ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಗೆ ಕುಂದಾಪುರ ಕಡೆಯಿಂದ ಬಂದ ಪಿಕ್ ಅಪ್ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ಮರವಂತೆ ಗ್ರಾಮದ ರಾ.ಹೆ-66ರಲ್ಲಿ ನಡೆದಿದೆ. ಘಟನೆಯಲ್ಲಿ ಯಳಜಿತದ ಬಾಬು ಎಂಬುವವರ ಪತ್ನಿ ಲಕ್ಷ್ಮೀ (45) ಅವರು ಮೃತಪಟ್ಟಿದ್ದಾರೆ. ರಾ.ಹೆ-66ರಲ್ಲಿ ಭಾನುವಾರ ಮಧ್ಯಾಹ್ನ ತನ್ನ ಪತಿಯೊಂದಿಗೆ ರಸ್ತೆ ದಾಟಿ ಪುಟ್ ವಾಕ್ ಮೇಲೆ ಬಸ್ ನಿಲ್ದಾಣದ ಎದುರು ನಿಂತಿದ್ದ ವೇಳೆ ನಿಯಂತ್ರಿಣ ತಪ್ಪಿದ ಪಿಕ್ಅಪ್ ವಾಹನವು ಸೀದಾ ಪುಟ್ ವಾಕ್ ಏರಿ ಮಹಿಳೆಗೆ ಡಿಕ್ಕಿಯಾಗಿ ಚರಂಡಿಗಿಳಿದಿದೆ. ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀ ಅವರ ಬೆನ್ನಿಗೆ, ಸೊಂಟಕ್ಕೆ ಹಾಗೂ ಎಡಕಾಲಿಗೆ ರಕ್ತ ಗಾಯವಾಗಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆಂಗು ಬೆಳೆಗೆ ಕಪ್ಪು ಹುಳ ಬಾಧೆ ರೋಗ ತಗುಲಿದ್ದು, ತೆಂಗು ಬೆಳೆಗಾರರಿಗೆ ಪರಿಹಾರ ನೀಡಿಕೆ, ರೋಗ ನಿವಾರಣಾ ಕ್ರಮಗಳು ಹಾಗೂ ತೆಂಗು ಬೆಳೆಗಾರರ ಕುಂದು ಕೊರತೆ ಹಾಗೂ ಅವರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸರ್ಕಾರವನ್ನು ಪ್ರಶ್ನೆ ಮಾಡಿದರು. ಶಾಸಕರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ರಾಜ್ಯದಲ್ಲಿ 41,368 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳದ ಬಾಧೆ ಕಂಡು ಬಂದಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮೂವತ್ತು ಮುಡಿ ಮತ್ತು ಕನ್ನಡ ಕುದ್ರು ಗ್ರಾಮಗಳಲ್ಲಿ 20 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳುವಿನ ಬಾಧೆ ರೋಗ ಪ್ರಕರಣ ಗಳು ಕಂಡು ಬಂದಿರುತ್ತದೆ ಎಂದಿದ್ದಾರೆ. ಈ ಬಗ್ಗೆ ಮಾತನಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮದಲ್ಲಿ ಕೊಂಕಣಿ ಖಾರ್ವಿ ಸಮುದಾಯದವರು ಪ್ರತಿ ವರ್ಷ ಆಚರಿಸುತ್ತಿರುವ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಗಂಗೊಳ್ಳಿ, ಗುಜ್ಜಾಡಿ, ಕಂಚುಗೋಡು, ಹೊಸಪೇಟೆ, ತ್ರಾಸಿ ಮೊದಲಾದ ಕಡೆಗಳಿಂದ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಸಹಸ್ರಾರು ಜನರಿಂದ ಬಣ್ಣಗಳ ಎರಚಾಟ, ಕುಣಿತ, ಗಾನಬಜಾನ ಗಂಗೊಳ್ಳಿ ಪೇಟೆಯುದ್ದಕ್ಕೂ ಕಂಡು ಬಂದಿತು. ಯುವಕ ಯುವತಿಯರು ಹಿರಿಯರು ಮಕ್ಕಳು ಎಂಬ ಭೇದ ಭಾವಗಳಿಲ್ಲದೆ ಪರಸ್ಪರ ಬಣ್ಣ ಹಚ್ಚಿಕೊಂಡು ಡಿಜೆ ಮ್ಯೂಸಿಕ್ಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಗುಂಪುಗಳನ್ನು ಮಾಡಿಕೊಂಡ ಯುವಕ ಯುವತಿಯರು ತಮ್ಮದೇ ವಿಶಿಷ್ಟ ಧಿರಿಸಿನ ಮೂಲಕ ಮೆರವಣಿಗೆಯಲ್ಲಿ ಸಾಗಿಬಂದು ನೋಡುಗರ ಗಮನ ಸೆಳೆದರು. ವಿವಿಧೆಡೆಗಳಿಂದ ಆಗಮಿಸಿದ ಹೋಳಿ ಪಂಗಡಗಳು ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಬಳಿ ಸೇರಿ ಬೃಹತ್ ಹೋಳಿ ಉತ್ಸವ ನಡೆಸಿದರು. ಸಂಪ್ರದಾಯದಂತೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪುಷ್ಕರಣಿಯಲ್ಲಿ ಸ್ನಾನ ಮಾಡುವ ಮೂಲಕ ಹೋಳಿ ಮೆರವಣಿಗೆ ಸಂಪನ್ನಗೊಂಡಿತು. ಒಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೊಂಕಣಿ ಖಾರ್ವಿ ಸಮಾಜದವರು ಹೋಳಿ ಹಬ್ಬವನ್ನು ವರ್ಷಂಪ್ರತಿ ಅದ್ದೂರಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ ಮೊವಾಡಿ ಸಮೀಪ ಸಂಭವಿಸಿದೆ. ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಅವರ ಪುತ್ರ ನಿತಿನ್ ಮೊಗವೀರ (26) ಮೃತ ಯುವಕ. ಮೃತ ನಿತಿನ್ ಭಾನುವಾರ ರಾತ್ರಿ 8 ಗಂಟೆಯ ಸುಮಾರಿಗೆ ತನ್ನ ತಂಗಿಯನ್ನು ಬೈಕಿನಲ್ಲಿ ಕುಂದಾಪುರದ ಬಸ್ ಸ್ಟ್ಯಾಂಡ್ಗೆ ಬಿಟ್ಟು ಮನೆಗೆ ಹಿಂತಿರುಗುವಾಗ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಹಿಳಾ ಮತ್ತು ಪುರುಷರ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಮಹಿಳಾ ತಂಡವು ಒಟ್ಟು 6 ಚಿನ್ನ, 2 ಬೆಳ್ಳಿ ಪದಕ ಪಡೆದು ಒಟ್ಟು 58 ಅಂಕ ಪಡೆದು ಈ ಸಾಧನೆ ಮೆರೆದಿದೆ. ಪುರುಷರ ವಿಭಾಗವು 4 ಚಿನ್ನ, 4 ಬೆಳ್ಳಿ, 1ಕಂಚಿನ ಪದಕ ಗಳಿಸಿ ಒಟ್ಟು 55 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. 55ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕಾಲೇಜಿನ ಪ್ರಶಾಂತ್ ”ಬೆಸ್ಟ್ ಲಿಫ್ಟರ್’ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು. ಪುರುಷರ ವಿಭಾಗದಲ್ಲಿ ಪ್ರಶಾಂತ್, ಸಂತೋಷ್, ಪ್ರತ್ಯೂಶ್, ಜೋಸುವ ರಾಜ್ಕುಮಾರ್ ಚಿನ್ನದ ಪದಕ ಪಡೆದರೆ, ನಾಗರಾಜ್, ನಾಗೇಂದ್ರ ಅಣ್ಣಪ್ಪ, ದರ್ಶನ್, ಶಶಾಂಕ್ ಬೆಳ್ಳಿ ಪದಕ ಪಡೆದರು. ಮಹಿಳಾ ವಿಭಾಗದಲ್ಲಿ ಶ್ರಾವ್ಯ, ಸೀಮಾ, ಅನುಷಾ, ತನುಷಾ, ವಿತಶ್ರೀ, ದಿವ್ಯಾ ಚಿನ್ನದ ಗಳಿಸಿದರೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಕರಾವಳಿ ಶಾಸಕರ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಸಚಿವರನ್ನು ಭೇಟಿಯಾಗಿ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವುದು ಇದು ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವೆಂದು ಸಂಸದರು ಮತ್ತು ಶಾಸಕರು ಸಚಿವಗೆ ಮನವರಿಕೆ ಮಾಡಿದ್ದು, ಪ್ರಸ್ತಾಪವನ್ನು ಸರಕಾರದ ಮುಂದಿರಿಸುವುದಾಗಿ ತಿಳಿಸಿದ್ದಾರೆ. ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೂಳೆ, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು ಉತ್ತಮ. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ…
