ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಲ್ಲವಾಸ್ ಕತಾರ್ ಸಂಸ್ಥೆಯು ದೋಹಾದ “ದಿ ಹ್ಯಾಮಿಲ್ಟನ್ ಇಂಟರ್ನ್ಯಾಷನಲ್ ಸ್ಕೂಲ್”ನ ಭವ್ಯವಾದ ಒಳ ಕ್ರೀಡಾಂಗಣದಲ್ಲಿ ತನ್ನ ಚೊಚ್ಚಲ ತ್ರೋಬಾಲ್ ಟೂರ್ನಮೆಂಟ್ನ್ನು ಯಶಸ್ವಿಯಾಗಿ ಆಯೋಜಿಸಿತು. ಪುರುಷರು, ಮಹಿಳೆಯರು ಹಾಗೂ ಮಿಶ್ರ ವಿಭಾಗಗಳಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಕತಾರ್ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಈ ಪಂದ್ಯಾಟ ಕ್ರೀಡಾಸ್ಫೂರ್ತಿ, ಕ್ರೀಡಾ ಚಾಕಚಕ್ಯತೆ, ದೈಹಿಕ ಕ್ಷಮತೆ ಮತ್ತು ವಿಶೇಷವಾಗಿ ಸಾಮೂಹಿಕ ಒಗ್ಗಟ್ಟನ್ನು ಬಿಂಬಿಸುವ ಕೇಂದ್ರ ಬಿಂದುವಾಗಿತ್ತು. ಈ ಪಂದ್ಯಾಟವನ್ನು ಕತಾರ್ನ ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಶಿಕ್ಷಣ, ಸಂಸ್ಕೃತಿ ಮತ್ತು ವೀಸಾ) ಹರೀಶ್ ಪಾಂಡೆ ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರಾದ ಎಂ. ಪಲ್ಲೊಂಜಿ ಸಂಸ್ಥೆಯ ನಿರ್ದೇಶಕರಾದ ಚಿದಾನಂದ ನಾಯಕ್, ಐ.ಎಸ್.ಸಿ ಸಲಹಾ ಸದಸ್ಯರಾದ ಸುಬ್ರಹ್ಮಣ್ಯ ಹೆಬ್ಬಾಗಿಲು, ಐ.ಸಿ.ಸಿ, ಐ.ಸಿ.ಬಿ.ಎಫ್, ಐ.ಎಸ್.ಸಿ. ಪ್ರತಿನಿಧಿಗಳು ಹಾಗೂ ವಿವಿಧ ಸಂಘಗಳ ಅಧ್ಯಕ್ಷರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಬಿಲ್ಲವಾಸ್ ಕತಾರ್ನ ಅಧ್ಯಕ್ಷೆಯಾದ ಅಪರ್ಣ ಶರತ್ ಅವರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳಾವರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವಿಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-01ನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮೂಲವಾಗಿರುವುದರ ಜೊತೆಗೆ ಬಹಳ ಮಹತ್ವದ್ದಾಗಿದ್ದು, ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ದೋಷರಹಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆಯನ್ನು ಬರೆಯುವ ವಾತಾವರಣವನ್ನು ಕಲ್ಪಿಸಬೇಕು ಎಂದರು. ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮಾರ್ಚ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳದಲ್ಲಿ ಹಾದುಹೋಗುವ 169ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವುದರ ಜೊತೆಗೆ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ವೈಜ್ಞಾನಿಕವಾಗಿ ಮೌಲ್ಯವನ್ನು ನಿಗಧಿಪಡಿಸಿ ನೀಡಬೇಕೆಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ, ಬಜಗೋಳಿ, ಮಾಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪರಿಹಾರ ಪಾವತಿಗೆ ಸಂಸಂಬಂಧಿಸಿದಂತೆ ಚರ್ಚಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169ಎ ಯ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲು ಭೂ ಸ್ವಾಧೀನ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಅಲ್ಲಿನ ಸ್ಥಳೀಯ ಜನರು ಅನೇಕ ವರ್ಷಗಳಿಂದ ತಾವು ವಾಸವಿರುವ ಮನೆ ಹಾಗೂ ಕೃಷಿ ಭೂಮಿಯನ್ನು ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೀಡುವ ಅಗತ್ಯತೆ ಉಂಟಾಗಿದೆ. ಅವರುಗಳಿಗೆ ಪ್ರಸ್ತುತ ಮಾರುಕಟ್ಟೆ ಅನುಗುಣವಾಗಿ ಪರಿಹಾರದ ಹಣವನ್ನು ನೀಡಿದ್ದಲ್ಲಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವಲಯ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ, ನಿವೃತ್ತ ಮುಖ್ಯಶಿಕ್ಷಕ ಶ್ರೀನಿವಾಸ ಉಬ್ಬೇರಿ (76) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಉಪ್ಪುಂ ದಲ್ಲಿರುವ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಕಾರ್ಕಳ ವಲಯದ ಕಪ್ಪೆಟ್ಟು, ಬೈಂದೂರು ವಲಯದ ಮೊಗೇರಿ, ಮಡಿಕಲ್ ಸೇರಿದಂತೆ ಹಲವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿ ಅಪಾರ ಶಿಷ್ಯವೃಂದ ಹೊಂದಿದ್ದರು. ಬೈಂದೂರು ವಲಯ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ಬಿಲ್ಲವ ಸಮಾಜದ ಸಂಘಟನೆಗಾಗಿ ಶ್ರಮಿಸಿದ್ದರು. ಅವರಿಗೆ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಚಿಕ್ಕಮ್ಮ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಲಾ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ವಾರ್ಷಿಕ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ದಿ. ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣೆಯ ಸಾಂಸ್ಕೃತಿಕೋತ್ಸವವು ಫೆಬ್ರವರಿ 19 ರಿಂದ 22 ಫೆಬ್ರವರಿ 2026ರ ತನಕ ಪ್ರತಿದಿನ ಸಂಜೆ 6:00ಕ್ಕೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ. ಫೆಬ್ರವರಿ 19ರ ಗುರುವಾರ ಸಂಜೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಸುರಭಿ ಜೈಸಿರಿಗೆ ಚಾಲನೆ ದೊರೆಯಲಿದ್ದು, ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕರಾದ ಗುರುರಾಜ ಗಂಟಿಹೊಳೆ, ಮಾಜಿ ಸಚಿವರುಗಳಾದ ಪ್ರಮೋದ್ ಮಧ್ವರಾಜ್, ಕೃಷ್ಣ ಪಾಲೇಮಾರ್, ರಮಾನಾಥ ರೈ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಹೃದ್ರೋಗ ತಜ್ಞ ಡಾ ಅವರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯಮಾನ್ಯರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಫೆಬ್ರವರಿ 19ರ ಗುರುವಾರ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಆ ಬಳಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 116ನೇ ತಿಂಗಳ ಕಾರ್ಯಕ್ರಮ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಜರುಗಿತು. ಮಧುಸೂಧನ್ ಕಾಮತ್ ಮತ್ತು ಶ್ರೀಕಾಂತ್ ನಾಯಕ್ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ವಿಶ್ವನಾಥ್ ಶ್ಯಾನುಭಾಗ್ ಉಪ್ಪಿನಕುದ್ರು ಅವರನ್ನು ಗೌರವಿಸಲಾಯಿತು. ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಭಜನಾ ಮಂಡಳಿ ಹಾಗೂ ಬಾಲ ಭಜನಾ ಮಂಡಳಿ, ಸಿದ್ಧಾಪುರ ಅವರಿಂದ ಭಜನಾ ಸಂಧ್ಯಾ ಕಾರ್ಯಕ್ರಮ ಅತ್ಯುತ್ತಮವಾಗಿ ಜರುಗಿತು. ವೇದಿಕೆಯಲ್ಲಿ ಗುರು ಕೃಷ್ಣ ಕಾಮತ್, ಮಧುಸೂಧನ್ ಕಾಮತ್, ಶ್ರೀಕಾಂತ್ ನಾಯಕ್ ಸಿದ್ಧಾಪುರ, ಶಾರದಾ ನಾಯಕ್ ಐರ್ಬೈಲ್, ವಿಶ್ವನಾಥ್ ಶ್ಯಾನುಭಾಗ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ನಾಗೇಶ್ ಶ್ಯಾನುಭಾಗ್ ನಿರೂಪಿಸಿ, ಉದಯ ಭಂಡಾರ್ಕಾರ್ ಧನ್ಯವಾದ ಸಮರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ರಾ.