ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ ರಕ್ಷಣೆ ಮಾಡುತ್ತಾಳೆ. ಆಕೆಯ ಅಪ್ರತಿಮ ಸಾಹಸಕ್ಕಾಗಿ ಇತಿಹಾಸಕಾರರು ಆಕೆಯನ್ನು ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕನಂತಹ ವೀರ ಮಹಿಳೆಯರ ಸಾಲಿನಲ್ಲಿ ನಿಲ್ಲಿಸುತ್ತಾರೆ. ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಇಂತಹ ವೀರವನಿತೆ ಓಬವ್ವನ ತ್ಯಾಗ, ದೇಶ ಪ್ರೇಮ, ಸ್ವಾಮಿನಿಷ್ಠೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒನಕೆ ಓಬವ್ವ ಆತ್ಮರಕ್ಷಣೆಯ ಪ್ರತೀಕ. ಹೆಣ್ಣುಮಕ್ಕಳು ತಮ್ಮ ಆತ್ಮ ರಕ್ಷಣೆಯ ಜೊತೆಗೆ ತನ್ನ ಪ್ರಾಂತ್ಯ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದ ಒಳಿತಿಗಾಗಿ ನಿಮ್ಮನ್ನು ತೊಡಗಿಸಿಕೊಳ್ಳಿ ಎಂದು ಸಾಮಾಜಿಕ ಕಾರ್ಯಕರ್ತ ಈಶ್ವರ ಮಲ್ಪೆ ಕರೆ ನೀಡಿದರು. ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ “ಕೊಮರ್ಸಿಯಾ” ಎಂಬ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸದಾ ಚಟುವಟಿಕೆಯಿಂದ ಇರಬೇಕು. ಅಲ್ಲದೆ ಸದಾ ಸಮಾಜಮುಖಿಯಾಗಿರಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಾಣಿಜ್ಯ ವಿಭಾಗದಿಂದ ಮುಖ್ಯಸ್ಥ ಅರುಣ್ ಎ.ಎಸ್, ವಾಣಿಜ್ಯ ಸಂಘದ ಸಂಯೋಜಕರಾದ ಮಮತಾ ಉಪನ್ಯಾಸಕರಾದ ಅಣ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ಸ್ಟೆನಿಟಾ ಕಾರ್ಯಕ್ರಮ ನಿರೂಪಿಸಿ, ಶ್ರೀಲಕ್ಷ್ಮೀ ವಂದಿಸಿದರು.
ಸ್ವಾತಂತ್ರ್ಯ ನಂತರ ಹಂಚಿಹೋಗಿದ್ದ ರಾಜ್ಯಗಳನ್ನು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲರು: ಸಂಸದ ಕೋಟ ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾತಂತ್ರ್ಯ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿ ಭಾರತದ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದರು ಸರ್ದಾರ್ ವಲ್ಲಭಭಾಯಿ ಪಟೇಲರು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಜಿಲ್ಲಾಡಳಿತ ಮತ್ತು ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಎನ್.ಎಸ್.ಎಸ್., ಎನ್.ಸಿಸಿ, ರೇಂಜ್ ರೋವರ್ಸ್ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿ ಪಠೇಲರ 150ನೇ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿ ಬೋರ್ಡ್ ಹೈಸ್ಕೂಲ್ ನಿಂದ ಆರಂಭಗೊಂಡ ಉಡುಪಿ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಚಾಲನೆ ನೀಡಿ, ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ದಾರ್ ವಲ್ಲಭಬಾಯಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಕಾರ್ಟೂನಿಸ್ಟರು ಪ್ರತಿವರ್ಷವೂ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಅವರ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ, ಈ ಭಾರಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ “ಖಾಕಿಗೊಂದು ಕಾರ್ಟೂನು ಸೆಲ್ಯೂಟ್” ಥೀಮ್ನೊಂದಿಗೆ ನಡೆಯಲಿದೆ. “ಖಾಕಿ ಕಾರ್ಟೂನು ಹಬ್ಬ” ಕಾರ್ಯಕ್ರಮವು ನವೆಂಬರ್ 15ರಿಂದ 19ರವರೆಗೆ ಕುಂದಾಪುರದ ರೋಟರಿ ಕಲಾ ಮಂದಿರದಲ್ಲಿ ನಡೆಯಲಿದೆ. ದಿನಾಂಕ 15-11-2025ರ ಶನಿವಾರ ಬೆಳಿಗ್ಗೆ 10:30ಕ್ಕೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಿ. ದಯಾನಂದ್ ಐಪಿಎಸ್, ಪೊಲೀಸ್ ಮಹಾನಿರ್ದೇಶಕರು, (ಕಾರಾಗೃಹ ಮತ್ತು ಸುಧಾರಣೆ) ಅವರು ಮಾಡಲಿದ್ದಾರೆ.. ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಬಿ ಎ ಬಾವಾ ನಿವೃತ್ತ ಡೆಪ್ಯೂಟಿ ಪೊಲೀಸ್ ಕಮಿಷನರ್, ಶ್ರೀ ವಿನಯ್ ಗಾಂವ್ಕರ್ ನಿವೃತ್ತ ಡೆಪ್ಯೂಟಿ ಪೊಲೀಸ್ ಕಮಿಷನರ್, ಹರಿರಾಮ್ ಶಂಕರ್ (ಐಪಿಎಸ್), ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜೇಶ್ ಕೆ.ಸಿ, ಪತ್ರಕರ್ತರು ಇವರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭಗಳಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿರುವ ಆಯ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಉಸಿರು ಕೋಟ ಸಹಕಾರದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ಬೆಳ್ಳಂಬೆಳಗೆ ಕವಿಗೋಷ್ಠಿ ಇತ್ತೀಚೆಗೆ ನಡೆಯಿತು. ಸಾಂಸ್ಕೃತಿಕ ಚಿಂತಕರಾದ ಡಾ| ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಒಬ್ಬ ಕವಿಯಾದವನು ಗುಣಗ್ರಾಹಿಯಾಗಿರಬೇಕು. ತನ್ನ ಸುತ್ತಮುತ್ತಲಿನ ಪರಿಸರವನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿರಬೇಕು. ಜೊತೆಗೆ ಇತರ ಕವಿಗಳ ಕವಿತೆಗಳನ್ನು ಆಳವಾಗಿ ಅಧ್ಯಯನ ಮಾಡಿದಾಗ ಒಂದು ಪರಿಪಕ್ವವಾದಂತಹ ಕೃತಿ ಮೂಡಬಲ್ಲದು. ಆ ದಿಸೆಯಲ್ಲಿ ಎಲ್ಲ ಕವಿಗಳು ಜಾಗೃತರಾಗಬೇಕು ಎಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ ಮಾತನಾಡಿ, ಇದೊಂದು ಅಪೂರ್ವವಾದ ಕಾರ್ಯಕ್ರಮ. ಬೆಳಿಗ್ಗೆ 6 ಗಂಟೆಗೆ ಕವಿಗೋಷ್ಠಿ ನಡೆಯುತ್ತಿರುವುದು ಇದೇ ಮೊದಲ ಬಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು. ಸತೀಶ್ ವಡ್ಡರ್ಸೆ ಕಾರ್ಯಕ್ರಮವನ್ನು ನಿರೂಪಿಸಿದರು. ಚೇಂಪಿ ದಿನೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ರಾಮ ಮಂದಿರದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ತಾಲೂಕು ಮಟ್ಟದ ಭಗವದ್ಗೀತೆ ಮನ: ಸ್ವಾಸ್ಥ್ಯದ ಕೈಪಿಡಿ ಎಂಬ ವಿಷಯದ ಕುರಿತು ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವೆಂಬರ್ 30 ರಿಂದ ಡಿಸೆಂಬರ್ 5 ರವರೆಗೆ ದೆಹಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ 14 ವರ್ಷದ ಒಳಗಿನ ವಯೋಮಿತಿಯ ವಿಭಾಗದಲ್ಲಿ ರಿಶಾಂತ್ ಖಾರ್ವಿ ಆಯ್ಕೆಯಾಗಿದ್ದಾರೆ. ಅವರು ಮೂಲತಃ ಕುಂದಾಪುರದವರಾದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಖ್ಯಾತ ಈಜು ತರಬೇತುದಾರ ದಯಾನಂದ ಖಾರ್ವಿ ಮತ್ತು ಚಿತ್ರಲೇಖಾ ಅವರ ಪುತ್ರ. ಬಾಲ್ಯದಿಂದಲೇ ಈಜಿನಲ್ಲಿ ಆಸಕ್ತಿ ಹೊಂದಿದ್ದ ರಿಶಾಂತ್ ತನ್ನ ತಂದೆಯ ಈಜಿನ ಶೈಲಿಯಿಂದ ಪ್ರೇರಿತನಾಗಿ ತಂದೆಯನ್ನೇ ಗುರುವಾಗಿ ಸ್ವೀಕರಿಸಿ, ಈಜು ಕಲಿತ ಕಠಿಣ ಪರಿಶ್ರಮಿ ಬೆಂಗಳೂರಿನ ಆಸು ಪಾಸಿನಲ್ಲಿ ನೆಡೆದ ಬಹತೇಕ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು, ಪ್ರಸಿದ್ಧಿಯನ್ನು ಪಡೆದು ಉತ್ತಮ ಈಜು ಪಟುವೆಂದು ಖ್ಯಾತಿ ಪಡೆದಿರುತ್ತಾರೆ. 