Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅತ್ಯಮೂಲ್ಯ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೌರಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಹಿತದೃಷ್ಠಿಯಿಂದ ಪೌರಾಡಳಿತದ ನಿರ್ದೇಶನದಂತೆ ಪ್ರತೀ ಮೂರು ತಿಂಗಳಿಗೊಮ್ಮೆ ಆರೋಗ್ತ ತಪಾಸಣೆ ಹಾಗೂ ವರ್ಷಕ್ಕೆ ಒಂದು ಬಾರಿ ಮಾಸ್ಟರ್ ಹೆಲ್ತ್ ಚೆಕ್ ಮಾಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರುಗಳಿಗೆ ಆರೋಗ್ಯ ತಪಾಸಣೆ ನಡೆಸುವ ದಿನ ಹಾಗೂ ಸ್ಥಳಗಳ ಬಗ್ಗೆ ಸೂಚನಾ ಫಕಗಳಲ್ಲಿ ಪ್ರದರ್ಶಿಸಬೇಕು ಎಂದರು. ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕೋಟ: ಇಲ್ಲಿನ ಕೋಟದ ಪೇಟೆ ದೇವಸ್ಥಾನ ಎಂದೆ ಪ್ರಸಿದ್ಧ ಪಡೆದಿರುವ ಕೋಟ ವರುಣತೀರ್ಥ ರಾಜಶೇಖರ ದೇವಸ್ಥಾನ ಇದರ ವಾರ್ಷಿಕ ವರ್ಧಂತಿ ಉತ್ಸವ ಬುಧವಾರ ಸಂಪನ್ನಗೊಂಡಿತು. ದೇಗುಲದಲ್ಲಿ ಶತರುದ್ರಾಭಿಷೇಕ, ಕಲಶಾಭಿಷೇಕ, ಮಹಾಮಂಗಳಾರತಿ, ಸಂಜೆ ರಂಗಪೂಜೆ, ದೀಪೋತ್ಸವ , ಕೋಟ ಪಂಚವರ್ಣ ಮಹಿಳಾ ಮಂಡಳ ಭಜನಾ ತಂಡ ಹಾಗೂ ಶಾರದ ಮಹಿಳಾ ಭಜನಾ ಮಂಡಳಿ ಕದ್ರಿಕಟ್ಟು ಇವರಿಂದ ಭಜನಾ ಕಾರ್ಯಕ್ರಮ ಜರಗಿತು. ಧಾರ್ಮಿಕ ವಿಧಿವಿಧಾನಗಳನ್ನು ದೇಗುಲದ ಅಧ್ಯಕ್ಷ ಜಿ. ಪ್ರಭಾಕರ ಅಡಿಗರ ಸಮ್ಮಖದಲ್ಲಿ ವೇ.ಮೂ ಸುಬ್ರಹ್ಮಣ್ಯ ಅಡಿಗರ ನೇತೃತ್ವದ ಜರಗಿದವು. ಅಪರಾಹ್ನ ಅನ್ನಸಂತರ್ಪಣೆ ಭಕ್ತಾಧಿಗಳು ಭಾಗಿಯಾಗಿ ಅನ್ನಪ್ರಸಾದ ಸ್ವೀಕರಿಸಿದರು. ದೇಗುಲದ ಟ್ರಸ್ಟಿಗಳು,ಅರ್ಚಕರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಯೋಜನಾ ಸಂಯೋಜಕ-1 (ಯಾವುದೇ ಸ್ನಾತಕ್ಕೋತ್ತರ ಪದವಿ) ಹಾಗೂ ಆಪ್ತ ಸಮಾಲೋಚಕ-3 (ಎಂ.ಎಸ್.ಡಬ್ಲೂ) ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬನ್ನಂಜೆ ದೂ.ಸಂ;0820-2526394 ಇಲ್ಲಿ ಖುದ್ದಾಗಿ ಅಥವಾ ಇ-ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದಲ್ಲಿ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಸುಸಂಘಟಿತವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 119 ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಚರಿಸಲಾಗುವುದು. ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೋವಾದಲ್ಲಿ ನಡೆದ “ಆಲ್ ಇಂಡಿಯಾ ಯೋನೆಕ್ಸ್ ಸನ್‌ರೈಸ್ 48ನೇ ಮಾಸ್ಟರ್ಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಬಂದ ಶ್ರೇಷ್ಠ ಆಟಗಾರರ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಈ ಜೋಡಿ ಶಿಸ್ತಿನ ಆಟ, ಸಮನ್ವಯ ಮತ್ತು ದಿಟ್ಟ ಮನೋಭಾವದೊಂದಿಗೆ ಗಮನಾರ್ಹ ಸಾಧನೆ ಮಾಡಿದೆ. ಪ್ರತಿ ಪಂದ್ಯದಲ್ಲಿಯೂ ಆತ್ಮವಿಶ್ವಾಸದಿಂದ ಕಣಕ್ಕಿಳಿದ ಗೌತಮ್ ಮತ್ತು ಶಾಲಿನಿ, ತಮ್ಮ ಕೌಶಲ್ಯವನ್ನು ತೋರಿಸಿ ಸೆಮಿಫೈನಲ್ ಹಂತದವರೆಗೆ ಮುನ್ನಡೆದು ಕೊನೆಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ಸಾಧನೆ ಕೇವಲ ಇವರ ವೈಯಕ್ತಿಕ ಯಶಸ್ಸಷ್ಟೇ ಅಲ್ಲ, ಕರ್ನಾಟಕದ ಬ್ಯಾಡ್ಮಿಂಟನ್ ಕ್ಷೇತ್ರಕ್ಕೂ ಹೆಮ್ಮೆ ತಂದಿದೆ. ಇವರ ಈ ಸಾಧನೆ ಯುವ ಆಟಗಾರರಿಗೆ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ. ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆ ಸಾಲಿಗ್ರಾಮ ಇದರ ಮಹಿಳಾ ವೇದಿಕೆಯ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ವಿಶೇಷ ಕಾರ್ಯಕ್ರಮಗಳು ಇತ್ತೀಚಿಗೆ ಗುರುನರಸಿಂಹ ದೇವಸ್ಥಾನದ ಕೂಟ ಬಂದು ಭವನದಲ್ಲಿ ಇತ್ತೀಚಿಗೆ ನಡೆಯಿತು. ಹಿರಿಯ ವಯಸ್ಕ ಕ್ರಿಯಾಶೀಲ 10 ಮಹಿಳೆಯರಾದ ಜಾನಕಿ ಐತಾಳ, ವಸಂತಿ ಹೊಳ್ಳ ಗುಂಡ್ಮಿ, ಯಶೋದ ಹಂದೆ, ವಿಮಲಾ ಐತಾಳ ಹಂದೊಟ್ಟು, ಯಶೋದ ಹೆಬ್ಬಾರ ಐರೋಡಿ, ಜಯಲಕ್ಷ್ಮಿ ಐತಾಳ, ವಾಗ್ದೇವಿ ಹೊಳ್ಳ, ಪ್ರಮೀಳಾ ಹೊಳ್ಳ, ಸರೋಜಾ ಹೊಳ್ಳ ಕಾರ್ಕಡ, ಸುಲೋಚನಾ ಉಪಾಧ್ಯ ಮಂಟಪ ಅವರನ್ನು ಗೌರವಿಸಲಾಯಿತು. ಪಾರಂಪಳ್ಳಿಯ ಡಾ. ಅನನ್ಯಾ ಪಿ.ಆರ್. (ಗೋಲ್ಡ್ ಮೆಡಲ್ FAICO)Fellow of All India Collegium of Opthalmology ಇವರ ಹಿರಿಯ ಸಾಧನೆಗಾಗಿ ವಿಶೇಷವಾಗಿ ಅಭಿನಂದಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಉಡುಪಿಯ ಬಿಗ್ ಮೆಡಿಕಲ್ ಸೆಂಟರ್‌ನ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಸನ್ಮಾನ ಕಾರ್ಯ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಹಿಳಾ ವೇದಿಕೆ ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆ ಇವರು ನಡೆಸಿದ ಆರೋಗ್ಯ ಮಾಹಿತಿ ವಿಶೇಷ ಕಾರ್ಯಕ್ರಮ ಇತ್ತೀಚಿಗೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಖ್ಯಾತ ಮಧುಮೇಹ ತಜ್ಞೆ ,ಯೋಗ ಪಟು, ಸಂಗೀತ ನೃತ್ಯ ಕಲಾವಿದೆ, ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಇಲ್ಲಿನ ಪ್ರಸಿದ್ಧ ವೈದ್ಯ ಡಾ. ಶೃತಿ ಬಲ್ಲಾಳ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಧುಮೇಹದ ಬಗ್ಗೆ ಉತ್ತಮ ಮಾಹಿತಿ ವಿಚಾರ -ಆಹಾರ- ವಿಹಾರ ಮತ್ತು ಸಮಸ್ಯೆಗಳ ಕುರಿತಾದ ವಿಷಯ ಗಳನ್ನು ಚಿತ್ರ ಮಾಧ್ಯಮದ ಸಹಿತವಾಗಿ ವಿವರಿಸಿದರು. ಜನರೊಂದಿಗೆ ಸಂವಾದ ಕಾರ್ಯಕ್ರಮವನ್ನು ಸುಮಾರು ಒಂದುವರೆ ಗಂಟೆಗಳ ಕಾಲ ಅದ್ಭುತವಾಗಿ ನಡೆಸಿಕೊಟ್ಟರು. ಜನಅರ ಪ್ರತಿಕ್ರಿಯೆ ಸಂಶಯ ಪ್ರಶ್ನೋತ್ತರಗಳಿಗೆ ಸಮರ್ಪಕವಾಗಿ ಉತ್ತರಿಸಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಪರವಾಗಿ ಶೃತಿ ಬಲ್ಲಾಳರನ್ನು ಗೌರವಿಸಿದರು. ವೇದಿಕೆಯ ಉಪಾಧ್ಯಕ್ಷೆ ವಿಜಯಲಕ್ಷ್ಮಿ ತುಂಗ ಕಾರ್ಯದರ್ಶಿ ಲತಾ ಹೊಳ್ಳ ಮತ್ತು ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ವೇದಿಕೆ ಅಧ್ಯಕ್ಷೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ  ‘ಡಿಟೆಕ್ಟಿವ್ ದಿವಾಕರ್’. ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ನೆರವೇರಿತು. ಕಾರ್ಯಕ್ರಮ ಅತಿಥಿಗಳಿಂದ ಜ್ಯೋತಿ ಬೆಳಗುವುದರ ಮುಖೇನ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅತಿಥಿಗಳಲ್ಲಿ ಓರ್ವರಾದ ಡಾಕ್ಟರ್ ರವೀಂದ್ರ ಶೆಟ್ಟಿ ಬಜಗೋಳಿಯವರು “ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ “ಎಂದು ತಿಳಿಸುತ್ತಾ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್ ನ ಅಶ್ವತ್ ಎಸ್.ಎಲ್ .ರವರು “ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)ವು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಕುಂದಾಪುರ ಉದಯವಾಣಿ ವರದಿಗಾರರಾದ ಪ್ರಶಾಂತ್ ಪಾದೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಜನ-ಜೀವನದ ವರದಿಯನ್ನು ಆಧರಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸುಳ್ಯ ತಾಲೂಕಿನ ಪಾದೆ ಗ್ರಾಮದವರಾದ ಪ್ರಶಾಂತ್‌ ಅವರು ಪತ್ರಿಕೋದ್ಯಮ ಪದವೀಧರಾಗಿ ವೃತ್ತಿ ಬದುಕಿನಲ್ಲಿ ತೊಡಗಿಕೊಂಡಿದ್ದಾರೆ. ಏಪ್ರಿಲ್ 11 ಮತ್ತು 12ರಂದು ಬೀದರ್‌ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿ ಜಿ ಸಿಲಿಂಡರ್ ಗಳ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಲಿಂಡರ್ ವಿತರಣಾ ಸಂಸ್ಥೆಯವರಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಬಳಕೆ ಸೇರಿದಂತೆ ಮತ್ತಿತರ ಅನಿಲ ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಗೃಹ ಬಳಕೆ ಸಿಲಿಂಡರ್ ಗಳ ವಿತರಣೆ, ಅದರಲ್ಲಿಯು ಏಕ ಸಿಲಿಂಡರ್ ಹೊಂದಿರುವವರಿಗೆ ವಿತರಣೆ ಯಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ ಎಂದು ದೂರುಗಳು ಕೇಳಿ ಬರುತ್ತಿವೆ. ಈ ಹಿಂದೆ ಬೇಡಿಕೆಗೆ ಅನುಗುಣವಾಗಿ ಅನಿಲ ಲಭ್ಯ ವಾಗುತ್ತಿತ್ತು. ಪಶ್ಚಿಮ ಎಷ್ಯಾ ದೇಶಗಳಲ್ಲಿನ ಯುದ್ಧ ದ ಬಿಕ್ಕಟಿನ್ನಿಂದಾಗಿ ಸಮರ್ಪಕವಾಗಿ ಅನಿಲಗಳು ಆಮದು ಆಗದೆ ಇರುವ ಹಿನ್ನೆಲೆ, ಸ್ವಲ್ಪ ತೊಂದರೆಗಳು ಉಂಟಾಗಿವೆ. ಆದರೆ ಗೃಹ ಬಳಕೆ ಅನಿಲಗಳ ವಿತರಣೆಯಲ್ಲಿ ಯಾವುದೇ ತೊಂದರೆ…

Read More