ಹೆ-66ರ ಕನ್ನುಕರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್ಲೈನ್ ಸೇವಾ ಕೇಂದ್ರ’ದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ತೆಕ್ಕಟ್ಟೆ ಶ್ರೀ ನವಶಕ್ತಿ ಕಲ್ಯಾಣ ಮಂಟಪದ ಬಳಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರದಲ್ಲಿ ಸೋಮವಾರ ರಾತ್ರಿ ಸುಮಾರು 9:15ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾಲೀಕರಾದ ಫಣಿರಾಜ್ ಹತ್ವಾರ್ ಕೊರವಡಿ ಅವರು ಕೆಲಸ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಆ ಬಳಿಕ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ಸ್ಟೇಷನರಿ ವಸ್ತುಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಮೇಜು ಹಾಗೂ ಇತರ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಈ ಅಗ್ನಿ ಅವಘಡದಿಂದ ಅಂದಾಜು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಕಣ್ಣುಕರೆಯ ವಾದಿರಾಜ್ ಗಾಣಿಗ, ಕಾರ್ತಿಕ್, ಶೇಖರ್ ದೇವಡಿಗ, ಭರತ್ ಮತ್ತು ವಿಘ್ನೇಶ್ ಸೇರಿದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪವರ್ಲಿಫ್ಟಿಂಗ್ ಇಂಡಿಯ, ಕೂಳೂರು ಸ್ಪೋರ್ಟ್ಸ್ ಪ್ರಮೋಟರ್ಸ್ ಅವರ ಸಂಯೋಜನೆಯಲ್ಲಿ, ಕರ್ನಾಟಕ ಪವರ್ಲಿಫ್ಟಿಂಗ್ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಪವರ್ಲಿಫ್ಟಿಂಗ್ ಸಂಸ್ಥೆ ಅವರ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಮಾಸ್ಟರ್ಸ್ ಮತ್ತು ದಕ್ಷಿಣ ಕನ್ನಡ – ಉಡುಪಿ ಜಿಲ್ಲಾ ಮಟ್ಟದ ಪವರ್ಲಿಫ್ಟಿಂಗ್ ಸ್ಪರ್ಧಾಕೂಟ -2026 ನಡೆಯಿತು. ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ಸಂಸ್ಥೆಯ ಮುಖ್ಯಸ್ಥರು, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿ ಅವರು 66 ಕೆಜಿ ಎಂ-2 ವಿಭಾಗದಲ್ಲಿ Classic ಹಾಗೂ Equipped-ಎರಡು ವಿಭಾಗಗಳಲ್ಲಿ ಸ್ಪರ್ಧಿಸಿ ಎರಡು ಚಿನ್ನದ ಪದಕಗಳು ಹಾಗೂ ಕರ್ನಾಟಕದ ಬಲಿಷ್ಠ ಪುರುಷ-2026 ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ಸಂಸ್ಥೆಯ ಸದಸ್ಯರಾದ ಕಾರ್ತಿಕ್ ಪೂಜಾರಿ ಅವರು 93 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಮಟ್ಟದ ಬಲಿಷ್ಠ ಪುರುಷ-2026 ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ಪಂಚವರ್ಣ ಸಂಘಟನೆಯ ಪ್ರತಿ ಭಾನುವಾರದ ಪರಿಸರ ಸ್ನೇಹಿ ಅಭಿಯಾನದ ಭಾಗವಾಗಿ ಬೀಚ್ ಕ್ಲಿನಿಂಗ್ ಭಾಗವಹಿಸಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಕೋಟ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಸಲಹೆಯ ಮೇರೆಗೆ ಬೆಂಗಳೂರು ಪ್ರಸಿದ್ಧ ಕ್ಯಾಪ್ಸ್ ಫೌಂಡೇಶನ್ ವತಿಯಿಂದ ಸಂಸ್ಥೆಯ ಮುಖ್ಯಸ್ಥ ಸಿಎ ಚಂದ್ರಶೇಖರ ಶೆಟ್ಟಿ ಉಚಿತವಾಗಿ ಸ್ಟೀಲ್ ನೀರಿನ ಬಾಟಲ್ ಅನ್ನು ಪಂಚವರ್ಣ ಅಧ್ಯಕ್ಷರಾದ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಇತ್ತೀಚಿಗೆ ಭೇಟಿ ನೀಡಿದರು. ಶ್ರೀಪಾದರನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಪುತ್ರ ಖ್ಯಾತರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಇವರು ಸ್ವಾಗತಿಸಿಕೊಂಡು ಕೇಂದ್ರದ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರು ಕೇಂದ್ರದ ರಥ ತಯಾರಿಕೆಯ ಚಟುವಟಿಕೆಯನ್ನು ಗಮನಿಸಿ ರಥ ತಯಾರಿಸುವ ವಿಧಾನ ಮತ್ತು ರಥಗಳ ಮಾಹಿತಿಯನ್ನು ಪಡೆದುಕೊಂಡರು. ರಥಶಿಲ್ಪಿ ಗಣಪತಿ ಆಚಾರ್ಯ, ಸತೀಶ ಆಚಾರ್, ಕರಕುಶಲ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರದ ವತಿಯಿಂದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
