Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಕುಂದಪ್ರಭ” ಸಂಸ್ಥೆಯಿಂದ, ಹಿರಿಯ ಪತ್ರಕರ್ತ, ತರಬೇತುದಾರ, ವಾಗ್ಮಿ, ಕೋಣಿ ಮಹಾಬಲೇಶ್ವರ ಕಾರಂತರ ಸ್ಮರಣೆಯಲ್ಲಿ ನೀಡಲಾಗುತ್ತಿರುವ ಕೋ. ಮ. ಕಾರಂತ ಪ್ರಶಸ್ತಿಗೆ ಈ ವರ್ಷ ಪ್ರತಿಭಾವಂತ ಕುಂಚ ಕಲಾವಿದ, ಪ್ರಗತಿಪರ ಉದ್ಯಮಿ, ತಾಂತ್ರಿಕ ನಿರ್ದೇಶಕ, ಇಂಜಿನಿಯರ್ ಬಳ್ಕೂರು ಜಯರಾಮ ಉಡುಪರನ್ನು ಆಯ್ಕೆ ಮಾಡಲಾಗಿದೆ. ರೇಖಾ ಚಿತ್ರ, ಚುಕ್ಕಿ ಚಿತ್ರ, ವ್ಯಂಗ್ಯ ಚಿತ್ರಕಾರರಾಗಿ ಖ್ಯಾತರಾದ ಅವರು ವೃತ್ತಿಯಲ್ಲಿ “ಮೇಕ್ ಇನ್ ಇಂಡಿಯಾ” ದೃಷ್ಟಿಕೋನ ಹೊಂದಿದವರಾಗಿದ್ದು, ದೇಶಕ್ಕಾಗಿ ವಿವಿಧ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ಸಕ್ರಿಯರಾಗಿದ್ದಾರೆ. ದೇಶದ ಹೆಲಿಕಾಪ್ಟರ್, ವಿಮಾನ, ಕ್ಷಿಪಣಿ ಯೋಜನೆಗಳಿಗೆ ತಾಂತ್ರಿಕ ವಿನ್ಯಾಸ ನೀಡಿದವರು. ತೇಜಸ್ ಯುದ್ಧ ವಿಮಾನಕ್ಕಾಗಿ ಬ್ಯಾಕಪ್ ಡಿಸ್‌ಪ್ಲೇ ಯುನಿಟ್ ವಿನ್ಯಾಸ ಅಭಿವೃದ್ಧಿ ಪ್ರಮಾಣಿಕರಣ ಇವರ ಸಾಧನೆ. ಬೆಂಗಳೂರಿನ ಡಾಟಾ ಸೋಲ್ ಇನ್ನೋವೇಟಿವ್ ಲ್ಯಾಬ್‌ನ ಸ್ಥಾಪಕ ನಿರ್ದೇಶಕರಾಗಿರುವ ಇವರು, ತಾಂತ್ರಿಕ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಫ್ಲೈವಿ ((Fly-Vi)) ಟೆಕ್ನಾಲಜೀಸ್ ಪ್ರೈ. ಲಿ. ನ ತಾಂತ್ರಿಕ ನಿರ್ದೇಶಕರಾಗಿ ವೃತ್ತಿ ನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದ ವ್ಯಂಗ್ಯ ಚಿತ್ರ, ರೇಖಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದ್ದಾರೆ. ಪವಿತ್ರ ಎ.ವಿ ಅವರು ‘ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ ಅಮಾಂಗ್ ರೂರಲ್ ಅಡೊಲೆಸೆಂಟ್ಸ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಗವರ್ನ್ಮೆಂಟ್ ಪ್ರಿಯುನಿವರ್ಸಿಟಿ ಕಾಲೇಜಸ್ ಇನ್ ಕರ್ನಾಟಕ’ ಎಂಬ ವಿಷಯದ ಕುರಿತು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಲೋಕೇಶ್ ಎಂ. ಯು. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪಡೆದಿದ್ದಾರೆ. ಜ.30 ರಂದು ನಡೆದ ದಾವಣಗೆರೆ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಪದವಿ ಪ್ರದಾನ ಮಾಡಿದರು. ಅವರು ಎಮ್‌ಆರ್‌ಪಿಎಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಚೀಫ್ ಮ್ಯಾನೇಜರ್ ಸ್ವಾಮಿ ಪ್ರಸಾದ್ ಅವರ ಪತ್ನಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಪಾಂಡೇಶ್ವರ ಗಾನ ನಿನಾದ ಆರ್ಕೆಸ್ಟ್ರಾ ಇದರ ದಶಮಾನೋತ್ಸವ ಅಂಗವಾಗಿ ಆಯೋಜಿಸಿರುವ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆಯ ಆಯ್ಕೆ ಪ್ರಕ್ರೀಯೆ ಪಾಂಡೇಶ್ವರ ಶಾಲೆ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಉಡುಪಿ ಭವಾನಿ ಬಿಲ್ಲ್ದೆರ್ಸ್ ಮಾಲಿಕ ಪುನೀತ್ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಾಂಡೇಶ್ವರ ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಅಭಿವೃದ್ದಿ ಅಧಿಕಾರಿ ವಂದನ, ಸದಸ್ಯರಾದ ರವೀಶ್ ಶ್ರೀಯಾನ್, ಉದ್ಯಮಿ ರಾಜ, ಶ್ರೀ ಕ್ಷೇತ್ರ ಪಾಂಡೇಶ್ವರ ಕಳಿಬೈಲು ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ ಹಾಗೂ ತೀರ್ಪುಗಾರಗಾಗಿ ರವಿ ಕಾರಂತ್, ಕೋಟ, ಅಖಿಲಾ ಹೆಗ್ಡೆ, ಸಂಸ್ಥೆಯ ಸಾರಥಿ ಶ್ರೀಶ ಆಚಾರ್ಯ ಉಪಸ್ಥಿತರಿದ್ದರು.  ಕಾರ್ಯಕ್ರಮವನ್ನು ರಾಘವೇಂದ್ರ ರಾಜ್ ನಿರೂಪಿಸಿದರು. ಈ ಸ್ಪರ್ಧೆಯಲ್ಲಿ ಜಿಲ್ಲೆಯಾದ್ಯಾಂತ 100 ಕ್ಕೂ ಅಧಿಕ ಮಂದಿ ಈ ಸ್ಪರ್ಧೆಯಲ್ಲಿ   ಭಾಗವಹಿಸಿದ್ದು ಅಂತಿಮ ಆಯ್ಕೆ ಸುತ್ತು ಇದೇ ಫೆ. 21ನೇ ಶನಿವಾರ ರಾತ್ರಿ ನೆಡೆಯುವ ಫೈನಲ್ ಸ್ಪರ್ಧೆಗೆ 10 ಜನರನ್ನು ಆಯ್ಕೆ ಮಾಡಲಾಗುವದು ಎಂದು ಸಂಸ್ಥೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆ ಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆ ಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ನಮ್ಮ ಯಾತ್ರಿ ಆಪ್ ಹಾಗೂ ರ‍್ಯಾಪಿಡ್ ಆಪ್ ಆಟೋ ಸಂಚಾರ ಕುರಿತ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರ ವ್ಯಾಪ್ತಿಯ ಮಣಿಪಾಲ್ ನಲ್ಲಿ ಡಿಜಿಟಲ್ ಆಪ್ ಆಧಾರಿತ ಬಾಡಿಗೆ ಆಟೋಗಳ ಚಾಲನೆಯ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ. ಡಿಜಿಟಲ್ ಆಪ್ ಆಧಾರಿತ ಕೆಲವು ಸಂಸ್ಥೆಗಳು ಸೇವೆಗಳನ್ನು ಒದಗಿಸುತ್ತಿವೆ. ಈ ಬಗ್ಗೆ ಸರಕಾರದ ಪರವಾನಿಗೆ ಸೇರಿದಂತೆ ಮತ್ತಿತರ ದಾಖಲೆಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮುಂದೆ ಹಾಜರುಪಡಿಸಿದ್ದಲ್ಲಿ ಸ್ಥಳೀಯ ಆಟೋ ಚಾಲಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್‌ಸಿಸಿ ಸಾಧಕರನ್ನು ಗೌರವಿಸುವ ಸಮಾರಂಭವು ಸೋಮವಾರ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್‌ಸಿಸಿಯ ಸೇನಾ, ನೌಕಾ ಹಾಗೂ ವಾಯುಪಡೆ ಘಟಕಗಳು ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದವು. ಬೆಂಗಳೂರು ವಲಯದ ಸೇನಾ ನೇಮಕಾತಿ ಎಡಿಜಿ ಮೇಜರ್ ಜನರಲ್ ಬ್ರೂಸ್ ಫರ್ನಾಂಡಿಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಎನ್‌ಸಿಸಿ ಯುವಜನತೆಯನ್ನು ಶಿಸ್ತು, ಸೇವಾ ಮನೋಭಾವ ಮತ್ತು ರಾಷ್ಟ್ರಪ್ರೇಮದೊಂದಿಗೆ ರೂಪಿಸುವ ಮಹತ್ವದ ಸಂಘಟನೆಯಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ತಂಡಭಾವನೆ ಮತ್ತು