ಕುಂದಾಪ್ರ ಟಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಜನ್ ಆಸ್ಪತ್ರೆ ಕೋಟೇಶ್ವರದಲ್ಲಿ ವಿಶ್ವ ಮೂತ್ರಪಿಂಡದ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಡಾ. ವಿಶ್ವೇಶ್ವರ ರಾವ್ ಸರ್ಜನ್, ಡಾ.ವಿಲಾಸ್ ರಾವ್ ಸರ್ಜನ್, ಮಾಲತಿ ಮತ್ತು ಲಲಿತಾ ನರ್ಸಿಂಗ್ ಸೂಪರಿಂಟೆಂಡೆಂಟ್, ಸರ್ಜನ್ ಆಸ್ಪತ್ರೆ ಕೋಟೇಶ್ವರ ಹಾಗೂ ಹಿರಿಯ ವಯಸ್ಕರು, ಕೀರ್ತನ ಹಾಗೂ ರಕ್ಷಿತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 3 ನೇ ಸೆಮಿಸ್ಟರ್ ಬಿಎಸ್ ಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಮೂತ್ರಪಿಂಡದ ಕಾಯಿಲೆಗಳ ನಿರ್ವಹಣೆ ಹಾಗೂ ತಡೆಗಟ್ಟುವಿಕೆ,ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು ಡಾ. ವಿಶ್ವೇಶ್ವರ ರಾವ್ ಅವರು ಮೂತ್ರಪಿಂಡದ ಕಾಯಿಲೆಯ ಆರಂಭಿಕ ಪತ್ತೆ ಮತ್ತು ನಿರ್ವಹಣೆಯ ಬಗ್ಗೆ ತಿಳಿಸಿದರು . ಕಾರ್ಯಕ್ರಮವನ್ನು ಆಯೇಷಾ ರಫೀದ ನಿರೂಪಸಿ, ಅಂಕಿತ ಸ್ವಾಗತಿಸಿದರು,
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳಿಂದ ಮಂಗಳೂರು ವಿವಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಮ್ ವಿಭಾಗದ ಪರೀಕ್ಷೆಯಲ್ಲಿ ಪ್ರತೀಕ್ಷಾ ಪಿಎಸ್ ದ್ವಿತೀಯ ರ್ಯಾಂಕ್, ಕೀರ್ತನಾ ಬಿಸಿಎ ವಿಭಾಗದ ಪರೀಕ್ಷೆಯಲ್ಲಿ ಐದನೇ ರ್ಯಾಂಕ್ ಹಾಗೂ ಸಚಿನ್ ವಿಎನ್ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಬಿಸಿಎ ವಿಭಾಗದ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದು ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಊರ್ಜಿತ ಗೊಳಿಸಿಕೊಂಡು ಪುಟ್ಟ ಪುಟ್ಟ ಹಣತೆಗಳಾಗಿ ಬೆಳಗಿ ಸಂಸ್ಥೆಯ ಕೀರ್ತಿ ಪತಾಕೆಯನ್ನು ಬೆಳಗಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಮಂಡಳಿ, ಪ್ರಾಂಶುಪಾಲರು, ಉಪ – ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರಿ ನೌಕರರು ಪ್ರತಿದಿನ ಕೆಲಸದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕವಾಗಿ ಸದೃಢರಾಗುವುದರೊಂದಿಗೆ, ಒತ್ತಡರಹಿತವಾಗಿ ಲವಲವಿಕೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು. ನೌಕರ ಆರೋಗ್ಯವಾಗಿದ್ದಲ್ಲಿ ಅವರುಗಳ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಸೋಲು-ಗೆಲುವುಗಳ ಬಗ್ಗೆ ಗಮನಹರಿಸದೇ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಕ್ರೀಯವಾಗಿ ಭಾಗವಹಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ…
