ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದೈತರ ಸಾಹಿತ್ಯ ಕೃತಿ ಪ್ರಶಸ್ತಿ 2025-26’ ಕ್ಕೆ ಕುಂದಾಪುರದ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ “ನೆನಪಿನಾಳದಿಂದ”_ ಕೃತಿ ಆಯ್ಕೆಯಾಗಿದೆ. ಕಳೆದ 6 ವರ್ಷಗಳಿಂದ ಮಂಗಳೂರು, ಬೆಂಗಳೂರು, ಧಾರವಾಡ, ಶಿವಮೊಗ್ಗ, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ಯಶಸ್ವಿಯಾಗಿ ನಡೆದಿರುವ ಕನ್ನಡ ವೈದ್ಯ ಬರಹಗಾರರ ಸಮ್ಮೇಳನದ 7ನೇ ಆವೃತ್ತಿಯು ಆಗಸ್ಟ್ 22 ಮತ್ತು 23, 2026 ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆ ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಹೃದ್ರೋಗ ತಜ್ಞರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಾಡಿ-ಹರ್ಕಾಡಿ ಗ್ರಾಮದ ಕೋಳ್ಳೇರೆ ರಸ್ತೆಯ ಬಳಿ ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ 407 ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸ್ಥಳೀಯ ನಿವಾಸಿ ನಾರಾಯಣ ಶೆಟ್ಟಿ ಮೃತಪಟ್ಟ ದುರ್ದೈವಿ. ಮಂಗಳವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸೈಬ್ರಕಟ್ಟೆ ಮಾರ್ಗವಾಗಿ ಹಾಲಾಡಿ ಕಡೆಗೆ ಸಾಗುತ್ತಿದ್ದ 407 ವಾಹನದ ಚಾಲಕ ತೀರಾ ಎಡಬದಿಗೆ ಚಲಾಯಿಸಿ ಅವರಿಗೆ ಢಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ನಾರಾಯಣ ಶೆಟ್ಟಿಯವರ ತಲೆ ಹಾಗೂ ಎದೆಗೆ ತೀವ್ರ ಸ್ವರೂಪದ ಗಾಯವಾಗಿದ್ದು ತಕ್ಷಣವೇ ಅವರನ್ನು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿಗೆ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮೃತರ ಅಳಿಯ ಗಣೇಶ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಇಂದು ಬಾರಕೂರಿನ ಸಂತೆಗುಡ್ಡೆ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾರಕೂರು ಇತಿಹಾಸ ಪ್ರಸಿದ್ಧವಾದ ಪವಿತ್ರ ಕ್ಷೇತ್ರ. ವಿಜಯನಗರದ ರಾಜರು ಸೇರಿದಂತೆ ಹಲವಾರು ರಾಜರು ಬಾರಕೂರನ್ನು ಆಳಿದರೂ ಸಹ, ರಾಜರೂ ಬದಲಾದರೂ, ಅಧಿಕಾರ ಬದಲಾದರೂ ಸಹ ಬಾರಕೂರಿನ ಸಂಸ್ಕೃತಿ ಮತ್ತು ಮೌಲ್ಯವನ್ನು ಶಾಶ್ವತವಾಗಿ ನೆಲೆನಿಲ್ಲುವಂತೆ ಮಾಡಿರುವುದು ದೊಡ್ಡ ಕೊಡುಗೆ. ಎಷ್ಟೇ ರಾಜರುಗಳು ಇಲ್ಲಿ ಆಡಳಿತ ನಡೆಸಿದರೂ ಸಹ ಇಂದಿಗೂ ಇಲ್ಲಿನ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬರಲಾಗಿದೆ ಎಂದರು. ಇಲ್ಲಿ ಪವಿತ್ರವಾದ ಹಲವಾರು ದೇವಸ್ಥಾನಗಳು, ಮಸೀದಿ, ಚರ್ಚ್ಗಳು ಇದ್ದು, ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಭಾರತ ದೇಶದ ಸಂಸ್ಕೃತಿಯ ಪ್ರತಿಬಿಂಬ ಇಲ್ಲಿ ನೆಲೆಸಿರುವುದನ್ನು ನಾವು ಕಾಲಿಟ್ಟಾಗಲೇ ಕಾಣಬಹುದಾಗಿದೆ. ಬಾರಕೂರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರದೇಶ. ಭಾರತದ ನಾಗರಿಕತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಂದಿನ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಸಹ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ನೃತ್ಯ ರೂಪಕ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕಂಸಾಳೆ ಜಾನಪದ ನೃತ್ಯ ಕಲಾತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ನಗರ ಯೋಜನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮಗಳು ಜನಮುಖಿಯಾಗಿ ಪರಿಣಾಮಕಾರಿಯಾದ ಪಾತ್ರ ವಹಿಸುತ್ತವೆ. ಪತ್ರಿಕೆಗಳು ನೀಡುವ ಎಚ್ಚರಿಕೆ, ಜಾಗೃತಿ ಹೆಚ್ಚು ಪರಿಣಾಮ ಬೀರುತ್ತದೆ. ಕುಂದಾಪುರದ ಪತ್ರಕರ್ತರು ಧನಾತ್ಮಕವಾದ ಸುದ್ಧಿ ನೀಡುವಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಇದು ಎಲ್ಲರಿಗೂ ಮಾದರಿ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹೇಳಿದರು. ಅವರು ಮಂಗಳವಾರ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್‌ನಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆಯನ್ನು ಗ್ರಾಮೋಪೋನ್ ನ ಧ್ವನಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು. ಇತ್ತೀಚೆಗೆ ಹಂದಿಗಳ ಸರಣಿ ಸಾವಿನ ಬಗ್ಗೆ ಪತ್ರಿಕೆಗಳು ತೋರಿಸಿದ ಕಾಳಜಿಯನ್ನು ಶ್ಲಾಘಿಸಿದ ಅವರು, ಪತ್ರಿಕಾ ವಿತರಕರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಪತ್ರಿಕೆಗಳ ಓದುಗರ ಸಂಖ್ಯೆಯೂ ಕಡಿಮೆಯಾಗಬಹುದು. ಪತ್ರಿಕಾ ವಿತರಕರಿಗೆ ಉತ್ತೇಜನ, ಜೀವನ ಭದ್ರತೆ ನೀಡುವ ಕಾರ್ಯಗಳು ಆಗಬೇಕಾಗಿದೆ ಎಂದರು. ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಮಂಗಳೂರು ವಿಭಾಗದ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ವಿಶೇಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ನುಡಿ ನಮನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಳೆದ 16 ವರ್ಷಗಳಿಂದ ಕಾಲೇಜಿನಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ ಡಾ. ದೀಪಾ ಹಾಗೂ ದ್ವಿತೀಯ ಬಿಸಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುದೀಪ್ ಶೆಟ್ಟಿ ಅವರು ಅಕಾಲಿಕವಾಗಿ ಮರಣ ಹೊಂದಿದ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಂಸ್ಥೆಗೆ ಡಾ. ದೀಪಾ ಅವರು ಸಲ್ಲಿಸಿದ ಸೇವೆ ಸ್ಮರಣೀಯ. ನಂದಾದೀಪದAತೆ ಎಲ್ಲರೊಂದಿಗೆ ಬೆರೆತು ಬದುಕಿದ ಅವರ ಬದುಕಿನ ನಡೆ ಉಲ್ಲೇಖನೀಯ. ಮೃತ ವಿದ್ಯಾರ್ಥಿ ಸುದೀಪ್ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಸಾಂಸ್ಕೃತಿಕ ಮತ್ತು ಇನ್ನಿತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡವರು. ಇಬ್ಬರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದರು. ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ನುಡಿ ನಮನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸುಕೇಶ ಶೆಟ್ಟಿ ಹೊಸಮಠ ಆಯ್ಕೆಯಾಗಿದ್ದಾರೆ. ಸುಕೇಶ ಶೆಟ್ಟಿ ಅವರು ತಮ್ಮ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿನ ಅನುಭವದ ಮೂಲಕ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘವನ್ನು ಮುನ್ನೆಡಸಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇಂದಿನ ಕಾಲಘಟ್ಟದಲ್ಲಿ ಎಲ್ಲಿಯೂ ನಡೆಯದ ಅಪರೂಪದ ಪೂರ್ಣರಾತ್ರಿ ತಾಳಮದ್ದಳೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಸಾಕ್ಷಿಯಾಗಲಿದೆ. ನಾಗರಾಜ್ ಶೆಟ್ಟಿ ನೈಕಂಬ್ಳಿ ಅವರ ಸಂಯೋಜನೆಯಲ್ಲಿ ನಡೆಯುತ್ತಿರುವ *‘ಯಕ್ಷಸಂಕ್ರಾಂತಿ *ಯ ಮೂರನೇ ವರ್ಷದ ಕಾರ್ಯಕ್ರಮವು ಜುಲೈ 25, ಶನಿವಾರ ರಾತ್ರಿ 10ರಿಂದ ಬೆಳಗಿನವರೆಗೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಸಮಯದ ಮಿತಿಯೊಳಗೆ ನಡೆಯುವ ತಾಳಮದ್ದಳೆಗಳ ನಡುವೆ, ಇಡೀ ರಾತ್ರಿ ಅರ್ಥವೈಭವವನ್ನು ಆಸ್ವಾದಿಸುವ ಅವಕಾಶವನ್ನು ಕಲಾರಸಿಕರಿಗೆ ಕಲ್ಪಿಸುತ್ತಿರುವ ‘ನೈಕಂಬ್ಳಿ ಯಕ್ಷಸಂಕ್ರಾಂತಿ’ಈಗಾಗಲೇ ವಿಶಿಷ್ಟ ಗುರುತನ್ನು ಪಡೆದುಕೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಯಕ್ಷಗಾನಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಇದು ತಾಳಮದ್ದಳೆ ಪ್ರಿಯರ ವಾರ್ಷಿಕ ಸಾಂಸ್ಕೃತಿಕ ಹಬ್ಬವಾಗಿ ರೂಪುಗೊಂಡಿದೆ. ಈ ತಾಳಮದ್ದಳೆಯ ಮೊದಲ ಪ್ರಸಂಗವಾಗಿ ಪಾರ್ತಿಸುಬ್ಬ ವಿರಚಿತ ‘ವಾಲಿವಧೆ’ ಹಾಗೂ ಎರಡನೇ ಪ್ರಸಂಗವಾಗಿ ಡಿ. ಎಸ್. ಶ್ರೀಧರರು ರಚಿಸಿದ ‘ಭೃಗುಶಾಪ’ ಪ್ರದರ್ಶನಗೊಳ್ಳಲಿವೆ. ಪ್ರಸಿದ್ಧ ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ ಹಾಗೂ ಹಿಲ್ಲೂರು ರಾಮಕೃಷ್ಣ ಹೆಗಡೆ ಅವರ ಭಾಗವತಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. *‘ವಾಲಿವಧೆ’*ಯಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್ಟರು ಶ್ರೀರಾಮನಾಗಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಹಾಗೂ ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಸಾತ್ವಿಕ್ ಎಸ್. ಭಟ್ ನನ್ನು ಶಾಲೆಯ 40ನೇ ಸಂಸ್ಥಾಪನಾ ದಿನದಂದು ಪೋಷಕರೊಂದಿಗೆ ಬೆಳ್ಳಿಯ ಲೋಟವನ್ನು ನೀಡಿ ಸನ್ಮಾನಿಸಲಾಯಿತು. ಈ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣಕಾಮತ್ ಅವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರ ಉಪಸ್ಥಿತಿಯಲ್ಲಿ ನಡೆಯಿತು. ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಹಾಗೂ ಸುಮಾ ಉಮೇಶ್ ಪುತ್ರನ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಖಂಜಾಂಚಿ ಲಕ್ಷೀನಾರಾಯಣ ಶೆಣೈ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಗುರುವಾರ ನಡೆದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳು ಕುರಿತು ನಡೆದ ಸಭೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ರಾಜ್ಯದ ಆರೋಗ್ಯ ಸಚಿವರಾದ ಯು. ಟಿ ಖಾದರ್ ಅವರಿಗೆ ತಾಲೂಕು ಆಸ್ಪತ್ರೆಯ ಅವಶ್ಯಕತೆ ಮನವರಿಕೆ ಮಾಡಿ ನೂರು ಹಾಸಿಗೆಗಳ ತಾಲೂಕು ಆಸ್ಪತ್ರೆ ಮಂಜೂರು ಮಾಡಲು ಮನವಿ ಮಾಡಿದರು. ತಾಲೂಕು ಆಸ್ಪತ್ರೆ ಉದ್ದೇಶಕ್ಕಾಗಿ ಈಗಾಗಲೇ ಜಾಗ ಕಾದಿರಿಸಿ ಈ ಹಿಂದಿನ ಆರೋಗ್ಯ ಸಚಿವರು ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಆಗದ ಕ್ರಮಗಳು ಮತ್ತು ಬೈಂದೂರು ತಾಲೂಕಿನಲ್ಲಿ ಆಸ್ಪತ್ರೆಯ ಅಗತ್ಯತೆಯನ್ನು ಅವರು ಸಚಿವರಿಗೆ ಮನವರಿಕೆ ಮಾಡಿದ್ದರು. ಎಂಡೊಸಲ್ಫಾನ್ ಪುನರ್ವಸತಿ ಕೇಂದ್ರ ಮಂಜೂರು ಮಾಡಲು ಕೋರಿಕೆ:ಉಡುಪಿ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಮಂದಿ ಎಂಡೊಸಲ್ಫಾನ್ ಪೀಡಿತರಿದ್ದು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರು ಇರುವ ಕಾರಣ ಬೈಂದೂರು ತಾಲೂಕು ಸೇನಾಪುರ ಗ್ರಾಮದಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಲು…
