Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಳ್ಳೂರು ನಿವಾಸಿ ಪುರೋಹಿತ ರಮೇಶ್ (59) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಂಜೆ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ಮನೆಯವರು ಕೆಳಗಿಳಿಸಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು, ದಾರಿ ಮಧ್ಯ ದಲ್ಲಿ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿ ದ್ದಾರೆ. ಕಳೆದ 1 ವರ್ಷದಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದ ಅವರು, ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ ಎಂದು ಸಹೋದರ ಸುಬ್ರಹ್ಮಣ್ಯ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಾ.18ರಂದು ‘ಅಂಗಾರಕ ಸಂಕಷ್ಟಿ’ ನಡೆಯಲಿದೆ. ಈ ಪ್ರಯುಕ್ತ ಬೆಳಗ್ಗೆ 5 ಗಂಟೆಗೆ ಪ್ರಾತಪೂಜೆ, 11.30ಕ್ಕೆ ಪಂಚಾಮೃತ ಅಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 12 ಗಂಟೆಗೆ ‘ಸಹಸ್ರನಾರಿಕೇಳ ಗಣಹೋಮದ ಪೂರ್ಣಾಹುತಿ’ ಸತ್ಯ ಗಣಪತಿ ವೃತ ಕಲೋಕ್ತ ಪೂಜಾ ಸಹಿತ ಮಹಾಪೂಜೆ ನಡೆಯಲಿದೆ. ರಾತ್ರಿ 8 ಗಂಟೆಗೆ ಸಾಮೂಹಿಕ ಮಹಾ ರಂಗಪೂಜಾ ಹಾಗೂ ರಜತ ಪಲ್ಲಕ್ಕಿ ಮತ್ತು ರಜತ ರಥೋತ್ಸವ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5.30ರಿಂದ ಗಣೇಶ್ ಬೀಜಾಡಿ ಹಾಗೂ ಬಳಗದವರಿಂದ ‘ದಾಸ ಗಾನಾಮೃತ’ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡಿದರು. ಕೈವಾರ ತಾತಯ್ಯರು ತಮ್ಮ ಕಾಯಕದಿಂದಲೇ ಬದುಕನ್ನು ಕಟ್ಟಿಕೊಂಡು, ಭಾಷಾ ಹಾಗೂ ಬರಹಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅನ್ಯರ ಬದುಕಿನ ಏಳಿಗೆಗಾಗಿ ಶ್ರಮಿಸಿದವರು. ಆಧ್ಯಾತ್ಮ ಚಿಂತನ ಮಂಥನ ನಡೆಸುವುದರಲ್ಲಿ ಕೈವಾರ ತಾತಯ್ಯರು ಚಾಣಾಕ್ಷತೆ ಹೊಂದಿದ್ದರು ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರ್ಕಾರವು ಸಂತರ, ವಚನಕಾರರ, ಶರಣರ ಹಾಗೂ ಇಂತಹ ಸಾಧಕರ ಜಯಂತಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ  2 ದಿನಗಳ ಟೆಕ್ ಉತ್ಸವ್ – 2025, ಅಂತರಕಾಲೇಜು ತಂತ್ರಜ್ಞಾನ ಸಂಬಂಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ  ಡಾ. ವಿ. ಎಸ್. ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದಂತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247000 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಇವರೆಗೆ 2,14,000 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಾರೆ. ಇವುಗಳಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಯುವ ರೆಡ್‌ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವಜನರು ಅರಿವಿಲ್ಲದೆ ಕ್ಷಣಿಕ ಸುಖಕ್ಕಾಗಿ ಮದ್ಯ ಅಥವಾ ಮಾದಕ ವಸ್ತುಗಳಿಗೆ ಬಲಿಯಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಅವರನ್ನು ಕೆಪಿಸಿಸಿ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ. ಅವರು 18 ವರ್ಷಗಳ ಕಾಲ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, 2013ರಲ್ಲಿ ಕುಂದಾಪುರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. ಪ್ರಸ್ತುತ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ದೈವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ, ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಸಕಾಂಗ ರೂಪಿಸಿದ ಕಾನೂನಿನ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿಯವರನ್ನು ರೋಬೋಟ್ ಗೆ ಹೋಲಿಸಿದ್ದು ಬೈಂದೂರು ಶಾಸಕರು ಪರೋಕ್ಷವಾಗಿ ಪೊಲೀಸ್ ವರಿಷ್ಟಾಧಿಕಾರಿಯವರಿಂದ ಕಾನೂನು ಮೀರಿ ಕೆಲಸ ಮಾಡಿಸುವ ನಿಲುವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ  ಅವರು ಹೇಳಿದರು. ಉಡುಪಿ ಜಿಲ್ಲೆಗೆ ಕೆ. ಅರುಣ್ ಅವರು ಪೊಲೀಸ್ ವರಿಷ್ಟಾಧಿಕಾರಿಯಾಗಿ ಬಂದ ಮೇಲೆ ಕಾನೂನು ಸುವ್ಯವಸ್ಥೆ ಅತ್ಯಂತ ಉತ್ತಮವಾಗಿದೆ, ರಾಜಕೀಯ ಲಾಭಕ್ಕಾಗಿ ಕೋಮುದಳ್ಳುರಿಗೆ ಸಿಕ್ಕಿದ್ದ ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಯಾವುದೇ ಕೋಮುಗಲಭೆ ಇಲ್ಲವಾಗಿದೆ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ, ಇವತ್ತು ಅಕ್ರಮ ಗಾಣಿಗಾರಿಕೆ ತಡೆಯ ಬೇಕಾದದ್ದು ಪೊಲೀಸ್ ವರಿಷ್ಟಾಧಿಕಾರಿಯವರ ಕೆಲಸ, ಗಣಿಗಾರಿಕೆಯ ವಿಚಾರದಲ್ಲಿ ಶಾಸಕಾಂಗ ರೂಪಿಸಿದ ನೀತಿ, ನಿಯಮಗಳನ್ನು ಪಾಲನೆ ಮಾಡುವುದು ಪೊಲೀಸ್ ಇಲಾಖೆಯ ಕೆಲಸ ಹಾಗೂ ಪೊಲೀಸ್ ವರಿಷ್ಟಾಧಿಕಾರಿ ಅದನ್ನೇ ಮಾಡುತ್ತಿದ್ದಾರೆ. ಶಾಸನ ಸಭೆಯ ಗೌರವಾನ್ವಿತ ಸದಸ್ಯರಾದ ಬೈಂದೂರು ಶಾಸಕರು ಕರಾವಳಿಗೆ ಪ್ರತ್ಯೇಕ ಗಣಿ ನೀತಿ ತರುವಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರು/ಪ್ರಯಾಣಿಕರು ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟ್ ಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ. ಮುಂಗಡ ಟಿಕೇಟ್ ಗಳನ್ನು ಪಡೆಯದಿದ್ದಲ್ಲಿ ಈ ಸೌಲಭ್ಯವನ್ನು ರದ್ದುಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಮಹಿಳಾ ವೇದಿಕೆ ಮತ್ತು ಶ್ರೀ ಮಾತಾಮೃತಾನಂದಮಯಿ ಮಠ ಕೇರಳ ಇದರ ಆಯುರಾರೋಗ್ಯ ಸೌಖ್ಯಂ ಫೌಂಡೇಶನ್ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಪರಿಸರ ಸ್ನೇಹಿಯಾದ ಮತ್ತು ಬಾಳೆದಿಂಡನ್ನು ಉಪಯೋಗಿಸಿ ಉತ್ಪಾದಿಸಿದ ಸೌಖ್ಯಂ ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಕಾರ್ಯಕ್ರಮವು ಗುರುವಾರದಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಕ್ಸಸ್ ಮಾಲ್ ಇದರ ಕಾರ್ಯನಿರ್ವಾಹಕ ವ್ಯವಸ್ಥಾಪಕರಾದ ನಿಶಾ ಅಂಚನ್ ಅವರು ಮಾತನಾಡಿ, ಪರಿಸರ ರಕ್ಷಣೆ ಮತ್ತು ಮಹಿಳೆಯರು ಸ್ವಚ್ಛತೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಋತುಚಕ್ರದ ಸಮಯದಲ್ಲಿ ಈ ಮರುಬಳಕೆ ಮಾಡಬಹುದಾದ ಪ್ಯಾಡ್ ಗಳ ಬಳಕೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಆಯುರಾರೋಗ್ಯ ಸೌಖ್ಯ ಫೌಂಡೇಶನ್‌ನ ಕುಂದಾಪುರ ವಿಭಾಗದ ಪ್ರತಿನಿಧಿಯಾದ ಕಲ್ಪನಾ ಭಾಸ್ಕರ್ ಅವರು ಮಾತನಾಡಿ, ಸೌಖ್ಯಂ ಪಾಡ್ ಗಳನ್ನು ಸುಮಾರು ಆರು ವರ್ಷಗಳ ಕಾಲ ಬಳಸಬಹುದಾಗಿದ್ದು…

Read More