Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಆಚರಿಸಲ್ಪಡುವ ಡಾ. ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಆಚರಿಸಲ್ಪಡುವ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕುರಿತ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಚರಿಸಲಾಗುವುದು. ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಏಪ್ರೀಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಮಂಗಳೂರು ವಿ. ವಿ. ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಸಾಫ್ಟ್ ಬಾಲ್ ಪಂದ್ಯಾಟ ಸಂಪನ್ನಗೊಂಡಿತು.   ಪುರುಷರ ವಿಭಾಗದಲ್ಲಿ ಸತತ ಮೂರು ವರ್ಷಗಳಿಂದ ಚಾಂಪಿಯನ್ನಾಗಿ ಮೂಡಿಬರುವ ಮೂಲಕ ಅತಿಥೇಯ ಡಾ| ಬಿ.ಬಿ. ಹೆಗ್ಡೆ ಕಾಲೇಜು ಹ್ಯಾಟ್ರಿಕ್ ಸಾಧನೆ ಮಾಡಿ, ಬಿ.ಎಂ.ಎಸ್. ಪರ್ಯಾಯ ರಜತ ಪಾರಿತೋಷಕವನ್ನು ಪಡೆಯಿತು. ಮೂಡುಬಿದರೆ ಶ್ರೀ ಮಹಾವೀರ ಕಾಲೇಜು ರನ್ನರ್ ಅಪ್ ಪ್ರಶಸ್ತಿ, ವಿ.ವಿ. ಕ್ಯಾಂಪಸ್ ತೃತೀಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಚತುರ್ಥ ಸ್ಥಾನ ಪಡೆಯಿತು. ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಡೇವಿಡ್ ಬೆಸ್ಟ್ ಪಿಚ್ಚರ್, ಮಹಾವೀರ ಕಾಲೇಜಿನ ಪ್ರಣೇಶ್ ಬೆಸ್ಟ್ ಪ್ಲೇಯರ್ ವೈಯಕ್ತಿಕ ಪ್ರಶಸ್ತಿ ಪಡೆದರು.  ಮಹಿಳೆಯರ ವಿಭಾಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಪ್ರಥಮ, ಎಸ್.ಡಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ರಕ್ತದೊತ್ತಡ ಹಾಗೂ ದೇಹದಲ್ಲಿರುವ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಇತರ ರಕ್ತದಾನದ ಮಹತ್ವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕಾಧ್ಯಕ್ಷರಾದ ಎಸ್. ಜಯಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಯುವ ರೆಡ್‌ ಕ್ರಾಸ್‌ ಘಟಕದಿಂದ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರದಲ್ಲಿ ತಮ್ಮ ಆಶಯ ನುಡಿಯನ್ನು ವ್ಯಕ್ತಪಡಿಸಿದರು. ಶಿಬಿರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಮಾತನಾಡಿ, ಇಂದಿನ ಯುವ ಜನತೆ ರಕ್ತದಾನಗಳಂತಹ ಶ್ರೇಷ್ಠ ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿರುವುದು ತುಂಬಾ ಆಶಾದಾಯಕ ವಿಚಾರ ಹೀಗೆ ಬೇರೆ ಬೇರೆ ಚಟುವಟಿಕೆಗಳಲ್ಲಿ ಯುವಕರು ತಮ್ಮನ್ನು ತೊಡಗಿಸಿಕೊಳ್ಳವುದರಿಂದ ಉತ್ತಮ ಸಮಾಜ ನಿರ್ಮಾಣದಲ್ಲಿ ಖಂಡಿತವಾಗಿಯು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಕಾರ್ಯದರ್ಶಿ ಪುರಾಣಿಕ್, ಕುಂದಾಪುರ ಭಾರತೀಯ ರೆಡ್‌ಕ್ರಾಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಶೇಷ ಚೇತನರು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಜೀವನ ನಡೆಸಲು ಸರಕಾರ ಹಾಗೂ ಸಂಘ-ಸಂಸ್ಥೆಗಳು ಅನೇಕ ರೀತಿಯಲ್ಲಿ ಸಹಾಯ-ಸೌಲಭ್ಯಗಳನ್ನು ನೀಡುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನ್ಯತೆಗಳನ್ನು ಬದಿಗೊತ್ತಿ ಈ ಎಲ್ಲಾ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡು, ಸಮಾಜದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಹೋಟೆಲ್ ಚಿತಾರ ಇಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನವ ಜೀವನ – ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ಗಾಲಿ ಕುರ್ಚಿಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ವಿಶೇಷ ಚೇತನರು ದುರ್ಬಲರಲ್ಲ ಎಂಬ ಭಾವನೆ ಅವರಲ್ಲಿ ಮೂಡಿಸಲು ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕೆಲವು ಸಂಸ್ಥೆಗಳು ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಯನ್ನು ಸಹ ನೀಡುತ್ತಿದೆ. ಇವೆಲ್ಲವುಗಳ ಸದುಪಯೋಗವನ್ನು ವಿಶೇಷಚೇತನರು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಮಣಿಪಾಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಭೂಮಿ ನಮ್ಮೊಳಗಿನ ಸಂತೋಷ, ನೋವು, ಹತಾಶೆಯನ್ನು ಪ್ರಕಟಿಸುವ ಪ್ರಬಲ ಮಾಧ್ಯಮ. ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದು ಕೇವಲ ಹವ್ಯಾಸವಾಗಿ ಉಳಿಯದೇ ಅದೊಂದು ಸಾಮಾಜಿಕ ಬದ್ಧತೆಯಾಗಿರಬೇಕು ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಹೇಳಿದರು. ಅವರು ಗುರುವಾರ ಸುರಭಿ ರಿ. ಬೈಂದೂರು ಹಾಗೂ ರೋಟರಿ ಕ್ಲಬ್ ಬೈಂದೂರು ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ರಂಗ ಸಂವಾದ ಹಾಗೂ ರಂಗ ಗೀತೆಗಳ ಗಾಯನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇಂದು ಹೇಳಬೇಕಾದ್ದನ್ನು ಹೇಳಲು ಸಾಧ್ಯವಾಗದ ವಾತಾವರಣವಿದೆ. ಪ್ರತಿಭಟನೆಯ ರೂಪಕವಾಗಿ ಹುಟ್ಟಿಕೊಂಡ ರಂಗಭೂಮಿ ತನ್ನ ಗಟ್ಟಿತನವನ್ನು ಕಳೆದುಕೊಳ್ಳುತ್ತಿದೆ. ಅಂತರ್ಜಾಲದ ಪ್ರಭಾವದಿಂದಾಗಿ ಸುಳ್ಳು ಮಾಹಿತಿಗಳೇ ತಮ್ಮ ಸುತ್ತಲೂ ತುಂಬಿವೆ. ಅದು ರಂಗಭೂಮಿಯನ್ನು ವ್ಯಾಪಿಸಿಕೊಂಡಿದೆ. ಇಲ್ಲಿ ತೊಡಗಿಸಿಕೊಂಡಿರುವ ಹಿರಿಯರನ್ನು ಬದಲಿಸಲು ಸಾಧ್ಯವಿಲ್ಲದಿರಬಹುದು ಆದರೆ ಮಕ್ಕಳು ನಮ್ಮ ನಾಳೆಗಳ ಭರವಸೆಯಾಗಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ. ವಿಭಾಗ  ‘ಯುವ -2025’ ಅಂತರ್ ಕಾಲೇಜು ಮ್ಯಾನೇಜ್ ಮೆಂಟ್ ಮತ್ತು ಕಲ್ಚರಲ್ ಪೆಸ್ಟನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಅತ್ಯಂತ ಯಶಸ್ವಿಯಾಗಿ ನಡೆದ ಈ ಫೆಸ್ಟ್ ನ ಸಭಾಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸ್ಟೇಲ್ತ್ ಪ್ರೊಡಕ್ಷನ್ ಸಂಸ್ಥಾಪಕರಾದ ನಿತಿನ್ ಹೆಗ್ಡೆ ಅವರು ಆಗಮಿಸಿ ದೀಪ ಬೆಳಗಿಸಿ ಫೆಸ್ಟ್ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಸಿಕ್ಕಿದ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ಆರ್ಟಿಫಿಷಿಯಲ್ ಇಂಟಲಿಜನ್ಸ್ ಉಪಯೋಗ ಹೆಚ್ಚುತ್ತಿರುವದರಿಂದ ವಿದ್ಯಾರ್ಥಿಗಳು ಆ ಕಡೆಗೂ ಗಮನಹರಿಸಿ ಶೀಘ್ರ ಯಶಸ್ಸನ್ನು ಸಾಧಿಸಬೇಕು ಎಂದು ಹೇಳಿದರು. ಐ. ಎಂ. ಜೆ. ಇನ್ಸ್ಟಿಟ್ಯೂಷನ್ಸ್ ಬ್ರ್ಯಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅದ್ಭುತ ಅವಕಾಶ ನೀಡಿದ ಎಂಐಟಿಕೆ ಯ ಎಂಬಿಎ ವಿಭಾಗವನ್ನು ಹೊಗಳಿದರು ಮತ್ತು ಇಂತಹ ಕಾರ್ಯಕ್ರಮಕ್ಕೆ ಪ್ರೇರಣೆಯಾಗಿರುವ ಐಎಂಜೆ ವಿದ್ಯಾಸಂಸ್ಥೆ ಗಳ ಚೇರ್ಮನ್ ರಾದ ಸಿದ್ದಾರ್ಥ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ರಿ. ಆಶ್ರಯದಲ್ಲಿ ಸಾಹಿತಿ ಕೆ. ಪ್ರಭಾಕರನ್ ಅವರು ಮಲಯಾಳಂನಿಂದ ಅನುವಾದಿಸಿದ ಮೂರು ಕೃತಿಗಳ ಅವಲೋಕನ ಕಾರ್ಯಕ್ರಮ ಇಲ್ಲಿನ ಅಂಬೇಡ್ಕರ್ ಭವನದಲ್ಲಿ  ನಡೆಯಿತು. ಬರಹಗಾರ್ತಿ, ಅನುವಾದಕಿ, ನಿವೃತ್ತ ಪ್ರಾಧ್ಯಾಪಕಿ  ಡಾ. ಪಾರ್ವತಿ ಜಿ. ಐತಾಳ್ ಅವರು ಕೆ. ಪ್ರಭಾಕರನ್  ಅನುವಾದಿಸಿದ ‘ಯಮುನಾನದಿಯ ತೀರದಲ್ಲಿ ‘ ಕುರಿತು ಮಾತನಾಡಿ, ಮಲೆಯಾಳದ ಪ್ರಸಿದ್ದ ಕಥೆಗಾರ ಎಂ. ಮುಕುಂದನ್ ಅವರ ಕೃತಿಗಳ ವೈಶಿಷ್ಟ್ಯಗಳ ಕುರಿತು ಮೂಲ ಮಲೆಯಾಳದಲ್ಲಿ ಇ.ಎಂ.ಅಶ್ರಫ್ ಬರೆದ ಪುಸ್ತಕ ಇದು. ಎಂ. ಮುಕುಂದನ್ ಅವರ ಕೆಲವು ಕಾದಂಬರಿಗಳಲ್ಲಿ ಕಾಣುವ ಮಾದಕ ದ್ರವ್ಯ ವ್ಯಸನ ಮತ್ತು ಲೈಂಗಿಕ ವಿಚಾರಗಳ ಕುರಿತು ಮಲೆಯಾಳದ ಓದುಗರು ವ್ಯಕ್ತ ಪಡಿಸಿದ ಆಕ್ಷೇಪಗಳ ಹಿನ್ನೆಲೆಯಲ್ಲಿ ಆ ಕಾದಂಬರಿಗಳು ಹುಟ್ಟಿದ ಜಾಗವಾದ ದೆಹಲಿ ಮತ್ತು ಹರಿದ್ವಾರಗಳಿಗೆ ಮುಕುಂದನ್ ಜತೆಗೆ ಹೋಗಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವ ಸನ್ನಿವೇಶಗಳನ್ನು  ಚಿತ್ರಿಸುವಲ್ಲಿ ಈ ಕೃತಿ ಹುಟ್ಟಿಕೊಂಡಿದೆ ಎಂದರು. ಅಸ್ತಿತ್ವವಾದಿ ನೆಲೆಯಲ್ಲಿ ರಚಿತವಾದ ‘ದೆಹಲಿ’ ಮತ್ತು ‘ಹರಿದ್ವಾರದಲ್ಲಿ ಗಂಟೆಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ಗ್ರಾಮದ ನಿವಾಸಿ ನಿಟ್ಟೆ ಕಾಲೇಜಿನ ಪದವಿ ವಿದ್ಯಾರ್ಥಿ ಅಭಿನಂದನ್ (20) ನಾಪತ್ತೆಯಾಗಿದ್ದಾನೆ. ಫೆ.21ರಂದು ಮನೆಗೆ ಬಂದು ಮರುದಿನ ಮನೆಯಿಂದ ಕಾಲೇಜಿಗೆ ಹೋದವನು ಒಂದೆರಡು ಬಾರಿ ಕರೆ ಮಾಡಿದ್ದನು. ಬಳಿಕ ಪೋನ್ ಮಾಡಿರಲಿಲ್ಲ. ನಿಟ್ಟೆ ಕಾಲೇಜಿನಲ್ಲಿ ದ್ವಿತಿಯ ವರ್ಷದ ವಿಎಲ್‌ಎಸ್‌ಐ ಪದವಿಯಲ್ಲಿ ವ್ಕಾಸಂಗ ಮಾಡುತ್ತಿದ್ದ ಅಭಿನಂದನ್ ಕಾಲೇಜಿನ ಹಾಸ್ಟೇಲ್‌ನಲ್ಲಿ ಉಳಿದುಕೊಂಡಿದ್ದನು. ರಜೆಯಲ್ಲಿ ಬೈಂದೂರು ಮನೆಗೆ ಬಂದು ಹೋಗುತ್ತಿದ್ದನು. ಕಾಲೇಜಿಗೆ ಹೋದವನು ಪೋನ್ ಮಾಡದ್ದರಿಂದ ಅನುಮಾನಗೊಂಡು ತಂದೆ ಮಹಾಬಲೇಶ್ವರ ಅವರು ಮಾ.26ರಂದು ನಿಟ್ಟೆ ಕಾಲೇಜಿಗೆ ಹೋಗಿ ಮಗನ ಬಗ್ಗೆ ವಿಚಾರಿಸಿದಾಗ ಆತ ರಜೆಯಲ್ಲಿ ಹೋದವ ಕಾಲೇಜಿಗೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಪೋನ್ ಸ್ವೀಕರಿಸುತ್ತಿಲ್ಲ ಎಂದು ತಿಳಿದುಬಂದಿದೆ. ಕಾಣೆಯಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ದೇವಳ ಸಮೀಪದ ಸಭಾಭವನದ ಟೆರೇಸ್‌ನಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ ಸಂಜೆ ಪತ್ತೆಯಾಗಿದೆ. ಮೃತರು ಉಳ್ಳೂರು ಗ್ರಾಮದ ನಿವಾಸಿ ಕೆ. ಶ್ರೀನಿವಾಸ (85) ಎಂದು ಗುರುತಿಸಲಾಗಿದೆ. ದೇವರ ಅಪಾರ ಭಕ್ತರಾಗಿದ್ದ ಅವರು ಆಗಾಗ್ಗೆ ಉಪವಾಸ ಮಾಡಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು. ಮಾ.18ರಂದು ಬೆಳಗ್ಗೆ ಮನೆಯಲ್ಲಿ ತಿಂಡಿ ತಿಂದು ಯಾರಿಗೂ ಹೇಳದೆ ಹೊರಟು ಹೋಗಿದ್ದರು. ಹುಡುಕಾಡಿದರು ಪತ್ತೆಯಾಗದ ಕಾರಣ ಮನೆಯವರು ಕೋಟ ಠಾಣೆಯಲ್ಲಿ ನಾಪತ್ತೆಯಾಗಿರುವುದಾಗಿ ಸಲ್ಲಿಸಿದ್ದರು. ಬುಧವಾರ ದೂರು ಸಂಜೆ ಸಭಾಭವನ ವಠಾರದಲ್ಲಿ ದುರ್ವಾಸನೆ ಕಂಡುಬಂದಿದ್ದು ಪರಿಶೀಲನೆ ನಡೆಸಿದಾಗ ಟೆರೇಸ್‌ನಲ್ಲಿ ಅಡಕೆ ಒಣಗಿಸಲು ಹಾಕಲಾದ ಪ್ಲಾಸ್ಟಿಕ್ ಶೆಡ್‌ನ ಒಳಗೆ ಬಿಸಿಲಿನ ಹೊಡೆತಕ್ಕೆ ಬೆಂದು ಕರಕಲಾಗಿ ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಾಯಿಲೆಯಿಂದ ವಯೋಸಹಜ ಬಳಲುತ್ತಿದ್ದವರು ದೇವರ ಮೇಲಿನ ಅಪಾರ ಭಕ್ತಿಯ ಕಾರಣಕ್ಕೆ ಉಪವಾಸ ಮಾಡಿ ಅಸ್ವಸ್ಥರಾಗಿಯೋ ಅಥವಾ ಬೇರಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದೆಂದು ಪುತ್ರಿ ಗೀತಾ ಉಳ್ಳೂರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.|ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಆಯೋಜಿಸಿದ್ದ ಎರಡು ದಿನಗಳ ’ಆಗೋನ್-ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಯುಜಿ ಮತ್ತು ಪಿಜಿ ಫೆಸ್ಟ್‌ನ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ಮಂಗಳೂರಿನ ಸಾಯಿ ಪ್ರೊಡಕ್ಷನ್ ನಿರ್ದೇಶಕ ಸಾಹಿಲ್ ಎಸ್. ರೈ, ಛಲ ಬಿಡದೆ ಪ್ರಯತ್ನಿಸಿದರೆ ಯಶಸ್ಸು ನಮ್ಮದಾಗಬಲ್ಲದು. ಯಶಸ್ಸನ್ನು ಗಳಿಸುವ ಹಾದಿಯ ಆರಂಭ ಬದುಕಿನಲ್ಲಿ ಏನಾಗಬೇಕು ಎಂದು ತಿಳಿದಿರುವುದಾಗಿದೆ. ಯಶಸ್ಸಿನ ಮೆಟ್ಟಿಲನ್ನು ಬರುವ ಅವಕಾಶವನ್ನು ಬಳಸಿಕೊಳ್ಳುವ ಮುಖಾಂತರ ಏರಬಲ್ಲೇವು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಸಂಸ್ಥೆಯ ವಿವಿಧ ಚಟುವಟಿಕೆಗಳಲ್ಲಿ ಎಂಬಿಎ ವಿದ್ಯಾರ್ಥಿಗಳ ತೊಡಗುವಿಕೆಯನ್ನು ಕೊಂಡಾಡಿದರು. ವಿಭಾಗದ ಮುಖ್ಯಸ್ಥೆ ಪ್ರಿಯ ಸಿಕ್ವೇರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸುರತ್ಕಲ್‌ನ ಎನ್‌ಐಟಿಕೆ ಎಂಬಿಎ ವಿಭಾಗದ ವಿದ್ಯಾರ್ಥಿಗಳು ಆಗೋನ್ ಫೆಸ್ಟ್‌ನ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿದರೆ, ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ರನ್ನ‍ರ್ಸ್‌ ಅಪ್ ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಪಿಜಿ ವಿಭಾಗದ ಮುಖ್ಯಸ್ಥೆ ಪ್ರಿಯ ಸಿಕ್ವೇರಾ,…

Read More