14 ರಿಂದ 17 ವರ್ಷದ ವಯೋಮಾನದ ವಿಭಾಗದಲ್ಲಿ ಇತ್ತೀಚಿಗೆ ಮೈಸೂರಿನಲ್ಲಿ ನೆಡೆದ ರಾಜ್ಯ ಮಟ್ಟದ ಈಜು ಮತ್ತು ಡೈವಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ರಿಶಾಂತ್ 200ಮೀ ವೈಯುಕ್ತಿಕ ಮಿಡ್ಲೆ ಮತ್ತು 4*400 ರಿಲೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು 200…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಹಾಗೂ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ 14ರ ವಯೋಮಿತಿ ಒಳಗಿನ ಹಾಗೂ 17 ವಯೋಮಿತಿಯ ಮತ್ತು ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ನವಂಬರ್ 12, 13 ಮತ್ತು 14ರಂದು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು, ಹೆಮ್ಮಾಡಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜನತಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ನಾಯ್ಕ ತಿಳಿಸಿದರು. ಅವರು ಕುಂದಾಪುರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.12ರ ಬೆಳ್ಳಿಗೆ 9.30 ಕ್ಕೆ ಹೆಮ್ಮಾಡಿ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ ಕಾಲೇಜಿನ ಕ್ರೀಡಾಂಗಣದವರೆಗೆ ವೈಭವದ ಮೆರವಣಿಗೆ ನಡೆಯಲ್ಲಿದ್ದು, ನಂತರ ಗಣ್ಯರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ ಉಡುಪಿ ಜಿಲ್ಲೆಯ 5 ಶೈಕ್ಷಣಿಕ ವಲಯ (ಬೈಂದೂರು, ಕುಂದಾಪುರ, ಬ್ರಹ್ಮಾವರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಜೂನಿಯರ್ ವಿಭಾಗದ ಬಾಲಕ ಬಾಲಕಿಯರ, ಸಬ್ ಜೂನಿಯರ್ ಬಾಲಕ ಬಾಲಕಿಯರ ಮತ್ತು ಮಹಿಳೆಯರ ಹೀಗೆ ಒಟ್ಟು ಎಲ್ಲಾ 6 ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಆಳ್ವಾಸ್ ಹೊರಹೊಮ್ಮಿತು. ಬಾಲಕಿಯರ ಸಬ್ ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಮಾನಸ, ಮಹಿಳಾ ವಿಭಾಗದಲ್ಲಿ ಆಳ್ವಾಸ್‌ನ ತನುಷ ಬೆಸ್ಟ್ ಲಿಪ್ಟ್‌ರ್ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವೈದ್ಯಕೀಯ ಕ್ಷೇತ್ರದಲ್ಲಿ ಕೆ.ಪಿ ಶೆಟ್ಟಿ ಅವರ ಜೀವತ ಅವಧಿಯ ಸೇವೆ ಮಾಮವೀಯ ಮೌಲ್ಯಗಳಿಂದ ಕೂಡಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಅವರು ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ಇತ್ತೀಚಿಗೆ ಅಗಲಿದ ಸಾಸ್ತಾನ ಭಾಗದ ಪ್ರಸಿದ್ಧ ವೈದ್ಯರಾದ ಡಾ. ಕೆ.ಪಿ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಸಮಾಜದ ಜನರ ಬಗ್ಗೆ ಹಾಗೂ ಸಮಾಜಸೇವೆಯೇ ವೈದ್ಯಕೀಯ ಕ್ಷೇತ್ರದ ಮೂಲಕ ಜನರ ನಾಡಿಮಿಡಿತದಲ್ಲಿ ಕೆ.ಪಿ ಶೆಟ್ಟಿ ಅವರ ಅಚ್ಚಳಿಯದೆ ಉಳಿದು ಬಿಟ್ಟಿದ್ದಾರೆ. ಅವರ ವ್ಯಕ್ತಿತ್ವ ಬದುಕಿನ ಜೀವನದ ತಳಹದಿ ಎಲ್ಲರಿಗೂ ಮಾದರಿಯಾಗಿದೆ ಎಂದರು. ಸಭೆಯಲ್ಲಿ ಡಾ. ಕೆ.ಪಿ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಭ ನಮನ ಸಲ್ಲಿಸಿದ ಗಣ್ಯರು ಮೌನ ಪ್ರಾರ್ಥನೆ ಸಲ್ಲಿಸಿದರು. ಯೋಗ ಗುರುಕುಲ ಇದರ ಮುಖ್ಯಸ್ಥ ಯೋಗಗುರು ಡಾ. ವಿದ್ವಾನ್ ವಿಜಯ ಮಂಜರ್ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಊರಿನಹಿರಿಯ ಗಣ್ಯರಾದ ಹಂಗಾರಕಟ್ಟೆ ಇಬ್ರಾಹಿಂ ಸಾಹೇಬ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…
