ್ಶಕ, ಅಂಕಣಗಾರರಾಗಿ ಸಾಹಿತ್ಯ ಲೋಕಕ್ಕೆ ಬಹು ದೊಡ್ಡ ಕೊಡುಗೆ ನೀಡಿದವರು ಕೋಣಿ ಶಿವಾನಂದ ಕಾರಂತರು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು ಅವರು ಕುಂದಾಪುರದ ಶ್ರೀ ಕುಂದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋಣಿ ಶಿವಾನಂದ ಕಾರಂತರಿಗೆ ಸಾರ್ವಜನಿಕ ನುಡಿ ನಮನ ಕಾರ್ಯಕ್ರಮದಲ್ಲಿ ಕಾರಂತರ ಸಾಧನೆ ಬಣ್ಣಿಸಿದರು. ಅಧ್ಯಯನಶೀಲರಾಗಿ ತಮ್ಮ ಪಾಂಡಿತ್ಯದಿಂದ ಯುವ ಬರಹಗಾರರಿಗೆ ಪ್ರೇರಣೆ ತುಂಬುತ್ತಿದ್ದ ಕಾರಂತರು ಹಲವಾರು ಲೇಖಕರ ಕೃತಿಗಳ ವಿಮರ್ಶೆ ಮಾಡಿ ತಿದ್ದಿ ಪ್ರೋತ್ಸಾಹಿಸುವ ಮೂಲಕ ಸ್ಫೂರ್ತಿ ತುಂಬುತ್ತಿದ್ದರು. ಅವರ ಪ್ರಕಟಿತ ಕೃತಿಗಳು ಅಮೂಲ್ಯವಾಗಿದ್ದವು. ಗಂಗೊಳ್ಳಿಯಲ್ಲಿ ನಡೆದ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕೋ. ಶಿವಾನಂದ ಕಾರಂತರ ಕುರಿತು ಪುಸ್ತಕ ಪ್ರಕಟಣೆ ಮಾಡಿದ್ದೆವು. ಅವರ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲ ಸಮಾಜಕ್ಕೂ ದೊಡ್ಡ ನಷ್ಟ. ಅವರ ಅಮೂಲ್ಯ ಮಾರ್ಗದರ್ಶನ ಸ್ಮರಿಸೋಣ ಎಂದರು. ಕಮಲಾಕರ ಚಿಕ್ಕಮಗಳೂರು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಹಳ್ಳಿಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳುಗೋಡು ಎಂಬಲ್ಲಿ ಜರುಗಿತು. ಕಮಲಶಿಲೆ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಸ್. ಸಚ್ಚಿದಾನಂದ ಛಾತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಪಡೆದ ಅನುಭವವನ್ನು ತಮ್ಮ ವ್ಯಾಸಂಗದ ನಂತರವು ಸೇವೆ, ಅನುಕಂಪದ ಸಾರ್ಥಕ ಜೀವಿಯಾಗಬೇಕು. ಆ ಮೂಲಕ ಹಳ್ಳಿಗಳ ಉದ್ಧಾರದ ನೆಲೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಎಸ್. ಅನುಪಮ ಶೆಟ್ಟಿ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದಲ್ಲಿ ತೊಡಗಿಕೊಳ್ಳುವುದರಿಂದ ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಜುನಾಥ ಶೆಟ್ಟಿ, ನಾಗೇಶ್ ನಾಯ್ಕ್ ಶ್ರೀನಿವಾಸ ಆಚಾರಿ, ಕೃಷ್ಣ ಛಾತ್ರಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಡ್ಲೂರಿನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಿಡಿಯೋ ವೈರಲ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಕಂಡ್ಲೂರು ಪೇಟೆಯಲ್ಲಿರುವ ಸೆಲೂನ್‌ನಲ್ಲಿ ಫೆ.22ರಂದು ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಹೇಳಿದ ವಿಷಯವನ್ನು ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಸಾರ್ವಜನಿಕವಾಗಿ ಪ್ರಚೋದನೆಗೊಳಿಸಿ ಗಲಾಟೆ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಸೆಲೂನಿನ ಮಾಲಕ ಕಂಡ್ಲೂರು ಜನತಾ ಕಾಲೋನಿ ನಿವಾಸಿ ಶಶಾಂಕ ಭಂಡಾರಿ (30) ಹಾಗೂ ಕಾವ್ರಾಡಿ ಗ್ರಾಮದ ಮರಾಸಿ ಉದ್ದಿನಮಕ್ಕಿಯ ಪ್ರಮೋದ ಡಿಸೋಜ (25) ಎಂಬುವರನ್ನು ಬಂಧಿಸಿ, ಕುಂದಾಪುರ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸೆಲೂನ್ ಎದುರಗಡೆ ಗುಂಪುಗೂಡಿ, ಬೆದರಿಕೆ ಹಾಕಿರುವ ಬಗ್ಗೆ ಸೆಲೂನ್ ಮಾಲಕ ಶಶಾಂಕ ಭಂಡಾರಿ ನೀಡಿರುವ ಪ್ರತಿ ದೂರಿನಂತೆಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ; ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್ ಹೇಳಿದರು. ಅವರು ಆಳ್ವಾಸ್‌ನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ “ತರಗತಿಯಿಂದ ಸಮ್ಮೇಳನದ ವರೆಗೆ ನನ್ನ ಉದ್ಯಮಶೀಲತಾ ಪ್ರಯಾಣ” ಪ್ರೇರಣಾದಯಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತನ್ನ ತಂದೆಯ ಉದ್ಯಮಕ್ಕೆ ಸಂಬಂದಿಸಿದ ಸಭೆಗಳಲ್ಲಿ ಭಾಗಿಯಾದ್ದರಿಂದ ತನ್ನದೇ ಆದ ಉದ್ಯಮವನ್ನು ಪ್ರಾರಂಭಿಸಲು ಸ್ಫೂರ್ತಿಯಾಯಿತು ಎಂದರು. ಝೋಝೋ ಕನೆಕ್ಟ್ ವೃತ್ತಿಪರ ನೆಟ್‌ವರ್ಕಿಂಗ್ ಸೇವೆಗಳನ್ನು ಒದಗಿಸುವ ಸಂಸ್ಥೆಯಾಗಿದೆ, ಸಾಂಪ್ರದಾಯಿಕ ಬ್ಯುಸಿನೆಸ್ ಕಾರ್ಡ್ಗಳ ಬದಲಾಗಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲ್ ಕಾರ್ಡ್ ಆಗಿ ಪರಿವರ್ತಿಸುವ ಮೂಲಕ ಜೋಜೋ ಬ್ಯುಸಿನೆಸ್ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದರು. ನಾನು ವ್ಯವಹಾರಿಕ ಸಮ್ಮೇಳನಗಳಲ್ಲಿ ಭಾಗಿಯಾಗವುದರ ಮೂಲಕ ಜಾಗತಿಕ ಹೂಡಿಕೆದಾರರು, ಉದ್ಯಮಿಗಳನ್ನು ವಿವಿಧ ಕಂಪನಿಗಳ ಸ್ಥಾಪಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಉಪೇಂದ್ರ ತಮ್ಮ ಕುಟುಂಬದವರೊಂದಿಗೆ ಕುಲದೇವರಾದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳಕ್ಕೆ ಮಂಗಳವಾರ ಭೇಟಿ ನೀಡಿ ಸೇವೆ ಸಲ್ಲಿಸಿದರು. ದೇಗುಲದ ವತಿಯಿಂದ ಪ್ರಸಾದ ವಿತರಿಸಿ ಶಾಲು ಹೋದಿಸಿ ಗೌರವಿಸಲಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಸದಸ್ಯರಾದ ಶ್ರೀಧರ ರಾವ್ ಕೇರಳ ಹಾಗೂ ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಮತ್ತಿತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಅರೋಗ್ಯ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅಗತ್ಯವಿರುವವರಿಗೆ ಅವಶ್ಯಕತೆಗನುಗುಣವಾಗಿ ತಲುಪಿಸುವ ಕೆಲಸವಾಗಬೇಕು ಎಂದರು. ಜಿಲ್ಲೆಯಲ್ಲಿ ಪ್ರತಿಯೊಬ್ಬ ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್‌ಗಳನ್ನು ನೀಡಬೇಕು. ಅವರುಗಳಿಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಕಾಲಕಾಲಕ್ಕೆ ನಿರಂತರ ವೈದ್ಯಕೀಯ ತಪಾಸಣೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ನಿಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು, ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲೂಎಸ್ (EWS) ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಿ. ಪ್ಲಾನಿಂಗ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ.- 99.9762662ಸುಕ್ಷಿತ್ ಗಿರೀಶ್ ಗೌಡ- 99.7769023ಅಭಿರಾಮ್ ಭಟ್ ಜಿ.