Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದವನ್ನು ಹಂಚುತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ತಿನ್ನುವ ಎಲ್ಲಾ ಪದಾರ್ಥಗಳೂ ರೂಪ, ಗುಣ, ರುಚಿಯಲ್ಲಿ ವ್ಯತ್ಯಾಸವಿದ್ದರೂ, ಸಿಹಿ, ಹುಳಿ, ಖಾರ ಸಹಿತ ಷಡ್ರಸಗಳಿಂದ ಕೂಡಿದ ಎಲ್ಲಾ ಆಹಾರಗಳೂ ಆನಂದವನ್ನು ಕೊಡುತ್ತವೆ ಎಂಬುದು ಆಹಾರದ ಸಮಾನ ಸ್ವಭಾವವಾಗಿದೆ. ಆಹಾರದಿಂದ ಸರ್ವೇಂದ್ರಿಯಗಳ ಸಂತೋಷ ಸಾಧ್ಯವಿದ್ದು, ಅನ್ನದಂತೆ ಸರ್ವೇಂದ್ರಿಯಗಳಿಗೆ ಆನಂದವನ್ನು ನೀಡುವ ವಸ್ತು ವಿಶ್ವದಲ್ಲಿ ಇನ್ನೊಂದಿಲ್ಲ. ಇದು ದೇವರ ಲಕ್ಷಣವಾಗಿದ್ದು, ಈ ಕಾರಣದಿಂದಲೇ ಅನ್ನವನ್ನು ದೇವರೆಂದು ಗೌರವಿಸುವ ಪರಂಪರೆಯಿದೆ ಎಂದು ಅಭಿಪ್ರಾಯಪಟ್ಟರು. ಜೀವಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಾರ್ಷಿಕವಾಗಿ ಶ್ರೀ ಮಹಾಕಾಳಿ ದೇವಸ್ಥಾನದ ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಪ್ರಕೃತಿಕ ವಿಕೋಪಗಳಿಂದ ಯಾವುದೇ ಅಪಘಾತಗಳು ಜರಗದಂತೆ ವರ್ಷಾಂಪ್ರತಿ ಜರುಗುವ ಸಮುದ್ರ ಪೂಜೆ ಕೋಡಿಯ ಸಮುದ್ರ ತೀರದಲ್ಲಿ ವಿಜೃಂಭಣೆಯಿಂದ ನೆರವೇರಿತು. ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಆರ್. ಖಾರ್ವಿ ಅವರ ಅಧ್ಯಕ್ಷತೆಯಲ್ಲಿ ಮೊಕ್ತೇಸರರಾದ , ಪಾಂಡು ಸಾರಂಗ ಆನಂದ ನಾಯ್ಕ್ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಾದ ಶಿವರಾಮ್ ಭಟ್ ನೇತೃತ್ವದಲ್ಲಿ ಪೂಜೆಯ ವಿಧಿವಿಧಾನಗಳನ್ನು ಸಾಂಗವಾಗಿ ನೆರವೇರಿಸಿದರು. ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಸಮಿತಿಯ ಸದಸ್ಯ ಸುನಿಲ್ ಖಾರ್ವಿ ತಲ್ಲೂರು ವಹಿಸಿದ್ದರು. ಉಪಾಧ್ಯಕ್ಷರಾದ ನಾರಾಯಣ ಖಾರ್ವಿ ಮದ್ದುಗುಡ್ಡೆ, ಕಾರ್ಯದರ್ಶಿ ನಾಮದೇವ ಖಾರ್ವಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಖಾರ್ವಿ ವಿದ್ಯಾರಂಗ ಮಿತ್ರ ಮಂಡಳಿಯ ಅಧ್ಯಕ್ಷರಾದ ಜಯಾನಂದ ಖಾರ್ವಿ , ನವರಾತ್ರಿ ಸಮಿತಿಯ ಮಂಜುಳಾ ಪಿ . ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮಿ ಖಾರ್ವಿ ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ (ಪದವಿಪೂರ್ವ) ಉಪನಿರ್ದೇಶಕರ ಕಚೇರಿ, ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಅಂಡರ್–19 ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಅತ್ಯುತ್ತಮ ಸಾಧನೆಗೈದು ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ತಂಡವು ಸ್ಪರ್ಧೆಯಲ್ಲಿ 7 ಚಿನ್ನ ಹಾಗೂ 1 ಬೆಳ್ಳಿ ಸೇರಿದಂತೆ ಒಟ್ಟು 8 ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದೆ. ತಂಡದ ಆರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಪರ್ಧೆಯ ಫಲಿತಾಂಶ:ಆರ್ಟಿಸ್ಟಿಕ್ ಪೇರ್: ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಶ್ರೀವತ್ಸರಾಜ್- ಪ್ರಥಮ ಸ್ಥಾನಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ಜೆ ಎಂ ಮತ್ತು ಅನನ್ಯ ಎಸ್ ಜಿ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಎನ್ ಮತ್ತು