ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ವತಿಯಿಂದ ಸದಸ್ಯರ ಹುಟ್ಟುಹಬ್ಬಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಈ ಹಿನ್ನಲ್ಲೆಯಲ್ಲಿ ಸಂಸ್ಥೆಯ ಸದಸ್ಯರಾದ ಪ್ರಶಾಂತ್ ಪಡುಕರೆ, ಗೌರವ ಸಲಹೆಗಾರ ಶಿವಮೂರ್ತಿ ಉಪಾಧ್ಯಾ ಇವರ ಹುಟ್ಟು ಹಬ್ಬದ ಅಂಗವಾಗಿ ಹೊಸಬದುಕು ಆಶ್ರಮಕ್ಕೆ 20 ಕೆ.ಜಿ.ಉಪ್ಪಿನಕಾಯಿಯನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭದಲ್ಲಿ ಪಂಚವರ್ಣಭಜನಾ ಮಂಡಳಿ ಕೋಟ ಇವರಿಂದ ಭಜನಾ ಗುರು ಪ್ರಶಾಂತ್ ಪಡುಕರೆ ಇವರಿಗೆ ಗುರವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ ಗಣೇಶ್, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ, ಪಂಚವರ್ಣಭಜನಾ ಮಂಡಳಿ ಕೋಟ ಸಂಚಾಲಕಿ ಗೀತಾ ಶಿವರಾಮ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್ ನಿರೂಪಿಸಿ, ಪಂಚವರ್ಣ ಮಹಿಳಾ ಮಂಡಲದ ನಿಕಟಪೂರ್ವ ಅಧ್ಯಕ್ಷೆ ಲಲಿತಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕುಟುಂಬದವರಿದ್ದು, 2600 ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರುಗಳು ಈ ಹಿಂದೆ ಇತರೆ ಪ್ರದೇಶಗಳಿಂದ ಜಿಲ್ಲೆಗೆ ಬಂದವರಾಗಿದ್ದು ಜೋಗಿ, ಗೊಲ್ಲ, ದೊಂಬಿದಾಸ ಹಾಗೂ ದರ್ವೇಶ್ ಜಾತಿಗೆ ಸೇರಿದವರಾಗಿದ್ದಾರೆ. ಇವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳನ್ನು ಮಾಡಬೇಕಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಈ ಸಮುದಾಯದವರು ಶಿಕ್ಷಣವಂತರಾಗುತ್ತಿದ್ದಾರೆ. ಒಂದೆಡೆ ನೆಲೆಸಿ, ಕೃಷಿ ಚಟುವಟಿಕೆ, ಸ್ವಯಂ ಉದ್ಯೋಗ ಮತ್ತಿತರ ಕಾರ್ಯಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಗೀತ ಕ್ಷೇತ್ರದಲ್ಲಿ ಛಾಯಾ ತರಂಗಿಣಿ ಸಾಕಷ್ಟು ಶಿಷ್ಯ ವೃಂದ ಹೊಂದಿದ್ದು ತನ್ನದೆ ಆದ ಅಸ್ತಿತ್ವ ಹೊಂದಿ ಹಲವಾರು ಕಡೆಗಳಲ್ಲಿ ಶಿಷ್ಯ ವೃಂದವನ್ನು ಸೃಷ್ಟಿಸಿ ಕೊಂಡಿದ್ದಾರೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು. ಇತ್ತೀಚಿಗೆ ಕಾರಂತ ಥೀಂ ಪಾರ್ಕನಲ್ಲಿ ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಗೀತದ ಮೂಲಕ ಹೊರಜಗತ್ತಿಗೆ ನಮ್ಮನ್ನು ಪರಿಚಯಿಸುವುದರ ಜತೆಗೆ ಪ್ರಸಿದ್ಧಿ ಪಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಇಲ್ಲಿನ ಸಂಗೀತ ಗುರುಗಳು ಹಾಗೂ ಆ ಸಂಸ್ಥೆ ಮತ್ತಷ್ಟು ಶಿಷ್ಯವೃಂದವನ್ನು ಪಸರಿಸಿಕೊಳ್ಳಲಿ ಎಂದು ಹಾರೈಸಿದರು. ಗುರುವಂದನಾ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಗುರವಂದನಾ ಗೌರವ ಸಲ್ಲಿಸಲಾಯಿತು. 2023-24ನೇ ಸಾಲಿನ ಕರ್ನಾಟ ಶಾಸ್ತ್ರೀಯ ಸಂಗೀತದ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ತನ್ಮಯ್ ಬಿಜೂರು ಇವರನ್ನು ಗುರುತಿಸಲಾಯಿತು. