ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ್ಯಾಂಕ್ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ವಹಿಸಿದ್ದರು. ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿರಂತರ ಪ್ರಯತ್ನ ಯಶಸ್ಸಿಗೆ ದಾರಿ. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ನಿರಂತರ ಪ್ರಯತ್ನ ಮತ್ತು ಕಾಯುವ ತಾಳ್ಮೆ ಇರಬೇಕು. ಶಿಕ್ಷಣ ಕೇವಲ ಪುಸ್ತಕದ ಜ್ಞಾನವಲ್ಲ, ಬದಲಿಗೆ ಜೀವನದ ಏಳು-ಬೀಳುಗಳನ್ನು ಎದುರಿಸುವ ಧೈರ್ಯ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಮತ್ತು ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸುವಂತಿರಬೇಕು ಎಂದರು. ಅತಿಥಿಯಾಗಿ ಭಾಗವಹಿಸಿದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಸಂಪೂರ್ಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳ ಸಾಧನೆಯಿಂದ ಹೆತ್ತವರಿಗೆ ಗೌರವ ಸಿಗುವಂತಾದರೆ ಅದು ನಿಜಕ್ಕೂ ಮಕ್ಕಳು ಹೆತ್ತವರಿಗೆ ನೀಡುವಂತಹ ಅತಿ ದೊಡ್ಡ ಉಡುಗೊರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಜೀವನದಲ್ಲಿ ಪರಿಶ್ರಮ ಮತ್ತು ಶ್ರದ್ಧೆಯಿಂದ ಸಾಧನೆಗಳನ್ನು ಮಾಡಬೇಕು ಮತ್ತು ಗುರಿಯನ್ನು ತಲುಪಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಾಮನ ಎಸ್. ಪೈ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿಯ ಆರಂಭೋತ್ಸವ ಮತ್ತು ಅಭಿಮುಖೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ. ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶೀನಾಥ್ ಪಿ.ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರತಿಭೆಗಳಾದ ಅದಿತಿ ಎಸ್. ಖಾರ್ವಿ ಇವರಿಂದ ಭರತನಾಟ್ಯ ಮತ್ತು ಶ್ಯಾಮ್ ಜಿ.ಎನ್. ಪೂಜಾರಿ ಅವರ ಕೊಳಲು ವಾದನ ಮತ್ತು ರಚಿತ್ ಚಂದ್ರ ಖಾರ್ವಿ ಅವರಿಂದ ತಬಲ ವಾದನ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾದ ಸುಜಯೀಂದ್ರ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026ರ ಅಂಗವಾಗಿ ಜೂನ್.2ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರ ಹಾಗೂ ಕೆಲವು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾಮಗಾರಿಯ ಪ್ರಗತಿಯ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತವೆ. ಇವುಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾದ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವತಿಯಿಂದ ನಡೆಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಅಗತ್ಯ ವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕೈಗೊಳ್ಳುತ್ತದೆ. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಳಂಬವಿಲ್ಲದೆ ಪೂರ್ಣಗೊಳಿಸಿ, ಜನಸಾಮಾನ್ಯರ ಸದುಪಯೋಗಕ್ಕೆ ಅವಕಾಶ ಮಾಡಿಕೊಡಬೇಕು. ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಪ್ರತಿದಿನ 45 ಎಂ.ಎಲ್.ಡಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಆದ್ಯತೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ದೇವ ಎಜುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್ ಕುಂದಾಪುರ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿ ಡಾ. ಸಿಜು ಥಾಮಸ್ ಅವರು, ಕಾರ್ಯಗಾರದಲ್ಲಿ ಶಿಕ್ಷಕರು ವೈಯಕ್ತಿಕ ಮತ್ತು ವೃತ್ತಿಪರ ಸಮತೋಲನವನ್ನು ಹೇಗೆ ನಿಭಾಯಿಸಬಹುದು ಎಂಬುದನ್ನು ವಿವರಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಶಿಕ್ಷಕಿ ಜಾಹ್ನವಿ ಕಾರ್ಯಕ್ರಮವನ್ನು ನಿರೂಪಿಸಿ, ದೀಪಾ ಆಚಾರ್ ಸರ್ವರನ್ನು ಸ್ವಾಗತಿಸಿದರು. ಕೊನೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಾಂತಾರು ಪಂಚಾಯತ್ ಅಧಿಕಾರಿ ಮೀರಾ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಮ್ಮನ್ನು ತಾವು ಅಂದವಾಗಿ ಕಾಣುವಂತೆ ಶ್ರಮವಹಿಸುವಂತೆ ಇತರರ ಸೌಂದರ್ಯ ವೃದ್ಧಿಸುವಲ್ಲಿಯೂ ಸಮಾನ ಕಾಳಜಿ ವಹಿಸಬೇಕು. ಬಹಿರಂಗ ಶುದ್ಧಿಯ ಜೊತೆಗೆ ಅಂತರಂಗ ಶುದ್ಧಿಯೂ ಇದ್ದಾಗ ಮಾತ್ರ ಉತ್ತಮ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ ಎಂದರು. ಮಹಿಳೆಯರ ಅಚ್ಚುಮೆಚ್ಚಿನ ಕ್ಷೇತ್ರಗಳಲ್ಲಿ ಸೌಂದರ್ಯ ವೃದ್ಧಿಯ ಕೆಲಸವೂ ಒಂದಾಗಿದ್ದು, ಪಡೆದಿರುವ ಉತ್ತಮ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನಿ ಮಹಿಳೆಯರಾಗಿ ಉತ್ತಮ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು, ಟೂಲ್ ಕಿಟ್ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಬೊಮ್ಮಯ್ಯ ಎಂ. ಅವರು ಮಾತನಾಡಿ, 35 ದಿನಗಳ ತರಬೇತಿ ನಿಜವಾದ ಅರ್ಥದಲ್ಲಿ ಯಶಸ್ವಿಯಾಗುವುದು ನೀವು ಸ್ವಂತ ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಿದಾಗ ಮಾತ್ರ ಎಂದು ಹೇಳಿದರು. ಸಂಸ್ಥೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಾಜ್ಯದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ದೇವಸ್ಥಾನದ 41 ಹುಂಡಿಗಳನ್ನು ಎಣಿಕೆಗಾಗಿ ತೆರೆಯಲಾಯಿತು. ಇದರಲ್ಲಿ ಮೇ ತಿಂಗಳಲ್ಲಿ ಭಕ್ತರಿಂದ ಅಪಾರ ಪ್ರಮಾಣದ ಕಾಣಿಕೆ ಸಂಗ್ರಹವಾಗಿರುವುದು ಕಂಡುಬಂದಿದೆ. ದೇವಸ್ಥಾನ ಮೂಲಗಳ ಪ್ರಕಾರ, ಹುಂಡಿಗಳಲ್ಲಿ ಒಟ್ಟು 1,90,43,819 ರೂ. ನಗದು ಮೊತ್ತ ಲಭಿಸಿದೆ. ಇನ್ನು ಇತರೆ ಕಾಣಿಕೆಗಳನ್ನು ಸೇರಿಸಿ ಒಟ್ಟು ಸಂಗ್ರಹ ಮೊತ್ತ ರೂ 1,94,44,173ಕ್ಕೆ ಏರಿಕೆಯಾಗಿದೆ. ಇದಲ್ಲದೆ, ಭಕ್ತರು ಕಾಣಿಕೆ ಯಾಗಿ ಸಲ್ಲಿಸಿದ್ದ 0.325 ಗ್ರಾಂ ಚಿನ್ನ ಹಾಗೂ 2.370 ಕೆ.ಜಿ ಬೆಳ್ಳಿಯೂ ಲಭ್ಯವಾಗಿದೆ. ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಅಧಿಕಾರಿಗಳ ಸಮ್ಮುಖದಲ್ಲಿ ಭದ್ರತಾ ಕ್ರಮಗಳೊಂದಿಗೆ ನಡೆಯಿತು. ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಕಾಣಿಕೆ ಸಂಗ್ರಹದಲ್ಲೂ ನಿರಂತರ ಏರಿಕೆ ಕಂಡುಬರುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಬಳಿಕ ಕೊಲ್ಲೂರು ರಾಜ್ಯದ ಎರಡನೇ ಶ್ರೀಮಂತ ದೇವಸ್ಥಾನವಾಗಿ ಪರಿಗಣಿಸಲ್ಪಟ್ಟಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಡಿತದ ಚಟವಿದ್ದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಉಪ್ಪುಂದ ರಥಬೀದಿಯಲ್ಲಿ ಸಂಭವಿಸಿದೆ. ಉಪ್ಪುಂದ ರಥಬೀದಿಯ ನಿವಾಸಿ ಗಣೇಶ್ (44) ಮೃತಪಟ್ಟ ವ್ಯಕ್ತಿ. ಅವರು ಮೇ.25ರಂದು ಬೆಳಗ್ಗೆ ವಾಂತಿ ಮಾಡಿ ತೀವ್ರ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದಾಗ ಬರುವ ದಾರಿಯ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ಕ್ಷೇತ್ರದ ಮೀನುಗಾರರಿಗೆ ಲೈಫ್ ಜಾಕೆಟ್ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು ಮಾನವನ ಜೀವ ಅತ್ಯಮೂಲ್ಯವಾದದ್ದು, ಇಂದಿನ ದಿನಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊಟ್ಟೆಪಾಡಿಗಾಗಿ ಮೀನುಗಾರಿಕೆಯಲ್ಲಿ ತೊಡಗಿರುವ ಸಮಯ ದುರ್ಘಟನೆಗಳಾಗಿ ಜೀವ ಕಳೆದುಕೊಳ್ಳುವ ಸಂದರ್ಭಗಳನ್ನು ಕಾಣುತ್ತಿದ್ದೇವೆ. ಇದು ಅತ್ಯಂತ ದುರಾದೃಷ್ಟಕರ ಸಂಗತಿ. ಹಾಗಾಗಿ ಈ ಸಾಲಿನ ಸಮುದ್ರ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಸಂಪ್ರದಾಯಿಕ ಮೀನುಗಾರಿಕೆಯಲ್ಲಿ ಹಾಗೂ ನದಿ ಪಾತ್ರಗಳಲ್ಲಿ ಇನ್ನಿತರ ಕೆಲಸಗಳಲ್ಲಿ ತೊಡಗಿಕೊಳ್ಳುವ ಮೀನುಗಾರ ಬಾಂಧವರು ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಿದರು. ಲೈಫ್ ಜಾಕೆಟ್ ಸಾಕಷ್ಟು ಸಂಖ್ಯೆಯಲ್ಲಿ ವಿತರಣೆ ಆಗಿದ್ದು, ಅದನ್ನು ಪಡೆದುಕೊಂಡವರು ಅದರ ಸದ್ಭಬಳಕೆ ಮಾಡಲು ಕರೆ ನೀಡಿದರು ಮೀನುಗಾರರಿಗೆ ಲೈಫ್ ಬಾಯ್ ಒದಗಿಸಲು ಅಧಿಕಾರಿಗಳಿಗೆ ಸೂಚನೆ:ಪ್ರಸ್ತುತ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಲೈಫ್ ಜಾಕೆಟ್ ವಿತರಿಸಲಾಗಿದೆ. ಕೆಲವು ಕಡೆ ಮೀನುಗಾರರಿಂದ ಲೈಫ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸೈಂಟ್ ಥಾಮಸ್ ಶಾಲೆಯು ಬೈಂದೂರಿನಲ್ಲಿ ಸೋಮವಾರ- ಮಂಗಳವಾರದಂದು ಸಿಬಿಎಸ್ಇ ವತಿಯಿಂದ ಆಯೋಜಿಸಲಾದ “ಸಾಮರ್ಥ್ಯಭಿವೃದ್ಧಿ (ಕೌಶ ಲ್ಯಾಭಿವೃದ್ಧಿ) ಕಾರ್ಯಕ್ರಮ (CBP)” ಯಶಸ್ವಿಯಾಗಿ ನಡೆಯಿತು. “ಸಾಮರ್ಥ್ಯಾಧಾರಿತ ಕಲಿಕೆ ಮತ್ತು ಬಹು ಆಯ್ಕೆಯಪ್ರಶ್ನೆಗಳು”ವಿಷಯಾಧಾರಿತ ಈ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ವಿವಿಧ ಶಾಲೆಗಳ ಶಿಕ್ಷಕರು ಉತ್ಸಾಹಭರಿತವಾಗಿ ಭಾಗವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಾತನಾಡಿ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಕೌಶಲ್ಯಾಧಾರಿತ ಅಧ್ಯಯನದ ಮಹತ್ವವನ್ನು ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿವರಿಸಿದರು. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ, ಸಮಸ್ಯೆ ಪರಿಹಾರ ಸಾಮರ್ಥ್ಯ ಮತ್ತು ವಿಶ್ಲೇಷಣಾತ್ಮಕ ಮನೋಭಾವ ಬೆಳೆಸುವಲ್ಲಿ ಸಾಮರ್ಥ್ಯಾಧಾರಿತ ಕಲಿಕೆ ಅತ್ಯಂತ ಪರಿಣಾಮಕಾರಿ ಎಂದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಧರ ಬಿ ಹಾಗೂ ಡಾ. ಮೋನಿಕಾ ಡಿಸೋಜ ಅವರು ಶಿಕ್ಷಕರಿಗೆ ಸಮಗ್ರ ಮಾಹಿತಿ ನೀಡಿದರು. ಸಾಮರ್ಥ್ಯಾಧಾರಿತ, (ಕೌಶಲ್ಯ) ಪ್ರಶ್ನೆಗಳನ್ನು ರೂಪಿಸುವ ವಿಧಾನ, ವಿದ್ಯಾರ್ಥಿಗಳ ಕಲಿಕಾ…
