Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ಅಂತಿಮವಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಪಕವಾಗಿ ಎದುರಿಸುವ ಕೊನೆಯ ಹಂತದಲ್ಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವಂತಹ ಮಕ್ಕಳುಗಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕೆಂದರು. ಕಳೆದ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ. 97 ರಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2024ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ. ಬಿ.ಎಸ್.ಸಿ ವಿಭಾಗದಲ್ಲಿ ಬನ್ನಾಡಿಯ ದಾಮೋದರ ಮತ್ತು ಲತಾ ಅವರು ಪುತ್ರ ಕೆದ್ಲಾಯ ಶ್ರೀಕೃಷ್ಣ ದಾಮೋದರ ಅವರಿಗೆ ಪ್ರಥಮ ರ‍್ಯಾಂಕ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮತ್ತು ಸುಲೋಚನಾ ಅವರು  ಪುತ್ರಿ ಸ್ಪೂರ್ತಿ ಜಿ.ಎಸ್ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ. ಬಿ.ಎ ವಿಭಾಗದಲ್ಲಿ ಕುಂಭಾಶಿಯ ಮನೋಹರ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮಿಥುನ ಪ್ರಭು ಅವರಿಗೆ ಪ್ರಥಮ ರ‍್ಯಾಂಕ್, ಕುಂದಾಪುರ ಮಂಗಲಪಾಂಡೆ ರಸ್ತೆಯ ಶಿವರಾಮ ಶೆಟ್ಟಿ ಮತ್ತು ಸರಸ್ವತಿ ಶೆಟ್ಟಿ ಅವರು ಪುತ್ರಿ ಸುಶ್ಮಿತಾ ಶೆಟ್ಟಿ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ. ಬಿ.ಸಿ.ಎ ವಿಭಾಗದಲ್ಲಿ  ಕಾಳಾವರದ ರಾಜು ಶೆಟ್ಟಿಗಾರ್ ಮತ್ತು ಸುನಂದಾ ಅವರ ಪುತ್ರಿ ರಕ್ಷಿತಾ ಅವರಿಗೆ ಪ್ರಥಮ ರ‍್ಯಾಂಕ್, ಮೇಲೆ ಹೊಸೂರು ಮುಳ್ಳಿಮನೆಯ ಸುಧಾಕರ ಶೆಟ್ಟಿ ಮತ್ತು ಭವಾನಿ ಅವರು ಪುತ್ರಿ ಮಾನಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆಲೂರು ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬರುತ್ತಿದ್ದ ಕಾರೊಂದು ಗುಡ್ಡಮ್ಮಾಡಿ ಕ್ರಾಸ್ ಬಳಿ ಪಿಕ್‌ ಅಪ್‌ ವಾಹನಕ್ಕೆ ಡಿಕ್ಕಿಯಾಗಿದ್ದು, ಈ ವೇಳೆ ಕಾರಿನಲ್ಲಿ ಅಕ್ರಮವಾಗಿ ಗೋವನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಅಪಘಾತವಾದ ತಕ್ಷಣ ಪರಾರಿಯಾದ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ಶುಕ್ರವಾರ ಸಂಜೆ ಅಕ್ರಮವಾಗಿ ಗಂಡು ಕರುವಿನ ಕಾಲನ್ನು ಕಟ್ಟಿ ಕಾರಿನಲ್ಲಿ ಸಾಗುಸುತ್ತಿದ್ದ ವೇಳೆ ಗುಡ್ಡಮ್ಮಾಡಿ ಕ್ರಾಸ್‌ ಬಳಿ ಅಪಘಾತವಾಗಿದೆ. ತಕ್ಷಣ ಕಾರಿನಲ್ಲಿದ್ದ ನಾಲ್ವರು ಆರೋಪಿಗಳಾದ ಮೊಹಮ್ಮದ್‌ ಸೀನಾನ್‌ ಗುಲ್ವಾಡಿ, ಮೊಹಮ್ಮದ್‌ ಅಬೀಬ್, ಮೊಹಮ್ಮದ್‌ ಅಬಾನ್‌ ಮೂಡುಗೋಪಾಡಿ, ತೌಹಿದ್‌ ಕಾರು ಬಿಟ್ಟು ಓಡಿಹೋಗಿದ್ದು ಸಮೀಪವೇ ಇದ್ದ ಸೌಪರ್ಣಿಕಾ ಹೊಳೆಗೆ ಹಾರಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಮೂವರನ್ನು ರಕ್ಷಿಸಿ ಬಳಿಕ ಬಂಧಿಸಿದ್ದಾರೆ. ತೌಹಿದ್‌ ಎಂಬಾತ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಇನ್ಸೆಕ್ಟರ್ ಸವಿತ್ರ ತೇಜ್, ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ ಮತ್ತು ಸಿಬ್ಬಂದಿ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದು, ಇನ್ನೊರ್ವ ಪತ್ತೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನು ಹೊಂದಿದ್ದು ಶುಕ್ರವಾರ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಕರಾವಳಿಗೆ ಘೋಷಿಸಿರುವ ಕೊಡುಗೆಗಳ ವಿವರ ಇಂತಿವೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೊಬೈಲ್‌ ನೋಡದಂತೆ ಗದರಿಸಿ ಮಗಳ ಕೈಯಲ್ಲಿದ್ದ ಮೊಬೈಲನ್ನು ತಾಯಿ ತೆಗೆದುಕೊಂಡ ಕ್ಷುಲ್ಲಕ ಕಾರಣಕ್ಕೆ ಮಗಳು ಆತ್ಮಹತ್ಯೆಗೆ ಶರಣಾದ ಘಟನೆ ಕೋಟ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಅವರ ಪುತ್ರಿ ದಿಶಾ (16) ಆತ್ಮಹತ್ಯೆಗೆ ಶರಣಾದವಳು. ದಿಶಾ ಮೊಬೈಲ್ ನೋಡಿಕೊಂಡು ಕುಳಿತಿದ್ದ ಹಿನ್ನೆಲೆಯಲ್ಲಿ, ತಾಯಿ ಗದರಿಸಿ ಮೊಬೈಲ್ ತೆಗೆದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ಕೋಣೆಯ ಬಾಗಿಲು ಹಾಕಿಕೊಂಡಿದ್ದಾಳೆ. ತಾಯಿ ಬಾಗಿಲು ತೆರೆಯಲು ಹೇಳಿದರೂ ಬಾಗಿಲು ತೆರೆಯದೆ ಇರುವುದನ್ನು ಕಂಡು ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಸಿದ್ದಾರೆ. ಆಸ್ಪತ್ರೆಗೆ ಬಾಲಕಿಯನ್ನು ಕರೆದೊಯ್ದು ರಕ್ಷಣೆಗೆ ಪ್ರಯತ್ನಿಸಲಾಗಿದ್ದು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ದಿಶಾ ಸ್ಥಳೀಯ ಕೋಟ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಸ್ಥಳಕ್ಕೆ ಕೋಟ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 2024 ಡಿಸೆಂಬರ್‌ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಪ್ರೀಮಾ (250), ಮಹೇಶ್ (235), ಕೃತಿ ಎಮ್ (233), ಶ್ರೇಯಾ (223),   ಚೇತನ್(223), ಶೆಟ್ಟಿ ತ್ರಿಶಾ(223), ಪ್ರಗತಿ(219), ಅಜ್‌ವೀನ್(218), ಸ್ವಾತಿ(218), ಜ್ಯೋತಿ(210), ಶ್ರೇಯಾ ಶೆಟ್ಟಿ (200),ಸುರಕ್ಷಾ (200) ಹಾಗೂ ಸಾಯಿ ಪ್ರಸಾದ್(200) ಇವರು ಉತ್ತಮ  ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆ. ಜಿ., ಆಳ್ವಾಸ್ ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಹಾಗೂ ಸಿ.ಎ. ಸಂಯೋಜಕರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ಇವತ್ತು ಅಲ್ಪಸಂಖ್ಯಾತರ ತುಷ್ಠಿಕರಣದ ಬಜೆಟ್ ಎನ್ನುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರುಗಳು ತಮ್ಮ, ತಮ್ಮ ಕ್ಷೇತ್ರಕ್ಕೆ ತಂದ ಯೋಜನೆಗಳನ್ನು ಸಾರ್ವಜನಿಕವಾಗಿ ತಿಳಿಸಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೋಳಿ ಅಂಕಕ್ಕೆ ಅನುಮತಿ ಕೇಳುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಸಕ್ಕರೆ ಕಾರ್ಖಾನೆ, ವರಾಹಿ ಯೋಜನೆ, ಸರ್ಕಾರಿ ವೈದ್ಯಕೀಯ ಕಾಲೇಜು, ಪ್ರವಾಸೋದ್ಯಮ ಅಭಿವೃದ್ಧಿ, ಕಿಂಡಿ ಅಣೆಕಟ್ಟುಗಳು, ಬ್ರಹ್ಮಾವರದಲ್ಲಿ ಕೃಷಿ ವಿಜ್ಞಾನ ಕಾಲೇಜು, ಪಶು ಆಹಾರ ಘಟಕ ಸ್ಥಾಪನೆ, ಉದ್ಯೋಗವಕಾಶ ಕಲ್ಪಿಸುವ ಉದ್ಯಮ ಹಾಗೂ ಉದ್ದಿಮೆಗಳು, ಉಪ ಸಾರಿಗೆ ಆಯುಕ್ತರ ಕಚೇರಿ ಇದು ಯಾವುದು ನೆನಪು ಬಾರದೇ ಇದ್ದದ್ದು ನಿಮ್ಮನ್ನು ಆಯ್ಕೆ ಮಾಡಿದ ಜನತೆಗೆ ನೀವು ಮಾಡಿದ ದ್ರೋಹ. ಕೇವಲ ಟೀಕೆ ಮಾತ್ರ ರಾಜಕಾರಣ ಎಂದು ತಿಳಿದಿರುವ ಜಿಲ್ಲೆಯ ಬಿಜೆಪಿ ಶಾಸಕರುಗಳು ಮುಖ್ಯಮಂತ್ರಿಗಳ ಬಳಿ ಹೋಗಿ ಬಜೆಟ್ ಮೇಲಿನ ಚರ್ಚೆಯಲ್ಲಿ ಜಿಲ್ಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಲಾವಿದ ಎನ್‌. ಗಣೇಶ್‌ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ತಾಲೂಕಿನ ಗಂಗೊಳ್ಳಿ ನಿವಾಸಿಯಾಗಿರುವ ಗಣೇಶ್‌ ಗಂಗೊಳ್ಳಿ ಅವರು ಖ್ಯಾತ ಸಂಗೀತ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ತಮ್ಮ ಸುಶ್ರಾವ್ಯ ಕಂಠದ ಮೂಲಕ ನೂರಾರು ಜಾನಪದ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೀದರ್‌ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮೇ.15 ರಂದು 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 25,000 ಮೊತ್ತ, ಶಾಲು, ಹಾರ, ಫಲಕ, ಫಲತಾಂಬೂಲ ಒಳಗೊಂಡಿರುತ್ತದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಗುರುವಾರ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ. ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಟಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವು ಅನೇಕ ಸಂಶೋಧನಾ ನಿರತ ವಿದ್ಯಾರ್ಥಿಗಳಿಗೆ ಸಹಕರಿಸುವುದರೊಂದಿಗೆ, ಕನ್ನಡ ಸಾರಸ್ವತ ಲೋಕಕ್ಕೆ ರಾಷ್ಟ್ರಕವಿ ಗೋವಿಂದ ಪೈ ಅವರ ಸಾಹಿತ್ಯ ಕೃತಿಗಳು ಅಪಾರ ಕೊಡುಗೆ ನೀಡಿವೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ಬಿ. ಜಗದೀಶ್ ಶೆಟ್ಟಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘವು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಕನ್ನಡ ಕರಾವಳಿ ಭಾಗದ ಸಾಂಸ್ಕೃತಿಕ ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಶೋಧನ ಕೇಂದ್ರದ ಡಾ. ಅರುಣ್ ಕುಮಾರ್, ಕಾಲೇಜಿನ ಆಡಳಿತ ನಿಕಾಯಕರು ಮತ್ತು ಯಕ್ಷಗಾನ ಸಂಘದ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ, ಸುಹಾಸ್ ಜಟ್ಟಿಮನೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More