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ವಹಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪರಸ್ಪರ ಸಹಕಾರ ತತ್ವವನ್ನು ಕಾರ್ಯರೂಪಕ್ಕೆ ಇಳಿಸುವುದರ ಮೂಲಕ ಸಂಸ್ಥೆಗಳನ್ನು ಬಲಪಡಿಸಬೇಕು. ಆ ಮೂಲಕ ಸಮುದಾಯದ ಅಭಿವೃದ್ಧಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಚಕ್ರಮ್ಮ ದೇವಸ್ಥಾನ ಟ್ರಸ್ಟ್ ಕೋಡಿಯ ಅಧ್ಯಕ್ಷರಾದ ಕೋಡಿ ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ನಡೆದ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಂಗೊಳ್ಳಿಯ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿಗಳಾದ ರಘುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಪ್ರವೀಣ್ ಪೂಜಾರಿ ಶುಭ ಹಾರೈಸಿದರು. ಉದ್ಯಮಿ ಶಶಿಕಾಂತ್ ಗಂಗೊಳ್ಳಿ, ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಿ. ಎ. ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರಿಗೆ ನಮನಗಳನ್ನು ಸಲ್ಲಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಬಿಲ್ಲವ ಸಮುದಾಯದ ಅಪೇಕ್ಷಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಈಬಿಸ್‌ಸಿಒ ಇಂಜಿನಿಯರಿಂಗ್ ಸೂಟ್ ಎಎಂಎ ಮೈಕ್ರೋ ಕೋರ್ಸುಗಳು ಮತ್ತು ಐಇಇಇ ಮೇಲೆ ಕೇಂದ್ರೀಕರಿಸಿ ವಿಟಿಯು ಕನ್ಸೋರ್ಟಿಯಮ್ ತರಬೇತಿ ಕಾರ್ಯಗಾರ ನಡೆಯಿತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನಾ ಕೌಶಲ್ಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿ ಸಲಾಯಿತು. ಈಬಿಸ್‌ಸಿಒ – ಐಇಇಇ ದಕ್ಷಿಣ ಭಾರತದ ತರಬೇತಿ ವ್ಯವಸ್ಥಾಪಕ ಎಂ. ಎಸ್ ಶ್ರೀನಿವಾಸ ನೇತೃತ್ವ ವಹಿಸಿದ್ದರು. ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಮ್ ಅವರು ವಹಿಸಿ, ಕಾರ್ಯಗಾರವನ್ನು ಉದ್ಘಾಟಿಸಿದರು. ಐಇಇಇ ನ ಸದಸ್ಯರಾಗಿರುವ ಅವರು ವಿ. ಟಿ. ಯು ಕನ್ಸೋರ್ಟಿಯಂ ವತಿಯಿಂದ ಲಭ್ಯವಿರುವ ಎಲ್ಲ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮಾರ್ಗದರ್ಶನ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜಾ ಹಾಗೂ ಗ್ರಂಥಾಪಾಲರಾದ ಶ್ಯಾಮ್ ನಾಯ್ಕ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಶ್ರೀನಿಧಿ ರಾವ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 95 ಕ್ಕಿಂತ ಅಧಿಕ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳು ಕುಂದಾಪುರದ ವೆಸ್ಟ್ ಬ್ಲಾಕ್ ರಸ್ತೆಯ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿರುವ ’ಕುಂದಪ್ರಭ’ಕಛೇರಿಯಿಂದ ಅರ್ಜಿ ಮೇ 21 ರಿಂದ ಪಡೆದು ಅಂಕಪಟ್ಟಿಯೊಂದಿಗೆ, ಕಾಲೇಜು ಸೇರ್ಪಡೆಗೊಂಡ ದಾಖಲಾತಿ ಅಥವಾ ಶುಲ್ಕ ಪಾವತಿ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 31-05-025. ಎಸ್. ಎಸ್. ಎಲ್. ಸಿ. ಹಾಗೂ ಪಿಯಸಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಪ್ರಾಂಶುಪಾಲರ ಪತ್ರದೊಂದಿಗೆ ದಾಖಲೆ ಒದಗಿಸಿದ್ದಲ್ಲಿ ಅವರನ್ನು ಗೌರವಿಸಲಾಗುತ್ತದೆ. ಮಂಗಳೂರು ವಿ. ವಿ. ಯಿಂದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದವರೂ ಮಾಹಿತಿ ನೀಡಬಹುದು ಎಂದು ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‌ನ ಕಾರ್ಯದರ್ಶಿ ಯು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಮ್ಮ ಜೀವವನ್ನೇ ಪಣಕ್ಕಿಟ್ಟು ಸಮುದ್ರವನ್ನೇ ನಂಬಿ ಜೀವನ ನಡೆಸುತ್ತಿರುವ ಮೀನುಗಾರರ ಮಕ್ಕಳು ಮೀನುಗಾರರಾಗದೆ, ಉನ್ನತ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಮೀನುಗಾರರ ಮಕ್ಕಳು ಶಿಕ್ಷಣ ವಂಚಿತರಾಗದೆ, ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಮರವಂತೆ ಪರಿಸರದ ದುಡಿಯುವ ಮೀನುಗಾರ ಮಕ್ಕಳಿಗೆ ಉಚಿತವಾಗಿ ಪ್ರತಿವರ್ಷ ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ವಿದ್ಯಾವಂತರಾಗಿ ಸಮಾಜಕ್ಕೆ ಕೊಡುಗೆಗಳಾಗಬೇಕು ಎಂದು ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ ಹೇಳಿದರು. ಅವರು ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಶ್ರೀ ರಾಮ ಮಂದಿರದಲ್ಲಿ ಭಾನುವಾರ ಜರಗಿದ 11ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮರವಂತೆ ಭಾಗದ ಮೀನುಗಾರ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಮೀನುಗಾರರ ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ, ಸೇವಾ ಸಮಿತಿ ಕಾರ್ಯದರ್ಶಿ ಶೇಖರ ಖಾರ್ವಿ, ಮಾಜಿ ಅಧ್ಯಕ್ಷ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಗಾಲ ಆರಂಭವಾಗುತ್ತಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಬಾಧಿಸುವ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರವಹಿಸಿ, ರೋಗಗಳು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಂಗಳು, ಬ್ಯಾರಲ್, ಮಡಕೆ ಮುಂತಾದ ಮೂಲಗಳಲ್ಲಿ ನೀರಿನ ಶೇಖರಣೆ ವೇಳೆ ಅವುಗಳನ್ನು ಆಗಿಂದಾಗ್ಗೆ ಶುದ್ಧಿ ಮಾಡಿ, ನಂತರ ನೀರನ್ನು ಸಂಗ್ರಹಿಸಬೇಕು. ನೀರು ಸಂಗ್ರಹವಾಗುವ ಓವರ್ ಹೆಡ್ ಟ್ಯಾಂಕ್‌ಗಳನ್ನು ವಾರಕ್ಕೊಮ್ಮೆ ಪೂರ್ತಿ ನೀರು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಮನೆ ಸುತ್ತಮುತ್ತ, ಅಂಗಡಿ ಮುಂಗಟ್ಟು, ಮನೆ ಪರಿಸರದಲ್ಲಿ ಸುತ್ತಮುತ್ತ ಇರುವ ಅನುಪಯುಕ್ತ ಟಯರ್, ಎಳನೀರು ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಸ್ವಯಂ ರಕ್ಷಣಾ ವಿಧಾನಗಳಿಂದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು. ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಕೂಡಲೇ ಸಮೀಪದ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ನಗರಸಭೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶತಮಾನೋತ್ಸವ ಕಂಡ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರತಿವರ್ಷ ಹಳೆ ವಿದ್ಯಾರ್ಥಿಗಳ ಕೊಡುಗೆ ಒಂದಕ್ಕಿಂತ ಒಂದು ಹೆಚ್ಚು, ಶಿಕ್ಷಣಕ್ಕೆ ಆದ್ಯತೆ ನೀಡಿ ನಾವು ಓದಿದ ಶಾಲೆ ಎಂಬ ಪ್ರೀತಿಯಿಂದ ಹಳೆ ವಿದ್ಯಾರ್ಥಿಗಳು ಶಾಲೆಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವದ ನೆನಪಿಗಾಗಿ ನಿರ್ಮಿಸಲಾಗಿರುವ ಎರಡು ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯನ್ನು ಹೇಗೆ ಮಾಡಿ ತೋರಿಸಬಹುದು ಎಂಬುದಕ್ಕೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿದರ್ಶನ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 50ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳು ಸುಮಾರು 50 ಇದ್ದರೆ, 6-7 ಮಕ್ಕಳಿರುವ ಶಾಲೆಗಳಿವೆ. ಇಂತಹ ಸಂದರ್ಭದಲ್ಲಿ ಬೈಂದೂರು ವಲಯದಲ್ಲಿ ಅತೀ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಗುಜ್ಜಾಡಿ ಶಾಲೆ ಬೇರೆ ಶಾಲೆಗಳಿಗೆ ಮಾದರಿಯಾಗಿದೆ ಎಂದರು. ಕಳೆದ…