ಜವಾಬ್ದಾರಿಯುತ ನಾಗರಿಕತ್ವವನ್ನು ಬೆಳೆಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ತಮ್ಮದೇ ಎನ್‌ಸಿಸಿ ಅನುಭವಗಳನ್ನು ನೆನಪಿಸಿಕೊಂಡ ಅವರು, ತರಬೇತಿ ಜೀವನದ ಸವಾಲುಗಳನ್ನು ಎದುರಿಸಲು ಧೈರ್ಯ ಮತ್ತು ಹೋರಾಟದ ಮನೋಭಾವವನ್ನು ಹೊಂದಿರಬೇಕು. ವ್ಯಕ್ತಿಯ ಯಶಸ್ಸು, ಸಮಾಜದ ಶಾಂತಿ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಶಿಸ್ತು ಅಗತ್ಯವಾದ ಅಡಿಪಾಯವಾಗಿದೆ. ಆದ್ದರಿಂದ ಶಿಸ್ತು ಪ್ರತಿಯೊಬ್ಬ ನಾಗರಿಕನ ಜೀವನಶೈಲಿಯಾಗಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಒಂದೇ ಕ್ಯಾಂಪಸ್‌ನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವುದನ್ನು ಶ್ಲಾಘಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಪಂಚಗಂಗಾವಳಿ ಬಳಗ ಬಂದರು ಇದರ 32ನೇ ವಾರ್ಷಿಕೋತ್ಸವ ಮತ್ತು ಪಂಚಗಂಗಾವಳಿ ವಿದ್ಯಾನಿಧಿ ಯೋಜನೆ ವತಿಯಿಂದ 22ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಪಂಚಗಂಗಾವಳಿ ಸ್ವಾಸ್ಥ್ಯನಿಧಿ ಯೋಜನೆ ವತಿಯಿಂದ 17ನೇ ವರ್ಷದ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ ಗಂಗೊಳ್ಳಿ ಪಂಜುರ್ಲಿ ದೈವಸ್ಥಾನದ ವಠಾರದಲ್ಲಿ ಬುಧವಾರ ನಡೆಯಿತು. ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ ಶೆಟ್ಟಿ ಕೋವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಕುಂದಾಪುರ ಪುರಸಭೆ ಮ್ಯಾನೇಜರ್ ಸೂರ್ಯಕಾಂತ ಖಾರ್ವಿ, ಕೋಟ ಪರ್ಸಿನ್ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ನಿರ್ದೇಶಕ ಅಂಕಿತ್ ಶೆಟ್ಟಿ, ಗಂಗೊಳ್ಳಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ ಪೂಜಾರಿ, ಡಾ. ಸಪ್ತಮಿ ಕೆ. ಮರವಂತೆ ಮತ್ತು ಕ್ಲಿನಿಕಲ್ ಡಯಾಟಿಸಿಯನ್ ಎಂ. ಮನಿಲಾ ಶುಭ ಹಾರೈಸಿದರು. ಇದೇ ಸಂದರ್ಭ ಪ್ರಸಿದ್ಧ ಮುಳುತಜ್ಞ, ಸಮಾಜಸೇವಕ ಈಶ್ವರ ಮಲ್ಪೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಕೋಟ ಇವರ ಸುವರ್ಣ ಮಹೋತ್ಸವದ ಹಿನ್ನಲ್ಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ಸಾಂಸ್ಕೃತಿಕ ಪರ್ವ ಕಾರ್ಯಕ್ರಮದ 5ನೇ ದಿನದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮವು ಗೀತಾನಂದ ವೇದಿಕೆಯಲ್ಲಿ ಜರಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಿ ಮಾತನಾಡಿ, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಿರಂತರವಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆ ಸಲ್ಲಿಸಿರುವ ಹಿರೇಮಹಾಲಿಂಗೇಶ್ವರ ಮಿತ್ರವೃಂದದ ಸಾಧನೆ ನಿಜಕ್ಕೂ ಸಾರ್ಥಕವಾದದ್ದು ಎಂದು ಶ್ಲಾಘಿಸಿ ಇಂತಹ ಸುವರ್ಣ ಕ್ಷಣಗಳನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರಲ್ಲದೆ ಹಿಂದೆ ರಥೋತ್ಸವವು ಕೆಲವೇ ದಿನಗಳಿಗೆ ಸೀಮಿತವಾಗಿದ್ದರೆ, ಮಿತ್ರವೃಂದ ಸ್ಥಾಪನೆಯ ನಂತರ ವಿಭಿನ್ನ ಹಾಗೂ ಅರ್ಥಪೂರ್ಣ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಊರಿಗೆ ಹೆಮ್ಮೆಪಡುವಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದು ಶ್ಲಾಘನೀಸಿದ ಅವರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಇತಿಹಾಸ ಪ್ರಸಿದ್ಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2024-25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪದವಿ ಪರೀಕ್ಷೆಯ ಸಾರ್ವಜನಿಕ ಆಡಳಿತ ವಿಭಾಗದಲ್ಲಿ ಪ್ರವೀಣ್ ಡಿ. ಕೋಟ್ಯಾನ್ ಪಡುಕೆರೆ ಅವರು ರಾಜ್ಯದಲ್ಲಿ 11ನೇ ರ‍್ಯಾಂಕ್‌ನೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಅವರು ಉದ್ಯಾವರ ಕನಕೊಡ ಮೊಗವೀರ ಸಭೆಯ ಗುರಿಕಾರರಾಗಿದ್ದ ದಿ. ದಯಾಕರ ಕುಂದರ್ ಹಾಗೂ ಸುಂದರಿ ಕೋಟ್ಯಾನ್ ದಂಪತಿಗಳ ಪುತ್ರ. ಕಳೆದ 15 ವರ್ಷಗಳಿಂದ ಕರ್ನಾಟಕ ಸರಕಾರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತ ಪ್ರಸ್ತುತ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದನ್ನು ತಾಲೂಕಿನ ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಆಹಾರ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈಂದೂರಿನ ಆಹಾರ ನಿರೀಕ್ಷಕರಾದ ವಿನಯ್ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಬಿಜೂರು ಗ್ರಾಮದ ಹರಕೇರಿ ನಿವಾಸಿ ಅಬ್ದುಲ್ ಬಿನ್ ಅಬ್ಬಾಸ್ ಎಂಬುವವರ ಮನೆಯಲ್ಲಿ ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಕುಚ್ಚಲಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿತ್ತು. ಜನವರಿ 30 ರಂದು ಬೆಳಿಗ್ಗೆ 09:40 ಗಂಟೆಗೆ ಪಂಚರ ಸಮಕ್ಷಮದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ, ಒಟ್ಟು 16 ಪಾಲಿಥಿನ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 7.14 ಕ್ವಿಂಟಾಲ್ ತೂಕದ ಕುಚ್ಚಲಕ್ಕಿ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ರೂ. 16,422/- ಎಂದು ಅಂದಾಜಿಸಲಾಗಿದೆ. ಆರೋಪಿ ಅಬ್ದುಲ್ ಬಿನ್ ಅಬ್ಬಾಸ್ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಯಾರಿಂದಲೋ ಕಾನೂನು ಬಾಹಿರವಾಗಿ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ.…

Read More