ಪಿ.- 98.3718612ದಿಶಾಂತ್ ಎಂ. – 98.2152 181 ನಿಶಾಂತ್ ಹೊನ್ನಾವರ- 98.1107894ಸಂವಿತ್ ಅಮಿತ್ ಗೋಕರ್ಣ- 98.1107894ನಿನಾದ್ ರಾಜೇಶ್ ನಾಯ್ಕ್- 98.0490815 ಪರ್ಸೆಂಟೈಲನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ 95ಪರ್ಸೆಂಟೈಲ್ ಗಿಂತ 16 ಮಂದಿ ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ 24 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಬಿ. ಆರ್ಕ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ- 99.8371909ಚೇತನಾ ಟಿ. ಪಿ.- 97. 6986711ಶಮಿತಾ ನಾಯಕ್- 97. 4918595ನಿಶಾಂತ್ ಹೊನ್ನಾವರ -…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ ಜೈಹಿಂದ್ ಪ್ರೀಮಿಯರ್ ಲಿಗ್ ಕ್ರಿಕೆಟ್ ಪಂದ್ಯಾಕೂಟ ಭಾನುವಾರ ಮಣೂರು ಪಡುಕರೆ ಪದವಿ ಕಾಲೇಜಿನ ಮೈದಾನದಲ್ಲಿ ಜರಗಿತು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಕ್ರಿಕೆಟ್ ಪಂದ್ಯಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಜೈಹಿಂದ್ ಕ್ರಿಕೆಟರ್ಸ್ ಕ್ರೀಡೆಯ ಜತೆ ಸಾಮಾಜಿಕ ಕಾರ್ಯವನ್ನು ವಸ್ತುನಿಷ್ಠೆಯಾಗಿ ಸೇವೆ ಸಲ್ಲಿಸುತ್ತಿದೆ ಇದು ಶ್ಲಾಘನೀಯ ಕಾರ್ಯ, ಅಶಕ್ತರಿಗೆ ನೆರವು,ಅನಾರೋಗ್ಯ ಪೀಡಿತರಿಗೆ ಶೈಕ್ಷಣಿಕಸೇವೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಇಂಥಹ ಕ್ರೀಡಾ ಚಟುವಟಿಕೆಯ ಸಂಘಟನೆಗಳು ಗ್ರಾಮದಲ್ಲಿ ಪಸರಿಸಲಿ ಎಂದು ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚಾಯತ್ ಸದಸ್ಯರಾದ ಜಯರಾಮ ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಮನೋವೈದ್ಯರಾದ ಡಾ. ಪ್ರಕಾಶ್ ತೋಳಾರ್, ಉದ್ಯಮಿ ಬೀಜುನಾಯರ್, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಎಚ್. ಕುಂದರ್, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಜೈಹಿಂದ್ ಕ್ರಿಕೆಟಸ್೯…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಯಕ್ಷಗಾನ ವೇಷಭೂಷಣ ತಯಾರಿ ಮತ್ತು ಮುಖವರ್ಣಿಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಯಡಾಡಿ-ಮತ್ಯಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 100 ಎನ್.ಎಸ್.ಎಸ್. ಸ್ವಯಂಸೇವಕರು ಯಕ್ಷಗಾನದ ವೇಷ ಭೂಷಣ ತಯಾರಿ ಮತ್ತು ಮುಖವರ್ಣಿಕೆಯ ಬಗ್ಗೆ ಅರಿತುಕೊಂಡರು. ಯಕ್ಷಗಾನ ವೇಷಭೂಷಣ ಮತ್ತು ಮುಖವರ್ಣಿಕೆಯ ಬಗ್ಗೆ ಗಣೇಶ್ ಬಳೆಗಾರ ಜನ್ನಾಡಿ, ಹಿರಿಯ ಯಕ್ಷಗಾನ ವೇಷದಾರಿ ಅಣ್ಣಪ್ಪ ಕುಲಾಲ್ ಜನ್ನಾಡಿ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ನಿರ್ವಹಿಸಿದರು. ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಹರೀಶ್ ಕಾಂಚನ್, ಕನ್ನಡ ಪ್ರಾಧ್ಯಾಪಕಿ ಪ್ರವೀಣಾ ಎಮ್. ಪೂಜಾರಿ, ಕುಶ ಪೂಜಾರಿ ಯಡಾಡಿ, ಮಂಜುನಾಥ್ ಮತ್ಯಾಡಿ ಉಪಸ್ಥಿತರಿದ್ದರು.
