ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ-1 ಹುದ್ದೆ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ-1 ಹುದ್ದೆ ಹಾಗೂ ಮೂಡುಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ-1 ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ರಸ್ತೆಗಳಿಗೆ ಕಾಂಕ್ರೀಟಿಕರಣ ಮಾಡುವುದು ಉತ್ತಮ ಕೆಲಸ ಹಾಗೂ ಇದು ಶಾಶ್ವತ ಕಾಮಗಾರಿ ಕೂಡ ಹೌದು. ಆದರೆ ಹೆಚ್ಚಿನ ಕಡೆ ರಸ್ತೆ ಕಾಂಕ್ರೀಟಿಕರಣ ಆಗುವಾಗ ಅಗಲವಾದ ರಸ್ತೆಗಳು ಕಿರಿದಾಗಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಪಾಯಕಾರಿ ಆಗುತ್ತಿವೆ ಎಂದು ಕುಂದಾಪುರದ ನ್ಯಾಯವಾದಿ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಅಗಲವಾದ ರಸ್ತೆಗೆ ಕಿರಿದಾಗಿ ಕಾಂಕ್ರೀಟ್ ಹಾಕಿ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ಸಮರ್ಪಕ ಕೆಲಸ ಮಾಡದೆ ಅಪಾಯಕಾರಿಯಾಗಿ ಬಿಟ್ಟಿರುವುದು ಹೆಚ್ಚಿನ ರಸ್ತೆಗಳಲ್ಲಿ ನೋಡಬಹುದು. ಇದು ಪುರಸಭೆಯ ಕಟಾಚಾರದ ಕಾಮಗಾರಿ ನಿರ್ವಹಣೆಯಾಗಿದೆ. ಇನ್ನು ಮುಂದಾದರೂ ಪುರಸಭೆ ರಸ್ತೆ ಕಾಂಕ್ರೀಟಿಕರಣ ಮಾಡುವಾಗ ಅಗಲವಾದ ರಸ್ತೆಗಳನ್ನು ಕಿರಿದು ಮಾಡದೆ ಸಂಚಾರಕ್ಕೆ ಯೋಗ್ಯ ರೀತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸಬೇಕು ಹಾಗೂ ಇದರ ಬಗ್ಗೆ ಪುರಸಭೆ ಆಡಳಿತ ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಆಗೃಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ಹಿರಿಯರ ಜೀವನ ತಳಹದಿ, ಅವರ ಆದರ್ಶ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾಯಕ ಸಾರ್ಥಕ್ಯ ಕಂಡ ಕ್ಷಣಗಳಿಗೆ ವೇದಿಕೆ ಕಲ್ಪಿಸಿದೆ. ವಾಸುದೇವ ನಾಯಕ್ ಎಂದರೆ ನನ್ನಗೆ ಆ ಕಾಲದಲ್ಲಿ ಅನ್ನ ಅರಿವೆ, ಆಸರೆ ನೀಡಿದ ಮಹಾಶಕ್ತಿ ಶಾಶ್ವತವಾಗಿ ನೆನಪುಳಿಯುವಂತ ವ್ಯಕ್ತಿಯಾಗಿದ್ದಾರೆ, ಕಷ್ಟದಲ್ಲಿರುವರಿಗೆ ನೆರವು ನೀಡುವ ಅವರ ಮನಸ್ಥಿತಿ ಮಸ್ತಕದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದುಕೊಂಡಿದೆ. ಅಂತವರ ಹೆಸರನ್ನು ಉಳಿಸುವ ಪಂಚವರ್ಣ ಸಂಘಟನೆ ಸಮಾಜಮುಖಿ ಕಾರ್ಯಚಟುವಟಿಕೆಗಳು ಇನ್ನಷ್ಟು ಗಟ್ಟಿಗೊಳಿಸುವಂತೆ ಮಾಡಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟದ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ನಡೆದ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ಸಾರ್ವಜನಿಕರಿಗೆ ಅನುಕೂಲ ಸೃಷ್ಠಿಸುವ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ 80ನೇ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ನಡೆದ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ಮಾಣಿ ಸಿದ್ಧಲಿಂಗೇಶ್ವರ ಮೊವಾಡಿ ತ್ರಾಸಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಒಟ್ಟು 12 ತಂಡಗಳು ಭಜನಾ ತಂಡಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಮೂಡ್ಲಕಟ್ಟೆ ದ್ವಿತೀಯ ಮತ್ತು ಶ್ರೀ ಯಕ್ಷದೇವತೆ ಭಜನಾ ಮಂಡಳಿ ಶಿರೂರು ತಂಡವು ತೃತೀಯ ಬಹುಮಾನ ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಮತ್ಸ್ಯೋದ್ಯಮಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ. ಮಹೇಶ್, ತೀರ್ಪುಗಾರರಾದ ಡಾ. ಗಣೇಶ್ ಗಂಗೊಳ್ಳಿ, ಬಿ.ಪ್ರಕಾಶ್ ಶೆಣೈ ಗಂಗೊಳ್ಳಿ, ಡಾ.ಸಚಿನ್ ಸಾಲಿಯಾನ್ ಮಲ್ಪೆ, ದೇವಸ್ಥಾನದ ಅಧ್ಯಕ್ಷ ಗುರುರಾಜ್ ಗಂಗೊಳ್ಳಿ, ಕರುಣಾಕರ ಎಂ., ಅರ್ಚಕರಾದ ಜಿ.ಟಿ.ಕೃ? ಮತ್ತು ಅಶೋಕ್ ಎನ್.ಡಿ. ವಿಜೇತರಿಗೆ ಬಹುಮಾನ ವಿತರಣೆ ಮಾಡಿ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್ ತಂಡವನ್ನು 35-31 ಅಂಕಗಳಿಂದ ಮಣಿಸಿ ಗೋಲ್ಡ್ ಮೆಡಲ್ ಪ್ರಶಸ್ತಿಯನ್ನು ಪಡೆದುಕೊಂಡಿತು.ವಿಜೇತ ಆಳ್ವಾಸ್ ತಂಡವು ಸೂಪರ್ ಲೀಗ ಹಾಗೂ ಇತರ ಪಂದ್ಯಗಳಲ್ಲಿ ಆತಿಥೇಯ ಮೇರಿ ಗೋ ರೌಂಡ್ ಹಾಗೂ ಟಿಬಿಬಿಸಿ ತಿರುವತ್ತೂರು ತಂಡಗಳನ್ನು ಸೋಲಿಸಿತ್ತು. ಟೂರ್ನಿಯಲ್ಲಿ ರಾಷ್ಟ್ರದ 10 ಪ್ರಮುಖ ಆಹ್ವಾನಿತ ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ತಂಡದ ಲಕ್ಷ್ಮೀದೇವಿ ಟೂರ್ನಿಯ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಮ್ ಜಿ.ಎನ್. ಪೂಜಾರಿ ತನ್ನ 14ನೇ ವಯಸ್ಸಿನಲ್ಲಿ ಗರಿಷ್ಟ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆಯನ್ನು ನಿರ್ಮಿಸಿದ್ದಾನೆ. ಈತ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ನಡೆದಿದೆ. ಕುಂದಾಪುರ ಕಾಲೇಜಿನಿಂದ ಕರಿಕಟ್ಟೆ ಕ್ರಾಸ್ ಬಳಿ ಬಸ್ ಇಳಿದು ಅಳ್ಳೆಗದ್ದೆ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮೋಟಾರ್ ಬೈಕ್ನಲ್ಲಿ ಬಂದ ಇಬ್ಬರು ಯುವಕರು ವಿದ್ಯಾರ್ಥಿನಿಯ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಸುಮಾರು 81 ಸಾವಿರ ಮೌಲ್ಯದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 104ನೇ ತಿಂಗಳ ಕಾರ್ಯಕ್ರಮ ಇತ್ತೀಚಿಗೆ ದೇವಕಿ ಸುರೇಶ್ ಪ್ರಭು ತಲ್ಲೂರು ಇವರ ಪ್ರಾರ್ಥನೆಯೊಂದೆಗೆ ಪ್ರಾರಂಭವಾಯಿತು. ವೇದಿಕೆಯಲ್ಲಿ ಹಿರಿಯ ಗೊಂಬೆಯಾಟ ಕಲಾವಿದ ವೆಂಕಟರಮಣ ಬಿಡುವಾಳ್, ಪ್ರಶಾಂತ್ ನಾಯಕ್, ಅನಿತಾ ಪಿ. ನಾಯಕ್, ಎಮ್. ರತ್ನಾಕರ್ ಪೈ, ಎಮ್. ರಾಜಶ್ರೀ ಆರ್. ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಭರತನಾಟ್ಯ ಯುವ ಕಲಾವಿದೆ ಪ್ರಣೀತಾ ಪ್ರಶಾಂತ್ ನಾಯಕ್ ಕೋಟ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಕೊನೆಯಲ್ಲಿ ಪ್ರಣೀತಾ ಪ್ರಶಾಂತ್ ನಾಯಕ್ ಕೋಟ ಅವರ ಭರತನಾಟ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್, ಬಂಟ್ವಾಡಿ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ, ಕುಂದಾಪುರಕ್ಕೆ ಆಗಮಿಸಿ, ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಎಸ್.ಎಸ್. ಹೆಗ್ಡೆ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಅವರು ಸನ್ಮಾನಿಸಿದರು. ಸಂಘದ ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ ಎಸ್. ಹೆಗ್ಡೆ ಅವರು ನಮ್ಮ ಸಮಾಜದ ಬಹುದೊಡ್ಡ ಆಸ್ತಿ ಎಂದರು. ಈ ಸಂದರ್ಭದಲ್ಲಿ ವಸಂತಿ ಮಂಜಯ್ಯ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿಧರ ಶೆಟ್ಟಿ ಹುಯ್ಯಾರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಎಕ್ಸಿಕ್ಯೂಟಿವ್ ಲಾಂಜ್ ಆರಂಭಿಸಲಾಗಿದ್ದು, ಕೊಂಕಣ ರೈಲ್ವೇ ಮುಂಬೈನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ನೂತನ ಸೌಕರ್ಯವನ್ನು ಉದ್ಘಾಟಿಸಿದರು. ಈ ವೇಳೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ, ಕಾರವಾರ ವಲಯದ ಆರ್.ಆರ್.ಎಂ ಆಶಾ ಶೆಟ್ಟಿ, ಸೀನಿಯರ್ ರೀಜಿನಲ್ ಟ್ರಾಫಿಕ್ ಮ್ಯಾನೇಜರ್ ದಿಳಿಪ್ ಡಿ. ಭಟ್, ಡಿಪ್ಯೂಟಿ ಸಿಸಿಎಂ ಆರ್.ಡಿ. ಗೋಲಬ್, ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಡೆಪ್ಯೂಟಿ ಚೀಫ್ ಇಂಜಿನಿಯರ್ ವಿಜಯ್ ಕುಮಾರ್, ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಮಾಜಿ ಸದಸ್ಯ ಕೆ. ವೆಂಕಟೇಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು. ಎಕ್ಸಿಕ್ಯೂಟಿವ್ ಲಾಂಜ್ʼನಲ್ಲಿ ಎಸಿ, ಉತ್ತಮ ಆಸನ, ವೈ-ಫೈ, ಸುದ್ದಿ ಪತ್ರಿಕೆ ಹಾಗೂ ಪುಸ್ತಕ ಹೊಂದಿರುವ ಓದುಗರ ಗ್ಯಾಲರಿ ಹಾಗೂ ಟಿ.ವಿ ಇರಲಿದೆ. ಜೊತೆಗೆ ಕೆಫೆ, ಚಾರ್ಚಿಂಗ್ ಪಾಯಿಂಟ್ ಮೊದಲಾದ ಸೌಲಭ್ಯವಿದ್ದು, ಪ್ರಯಾಣಿಕರು ಪ್ರತಿಗಂಟೆಗೆ ರೂ.50 ಪಾವತಿಸಿ ರೈಲು ಪ್ರಯಾಣದ ಮೊದಲು ಇದರ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.
