ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಇಲಾಖೆ ಶಾಂತಿವನ ಟ್ರಸ್ಟ್ ರಿ. ಅವರು ನಡೆಸಿದ ಜ್ಞಾನ ಪಥ ಪುಸ್ತಕಾಧಾರಿತ ರಾಜ್ಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಸಮೃದ್ಧಿ ವಿ. ಪೂಜಾರಿ ತೃತೀಯ ಸ್ಥಾನ ಪಡೆದಿರುತ್ತಾಳೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳು ಸಾರ್ವಕಾಲಿಕ ದಾಖಲೆಗಳಾಗಿ ಉಳಿಯುತ್ತದೆ ಹಾಗೂ ಸುದ್ದಿಯಲ್ಲಿ ತಪ್ಪುಗಳು ನಡೆದರೆ ಅದನ್ನು ಸರಿಪಡಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಸುದ್ದಿಗಳನ್ನು ತಿರುಚುವ ಮನಃಸ್ಥಿತಿ ಮಾಧ್ಯಮಲೋಕಕ್ಕೆ ಅಪಾಯವಾಗಲಿದೆ ಆದ್ದರಿಂದ ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು. ಅವರು ಇಲ್ಲಿನ ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ನೈಜತೆಯ ಸುದ್ದಿಯನ್ನು ನೀಡುವತ್ತ ಪತ್ರಿಕಾರಂಗ ಇರಬೇಕು ಎಂದರು. ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಣತೆ ವಹಿಸಿದ್ದರು. ಇದೇ ಸಂದರ್ಭ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಾಡ ಗ್ರಾಮದ ಕೆಂಪಿನಕೆರೆ ಶ್ರೀ ಜಟ್ಟಿಗೇಶ್ವರ ದೈವಸ್ಥಾನದ ನೂತನ ದೈವಸ್ಥಾನ ಕಟ್ಟಡಗಳ ಲೋಕಾರ್ಪಣೆ ಕೆಂಪಿನಕೆರೆ ಜಟ್ಟಿಗೇಶ್ವರ ಹಾಗೂ ಸಪರಿವಾರ ದೈವಗಳು ಮತ್ತು ನಾಗ ದೇವರ ಪುನಃಪ್ರತಿಷ್ಠಾ ಮಹೋತ್ಸವವು ದಿನಾಂಕ 10 ಜನವರಿ 2026ರ ಶನಿವಾರದಿಂದ ಮೊದಲ್ಗೊಂಡು 12 ಜನವರಿ 2026ರ ಸೋಮವಾರದ ತನಕ ನಡೆಯಲಿದೆ. ದಿನಾಂಕ 10-01-2026ರ ಶನಿವಾರ ದೇವತಾ ಕಾರ್ಯಗಳಿಗೆ ಚಾಲನೆ ದೊರೆಯಲಿದ್ದು, ದೇವರ ಪ್ರಾರ್ಥನೆ, ಮೆರವಣಿಗೆ, ಪೂಜೆ ಹಾಗೂ ಹೋಮಹವನಗಳು ಜರುಗಲಿದೆ. ದಿನಾಂಕ 11-01-2026ರ ಭಾನುವಾರ ಬೆಳಿಗ್ಗೆ ಗಂಟೆ 08-00ರಿಂದ ವಿವಿಧ ಹೋಮ, ಬೆಳಿಗ್ಗೆ ಗಂಟೆ 10-40ರ ಕುಂಭ ಲಗ್ನದಲ್ಲಿ ಶ್ರೀ ಜಟ್ಟಿಗೇಶ್ವರ ದೇವರ ಹಾಗೂ ಸಪರಿವಾರ ದೈವಗಳ ಪುನಃಪ್ರತಿಷ್ಠೆ, ವಿವಿಧ ಹವನಗಳು ಗಂಟೆ 11-40ರ ಶುಭ ಲಗ್ನದಲ್ಲಿ ನಾಗಶಿಲಾ ಪ್ರತಿಷ್ಠೆ, ಹೋಮಾದಿಗಳು, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಂದು ಮಧ್ಯಾಹ್ನ ಗಂಟೆ 03-00ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ಜರುಗಲಿದೆ. ಸಂಜೆ ಗಂಟೆ 06-00ರಿಂದ ಮಂಡಲ ದರ್ಶನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪುಸ್ತಕಗಳ ನೋಂದಣಿ ಕಾಯಿದೆ ಅನ್ವಯ 2025ನೇ ಸಾಲಿನಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ ಮೂರು ಪ್ರತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಮೊದಲ ಆವೃತ್ತಿ ಪುಸ್ತಕ ಆಹ್ವಾನಿಸಲಾಗಿದೆ. 