ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿದ್ದ 3 ಬೋಟುಗಳಿಗೆ ದಂಡ ವಿಧಿಸಿ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕಾರ್ಯಾಚರಣೆ ನಡೆಸಿದ್ದು 3 ಬೋಟುಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರಿಗೆ ತಿಳಿಸಲಾಗಿತ್ತು. ವಿಚಾರಣೆ ನಡೆಸಿದ ಅವರು ಬೋಟುಗಳ ಮಾಲಕರಿಗೆ ಒಟ್ಟು 16 ಸಾವಿರ ರೂ. ದಂಡ ವಿಧಿಸಿದ್ದಾರೆ. ಮತ್ತೊಂದು ಬೋಟ್ನಲ್ಲಿ ಬೆಳಕು ಮೀನುಗಾರಿಕೆ ನಡೆಸಲು ಜನರೇಟರ್ ಅಳವಡಿಸಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ. ಅವರಿಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಬೋಟ್ ಅನ್ನು ಬಿಡುಗಡೆಗೊಳಿಸುವ ಮುನ್ನ ಬೋಟುಗಳಲ್ಲಿ ಅಳವಡಿಸಿದ ಜನರೇಟರ್ ಹಾಗೂ ಬೆಳಕು ಮೀನುಗಾರಿಕೆಗೆ ಸಂಬಂಧಿಸಿದ ಲೈಟಿಂಗ್ ಉಪಕರಣಗಳನ್ನು ತೆರವುಗೊಳಿಸಲಾಗಿದೆ. ನಿಷೇಧಿತ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ಗಳನ್ನು ತಡೆಯಲು ಮೀನುಗಾರಿಕಾ ಇಲಾಖೆ ಹಾಗೂ ಕರಾವಳಿ ಕಾವಲು ಪೊಲೀಸ್ ವತಿಯಿಂದ ಜಂಟಿಯಾಗಿ ಫೈಯಿಂಗ್ ಸ್ಕ್ಯಾಡ್ ರಚಿಸಲಾಗಿದೆ. ಈ ತಂಡವು ಮಲ್ಪೆ ಹಾಗೂ ಗಂಗೊಳ್ಳಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ತ್ರಾಸಿ ಗ್ರಾಮದ ರಾಮಂದಿರದ ಬಳಿ ಗಾರೆ ಕೆಲಸ ನಿರ್ವಹಿಸುತ್ತದ್ದ ಕಂದಾವರ ಗ್ರಾಮದ ಚಂದ್ರಶೇಖರ್ (61) ಅವರು ಇದ್ದಕ್ಕಿದಂತೆ ಪ್ರಜ್ಞಾಹೀನರಾಗಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಬೆಳಿಗ್ಗೆ ಕೆಲಸಕ್ಕೆಂದು ಅವರು ಹೋಗಿದ್ದು, ಮಧ್ಯಾಹ್ನ ಕೆವ ನಿರ್ವಹಿಸುತ್ತಿದ್ದ ವೇಳೆ ಮೂರ್ಚೆ ಹೋಗಿದ್ದರು. ಅವರನ್ನು ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಪರೀಕ್ಷಿಸಿದ ವೈದ್ಯರು, ಚಂದ್ರಶೇಖರ್ ಮೃತ ಪಟ್ಟಿದ್ದಾಗಿ ತಿಳಿಸಿದರು. ಮೃತರ ಪುತ್ರ ಪ್ರಸಾದ್ ನೀಡಿದ ದೂರಿನಂತೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಪಡೆದು ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಕೋಟ ಗಿಳಿಯಾರಿನಲ್ಲಿ ಸೋಮವಾರ ಸಂಭವಿಸಿದೆ. ಉಡುಪಿಯ ಆಹಾರ ನಿರೀಕ್ಷಕ ಸುಧೀರ್ ಹಾಗೂ ಕೋಟ ಪೊಲೀಸ್ ಠಾಣಾ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಜಂಟಿ ಕಾರ್ಯಚರಣೆ ನಡೆಸಿ ಬೋಲೆರೋ ವಾಹನವನ್ನು ವಶಕ್ಕೆ ಪಡೆದಿದ್ದು 42 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ಕಿಯನ್ನು ಯಾವುದೇ ಪರವಾನಿಗೆ, ದಾಖಲಾತಿಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದುದು ಕಂಡುಬಂದಿದೆ. ಬೋಲೆರೋ ಚಾಲಕ ಉದಯ ಹಾಗೂ ಅಕ್ಕಿಯನ್ನು ಅಕ್ರಮವಾಗಿ ಖರೀದಿಸುತ್ತಿದ್ದ ಸುರೇಂದ್ರ ಅವರ ಮೇಲೆ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಡ್ಸ್ ಎಂಬ ಮಾರಕ ಕಾಯಿಲೆಯ ಬಗ್ಗೆ ಅರಿವು ಮೂಡಿಸುದರ ಮೂಲಕ ತಡೆಗಟ್ಟುವುದರಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು. ಏಡ್ಸ್ ಸಂತ್ರಸ್ತರನ್ನು ಗೌರಪೂರ್ಣವಾಗಿ ನೋಡಿಕೊಂಡು ಅವರ ಬದುಕುವ ಹಕ್ಕನ್ನು ಕಾಪಾಡುವುದು ನಮ್ಮ ಉದ್ದೇಶವಾಗಿರಬೇಕು ಎಂದು ರುಕ್ಮಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರಿನ ಪ್ರಾಂಶಪಾಲರಾದ ಡಾ. ಎಸ್. ಭಾಸ್ಕರ ಶೆಟ್ಟಿ ಸಲ್ವಾಡಿ ಹೇಳಿದರು. ಅವರು ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಏನ್.ಎಸ್.ಎಸ್, ರೆಡ್ ರಿಬ್ಬನ್ ಕ್ಲಬ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ಏಡ್ಸ್ ಮತ್ತು ರಕ್ತದಾನದ ಜಾಗ್ರತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಡ್ಸ್ ಪಿಡುಗಿನ ಹಿನ್ನಲೆ, ಪ್ರಸ್ತುತ ಪರಿಸ್ಥಿಯಲ್ಲಿ ಯುವ ಸಮುದಾಯ ಈ ಪಿಡುಗಿಗೆ ಗುರಿಯಾಗುವ ಸಾಧ್ಯತೆಗಳು ಮತ್ತು ಏಡ್ಸ್ ಬಗ್ಗೆ ವಹಿಸಬೇಕಾದ ಜಾಗ್ರತಿ ಬಗ್ಗೆ ಮನವರಿಕೆ ಮಾಡಿದರು. ರಕ್ತದಾನ ಮಾಡಲು ಮುಂದಾಗುವ ಮೊದಲು ನೀವು ಒಳ್ಳೆಯ ದೈಹಿಕ ಸದೃಢತೆಯ ಜೊತೆಗೆ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2025ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ ರಿ. ಇದರ ದ್ವಿತೀಯ ವಾರ್ಷಿಕೋತ್ಸವ ಸಮಾರಂಭವು ಬಂಕೇಶ್ವರದ ರಾಜರಾಜೇಶ್ವರಿ ಸಭಾಭವನದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ನಡೆಯಿತು. ವಾರ್ಷಿಕ ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ನಾಗೇಂದ್ರ ಕುಮಾರ್ ನೆರವೆರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಮೋಹನ್ ರೇವಣಕರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸೂರಜ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮಂಜುನಾಥ್ ರೇವಣಕರ್ ಮಾತನಾಡಿ, ಬೈಂದೂರಿನಲ್ಲಿ ದೈವಜ್ಞ ಬ್ರಾಹಣ ಸಮುದಾಯವು ಸಂಘಟಿತರಾಗಿ ಸಮೂದಾಯದ ಏಳಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅಗತ್ಯ ನೆರವು ನೀಡಲು ತಾನು ಸದಾ ಸಿದ್ದನಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸಾಧನೆಗೈದ ಆರು ಮಂದಿ ಸ್ವರ್ಣ ಕುಶಲಕರ್ಮಿಗಳನ್ನು ಸನ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿಯ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಯಿತು ಮತ್ತು ಕ್ರೀಡಾ ಸಾಧಕರಿಗೆ ಬಹುಮಾನವನ್ನು ವಿತರಿಸಲಾಯಿತು. ಇಬ್ಬರು ಸಮಾಜದ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸತೀಶ್ ಅಕಾಡೆಮಿ ಆಯೋಜಿಸಿದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದ ಗಣಿತ – 2025ರ ಸ್ಪರ್ಧೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನದೊಂದಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿರುತ್ತಾರೆ ವಿಜೇತರಾದ ವಿದ್ಯಾರ್ಥಿಗಳ ಯಾದಿ ಈ ಕೆಳಗಿನಂತಿದೆ ಅಬಾಕಸ್ರಾಷ್ಟ್ರ ಮಟ್ಟದಶಮಿ ಡಿ III Aರಾಜ್ಯ ಮಟ್ಟಯುಕ್ತ ಬಿ ಭಟ್ II B ಚಾಂಪಿಯನ್ ಆಫ್ ಚಾಂಪಿಯನ್ ಅವಾರ್ಡ್ಅಹನಾ ವಿ ಶೆಟ್ಟಿ V A ಚಾಂಪಿಯನ್ ಅವಾರ್ಡ್ಮನ್ವಿತ್ ಜಿ V Bಐಝ ಮಹೀನ್ V Bಪ್ರಮಿತ್ IV Bಹನಿ V Bಸಯಿಮ್ III B ಮೆರಿಟ್ ವಿನ್ನರ್ಪವನ್ ಉಡುಪ V Bಸಾನ್ಯಾ ಎಸ್ ಶೆಟ್ಟಿ V Bವಿಘ್ನೇಶ್ ನಾಯ್ಕ್ V Aಧ್ರುವನ್ ಗಣೇಶ್ ಶೆಟ್ಟಿ V Aಪರೀಕ್ಷಿತ್ ಶೆಟ್ಟಿ IV Aಮೊಹಮ್ಮದ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮಾಧ್ಯಮ ಪರ್ವ-2025 ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರು. ವಿದ್ಯಾರ್ಥಿಗಳಾದ ಇಶಿತ್ ಹಾಗೂ ಅಶ್ವಿನ್ ಕ್ರೈಸಿಸ್ ಮ್ಯಾನೇಜ್ಮೆಂಟ್ (ಬಿಕ್ಕಟ್ಟು ನಿರ್ವಹಣೆ) ನಲ್ಲಿ ಪ್ರಥಮ, ಪ್ರಧಾನ್ ಛಾಯಾಗ್ರಹಣದಲ್ಲಿ ಪ್ರಥಮ, ರುಧೀರ್ ಹಾಗೂ ಮಿಯಾರವರನ್ನು ಒಳಗೊಂಡ ತಂಡ ರಸಪ್ರಶ್ನೆಯಲ್ಲಿ ಪ್ರಥಮ, ರಚನ್, ಸರ್ವೇಶ್, ವಿಶಾಲ್, ದೀಕ್ಷಾ, ಸುರಕ್ಷಾ, ಆಕಾಶ್, ಸುಮಿತ್, ದಿಶಾ, ಪ್ರಗತಿ, ಸ್ವಾತಿ, ರಿಶಾಂತ್, ರಕ್ಷಿತಾ, ಶ್ರೀವಲ್ಲಿ ಅವರ ತಂಡ ವೆರೈಟಿ ಪ್ರದರ್ಶನದಲ್ಲಿ ( ವೈವಿಧ್ಯಮಯ ನೃತ್ಯ) ಪ್ರಥಮ ಸ್ಥಾನ ಪಡೆದರು. ವೀಕ್ಷಿತಾ ಹಾಗೂ ರಾಹುಲ್ ಕ್ರಮವಾಗಿ ವರದಿಗಾರಿಕೆ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 81ನೇ ವರ್ಷದ ಅಧ್ಯಕ್ಷರಾಗಿ ಗುರುರಾಜ್ ಗಂಗೊಳ್ಳಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುದೀಪ್ ಜಿ.ಎನ್., ಗೌರವಾಧ್ಯಕ್ಷರಾಗಿ ಮಂಜುನಾಥ ಜಿ.ಟಿ., ಕಾರ್ಯದರ್ಶಿಯಾಗಿ ವರದರಾಜ್ ಜಿ.ಟಿ., ಜೊತೆ ಕಾರ್ಯದರ್ಶಿಯಾಗಿ ಅಶ್ವತ್ ಬಿ., ಆಡಳಿತ ಮೊಕ್ತೇಸರರಾಗಿ ಸಂಜೀವ ಜಿ.ಟಿ., ಖಜಾಂಚಿ ಕರುಣಾಕರ ಎಂ., ಲೆಕ್ಕ ಪರಿಶೋಧಕರು ಕೃಷ್ಣ ಎಸ್. ಮತ್ತು ನರಸಿಂಹ ಎಂ.ಜಿ., ಗೌರವ ಸಲಹೆಗಾರರಾಗಿ ಅಶೋಕ್ ಎನ್.ಡಿ. ಮತ್ತು ಅಯ್ಯಪ್ಪ ಯಾನೆ ಮಹೇಶ್, ಅರ್ಚಕರಾಗಿ ಕೃಷ್ಣ ಜಿ.ಟಿ., ಅರುಣ್ ಕುಮಾರ್ ಮತ್ತು ಅಭಿನಂದನ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನುಕ್ಷಣವು ವಿದ್ಯಾರ್ಥಿಯು ತನ್ನನ್ನು ತಾನು ಬದಲಾಗುತ್ತಿರುವ ವಾತಾವರಣಕ್ಕೆ ಅನುಗುಣವಾಗಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬೇಕೆಂದು ಉಡುಪಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ್ ಭಟ್ ವಿದ್ಯಾರ್ಥಿಗನ್ನುದ್ದೇಶಿಸಿ ಸಲಹೆ ನೀಡಿದರು. ಅವರು ಕುಂದಾಪುರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತುಗಳ್ನನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಅಂತಿಮ ಬಿ.ಕಾಂ. ವಿದ್ಯಾರ್ಥಿ ಪ್ರತಿನಿಧಿಗಳಾದ ಓಂಕಾರ್ ಮತ್ತು ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ಕಾರ್ಯಗಾರವನ್ನು ಸಂಯೋಜಿಸಿ, ಅತಿಥಿಗಳನ್ನು…
