ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ಕಲ್ಪಿಸಿ ಹೆಚ್ಚು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ಸಮಾಲೋಚನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ವಿವಿಧ ಘಟಕಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ 15 ಲಕ್ಷ ರೂ.ಗಳ ಅನುದಾನ ನೀಡಲಾಗುತ್ತಿದ್ದು, ಶೇ. 50 ರಷ್ಟು ಸಹಾಯಧನ ಸೌಲಭ್ಯ ಲಭ್ಯವಿದೆ. ಈ ಯೋಜನೆಯಡಿ ಸಹಾಯಧನ ಸೌಲಭ್ಯ ಪಡೆಯಲು ಯಾವುದೇ ಇಲಾಖೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಫಲಾಪೇಕ್ಷಿಗಳು ತಮ್ಮ ಮೊಬೈಲ್ ಮೂಲಕವೇ ಜಿಲ್ಲಾ ಸಂಪನ್ಮೂಲ ವ್ಯಕ್ತಿಗೆ ಅವಶ್ಯಕತೆ ದಾಖಲೆಗಳನ್ನು ಸಲ್ಲಿಸಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಉಡುಪಿಯ ‘ಮೈ ಭಾರತ್’ (ಮೇರಾ ಯುವ ಭಾರತ್) ಸಹಯೋಗದೊಂದಿಗೆ, ಕುಂಜಿಬೆಟ್ಟುವಿನ ವೈಕುಂಠ ಬಾಳಿಗಾ ಕಾನೂನು ಕಾಲೇಜು ಮತ್ತು ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ 2026ರ ಅಂಗವಾಗಿ ‘ವಿಕಸಿತ ಭಾರತ ಯುವ ಸಂವಾದ’ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಉಡುಪಿಯ ‘ಮೈ ಭಾರತ್ʼ ಉಪನಿರ್ದೇಶಕರಾದ ಉಲ್ಲಾಸ್ ಕೆ.ಟಿ.ಕೆ. ಅವರು ಉದ್ಘಾಟಿಸಿ, ಯುವಜನರನ್ನು ಉದ್ದೇಶಿಸಿ ಮಾತನಾಡಿ, ‘ವಿಕಸಿತ ಭಾರತ’ಪರಿಕಲ್ಪನೆಯ ಕುರಿತು ವಿವರಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವ ಪೀಳಿಗೆಯ ಮಹತ್ವದ ಪಾತ್ರವನ್ನು ಒತ್ತಿ ಹೇಳಿದರು. ಅಲ್ಲದೆ, ‘ನಶಾ ಮುಕ್ತ ಭಾರತ’ (ಮಾದಕ ವ್ಯಸನ ಮುಕ್ತ ಭಾರತ) ಅಭಿಯಾನದಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ನವೀನ್ ಚಂದ್ರ ಸಿ.ಬಿ. ಅವರು ಸಂವಿಧಾನ ದಿನದ ಮಹತ್ವ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯ ಕಾಲೇಜಿನಲ್ಲಿ ಸಾಂಸ್ಕ್ರತಿಕ ಹಾಗೂ ಸಾಹಿತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಕೆದೂರು ಮುಖ್ಯ ಶಿಕ್ಷಕರಾದ ಉದಯ ಕುಮಾರ್ ಶೆಟ್ಟಿ ಹಾಗೂ ಗೌರವ ಉಪಸ್ಥಿತರಾಗಿ ತೆಕ್ಕಟ್ಟೆಯ ಸೇವಾ ಸಂಗಮದ ಮುಖ್ಯ ಶಿಕ್ಷಕ ಹರ್ಷ ಕೋಟೇಶ್ವರ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶಾಲೆಯ ಉತ್ಕ್ರಷ್ಠ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿನ ಪ್ರತಿಭೆಗೆ ಪ್ರೋತ್ಸಾಹಿಸಿ ಜೀವನದಲ್ಲಿ ಶಿಸ್ತು, ಕರ್ತವ್ಯ ಪರಿಶ್ರಮವನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ನೀಡಿದರು. ವಿದ್ಯಾರ್ಥಿ ಜೀವನದ ಮಹತ್ವವನ್ನು ವಿವರಿಸುತ್ತಾ ಕಳೆದು ಹೋದ ವಿದ್ಯಾರ್ಥಿ ಜೀವನದ ಸುಂದರ ಕ್ಷಣಗಳನ್ನು ಮತ್ತೆ ಮರಳಿ ಪಡೆಯಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ಗುರಿಯೆಡೆಗೆ ಧೃಡ ಸಂಕಲ್ಪದಿಂದ ಮುನ್ನಡೆಯಿರಿ ಏಕೆಂದರೆ ಪರಿಶ್ರಮಕ್ಕೆ ಪರ್ಯಾಯವಿಲ್ಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಶಿಕ್ಷಕರೇ ಒಂದು ಸಂಘ ಮಾಡಿಕೊಂಡು ಕನ್ನಡಪರ ಕಾರ್ಯಕ್ರಮ ಮಾಡುವುದು ಭಾಷಾ ಬೆಳವಣಿಗೆ ದೃಷ್ಟಿಯಲ್ಲಿ ಒಂದು ಉತ್ತಮ ಹೆಜ್ಜೆ ಎಂದು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಪ್ರವರ್ತಕರಾದ ಆನಂದ್ ಸಿ. ಕುಂದರ್ ಹೇಳಿದರು. ಅವರು ಸರಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್ ಶ್ರೀ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘ ಉಡುಪಿ ಜಿಲ್ಲೆ ಅವರು ಹಮ್ಮಿಕೊಂಡ ಜಿಲ್ಲೆಯ ಕನ್ನಡ ಭಾಷಾ ಸಾಧಕ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ ಮತ್ತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅದು ಮಕ್ಕಳ ಕಲಿಕೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇಂತಹ ಉತ್ತಮ ಕಾರ್ಯಕ್ರಮ ಆಯೋಜಿಸಿ ಕನ್ನಡ ಸೇವೆ ಮಾಡುವ ಸಂಘದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿ ಉಡುಪಿ ಡಯಟ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ , ಕುಂದಾಪುರ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಡಿ.13ರಿಂದ 21ರ ವರೆಗೆ ಹೈದರಾಬಾದ್ನಲ್ಲಿ ನಡೆಯಲಿರುವ ಬಿಸಿಸಿಐ ಆಯೋಜಿತ 19 ವರ್ಷದೊಳಗಿನ ಮಹಿಳೆಯರ ಏಕದಿನ ಕ್ರಿಕೆಟ್ ಟೂರ್ನಿಗೆ ಕರ್ನಾಟಕ ತಂಡದ ನಾಯಕಿಯಾಗಿ ಕುಂದಾಪುರದ ರಚಿತಾ ಹತ್ವಾರ್ ಆಯ್ಕೆಯಾಗಿದ್ದಾರೆ. ಮಂಗಳೂರು ವಲಯದಿಂದ ‘ಇಂಡಿಯಾ ಕ್ಯಾಪ್’ ಧರಿಸಿದ ಮೊದಲ ಬಾಲಕಿ ಎಂಬ ಹೆಗ್ಗಳಿಕೆಗೆ ರಚಿತಾ ಪಾತ್ರರಾಗುವ ಮೂಲಕ ಕರಾವಳಿಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ್ದಾರೆ. ಉತ್ತಮ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿರುವ ರಚಿತಾ, 19 ವರ್ಷದೊಳಗಿನ ಕರ್ನಾಟಕ ಮಹಿಳಾ ಏಕದಿನ ತಂಡದ ನಾಯಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. 15 ವರ್ಷದೊಳಗಿನ ಮಹಿಳಾ ತಂಡ, 19 ವರ್ಷದೊಳಗಿನ ಟಿ-20 ಹಾಗೂ 23 ವರ್ಷದೊಳಗಿನ ವಿಭಾಗಗಳಲ್ಲೂ ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಕರ್ನಾಟಕದ ಹಿರಿಯರ ಸಂಭಾವ್ಯ ಆಟಗಾರ್ತಿಯರ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದು, ಮಹಾರಾಣಿ ಟ್ರೋಫಿಯಂತಹ ಪ್ರಮುಖ ದೇಶೀಯ ಕ್ರಿಕೆಟ್ ಸ್ಪರ್ಧೆಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯೋಜಿಸಿದ್ದ ಮಹಿಳೆಯರ ಅಂಡರ್-19 ಟಿ20 ತ್ರಿಕೋನ ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19 ‘ಬಿ’ ತಂಡದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು-11 ಇಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಒಟ್ಟು 40 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ಕಿರಿಯರ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಆರಾಧ್ಯ ಪ್ರಥಮ ಸ್ಥಾನ, ಅರೇಬಿಕ್ ಧಾರ್ಮಿಕ ಪಠಣದಲ್ಲಿ ಫರಾಜ್ ದ್ವಿತೀಯ ಸ್ಥಾನ ಹಾಗೂ ಛದ್ಮವೇಷದಲ್ಲಿ ಶಿವನ್ಯ ತೃತೀಯ ಸ್ಥಾನ ಪಡೆದುಕೊಂಡರು. ಹಿರಿಯರ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಿರೂಪಾ ಪ್ರಥಮ ಸ್ಥಾನ, ಪ್ರಬಂಧ ರಚನೆಯಲ್ಲಿ ಖುಷಿ ಎಂ. ಪ್ರಥಮ ಸ್ಥಾನ ,ಅರೇಬಿಕ್ ಧಾರ್ಮಿಕ ಪಠಣದಲ್ಲಿ ಎಂ. ಮಹಾರೂಫ್ ಪ್ರಥಮ ಸ್ಥಾನ , ಮಿಮಿಕ್ರಿ ಸ್ಪರ್ಧೆಯಲ್ಲಿ ಅದ್ವಿಕ್ ಪ್ರಥಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಿಂದ ತ್ರಾಸಿ ಕಡೆಗೆ ತೆರಳುತ್ತಿದ್ದ ಮಿನಿ ಬಸ್ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಆನೆಗುಡ್ಡೆ ದೇಗುಲದ ಗೋಪುರದ ಎದುರು ಈ ಘಟನೆ ನಡೆದಿದೆ. ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ತ್ರಾಸಿಯಿಂದ ಪ್ರವಾಸಿ ಬಸ್ಸಿನಲ್ಲಿ ಸುಮಾರು 30 ಮಂದಿ ತೆರಳಿದ್ದರು. ಸಮಾವೇಶ ಮುಗಿದ ಬಳಿಕ ಹಿಂದಿರುಗುವಾಗ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಊಟ ಮುಗಿಸಿದ್ದರು. ಅಲ್ಲಿಂದ ತ್ರಾಸಿ ತೆರಳಲು ದೇವಸ್ಥಾನದ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಬಂದು, ಕುಂದಾಪುರದ ಕಡೆಗೆ ತೆರಳಲು ಚಾಲಕ ಬಸ್ಸನ್ನು ತಿರುಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕುಂದಾಪುರದತ್ತ ಬುಲೆಟ್ ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಬಸ್ಸಿನ ಬಲಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಎಂ.ಜಿ.ಎಂ. ಕ್ರೀಡಾಂಗಣದಲ್ಲಿ ಡಿ.28, 29 ಮತ್ತು 30ರಂದು ನಡೆಯಲಿರುವ ‘ಶ್ರೀ ಶಂಕರ ವಿಜಯೋತ್ಸವ 2026, ಪ್ರಯುಕ್ತ ಕುಂದಾಪುರ ತಾಲೂಕು ವಲಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ನಮ್ಮ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಸನಾತನ ಧರ್ಮವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸದುದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಶಂಕರಾಚಾರ್ಯ ಮಹಾಸ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ ಶೃಂಗೇರಿ. ಪ್ರಸ್ತುತ 36ನೇ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ಕೃಪಾಶೀರ್ವಾದದೊಂದಿಗೆ, ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ಆನೆಗುಡ್ಡೆಯ ವತಿಯಿಂದ ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಕುಂಭಕಾಶಿಯ ಶ್ರೀ ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಈ ಸ್ಪರ್ಧೆಗಳು ಜರುಗಲಿವೆ. ವಿಭಾಗವಾರು ಸ್ಪರ್ಧೆಗಳ ವಿವರ: * ಹಿರಿಯ ಪ್ರಾಥಮಿಕ ಶಾಲಾ ವಿಭಾಗ (5, 6, 7ನೇ ತರಗತಿ): * ಸ್ತೋತ್ರ ಗಾಯನ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಅಜ್ಜರಕಾಡಿನಲ್ಲಿ ನಡೆದ 9ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್-2026ರ ಹಟ್ಟಿಹಂಗಡಿಯ ಶ್ರೀ ಸಿದ್ಧಿವಿನಾಯಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಅಝಾನ್ ಎರಡು ಪ್ರಥಮ ಸ್ಥಾನಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. 7 ವರ್ಷದೊಳಗಿನ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿದ ಅಝಾನ್, ಕುಮಿಟೆ (Kumite) ಹಾಗೂ ಕಟಾ (Kata) ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ದ್ವಿಗುಣ ಯಶಸ್ಸು ಸಾಧಿಸಿದ್ದಾರೆ ಎಸ್.ಎಸ್. ಹನೀಫ್ ಗುಲ್ವಾಡಿ ಅವರ ಪುತ್ರನಾಗಿರುವ ಮೊಹಮ್ಮದ್ ಅಝಾನ್ ಅವರ ಈ ಸಾಧನೆಗೆ ಪೋಷಕರು ಹಾಗೂ ಶಾಲೆಯ ಅಧ್ಯಾಪಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು, ಅಲ್ಲಿಯವರೆಗೆ ಗ್ರಾಮಸ್ಥರ ಹಿತದೃಷ್ಟಿಯಿಂದ ಚರಂಡಿ ಸ್ವಚ್ಛತೆ, ಬೀದಿ ದೀಪ ನಿರ್ವಹಣೆ, ಎಸ್ಎಲ್ಆರ್ಎಂ ಸಿಬ್ಬಂದಿ ವೇತನ ಹಾಗೂ ಇಂಧನದ ನಿರ್ವಹಣೆಗೆ ಉಡುಪಿ ಜಿಲ್ಲಾ ಪಂಚಾಯತ್ನ ವಿಶೇಷ ತುರ್ತು ಪರಿಹಾರ ನಿಧಿಯಿಂದ ತಕ್ಷಣವೇ ಅನುದಾನ ಒದಗಿಸಬೇಕೆಂದು ಆಗ್ರಹಿಸಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಪಂ ಸದಸ್ಯರು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತು ಕುಂದಾಪುರ ತಾಪಂ ಇಒ ಮಹೇಶ ಕೆ.ಜಿ. ಅವರನ್ನು ಅವರ ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ನಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಾದ 15ನೇ ಹಣಕಾಸಿನ ಬಾಕಿ ಹಣ ಹಾಗೂ 16ನೇ ಹಣಕಾಸಿನ ಹೊಸ ಅನುದಾನಗಳು ಕಳೆದ ಎರಡು ವ?ಗಳಿಂದ ಪಂಚಾಯತ್ ಗೆ…
