ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2024-25ನೇ ಸಾಲಿನಲ್ಲಿ 677 ಕೋಟಿ ರೂ. ವ್ಯವಹಾರ ನಡೆಸಿದ್ದು, 1.14 ಕೋಟಿ ರೂ. ನಿವ್ವಳ ಲಾಭ ಗಳಿಸಿ, ನಿರಂತರ ಕಳೆದ 4ನೇ ವರ್ಷಗಳಿಂದ 1ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ್ ಭಾಸ್ಕರ್ ಶೆಣೈ ತಿಳಿಸಿದ್ದಾರೆ. ಸಂಘದ ವಾರ್ಷಿಕ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ. 17 ಏರಿಕೆ ಕಂಡಿದೆ. 3 ಶಾಖೆಗಳನ್ನು ಹೊಂದಿರುವ ಸಂಘವು ವರ್ಷಾಂತ್ಯಕ್ಕೆ 85.56 ಕೋಟಿ ರೂ. ಠೇವಣಿ, 82 ಕೋಟಿ ರೂ. ಸದಸ್ಯರ ಸಾಲ, 2.66 ಕೋಟಿ ರೂ. ಪಾಲು ಬಂಡವಾಳ, 5.96 ಕೋಟಿ ರೂ. ಲಾಭದಿಂದ ವಿಂಗಡಿಸಿದ ನಿಧಿಗಳನ್ನು ಹೊಂದಿದ್ದು, ಹಾಗೂ 24.53 ಕೋಟಿ ರೂ. ಸಹಕಾರಿ ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ 100 ಕೋಟಿ ದುಡಿಯುವ ಬಂಡವಾಳ ಹೊಂದಿರುವ ಉಡುಪಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೇಗವಾಗಿ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಹಲವಾರು ಮಾಧ್ಯಮಗಳ ಮೂಲಕ ಇ-ಸಂಪನ್ಮೂಲ ಲಭ್ಯವಿದ್ದು ಇವುಗಳನ್ನು ಶಿಕ್ಷಕರು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ತಮ್ಮ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಉತ್ತಮ ಗುಣಮಟ್ಟದ ಸಂಶೋಧನೆ ಸಾಧ್ಯ ಎಂದು ತೀರ್ಥಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ಪ್ರೇಮ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಒಂದು ದೇಶ ಒಂದು ಚಂದಾದಾರತ್ವ ಈ ವಿಚಾರವಾಗಿ ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಗ್ನಿಪಥ್ ಯೋಜನೆಯಡಿ ಪ್ರಸಕ್ತ ಸಾಲಿನ ಅಗ್ನಿವೀರ್ ಇನ್‌ಟೇಕ್ ನೇಮಕಾತಿ ಪರೀಕ್ಷೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಆನ್‌ಲೈನ್ ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.joinindianarmy.nic.in ಸಹಾಯವಾಣಿ ಸಂಖ್ಯೆ: 0824-2951279, ಎ.ಆರ್.ಓ ಮೊ.ನಂ: 9805505538 ಅಥವಾ ಮಂಗಳೂರು ಸೇನಾ ನೇಮಕಾತಿ ಕಚೇರಿ/ ಸೈನಿಕ ಮಂಡಳಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಹಿಯುದೀನ್ ಜುಮಾ ಮಸ್ಜಿದ್ ಹೆನ್ನಾಬೈಲ್ ಇಲ್ಲಿಯ ಈದ್ಗಾ ಮೈದಾನದಲ್ಲಿ ಈದುಲ್ ಫಿತರ್ ಪ್ರಾರ್ಥನೆ ನೆರವೇರಿಸಿ, ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ಕೋರಿದರು. ಪ್ರಾರ್ಥನೆಯ ನೇತೃತ್ವ ವಹಿಸಿದ ಧರ್ಮಗುರು ಮೌಲಾನಾ ಮುಹಮ್ಮದ್ ಹಫೀಜ್ ರಜ್ವಿ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಂಜಾನ್ ಇಸ್ಲಾಮಿಕ್ ಧಾರ್ಮಿಕತೆಯ ಅತ್ಯಂತ ಕ್ರಿಯಾಶೀಲ ಮಾಸ. ಉಪವಾಸ, ಗ್ರಂಥ ಪಾರಾಯಣ, ದಾನ, ಆರಾಧನೆಯ ಪರಮೋಚ್ಚ ಅಭಿವ್ಯಕ್ತಿ. ಈ ಅಭಿವ್ಯಕ್ತಿಯಿಂದಲೇ ಮನುಷ್ಯನೊಬ್ಬನ ವ್ಯಕ್ತಿತ್ವ ಮತ್ತು ಭಕ್ತಿ ಪರಿಪೂರ್ಣಗೊಳ್ಳುತ್ತದೆ. ಇಂದು ಜಗತ್ತು ದೈಹಿಕ ಮತ್ತು ಮಾನಸಿಕವಾಗಿ ಹಿಂದೆಂದಿಗಿಂತ ಹೆಚ್ಚು ರೋಗಗ್ರಸ್ತವಾಗಿರಲು ಧಾರ್ಮಿಕತೆಯಿಂದ ದೂರ ಸರಿದದ್ದೇ ಮುಖ್ಯ ಕಾರಣ. ಪ್ರಸ್ತುತ ಜಗತ್ತಿನಲ್ಲಿ ಸ್ವಾರ್ಥಕ್ಕಾಗಿ ಧರ್ಮ ರಾಜಕೀಯದಲ್ಲಿದೆ ಬಿಟ್ಟರೆ ನೈಜ ಆಚರಣೆ ಮತ್ತು ಅಳವಡಿಕೆಯಲ್ಲಿ ಇಲ್ಲ. ಧರ್ಮದ ಆಚರಣೆ ಸೂಕ್ತ ಮತ್ತು ಸದೃಢವಾಗಿ ಜೀವಪರವಾಗಿ ಕಾಣಿಸದೆ ಇದ್ದಾಗ ಧರ್ಮದ ವಿಚಾರಗಳ ಮೇಲೆ ಅಪಚಾರ ಮತ್ತು ಅಪಪ್ರಚಾರಗಳು ನಡೆಯುತ್ತವೆ. ಹೀಗಾಗಿ, ಧಾರ್ಮಿಕರಾದವರು ಧರ್ಮವನ್ನು ಸರಿಯಾಗಿ ಪ್ರತಿನಿಧಿಸುವ ಮತ್ತು ಆಚರಿಸುವ ಮಹತ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 35 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಸಿ ದೇವಸ್ಥಾನಗಳ ವಿವರ:ಉಡುಪಿ ತಾಲೂಕಿನ ಉದ್ಯಾವರದ ದೇವಸ್ಥಾನಗಳಾದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀ ಶಂಭುಕಲ್ಲು ವೀರಭದ್ರ ದೇವಸ್ಥಾನ, ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿ ಶಿವಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿಯ ಶ್ರೀ ಮಹಾವಿಷ್ಣು ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ. ಕಾಪು ತಾಲೂಕು ಕಟಪಾಡಿ ಚೊಕ್ಕಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಟ್ಟುವಿನ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ. ಕಾರ್ಕಳ ತಾಲೂಕು ಬೈಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರ್ಣೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಎರ್ಲಪಾಡಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ತಾರಾಪತಿ ಕಡಲ ಕಿನಾರೆಯಲ್ಲಿ ಕಳೆದ 50 ದಿನಗಳಿಂದ ಕಡಲಾಮೆಗಳ ಮೊಟ್ಟೆ ಸಂರಕ್ಷಣೆ ಕಾರ್ಯ ನಡೆಯುತ್ತಿದ್ದು, ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆಯಿಂದ ಮೊಟ್ಟೆಗಳು ಒಡೆದು 100ಕ್ಕೂ ಅಧಿಕ ಮರಿಗಳು ಹೊರಬಂದು ಕಡಲು ಸೇರಿವೆ. ತಾರಾಪತಿಯಲ್ಲಿ ನಿರ್ಮಿಸಲಾದ ಎರಡು ಹ್ಯಾಚರಿಗಳ ಪೈಕಿ ಒಂದರಲ್ಲಿ ಕಳೆದ ವಾರ 85 ಮರಿಗಳು, ಉಳಿದಂತೆ ಕೊನೆಯ ಹ್ಯಾಚರಿಯಲ್ಲಿ ಸೋಮವಾರ ಮುಂಜಾನೆ 105 ಕಡಲಾಮೆ ಮರಿಗಳನ್ನು ಸುರಕ್ಷಿತವಾಗಿ ಕಡಲು ಸೇರಿದ್ದವು. ಮರವಂತೆಯಲ್ಲಿ ಒಂದು ಹ್ಯಾಚರಿಯಿಂದ 2 ವಾರಗಳ ಹಿಂದೆ 115 ಮರಿಗಳು ಸಮುದ್ರ ಸೇರಿದ್ದವು. ಒಟ್ಟು 3 ಹ್ಯಾಚರಿಗಳಿಂದ 300ಕ್ಕೂ ಅಧಿಕ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ, ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಸ್ಥಳೀಯರ ಮಾಹಿತಿಯಂತೆ ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳು ಮುತುವರ್ಜಿ ವಹಿಸಿ ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ರೈಲ್ವೆ ಓವರ್ ಬ್ರಿಜ್ ಬಳಿ ನಡೆದ ಅಪಘಾತದಲ್ಲಿ ಟ್ರಾಕ್ ಮೆನ್ ಆಗಿ ಸೇವೆ ಸಲ್ಲಿಸುತ್ತಿದ್ದ ಬಿಜೂರು ಗ್ರಾಮದ ಆನಂದ ಪೂಜಾರಿ (43) ಅವರ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರೀಯಗೊಂಡು ಮೃತಪಟ್ಟ ಖೇದಕರ ಘಟನೆ ನಡೆದಿದೆ. ಮೂಡ್ಲಕಟ್ಟೆ ಕೊಂಕಣ್ ರೈಲ್ವೆ ಓವರ್ ಬ್ರಿಜ್ ಬಳಿಯಲ್ಲಿ ಹೈಟ್ ಗೇಜ್ ದುರಸ್ತಿ ನಡೆಯುತ್ತಿದ್ದ ಸಂದರ್ಭ, ಸೋಮವಾರ ಕರ್ತವ್ಯದಲ್ಲಿದ್ದ ಆನಂದ ಪೂಜಾರಿ ಅವರ ತಲೆಗೆ ಹೈಟ್ ಗೇಜ್‌ನ ಕಂಬಿ ತಾಕಿ ಕೆಳಕ್ಕೆ ಬಿದ್ದದ್ದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಆನಂದ ಪೂಜಾರಿ ಅವರ ಮೆದುಳು ನಿಷ್ಕ್ರೀಯಗೊಂಡಿರುವ ಬಗ್ಗೆ ತಿಳಿಸಿದ್ದರು. ಎರಡು ದಿನದ ಬಳಿಕ ಅವರು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ. ಜನಾನುರಾಗಿ ಯುವಕ:ಬೈಂದೂರು ಬಿಲ್ಲವ ಸಂಘಟನೆ, ನಾರಾಯಣಗುರು ಕಲಾ ಮತ್ತು ಕ್ರೀಡಾ ಸಂಘ ಬಿಜೂರು, ಫ್ರೆಂಡ್ಸ್ ಕ್ಲಬ್ ಉಪ್ಪುಂದ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಆನಂದ ಪೂಜಾರಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಬೇಸಿಗೆ ಶಿಬಿರಕ್ಕಾಗಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ 66 ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್ ಎಮ್ ಎಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ವಕ್ವಾಡಿ ಹೆಬ್ಬಾಗಿಲು ಮನೆ ಸಂತೋಷ್ ಶೆಟ್ಟಿ ಎಂಬುವರ ಪುತ್ರ ವಂಶಿ ಜಿ. ಶೆಟ್ಟಿ (14) ಎಂದು ಗುರುತಿಸಲಾಗಿದೆ. ಬಾಲಕ ವಂಶಿ ಜಿ. ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುಷ್ಯನ ಬದುಕಿನಲ್ಲಿ ನೈತಿಕ ಮೌಲ್ಯಗಳು ಪ್ರಧಾನ ಭೂಮಿಕೆಯನ್ನು ವಹಿಸುತ್ತವೆ. ಮಾನವೀಯ ಮೌಲ್ಯಗಳಾದ ಶಾಂತಿ, ಪ್ರೀತಿ, ಪ್ರೇಮ, ಕರುಣೆ, ಅಹಿಂಸೆ, ಸಹಿಷ್ಣುತೆ ಮುಂತಾದ ಉತೃಷ್ಠ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜವನ್ನು ಕಟ್ಟಬಹುದಾಗಿದೆ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳ ಮಹಾಮೇರುಗಳಾಗಿ ಭವಿಷ್ಯದಲ್ಲಿ ವಿಜೃಂಭಿಸಲು ಕುವೆಂಪು ಸೃಜಿಸಿದ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಓದು ಸಹಕಾರಿಯಾಗುತ್ತದೆಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರವಿರಾಜ ಶೆಟ್ಟಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ, ಕಾಲೇಜಿನ ಐಕ್ಯೂಎಸಿ ಮತ್ತು ಕನ್ನಡ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಅನಲೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಕರ್ತವ್ಯದಲ್ಲಿದ್ದಾಗ ಡಿ.24ರಂದು ಸೇನಾ ವಾಹನ ದುರಂತದಲ್ಲಿ ಹುತಾತ್ಮರಾದ ಯೋಧ ಅನೂಪ್ ಪೂಜಾರಿ ಅವರ ಕುಟುಂಬಕ್ಕೆ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದ ಮೂಲಕ ಭಟ್ಕಳದ ಮಾಜಿ ಸೈನಿಕರು ಹಾಗೂ ಸೇವಾನಿರತ ಸೈನಿಕರ ರೂ. 60,000ನೆರವು ನೀಡಿದರು. ಭಟ್ಕಳದ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಅವರ ನೇತೃತ್ವದಲ್ಲಿ ಮಾಜಿ ಸೈನಿಕ ಸಂಘದ ಸದಸ್ಯರಾದ ಹನುಮಂತ ನಾಯ್ಕ, ಕೇಶವ ನಾಯ್ಕ ಹಾಗೂ ಊರಿನ ಪ್ರಮುಖರಾದ ಭವಾನಿಶಂಕರ ನಾಯ್ಕ ಅವರು ಕುಂದಾಪುರದ ಬೀಜಾಡಿಯಲ್ಲಿನ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ನಿವಾಸಕ್ಕೆ ತೆರಳಿ ಅವರ ಧರ್ಮಪತ್ನಿ ಹಾಗೂ ಅವರ ತಾಯಿಯವರಿಗೆ ಸಾಂತ್ವನ ಹೇಳಿ, ತಲಾ 30 ಸಾವಿರದಂತೆ (ಒಟ್ಟೂ 60 ಸಾವಿರ) ಅವರ ಧರ್ಮಪತ್ನಿ ಹಾಗೂ ತಾಯಿಯವರಿಗೆ ಡಿ.ಡಿ. ಮೂಲಕ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಎಮ್ ಡಿ ಪಕ್ಕಿ ಅವರು ಪೋನ್ ಕರೆ ಮೂಲಕ ಅನೂಪ್…