ಶ್ರೀವತ್ಸರಾಜ್ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ಜೆ ಎಂ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ “ಎಐ ಯುಗದ ವೃತ್ತಿ ಅವಕಾಶಗಳು” ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಲ್ತಾನೆ ಆಫ್ ಒಮಾನ್ ಮಸ್ಕತ್ ನ ಕಾಲೇಜ್ ಆಫ್ ಬ್ಯಾಂಕಿಂಗ್ ಮತ್ತು ಫೈನಾನ್ಸ್ ಅಧ್ಯಯನ   ಸ್ನಾತಕೋತ್ತರ ಸಂಶೋಧನಾ ಕೇಂದ್ರದ ಇನೋವೇಶನ್ ವಿಭಾಗದ ನಿರ್ದೇಶಕರಾದ ಡಾ. ಆನಂದ್ ಎಸ್. ಮಾತನಾಡಿ, ಇಂದಿನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ನಡುವೆ ವಾಣಿಜ್ಯ ವಿದ್ಯಾರ್ಥಿಗಳಿಗೆ ಇರುವ ಅವಕಾಶಗಳು ಮತ್ತು  ಭವಿಷ್ಯದ ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳ ಕುರಿತು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ್, ವಾಣಿಜ್ಯ ವಿಭಾಗದ ವೊಕೇಶನಲ್ ಟ್ಯಾಕ್ಸ್ ಪ್ರೊಸೀಜರ್ ವಿಭಾಗದ ಮುಖ್ಯಸ್ಥರಾದ ರಿತಿನ್, ಹಾಗೂ ವಾಣಿಜ್ಯ ವಿಭಾಗದ ಸಂಯೋಜಕರಾದ ಮಮತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ. ಆನಂದ್ ಎಸ್. ಅವರು ಎಐ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬಾಳ್ಕುದ್ರು-ಹಂಗಾರಕಟ್ಟೆ ಇಲ್ಲಿನ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಇದರ ಆಶ್ರಯದಲ್ಲಿ ಶ್ರೀ ಬ್ರಹ್ಮ ಶ್ರೀ ನಾರಾಯಣಗುರುಗಳ 172ನೇ ಜನ್ಮ ಜಯಂತಿ ಉತ್ಸವವನ್ನು ಶುಕ್ರವಾರದಂದು ವೈಭವದಿಂದ ಆಚರಿಸಲಾಯಿತು. ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ 09.೦೦ರಿಂದ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ, ತದನಂತರ ವೇ.ಮೂ ವೆಂಕಟರಣಸೂರ್ಯ ಇವರಿಂದ ಧಾರ್ಮಿಕ ವಿಧಿವಿಧಾನದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ ಜರಗಿತು. ಸಂಘದ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಿತು.ಅಪರಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲ.ವಿ.ಕೋಟ್ಯಾನ್, ಪ್ರಮುಖರಾದ ವಾಸುದೇವ ಕೋಟ್ಯಾನ್, ಉದೇಶ್ ಪೂಜಾರಿ, ಗುರಿಕಾರ ಕುಷ್ಟ ಪೂಜಾರಿ,ಕರುಣಾಕರ ಪೂಜಾರಿ, ರೇಖಾ ಪಿ. ಸುವರ್ಣ, ಕಲಾವತಿ ಆನಂದ್, ಜ್ಯೋತಿ ರವೀಂದ್ರ ಸುವರ್ಣ, ಪ್ರೇಮ ಸತೀಶ್ ಪೂಜಾರಿ, ಸಂಘದ ಪ್ರಮುಖರಾದ ನಾರಾಯಣ ಪೂಜಾರಿ, ಶಂಕರ್ ಪೂಜಾರಿ, ಆನಂದ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿಯ ಹೊಸ ಅಕಾಡೆಮಿಕ್ ಬ್ಲಾಕ್ (ಮೊದಲನೇ ಹಂತ) ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನಗೊಂಡಿತು. ಅತ್ಯಂತ ಸಂಭ್ರಮದಲ್ಲಿ ನಡೆದ  ಈ ಸಮಾರಂಭದಲ್ಲಿ, ಐಎಂಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಮತ್ತು ಅನಿಶಾ ರೈ ದಂಪತಿಗಳು, ಮ್ಯಾನೇಜಿಂಗ್ ಟ್ರಸ್ಟಿ ವಿದ್ಯಾ ಜೆ. ಶೆಟ್ಟಿ, ಟ್ರಸ್ಟಿಗಳಾದ ರಾಮ್ ರತನ್ ಜೆ. ಶೆಟ್ಟಿ, ಕುಟುಂಬಸ್ಥರು, ಆಹ್ವಾನಿತ ಮಹನೀಯರು, ಐಎಂಜೆ ವಿದ್ಯಾಸಂಸ್ಥೆಗಳ, ನಿರ್ದೇಶಕರು, ಪ್ರಾಂಶುಪಾಲರು, ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಅತ್ಯಂತ ನವೀನ ರೀತಿಯಲ್ಲಿ ವಿಶಾಲವಾದ ಜಾಗದಲ್ಲಿ ಮನ ಸೆಳೆಯುವ ವಾಸ್ತುಶಿಲ್ಪದೊಂದಿಗೆ ಮೂಡಿಬಂದ ಕಟ್ಟಡ ಸಮುಚ್ಚಯ ಎಲ್ಲರ ಮನಸೆಳೆಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಯಲ್ಲಿ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮಾಜದವರು ಮುಖ್ಯ ವಾಹಿನಿಗೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಸಾಮಾಜಿಕ ಕಳಕಳಿಯ ಚಟುವಟಿಕೆಗಳ ಮೂಲಕ ದೇಶದೆಲ್ಲೆಡೆ ಸಂಚರಿಸಿ, ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಹರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.   ಅವರು ನಗರದ ಬನ್ನಂಜೆ ನಾರಾಯಣ ಗುರು ಆಡಿಟೋರಿಯಂ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ ರಿ. ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ದಾರ್ಶನಿಕ, ಆಧ್ಯಾತ್ಮಿಕ ಸಾಧಕರಾಗಿದ್ದ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ ನಿರ್ಮಾಣಕ್ಕೆ ಮುಂದಾಗಿದ್ದರು. ಕೆಳವರ್ಗದ ಜನರಿಗಾಗಿ ದೇವಾಲಯಗಳನ್ನು ನಿರ್ಮಿಸಿ, ದೇವರನ್ನು ಪೂಜಿಸಲು ಅವಕಾಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಸಕರ ಜನಸ್ಪಂದನ ಕನ್ನಡ ಮಾಸಿಕ ಕೊಡಮಾಡುವ ʼಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿʼಗೆ ತಾಲೂಕಿನ ಕಾವಾಡಿ ಗ್ರಾಮದ ಮುಂಬಾರು ಯೋಗಪಟು ನಿರೀಕ್ಷಾ ದಿನಕರ ಶೆಟ್ಟಿ ಅವರಿಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಿಕ್ಷಣ ಇಲಾಖೆ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಭರ್ಜರಿ ಜಯದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ರಯಾನ್ ಅಹಮದ್ ಖಾನ್ , ಸೋಹನ್, ಪ್ರೀತಮ್ ಹಾಗೂ ಸ್ಕಂದ ಪ್ರಥಮ ಸ್ಥಾನ ಪಡೆದರು. ನಿನಾದ್ ಮತ್ತು ಭರತ್ ದ್ವಿತೀಯ ಸ್ಥಾನ ಪಡೆದರು.  17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸನ್ಮಿತಾ, ಮತ್ತು ತಕ್ಷಾ ಪ್ರಥಮ ಸ್ಥಾನ ಹಾಗೂ ಉನ್ನತಿ ದ್ವಿತೀಯ ಸ್ಥಾನ ಪಡೆದರು. 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಅಭಿನವ್, ಸಚಿದ್ ಮತ್ತು ಸಾಕ್ಷಿತ್ ಪ್ರಥಮ ಸ್ಥಾನ ಗಳಿಸಿಕೊಂಡರೆ, ದೀಕ್ಷಿತ್  ಹಾಗೂ ಶೈನ್  ದ್ವಿತೀಯ ಸ್ಥಾನ ಗಳಿಸಿದರು. ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಹೆಚ್. ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿಯವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಶ್ರೀ ಬಿ.ಕೆ . ಹರಿಪ್ರಸಾದ್ ಆದೇಶಿಸಿದ್ದಾರೆ. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಜವಾಬ್ದಾರಿ ನೀಡಲಾಗಿದೆ . ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಅವರು ಈ ಹಿಂದೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಅಧ್ಯಕ್ಷರಾಗಿ, ಮಂಗಳೂರು ವಿ.ವಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾಗಿ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಮತ್ತು ಟಿಎಪಿಸಿಎಂಎಸ್ ಲಿ . ಅಧ್ಯಕ್ಷರಾಗಿದ್ದಾರೆ .

Read More