Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ  2025-26ನೇ ಸಾಲಿನ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ, ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯಒಟ್ಟಾರೆ 10 ಮಂದಿ ರೈತರಿಗೆ (ತಲಾರೂ.25000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ 5 ಮಂದಿ ರೈತರಿಗೆ (ತಲಾ ರೂ.10000/-) ಜಿಲ್ಲಾ ಮಟ್ಟದಆಯ್ಕೆ ಸಮಿತಿಯಲ್ಲಿ ಮಂಡಿಸಿ ತೀರ್ಮಾನದಂತೆ ವಿತರಿಸಲಾಗುವುದು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರಿ ಕಛೇರಿಯಿಂದ ನಿಗದಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 15.08.2025 ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ ಬಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು. ಮಾನ್ಯುಯಲ್ ಸ್ಕ್ಯಾವೆಂಜರ್ ನಿಷೇಧ ವಿರುವ ಹಿನ್ನೆಲೆ, ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್.ಎಸ್.ಎಂ.ಎಸ್ ಘಟಕಗಳಲ್ಲಿ ವಿಲೇವಾರಿ ಮಾಡಬೇಕು ಎಂದ ಅವರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದಲ್ಲಿ ನಮ್ಮಗೆ ಗುರು ದಕ್ಷಿಣೆ ನೀಡಿದ ಬಾಲ್ಯದ ಗುರುಗಳ ನೆನಪು ಅಜರಾಮರ ಆದರೆ ಅವರಿಗೆ ಗುರುವಂದನೆ ಸಲ್ಲಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರು ಪೂರ್ಣಿಮೆಯ ಅಂಗವಾಗಿ ತಾನು ಕಲಿತ ಶಾಂಭವೀ ಶಾಲೆಗ ಗುರುಗಳಾದ ಕೋಟ ಮಾಹಾಲಿಂಗ ದೇವಾಡಿಗ ಅವರಿಗೆ ಗುರುವಂದನೆ ಸಲ್ಲಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೋಟ ಗ್ರಾಮ ಪಂಚಾಯತ್ ಸದಸ್ಯರಾದ ಅಜಿತ್ ದೇವಾಡಿಗ, ಚಂದ್ರ ಪೂಜಾರಿ ಕದ್ರಿಕಟ್ಟು, ಸಂತೋಷ್ ಪ್ರಭು, ವನೀತಾ ಆಚಾರ್, ಮಾಜಿ ಪಂಚಾಯತ್ ಸದಸ್ಯ ಗೋಪಾಲ್ ಪೈ, ಮಾಜಿ ತಾ.ಪಂ ಸದಸ್ಯೆ ಲಲಿತಾ ಪೂಜಾರಿ, ಬಿಜೆಪಿ ಬೂತ್ ಅಧ್ಯಕ್ಷ ನಾಗರಾಜ ಮೈಯ್ಯ, ಗೋಪಾಲ್ ಮಡಿವಾಳ, ನಿವೃತ್ತ ಶಿಕ್ಷಕ ಮಹಾಲಿಂಗ ದೇವಾಡಿಗರ ಕುಟುಂಬಿಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಕ್ಲಾಡಿಯ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅನೇಕ ರೀತಿಯ ನೆರವನಿತ್ತ ದಾನಿ ದಿ| ಭಾಸ್ಕರ್ ಶೆಟ್ಟಿ ಅವರ 66ನೇ ಜನ್ಮದಿನದ ಅಂಗವಾಗಿ ಬುಧವಾರ ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಫಾರೆಸ್ಟ್ ಎಸ್‌ಒಎಸ್ ಎನ್‌ಜಿಒ, ಭಾಸ್ಕರ ಶೆಟ್ಟರ ಅಭಿಮಾನಿ ಬಳಗ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವನಮಹೋತ್ಸವ – ‘ಮನೆಗೊಂದು ಸಸಿ’ ನೆಡುವ ಅಭಿಯಾನ ನಡೆಯಿತು. ಮನೆಗೊಂದು ಸಸಿ ಅಭಿಯಾನದಡಿಯಲ್ಲಿ ಸಾವಿರಕ್ಕೂ ಮಿಕ್ಕಿ ಸಸಿಗಳನ್ನು ವಿತರಣೆ ಮಾಡಲಾಯಿತು. ಗ್ರಾಮಸ್ಥರು ಉತ್ಸಾಹದಿಂದ ಈ ಅಭಿಯಾನಕ್ಕೆ ಕೈಜೋಡಿಸಿದರು. ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಣ್ಣಿನ ಆಟ ಮತ್ತು ವನ್ಯಜೀವಿ ಅರಿವು ಕಾರ್ಯಾಗಾರಗಳಲ್ಲಿ ಪಾಲ್ಗೊಂಡರು. ಬೆಂಗಳೂರಿನ ಗಣೇಶ್ ಶ್ರೀನಿವಾಸನ್ ಮತ್ತು ಬಂಡೀಪುರ ಅರಣ್ಯಾಧಿಕಾರಿ ಮೋಹನ್ ಕುಮಾರ್ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಅರಣ್ಯ ಇಲಾಖೆಯ ಅಧಿಕಾರಿಗಳು, ಊರ ಪ್ರಮುಖರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಭಾಸ್ಕರ ಶೆಟ್ಟರ ಅಭಿಮಾನಿ ಬಳಗದವರು, ಗ್ರಾಮಸ್ಥರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಷಾಢ ಹುಣ್ಣಿಮೆಯ ಪವಿತ್ರ ದಿನದಂದು ಆಚರಿಸಲ್ಪಡುವ ಗುರು ಪೂರ್ಣಮಾ ಕಾರ್ಯಕ್ರಮದಲ್ಲಿ ಆರ್. ಎನ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಆರತಿ ಬೆಳಗಿಸಿ ಕಾಲಿಗೆ ನಮಸ್ಕರಿಸುವ ಮೂಲಕ ಆಚರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರು ಭವಿಷ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಗುರು ಸ್ಥಾನದಲ್ಲಿರಬೇಕಾದ ಅವಕಾಶ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಿ.ಬಿ. ಕೃಷ್ಣಮೂರ್ತಿ ಅವರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅವರು ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್‌ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ 2025-26ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ನೂತನ ಅಧ್ಯಕ್ಷ – ಕಾರ್ಯದರ್ಶಿಗಳಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಬೈಂದೂರಿನಂತಹ ಗ್ರಾಮೀಣ ಪ್ರದೇಶದಲ್ಲಿಯೂ ಸಾಕಷ್ಟು ಸೇವಾ ಕಾರ್ಯಗಳು ರೋಟರಿ ಮೂಲಕ ನಡೆದಿದೆ. ಇದು ಇತರ ಸಂಘ ಸಂಸ್ಥೆಗಳಿಗೆ ಪ್ರೇರಣೆಯಾಗುವಂತಾಗಬೇಕು ಎಂದರು. ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಝೋನ್‌ 1ರ ವಲಯ ಸೇನಾನಿ ಪ್ರಸಾದ್‌ ಪ್ರಭು ರೋಟರಿ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ‌ ಮೂವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೊಟೇಲ್‌ ವೊಂದರಲ್ಲಿ ಸಿಗರೇಟ್ ಗಾಗಿ ರಂಪಾಟ ನಡೆಸುತ್ತಿದ್ದಾಗ ಓರ್ವ ವ್ಯಕ್ತಿ ನೋಡಿದ ಎಂಬ ಕಾರಣಕ್ಕೆ ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ಇಲ್ಲಿನ ಹಟ್ಟಿಯಂಗಡಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಗಣೇಶ ಎಂಬವರು ಹಲ್ಲೆಗೊಳಗಾದವರು. ಪ್ರಸಾದ ಯಾನೆ ರಬಡ ಎಂಬಾತ ಹಲ್ಲೆ ನಡೆಸಿದವನು. ಈತ ಹೊಟೇಲ್ ಮಾಲಿಕರಲ್ಲಿ ಸಿಗರೇಟು ಕೇಳಿದ್ದು ಆಗ ಮಾಲಿಕ ನಾವು ಇಲ್ಲಿ ಸಿಗರೇಟು ಮಾರುವುದಿಲ್ಲ ಎಂದಿದ್ದಾರೆ. ಆದರೂ ತಂದುಕೊಡುವಂತೆ ಗಲಾಟೆ ಮಾಡಿದಾಗ ಗಣೇಶ್ ಅವರು ನೋಡಿದರು ಎಂಬ ಕಾರಣಕ್ಕೆ ಅವರನ್ನು ಹಿಡಿದು ಬೈದು ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪ್ರಕೃತಿಯ ಉಳಿವಿಗಾಗಿ ಸಸಿಗಳನ್ನು ನೆಟ್ಟು ಪೋಷಿಸಿ, ಪ್ರೀತಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪ್ರಕೃತಿಯ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಮೂಲ್ಯವಾಗಿದೆ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಹೇಳಿದರು. ಅವರು ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ (ಹವೇ)ಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ನಿರ್ಮಿಸಿರುವ ಚಿಣ್ಣರ ಕೈ ತೋಟವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಗಿಡಗಳನ್ನು ನೆಟ್ಟು ಶುಭ ಹಾರೈಸಿದರು. ಚಿಣ್ಣರ ತೋಟದಲ್ಲಿ ಮಕ್ಕಳು ಬೀಜದುಂಡೆ ಬಿತ್ತನೆ ಮಾಡಿ ಸಸಿಗಳನ್ನು ನೆಟ್ಟರು. ವಿವಿಧ ಜಾತಿಯ ತರಕಾರಿ ಬೀಜ, ತೊಂಡೆ, ಬಸಲೆ, ಕಬ್ಬು, ಬಾಳೆ ಗಿಡ, ಪಪ್ಪಾಯಿ ಗಿಡ, ಮಲ್ಲಿಗೆ ಮೊದಲಾದ ಗಿಡಗಳನ್ನು ತಮ್ಮ ಕೈಯಾರೆ ನೆಟ್ಟು ಖುಷಿ ಪಟ್ಟರು. ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಂದ್ರ ಶೇರುಗಾರ್, ಚಂದ್ರ ಖಾರ್ವಿ, ಎಸ್‌ಡಿಎಂಸಿ ಅಧ್ಯಕ್ಷೆ ಕವಿತಾ ಖಾರ್ವಿ, ಶಕುಂತಲಾ ಖಾರ್ವಿ, ಜ್ಯೋತಿ ಆನಂದ, ನಾಗಲಕ್ಷ್ಮೀ, ಸಹನಾ, ಕಾವೇರಿ ಮೊದಲಾದವರು ಇದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತಿಚಿಗೆ ಕೋಡಿಯಲ್ಲಿ ಜರಗಿತು. ಇದರ ಅಧ್ಯಕ್ಷರಾಗಿ ಸಂತೋಷ ಖಾರ್ವಿ ಹಾಗೂ ಕಾರ್ಯದರ್ಶಿಯಾಗಿ ಸುಧೀರ್‌ ಕುಂದರ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರು ಡಾ. ಜಿ. ಶಂಕರ್, ಉಪಾಧ್ಯಕ್ಷರಾಗಿ ಸಂತೋಷ್ ಕುಂದರ್, ಉದಯ ಕಾಂಚನ್, ಜೊತೆ ಕಾರ್ಯದರ್ಶಿ ವೆಂಕಟೇಶ್ ಮೆಂಡನ್, ಕೋಶಾಧಿಕಾರಿ ವಾಮನ ಸಾಲಿಯಾನ್, ಕ್ರೀಡಾ ಕಾರ್ಯದರ್ಶಿ ಗೋಪಾಲ ಖಾರ್ವಿ, ಕುಮಾರ ಪುತ್ರನ್, ಅನಿಲ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಜಯ ಕರ್ಕೇರ , ಮುತ್ತಪ್ಪ ಸಾಲಿಯಾನ್, ಶ್ರೀನಿವಾಸ ಪೂಜಾರಿ, ಮಹಾಬಲ ಕುಂದರ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಬಿ. ಕರ್ಕೇರ, ಉದಯ ಕುಂದರ್, ಸುರೇಶ್ ಕುಂದರ್, ರಾಜು ಕರ್ಕೇರ,ರಾ ಮಚಂದ್ರ ಖಾರ್ವಿ, ರಾಘವೇಂದ್ರ ಕರ್ಕೇರ, ಜಯಂತ್ ಬೆನ್ನು, ಅಶೋಕ ತಿಂಗಳಾಯ, ಕರುಣಾಕರ ಖಾರ್ವಿ ರಘುರಾಮ ಪೂಜಾರಿ, ಅಂತೋನಿ ಡಿಸೋಜ, ಭಾಸ್ಕರ ಕಾಂಚನ್, ದಿವಾಕರ ಕುಂದರ್, ಮಹೇಶ್ ಕುಂದರ್, ಅಕ್ಷಿತ್ ಪೂಜಾರಿ, ಸಂತೋಷ್ ಕುಂದರ್, ಅರುಣ ಮೆಂಡನ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಎಸ್.ಎಸ್.ಪಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ ಪರಿಶಿಷ್ಟ ಜಾತಿ ವೆಬ್‌ಸೈಟ್ SW.KAR.NIC.IN, ಪರಿಶಿಷ್ಟ ಪಂಗಡ TW.KAR.NIC.IN ಅಥವಾ http://ssp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More