2025 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಸಲ್ಲಿಸಿ ಜನವರಿ 31 ರ ಸಂಜೆ 5.30ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ. ನೋಂದಣಿಗಾಗಿ ನಿಗಧಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ dpl.karnataka.gov.in, ಆಯುಕ್ತರ ಕಚೇರಿ ದೂ.ಸಂಖ್ಯೆ: 080-22864990, 22867358, ರಾಜ್ಯ ಕೇಂದ್ರ ಗ್ರಂಥಾಲಯ ದೂ.ಸಂಖ್ಯೆ: 080-22212128 ಅಥವಾ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಉಡುಪಿ ಜಿಲ್ಲಾ ಕೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಸರಕಾರಿ ಶಾಲೆ ಯಾವ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಸಾಧ್ಯವಿದೆ ಎಂಬುವುದನ್ನು ಚಿತ್ರಪಾಡಿ ಪಿ. ಎಂ ಶ್ರೀ ಶಾಲೆ ತೊರಿಸಿಕೊಟ್ಟಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಲ್ಲಿನ ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ ಜ್ಞಾನದ ಬೆಳಕಿಗೆ ನೂರರ ಹೊಳಪು ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಪಿಎಂಶ್ರೀ ವಾಚನಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲಾ ಮಕ್ಕಳು ಯಾವದಕ್ಕೂ ಕಡಿಮೆ ಇಲ್ಲ ಅವರಲ್ಲಿ ನೈಜತೆಯ ಕೌಶಲ್ಯಾಭಿವೃದ್ಧಿ ಇದೆ ದೇಶ ಕಟ್ಟುವ ಸತ್ಚಿಂತನೆ ಇದೆ ಎಂದರಲ್ಲದೆ ಶತಮಾನ ಕಾಣುವುದು ಸುಲಭದ ಮಾತಲ್ಲ ಪ್ರಸ್ತುತ ಅದೆಷ್ಟೊ ಶಾಲೆಗಳು ಅವನತಿ ಕಾಣುವ ಕಾಲಘಟ್ಟದಲ್ಲಿ ಚಿತ್ರಪಾಡಿ ಶಾಲೆ ಹೊಸ ಆಶಾಭಾವನೆ ಸೃಷ್ಠಿಸಿದೆ ಎಂದರಲ್ಲದೆ ಶಿಕ್ಷಣ ಹೇಗಿರಬೇಕೆಂದರೆ ರಾಷ್ಟ್ರ ಸೇವೆಗೆ ನೈಪುಣ್ಯತೆ ಕಾಣುವ ಮಕ್ಕಳಾಗಿ ಹೊರಹೊಮ್ಮುವಾಗೆ ಇರಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಹೈಸ್ಕೂಲ್ ವಿಭಾಗದ ವಾರ್ಷಿಕ ಬಹುಮಾನ ವಿತರಣೆ ಕಾರ್ಯಕ್ರಮದ ಅಂಗವಾಗಿ ಅಭ್ಯುದಯ – 2025 ವೈವಿಧ್ಯಮಯ ಕಾರ್ಯಕ್ರಮವು ಸಂಭ್ರಮ ಹಾಗೂ ಸಡಗರದಿಂದ ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲಾ ಮಾಜಿ ವಿದ್ಯಾಂಗ ಉಪ ನಿರ್ದೇಶಕರಾದ ದಿವಾಕರ ಶೆಟ್ಟಿ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಖ್ಯಾತ ಹಿರಿಯ ಪತ್ರಕರ್ತರಾದ ಜಾನ್ ಡಿಸೋಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ದಿವಾಕರ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ಶಾಲಾ ದಿನಗಳಲ್ಲಿ ಶಿಸ್ತು ಬದ್ಧ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಉತ್ತಮ ಗುರಿಯನ್ನು ಇರಿಸಿಕೊಂಡು ಶ್ರದ್ಧೆಯಿಂದ ಅಧ್ಯಯನ ಮಾಡಿ ಬದುಕಿನಲ್ಲಿ ಪ್ರಗತಿ ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪ್ರಸಿದ್ಧ ಪತ್ರಕರ್ತ ಜಾನ್ ಡಿಸೋಜ ಅವರು ಮಾತನಾಡಿ, ಒಂದು ಮಗು ಪಠ್ಯದ ಶಿಕ್ಷಣವನ್ನಷ್ಟೇ ಪಡೆದರೆ ಶಿಕ್ಷಣ ಅಪೂರ್ಣವೆನಿಸುತ್ತದೆ. ಅದರ ಜೊತೆಗೆ ಜೀವನ ಮೌಲ್ಯಗಳು ಅಳವಡಿಸಿಕೊಳ್ಳುವುದು ಕೂಡಾ ಅತ್ಯವಶ್ಯಕ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಿಂದ ನೆರಳಕಟ್ಟೆ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ, ತಲ್ಲೂರು ಕಡೆ ಬರುವ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬಸ್ ಜಖಂಗೊಂಡು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ತಲ್ಲೂರು – ನೇರಳಕಟ್ಟೆಯ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಅಪಘಾತದಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಎಲ್ಲರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಟಿಪ್ಪರ್ ಚಾಲಕ ರಾಘವೇಂದ್ರ ಎಂಬುವವರು ತನ್ನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ನೇರಳಕಟ್ಟೆಯ ಶೆಟ್ರಕಟ್ಟೆ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ಸಿಗೆ ಎದುರುಗಡಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಬಲಬದಿ ಜಖಂ ಆಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಅದರಲ್ಲಿ 3 ಜನ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿದ್ದಾರೆ. ಓರ್ವ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾರೆ. ಉಳಿದ ಗಾಯಾಳುಗಳನ್ನು ಕುಂದಾಪುರದ ಸರಕಾರಿ ಹಾಗೂ ಆದರ್ಶ ಅಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ತಮ್ಮ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೋಮವಾರ ಹಸ್ತಾಂತರಿಸಿದರು. ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಸಕ ಕೊಡ್ಗಿ ಅವರು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಉಡುಪಿ, ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತ ಅಧಿಕಾರಿಯವರಾದ ಗೋಪಾಲ್, ಪೊಲೀಸ್ ಉಪನಿರೀಕ್ಷಕರುಗಳಾದ ಹರೀಶ್, ಸುಧಾರಾಣಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೈಂದೂರು ಉತ್ಸವ 2026ರ ಪೂರ್ವಭಾವಿಯಾಗಿ ಬೆಂಗಳೂರಿನ ಬೈಂದೂರು ಉತ್ಸವ ಸಮಿತಿ ನೇತೃತ್ವದಲ್ಲಿ ವಿಜಯನಗರದ ಬಂಟರ ಸಂಘದಲ್ಲಿ ಉತ್ಸವ ಪೂರ್ವಭಾಗಿ ಸಭೆ, ‘ವಿದ್ಯಾ ಬೆಳಕು’ ಯೋಜನೆ ಪೋಸ್ಟರ್ ಅನಾವರಣ ಹಾಗೂ ಅಧಿಕೃತ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭವು ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ಉತ್ಸವಗಳು ಕೇವಲ ಆಚರಣೆಗೆ ಸೀಮಿತವಾಗಿಲ್ಲ. ಸುಶಿಕ್ಷಿತ ಹಾಗೂ ಸುರಕ್ಷಿತ ಬೈಂದೂರು ನಿರ್ಮಾಣ ನಮ್ಮ ನಿಜವಾದ ಗುರಿ. ಆರೋಗ್ಯವೇ ಭಾಗ್ಯ. ಬೈಂದೂರು ಜನತೆಗೆ ಇನ್ಸುರೆನ್ಸ್ ಸೌಲಭ್ಯ ಒದಗಿಸುವ ಗುರಿ ಶ್ಲಾಘನೀಯ. ಅನಾರೋಗ್ಯ ಮುಕ್ತ ಬೈಂದೂರು ನಿರ್ಮಾಣಕ್ಕಾಗಿ ಸರ್ಕಾರ ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಎಲ್ಲರಿಗೂ ಇನ್ಸುರೆನ್ಸ್ ಮಾಡಿಸುವ ಅಭಿಯಾನ ಯಶಸ್ವಿಯಾಗಬೇಕು. ಬೈಂದೂರಿನ ಅಭಿವೃದ್ಧಿಗೆ ಸಣ್ಣ ಉದ್ದಿಮೆಗಳ ಪಾತ್ರವೂ ದೊಡ್ಡದು. ಉತ್ಸವದ ಮೂಲಕ ಸಂಜೀವಿನಿ ಸ್ವಸಹಾಯ ಸಂಘಗಳಿಂದ ಸ್ಥಳೀಯ ಉದ್ಯಮ, ಉದ್ಯೋಗ ಕಲೆ, ಶಿಕ್ಷಣ, ಆರೋಗ್ಯಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ನಮ್ಮೆಲ್ಲರಿಗೂ ಹೆಮ್ಮೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೋಗಾಸನ ಭಾರತ್ ಸಂಸ್ಥೆಯು ಮಹಾರಾಷ್ಟ್ರದ ಸಂಗಮ್ ನರ್ನಲ್ಲಿ ಆಯೋಜಿಸಿದ್ದ 6ನೇ ಜ್ಯೂನಿಯರ್ ಮತ್ತು ಸೀನಿಯರ್ ರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್ನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿ ಗುರುದಾಸ್ ಅವರು ಪ್ರಥಮ ಸ್ಥಾನದೊಂದಿಗೆ ಗೋಲ್ಡ್ ಮೆಡಲ್ ಪಡೆದು ಅಂತರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲಿರುವ ಯೋಗಪಟುಗಳ ತಂಡದಲ್ಲಿ, ಗುರುದಾಸ್ ಅವರು ಕರ್ನಾಟಕದಿಂದ ಆಯ್ಕೆಯಾದ ಏಕೈಕ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಉತ್ತಮ ಯೋಗಪಟುವಾಗಿರುವ ಗುರುದಾಸ್ ಅವರು ಈ ಹಿಂದೆಯೂ ಅನೇಕ ಯೋಗಾಸನ ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪದಕ ಗೆದ್ದುಕೊಂಡಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು, ಅವರ ಪ್ರತಿಭಾ ಸಂಪನ್ನತೆಗೆ ಗರಿ ಮೂಡಿದಂತಾಗಿದೆ. ಗುರುದಾಸ್ ಅವರು ತಗ್ಗರ್ಸೆ ಗ್ರಾಮದ ಮಂಜುನಾಥ ಜಿ ಹಾಗೂ ಕಾವೇರಿ ದಂಪತಿಗಳ ಪುತ್ರರಾಗಿದ್ದು, ಪತ್ನಿ ರೂಪಾ ಅವರೊಂದಿಗೆ ಕುಂದಾಪುರದಲ್ಲಿ ವಾಸವಾಗಿದ್ದಾರೆ.
