Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಸ್ತಾನ ಟೋಲ್ ಸಮೀಪ ಗುಂಡ್ಮಿ ಅಂಬಾಗಿಲುನ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಅಪಘಾತದಲ್ಲಿ ಕಾರೊಂದು ಬೆಂಕಿ ಹೊತ್ತುಕೊಂಡ ಘಟನೆ ಶನಿವಾರ ಸಂಭವಿಸಿದೆ. ಗೋಕರ್ಣದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕವನ್ನು ದಾಟಿ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಸುದೈವ ಕುಟುಂಬಕಮ್” – ಇಡೀ ಜಗತ್ತೇ ಒಂದು ಕುಟುಂಬ, ಪ್ರೀತಿಯೇ ಅದರ ಬಂಧ, ಮಾನವೀಯತೆಯೇ ಅದರ ಧರ್ಮ ಎಂಬ ಉದಾತ್ತ ಸಂದೇಶವನ್ನು ಸಾರುವ ಆಶಯದೊಂದಿಗೆ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರು ಇದರ 2026–27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವವು ಇತ್ತೀಚೆಗೆ ಕಾಲೇಜಿನ ಆವರಣದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲ ಎಂ.ಐ.ಟಿ.ಯ ಶೈಕ್ಷಣಿಕ ವಿಭಾಗದ ನಿರ್ದೇಶಕರಾದ ಡಾ. ರವಿಪ್ರಕಾಶ್ ವೈ. ಮಾತನಾಡಿ, “ಸಕಾರಾತ್ಮಕ ಚಿಂತನೆಯೇ ಯಶಸ್ಸಿನ ಮೊದಲ ಹೆಜ್ಜೆ. ಜೀವನದಲ್ಲಿ ಹಲವು ಅವಕಾಶಗಳ ಬಾಗಿಲುಗಳು ತೆರೆಯುತ್ತವೆ; ಅವುಗಳಲ್ಲಿ ಸರಿಯಾದದ್ದನ್ನು ಆಯ್ಕೆ ಮಾಡುವ ಜಾಣ್ಮೆ ವಿದ್ಯಾರ್ಥಿಗಳದ್ದಾಗಿರಬೇಕು” ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ಸಹಬಾಳ್ವೆ ಹಾಗೂ ಸಾಮರಸ್ಯದ ಮೌಲ್ಯಗಳನ್ನು ಬೆಳೆಸುತ್ತವೆ” ಎಂದರು. ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ರುಡ್ ಸೆಟ್ ಸಂಸ್ಥೆಬ್ರಹ್ಮಾವರದ ವತಿಯಿಂದ ಉದ್ಯಮಶೀಲತಾ ಅಭಿವೃದ್ಧಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರೇಮಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ತರಬೇತಿಯ ಮಹತ್ವ ಹಾಗೂ ಮಹಿಳೆಯರ ಜೀವನದಲ್ಲಿ ತರಬೇತಿಯ ಅಗತ್ಯತೆಯನ್ನು ಸವಿವರವಾಗಿ ವಿವರಿಸಿದರು. ಸ್ವಾವಲಂಬಿ ಜೀವನ ನಡೆಸಲು ತರಬೇತಿಯು ಭದ್ರವಾದ ಅಡಿಪಾಯವಾಗಿದೆ ಎಂದು ತಿಳಿಸಿದರು. ಮಹಿಳಾ ನಿವಾಸಿನಿಯರು ತರಬೇತಿಯನ್ನು ಹೆಚ್ಚಿನ ಆಸಕ್ತಿ ಮತ್ತು ಶ್ರದ್ಧೆಯಿಂದ ಕಲಿತು, ತಮ್ಮಲ್ಲಿರುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದರ ಜೊತೆಗೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ಸ್ವಾವಲಂಬಿಗಳಾಗಿ ಬದುಕುವಂತೆ ಕರೆ ನೀಡಿದರು. ಇನ್ನೋರ್ವ ಅತಿಥಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ. ವಿಜಯಲಕ್ಷ್ಮಿ ಹೇರೂರ ಮಾತನಾಡಿ, ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಕೌಶಲ್ಯಾಧಾರಿತ ತರಬೇತಿಯು ಅವಶ್ಯಕ. ಹಾಗಾಗಿ ಅಂತಹ ತರಬೇತಿಯನ್ನು ಉತ್ತಮವಾಗಿ ಉತ್ಸಾಹದಿಂದ ಕಲಿತು, ಸ್ವಾವಲಂಬಿಯಾಗಿ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಲ್ಲಿ ಸೃಜನಶೀಲತೆ, ಸಂವಹನ ಕೌಶಲ, ಉಳಿತಾಯದ ಮಹತ್ವ ಮತ್ತು ಆರ್ಥಿಕ ವ್ಯವಹಾರದ ಅರಿವು ಮೂಡಿಸುವಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ಸಹಕಾರಿ. ಮಕ್ಕಳಲ್ಲಿ ವ್ಯವಹಾರ ಜ್ಞಾನ, ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿರುವ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ವಸ್ತುಗಳ ಬೆಲೆ ನಿಗದಿಪಡಿಸುವುದು, ಗ್ರಾಹಕರೊಂದಿಗೆ ವ್ಯವಹರಿಸುವುದು ಹಾಗೂ ಹಣದ ಲೆಕ್ಕಾಚಾರ ಮಾಡುವ ಮೂಲಕ ಮಕ್ಕಳು ಪ್ರಾಯೋಗಿಕ ಅನುಭವ ಪಡೆಕೊಳ್ಳಬೇಕು ಎಂದು ಉದ್ಯಮಿ ಉಮೇಶ ಎಲ್.ಮೇಸ್ತ ಹೇಳಿದರು. ಅವರು ಜಿ. ಎಸ್. ವಿ. ಎಸ್.ಅಸೋಸಿಯೇಶನ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜಿನ ವಠಾರದಲ್ಲಿ ಶನಿವಾರ ಆಯೋಜಿಸಲಾಗಿದ್ದ ’ಮಕ್ಕಳ ಸಂತೆ’ ಬ್ಯುಸಿನೆಸ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೋಟೇಶ್ವರದ ಉದ್ಯಮಿ ಸಹನಾ ಸುರೇಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಜಹೀರ್ ಅಹಮ್ಮದ್ ನಾಕುದಾ, ಜಿ.ಎಸ್.ವಿ.ಎಸ್.…

Read More

ಕುಂದಾಪ್ರ ಡಾಟ್‌ ಕಾಂಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಶಿರಿಯಾರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಸಾಯ್ಬರಕಟ್ಟೆ ಜಿ.ಎಸ್.ಬಿ. ಸಭಾಭವನದಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೇವಲ ವೇದಿಕೆಯ ಭಾಷಣಗಳು ಸಾಕಾಗುವುದಿಲ್ಲ. ಬದಲಾಗಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಮನೆ ಮನೆಗೆ ತೆರಳಿ ನಡೆಸುವ ಸಂಘಟಿತ ಪ್ರಯತ್ನ ಹಾಗೂ ಜನರೊಂದಿಗೆ ಬೆಳೆಸಿಕೊಳ್ಳುವ ನಿಕಟ ಸಂಪರ್ಕವೇ ಗೆಲುವಿನ ಪ್ರಮುಖ ಶಕ್ತಿಯಾಗಿದೆ ಎಂದರು. ಪ್ರತಿಯೊಬ್ಬ ಕಾರ್ಯಕರ್ತನು ತನ್ನ ಬೂತ್‌ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ, ಮತದಾರರ ಸಮಸ್ಯೆಗಳಿಗೆ ಸ್ಪಂದಿಸಿ ಪಕ್ಷದ ಮೇಲಿನ ವಿಶ್ವಾಸವನ್ನು ಬಲಪಡಿಸಬೇಕು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಶಿರಿಯಾರದಿಂದಲೇ ಸಂಘಟನಾತ್ಮಕ ಗೆಲುವಿನ ಮುನ್ನುಡಿ ಬರೆಯುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಹುದ್ದೆಗಿಂತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾಂಕ್‌ನಲ್ಲಿ ವೃತ್ತಿಯನ್ನು ನಿರ್ವಹಿಸುತ್ತಿದ್ದರೂ ಕನ್ನಡ ಭಾಷೆ  ಗೌರವವನ್ನು ತಂದುಕೊಟ್ಟಿದೆ. ಕನ್ನಡ ಭಾಷೆಗೆ ಋಣಿಯಾಗಿರುತ್ತೇನೆ ಎಂದು ಕವಿ ಹೆಚ್.ಡುಂಡಿರಾಜ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ವಿಭಾಗದ ವತಿಯಿಂದ ‘ಸಾಹಿತ್ಯ ಮತ್ತು ಪತ್ರಿಕೆ’ ಎನ್ನುವ ವಿಚಾರದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಕನ್ನಡ ಭಾಷೆ ಎನ್ನುವುದು ನನಗೆ ಗೌರವ ಮತ್ತು ಮನ್ನಣೆಯನ್ನು ತಂದುಕೊಟ್ಟಿದೆ. ಕುಂದಾಪುರದ ಹಟ್ಟಿಕುದ್ರಿನ ನಾನು ಕುಂದಗನ್ನಡ ಭಾಷೆಯನ್ನು ಆಡುವುದನ್ನು ಬಿಟ್ಟಿಲ್ಲ. ಕನ್ನಡ ಭಾಷೆ ನನ್ನ ಜೀವಾಳ, ಉಸಿರಿರುವ ತನಕ ಕನ್ನಡ ಸೇವೆಯನ್ನು ಮಾಡುತ್ತೇನೆಂದು ಹೇಳುತ್ತಾ ವಿದ್ಯಾರ್ಥಿಗಳಿಗೆ ತನ್ನ ಹನಿಗವನವನ್ನು ಹೇಳಿ ನಗೆಗಡಲಲ್ಲಿ ತೇಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಪ್ರತಿಯೊಬ್ಬರಿಗೂ ತಮ್ಮ ಶೈಕ್ಷಣಿಕ ಅವಧಿಯಲ್ಲಿ ಉಪನ್ಯಾಸ ಕೊಟ್ಟ ಮಹನೀಯರ ನೆನಪಿರುತ್ತದೆ. ಹಾಗೆ ನೀವು ಅದೃಷ್ಟಶಾಲಿಗಳು ಒಬ್ಬ ಶ್ರೇಷ್ಠ ಕವಿಯ ಮಾತುಗಳನ್ನು ಆರಿಸಿದ್ದೀರಿ ನೀವು ಕೂಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಐದನೇ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ”ವು ಗುರುವಾರದಂದು ನಡೆಯಿತು. ಪಾಲಕರ ಸಭೆಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಬಗ್ಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ನಂತರ ನಡೆದ ಕಾರ್ಯಗಾರದಲ್ಲಿ ಸಾಗರದ ಉದ್ದಿಮೆದಾರರಾದ ಮನಸ್ವಿ ಹೆಗಡೆಯವರು ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ಹಾಗೂ ಸಿಬ್ಬಂದಿಗಳಿಗೆ ಅಣಬೆ ಕೃಷಿ ಮಾಡುವ ವಿಧಾನದ ಬಗ್ಗೆ ಸವಿವರವಾಗಿ ತಿಳಿಸಿ, ಅಣಬೆ ಕೃಷಿಯ ಪ್ರಾತ್ಯಕ್ಷಿಕೆಯನ್ನು ಮಾಡಿದರು. ನಂತರ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಫಲಾನುಭವಿಗಳಿಂದ ಕೂಡ ಅಣಬೆ ಕೃಷಿಯನ್ನು ಪ್ರಾಯೋಗಿಕವಾಗಿ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ, ಟ್ರಸ್ಟಿ ಮನೋರಮ.ಕೆ, ಎಸ್. ಡಿ ಎಮ್.ಸಿ ಅಧ್ಯಕ್ಷರಾದ ವಿನಯ್ ಕುಮಾರ್, ಶಾಲಾ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆಯ ಆತಿಥ್ಯದಲ್ಲಿ ವಲಯ 2ರ ವಲಯ ಮಟ್ಟದ ಒಳಾಂಗಣ ಕ್ರೀಡಾಕೂಟ “ಸ್ನೇಹ ರಥ – 2026” ಕಾರ್ಯಕ್ರಮವು ಶುಕ್ರವಾರ ಕೋಟೇಶ್ವರದ ಅಂಕದಕಟ್ಟೆಯ ಸಹನಾ ಅಕ್ವಾಟಿಕ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗ್ರಾಮೀಣ ಕ್ರೀಡಾ ವಿಭಾಗದ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ರೋಟರಿ ಸಂಸ್ಥೆಯು ಸದಸ್ಯರ ನಡುವೆ ಸ್ನೇಹ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುವ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದನ್ನು ಪ್ರಶಂಸಿಸಿದರು. ಕ್ರೀಡಾಪಟುವೊಬ್ಬನು ವಿಜಯವನ್ನು ಸಾಧಿಸುವ ಮೊದಲು ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ಸೋಲು ಮತ್ತು ಗೆಲುವು ಎರಡೂ ಕ್ರೀಡೆಯ ಅವಿಭಾಜ್ಯ ಅಂಗಗಳಾಗಿವೆ ಎಂದು ತಿಳಿಸಿದರು. ರೋಟರಿ ಕ್ಲಬ್ ತೆಕ್ಕಟ್ಟೆಯ ಅಧ್ಯಕ್ಷರಾದ ಟಿ. ರಾಜೀವ್ ಶೆಟ್ಟಿ ಅವರು ಗಣ್ಯರನ್ನು ಹಾಗೂ ಭಾಗವಹಿಸಿದ ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ತಮ್ಮ ಸ್ವಾಗತ ಭಾಷಣದಲ್ಲಿ ಸ್ಪರ್ಧಿಗಳು ತೀರ್ಪುಗಾರರ ನಿರ್ಧಾರವನ್ನು ಗೌರವಿಸಬೇಕು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಣೇಶ ಚತುರ್ಥಿಯ ದಿನ ಕುಂಭಾಶಿ ಶ್ರೀವಿನಾಯಕ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ, ತಮಿಳುನಾಡು ಪೊಲೀಸರಿಂದ ಬಂಧಿತರಾಗಿದ್ದ ಆರೋಪಿಗಳನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು, ಅವರಿಂದ ಸುಲಿಗೆ ಮಾಡಿದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಗಣೇಶ ಚತುರ್ಥಿಯ ದಿನ ಸೆ.14ರಂದು ಕುಂಭಾಶಿ ಶ್ರೀವಿನಾಯಕ ದೇವಸ್ಥಾನದ ಒಳಗೆ ಜನ ಜಂಗುಳಿಯ ಮಧ್ಯೆ ಪ್ರದಕ್ಷಿಣೆ ಬರುತ್ತಿದ್ದ ಬೈಂದೂರು ತಾಲೂಕು ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಎಂಬವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಸುಲಿಗೆ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾ ವೇಳೆ ಪ್ರಕರಣದಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪಿಗಳಾದ ತಮಿಳುನಾಡು ಮೂಲದ ವಲ್ಲಿಯಮ್ಮ ದೇವಿ ತಿಲೋತ್ತಮ, ಪೊನ್ನಿ ಎಂಬವರನ್ನು ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿರುವ ಮಾಹಿತಿ ದೊರೆತಿದೆ. ಬಳಿಕ ಪೊಲೀಸ್‌ ಕುಂದಾಪುರ ಉಪ ವಿಭಾಗದ ಉಪಾಧೀಕ್ಷಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರದಂದು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕ್ರೀಡಾ ಚಟುವಟಿಕೆಗಳು ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯವನ್ನು ತುಂಬಿದವು. ಪುಟಾಣಿ ಕ್ರೀಡಾಪಟುಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ, ಸಾಮರ್ಥ್ಯ ಹಾಗೂ ಕ್ರೀಡಾ ಮನೋಭಾವವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿಯವರಾದ ವೀಣಾರಶ್ಮಿ ಎಂ., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಾಮಾಲಿನಿ ಎಸ್. ಉಪಸ್ಥಿತರಿದ್ದು ಮಕ್ಕಳನ್ನು ಪ್ರೋತ್ಸಾಹಿಸಿದರು. ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಕೃಷ್ಣ ಹುಲ್ಲಾಲ್ ಹಾಗೂ ಕುಮಾರಿ ಲತಾ ಗೌಡ ಅವರು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲಾ ವಿಭಾಗದ…

Read More